Site icon Vistara News

Yadgiri News: ಸಮಾನತೆಯ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಕೊಡುಗೆ ಅಪಾರ: ಡಾ. ಸುಶೀಲ

Dr B R Ambedkar Jayanti Celebration at yadgiri

ಯಾದಗಿರಿ: ಸಮಾನತೆಯ ಸಮಾಜ ನಿರ್ಮಾಣಕ್ಕೆ ಡಾ. ಬಿ. ಆರ್‌. ಅಂಬೇಡ್ಕರ್ ಅವರ ಕೊಡುಗೆ ಅಪಾರ ಮತ್ತು ಭದ್ರ ಬುನಾದಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸುಶೀಲ ಬಿ. (Yadgiri News) ತಿಳಿಸಿದರು.

ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ, ಸರಳ ಹಾಗೂ ಸಾಂಕೇತಿಕವಾಗಿ ಜಯಂತಿಯನ್ನು ಆಚರಿಸಿ, ಅವರು ಮಾತನಾಡಿದರು.

ನ್ಯಾಯವಾದಿ, ಆರ್ಥಿಕ ತಜ್ಞ, ರಾಜಕೀಯ ಹಾಗೂ ಸಾಮಾಜಿಕ ಸುಧಾರಕರಾಗಿದ್ದ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಆದರ್ಶ ಗುಣಗಳನ್ನು, ಧ್ಯೇಯವನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡು ಉತ್ತಮ ನವಸಮಾಜ ನಿರ್ಮಾಣಕ್ಕಾಗಿ ಪಣತೊಟ್ಟು ಶ್ರಮಿಸಬೇಕಾಗಿದೆ ಎಂದರು.

ಇದನ್ನೂ ಓದಿ: Summer Tour: ಬಿರು ಬೇಸಿಗೆಯಲ್ಲೂ ತಂಪಾದ ಅನುಭವ ನೀಡುವ ಕರ್ನಾಟಕದ ಪ್ರವಾಸಿ ತಾಣಗಳಿವು

ಸಂವಿಧಾನವು ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠವಾದದ್ದು, ಸಮಾನತೆ, ಸೌಹಾರ್ದತೆ ಎತ್ತಿ ಹಿಡಿಯುವ ಸಂವಿಧಾನದ ಕೊಡುಗೆಯು ಭಾರತೀಯರ ಕಣ್ಮಣಿ, ಭಾರತ ರತ್ನ ಡಾ. ಬಿ.ಆರ್‌. ಅಂಬೇಡ್ಕರ್ ಅವರಿಗೆ ಸಲ್ಲಬೇಕು ಎಂದು ತಿಳಿಸಿದರು.

ಇದೀಗ ಲೋಕಸಭಾ ಚುನಾವಣೆ ಇರುವುದರಿಂದ ಚುನಾವಣೆ ಹಬ್ಬದಲ್ಲಿ ಭಾಗವಹಿಸಿ ನಮ್ಮ ಸಂವಿಧಾನ ನೀಡಿದ ಮತದಾನದ ಹಕ್ಕನ್ನು ಚಲಾಯಿಸೋಣ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಇದನ್ನೂ ಓದಿ: Share Market: ಇಸ್ರೇಲ್-‌ ಇರಾನ್‌ ಯುದ್ಧಕ್ಕೆ ನಲುಗಿದ ಮುಂಬಯಿ ಷೇರುಪೇಟೆ; 6 ಲಕ್ಷ ಕೋಟಿ ರೂಪಾಯಿ ಢಮಾರ್

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಗರಿಮಾ ಪನ್ವಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಸಂಗೀತ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಪ್ರಕಾಶ ಕುದರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಸರೋಜ, ಸಮಾಜದ ಜಿಲ್ಲಾಧ್ಯಕ್ಷ ಸುರೇಶ ಬೀರನೂರ, ಸಹಾಯಕ ನಿರ್ದೇಶಕ ಸಂಗಮೇಶ ಪೂಜಾರಿ, ಕ್ರೀಡಾ ಇಲಾಖೆ ಅಧಿಕಾರಿ ರಾಜು ಬಾವಿಹಳ್ಳಿ, ಹಿಂದುಳಿದ ವರ್ಗ ಇಲಾಖೆ ಉಪನಿರ್ದೇಶಕ ಗಂಗಾಧರ ದೊಡ್ಮನಿ, ಸಮಾಜದ ಮುಖಂಡರಾದ ಮರೆಪ್ಪ ಚಟ್ಟೆರಕರ್, ಮಲ್ಲಿನಾಥ ಸುಂಗಲಕರ್, ಗೋಪಾಲ ತಳಿಗೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version