ಯಾದಗಿರಿ: ಶಾಲಾ ಕಾಲೇಜುಗಳಿಗೆ ಕಟ್ಟಡ, ಶೌಚಾಲಯ, ಶುದ್ಧ ಕುಡಿಯುವ ನೀರು ಸೇರಿದಂತೆ ಬೇಕಾಗುವ ಮೂಲ ಸೌಕರ್ಯ (Infrastructure) ಸರ್ಕಾರದಿಂದ ನಾವು ನೀಡುತ್ತೇವೆ, ಶಿಕ್ಷಕರು (Teachers) ಗುಣಮಟ್ಟದ ಶಿಕ್ಷಣ ನೀಡಿ ಉತ್ತಮ ಫಲಿತಾಂಶ (Good Result) ತರುವಲ್ಲಿ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಶಿಕ್ಷಕರಿಗೆ ಸೂಚನೆ ನೀಡಿದರು.
ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯನಗುಡಿಯ ಕೃಷಿ ಮಹಾವಿದ್ಯಾಲಯದ ಆಡಿಟೋರಿಯಂ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಾರ್ಯಾಲಯ ಯಾದಗಿರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಹಾಪುರ ಇವರ ಸಹಯೋಗದಲ್ಲಿ 2023-2024 ನೇ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ, ಜಿಲ್ಲೆಯ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಿ ಅವರು ಮಾತನಾಡಿದರು.
ಇದನ್ನೂ ಓದಿ: Nipah Virus : ನಿಫಾ ವೈರಸ್ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್
371 (ಜೆ) ಜಾರಿ ಬಂದ ನಂತರ ಕೆ.ಕೆ.ಆರ್.ಡಿ.ಬಿ ಯೋಜನೆಯಡಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ. ಇದೇ ಯೋಜನೆಯಡಿ 15 ಕೋ. ರೂಗಳ ಅನುದಾನದಲ್ಲಿ ಭೀಮರಾಯನಗುಡಿ ಹಾಗೂ ಚಾಮನಾಳ ಶಾಲೆಗಳಿಗೆ ಉತ್ತಮ ಕಟ್ಟಡ, ಶೌಚಾಲಯ, ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗಿದ್ದು, ಹೆಚ್ಚಿನ ಸೌಲಭ್ಯಗಳಿಲ್ಲದಿದ್ದರೆ ಗಮನಕ್ಕೆ ತನ್ನಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸೋಣ ಎಂದು ತಿಳಿಸಿದರು.
ಶಿಕ್ಷಕರು ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ ಉತ್ತಮ ಫಲಿತಾಂಶ ತಂದು, ಜಿಲ್ಲೆಯನ್ನು ಮೇಲ್ದರ್ಜೆಗೆ ಏರಿಸುವಲ್ಲಿ ಶ್ರಮಿಸಬೇಕು ಎಂದರು.
ಇದನ್ನೂ ಓದಿ: SEBI Fine: 2 ಕಂಪನಿ, 7 ಜನಕ್ಕೆ 2.46 ಕೋಟಿ ರೂ. ದಂಡ ವಿಧಿಸಿದ ಸೆಬಿ; ಏನಿದಕ್ಕೆ ಕಾರಣ?
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ (ಆಡಳಿತ) ಉಪನಿರ್ದೇಶಕ ಎಚ್.ಟಿ ಮಂಜುನಾಥ, ಮಹಿಪಾಲರೆಡ್ಡಿ, ಅಶೋಕ್ ಕುಮಾರ್ ಕೆಂಭಾವಿ, ರಾಘವೇಂದ್ರ ಅಳ್ಳಳ್ಳಿ, ರಾಯಪ್ಪಗೌಡ ಹುಡೆದ, ಬಸವರಾಜ ಯಾಳಗಿ, ಭೀಮನಗೌಡ ಜಿ. ತಳೆವಾಡ, ಶಂಕ್ರಪ್ಪ ಗೊಂದೇನೂರ, ಶಹಾಪುರ, ಸುರಪುರ ಮತ್ತು ಯಾದಗಿರಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.