Site icon Vistara News

Yadgiri News: ಫೆ.23 ರಂದು ಯಾದಗಿರಿಯಲ್ಲಿ ಲಿಂ. ವಿಶ್ವನಾಥರಡ್ಡಿ ಮುದ್ನಾಳರ ಕಂಚಿನ ಪುತ್ಥಳಿ ಅನಾವರಣ

Lingaikya Vishwanatharddi Mudnala bronze statue unveiling programme on Feb 23 says Sharangowda Badiyala

ಯಾದಗಿರಿ: ಹಿರಿಯ ಸ್ವಾತಂತ್ರ ಹೋರಾಟಗಾರರು ಹಾಗೂ ಮಾಜಿ ಸಚಿವರಾದ ಲಿಂ. ವಿಶ್ವನಾಥರಡ್ಡಿ ಮುದ್ನಾಳ ಅವರ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಇದೇ ಫೆ.23 ರಂದು ನಗರದ (Yadgiri News) ಮಿನಿ ವಿಧಾನಸೌಧ ಹತ್ತಿರವಿರುವ ಮುದ್ನಾಳ ಕ್ರಾಸ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ಶರಣಗೌಡ ಬಾಡಿಯಾಳ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ, ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಐತಿಹಾಸಿಕ ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ರಂಭಾಪುರಿ ವೀರ ಸಿಂಹಾಸನಾಧೀಶ್ವರ ಜಗದ್ಗುರು ಪ್ರಸನ್ನ ಡಾ. ವೀರ ಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬಾಳೆಹೊನ್ನೂರ ವಹಿಸುವರು.

ಇದನ್ನೂ ಓದಿ: Yashasvi Jaiswal : ಒಟ್ಟು ರನ್​ಗಳ ಪಟ್ಟಿಯಲ್ಲಿ ಆಸೀಸ್​ ಆಟಗಾರನನ್ನು ಹಿಂದಿಕ್ಕಿದ ಯಶಸ್ವಿ ಜೈಸ್ವಾಲ್​

ಸಮಾರಂಭದ ಸಮ್ಮುಖವನ್ನು ಅಬ್ಬೆತುಮಕೂರಿನ ಡಾ.ಗಂಗಾಧರ ಸ್ವಾಮೀಜಿ, ನಾಲವಾರದ ಸಿದ್ದತೋಟೇಂದ್ರ ಶಿವಾಚಾರ್ಯ ಸ್ವಾಮೀಜಿ, ದೇವಾಪುರದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ದೋರನಹಳ್ಳಿಯ ಶಿವಲಿಂಗ ರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಗುರುಮಠಕಲ್ ಖಾಸಾ ಮಠದ ಶಾಂತವೀರ ಸ್ವಾಮಿಜಿ, ನೇರಡಗುಂಬದ ಪಂಚಮ ಸಿದ್ದಲಿಂಗ ಸ್ವಾಮೀಜಿ, ನಗರದ ದಾಸಬಾಳ ಮಠದ ವೀರೇಶ್ವರ ಸ್ವಾಮೀಜಿ, ಸಂಗಮನ ಕರುಣೇಶ್ವರ ಸ್ವಾಮೀಜಿ, ಹೆಡಗಿಮದ್ರಾದ ಶಾಂತಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ನಗರದ ಏಕದಂಡಗಿ ಮಠದ ಶ್ರೀನಿವಾಸ ಸ್ವಾಮೀಜಿ ಉಪಸ್ಥಿತರಿರುವರು.

ಇದನ್ನೂ ಓದಿ: Summer Sweating: ಬೇಸಿಗೆಯಲ್ಲಿ ಬೆವರಿನ ದುರ್ಗಂಧ ದೂರ ಮಾಡುವುದು ಹೇಗೆ?

ರಾಜ್ಯ ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಹಾಗೂ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಜ್ಯೋತಿ ಬೆಳಗಿಸುವರು, ಗೌರವ ಅತಿಥಿಗಳಾಗಿ ಮಾಜಿ ಸಚಿವ ಭೀಮಣ್ಣ ಖಂಡ್ರೆ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷ ಎನ್. ತಿಪ್ಪಣ್ಣ, ಬೆಂಗಳೂರು ಕೇಂದ್ರ ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ, ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ, ಕಲಬುರಗಿ ಸಂಸದ ಡಾ. ಉಮೇಶ ಜಾದವ್ ಭಾಗವಹಿಸುವರು ಎಂದು ತಿಳಿಸಿದರು.

ಪಂಪಣ್ಣಗೌಡ ಮುದ್ನಾಳ ಗೌರವ ಉಪಸ್ಥಿತರಿರುವರು, ಮಾಜಿ ಶಾಸಕ ವೆಂಕಟರಡ್ಡಿ ಗೌಡ ಮುದ್ನಾಳ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಯಾದಗಿರಿ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ, ರಾಯಚೂರ ನಗರ ಶಾಸಕ ಡಾ. ಶಿವರಾಜ್ ಪಾಟೀಲ್, ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ, ಗುರುಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ, ಮಾಜಿ ಸಚಿವ ಹಾಲಪ್ಪ ಆಚಾರ್, ರಾಜುಗೌಡ, ವಿಧಾನ ಪರಿಷತ್ ಸದಸ್ಯರಾದ ಡಾ. ಬಿ.ಜಿ. ಪಾಟೀಲ್, ಶಶೀಲ್ ನಮೋಶಿ, ದೇವರ ಹಿಪ್ಪರಗಿ ಮಾಜಿ ಶಾಸಕ ಸೋಮನಗೌಡ ಸಾಸನೂರ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಈಗಾಗಲೇ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳು ಸೇರಿದಂತೆ ಪ್ರಮುಖರಿಗೆ ಆಮಂತ್ರಣ ಪತ್ರಿಕೆ ಕಳುಹಿಸಲಾಗಿದೆ, ಕಾರ್ಯಕ್ರಮಕ್ಕೆ ಅಂದಾಜು 10 ಸಾವಿರ ಜನ ಸೇರಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Jio Airfiber: ಈಗ ಕರ್ನಾಟಕದ ಎಲ್ಲ ಜಿಲ್ಲಾ ಕೇಂದ್ರ, 200ಕ್ಕೂ ಹೆಚ್ಚು ನಗರಗಳಲ್ಲಿ ಜಿಯೋಏರ್ ಫೈಬರ್!

ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಯುವ ಮುಖಂಡರಾದ ಮಹೇಶರಡ್ಡಿಗೌಡ ಮುದ್ನಾಳ, ಜಿ.ಪಂ ಮಾಜಿ ಸದಸ್ಯರಾದ ಖಂಡಪ್ಪ ದಾಸನ್, ಸಿದ್ದಣಗೌಡ ಕಾಡಂನೋರ, ಜಿಲ್ಲಾ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಸೋಮಶೇಖರ ಮಣ್ಣೂರ, ಯುಡಾ ಮಾಜಿ ಅಧ್ಯಕ್ಷರಾದ ಮೋಹನ ಬಾಬು, ಬಸವರಾಜ್ ಚಂಡ್ರೀಕಿ, ಅಯ್ಯಣ್ಣ ಹುಂಡೆಕಾರ, ನಾಗಪ್ಪ ಬೆನಕಲ್, ವಿರುಪಾಕ್ಷಯ್ಯಸ್ವಾಮಿ ಹೆಡಗಿಮದ್ರಿ ಉಪಸ್ಥಿತರಿದ್ದರು.

Exit mobile version