ಯಾದಗಿರಿ
Yadgiri News: ಗುರುಮಠಕಲ್ ಶಾಸಕರ ಜನಸಂಪರ್ಕ ಕಚೇರಿ ಉದ್ಘಾಟಿಸಿದ ಸಚಿವ ದರ್ಶನಾಪುರ
Yadgiri News: ಯಾದಗಿರಿ ನಗರದಲ್ಲಿ ಮಂಗಳವಾರ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರ ನೂತನ ಜನಸಂಪರ್ಕ ಕಚೇರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಉದ್ಘಾಟಿಸಿದರು.
ಯಾದಗಿರಿ: ಪ್ರಸ್ತುತ ರಾಜಕೀಯಕ್ಕೆ ಯುವಕರು (Youth) ಹೆಚ್ಚಿನ ಪ್ರಮಾಣದಲ್ಲಿ ಬರುವ ಅವಶ್ಯಕತೆ ಇದ್ದು, ನಾಯಕರಾದವರು (Leaders) ನೊಂದವರಿಗೆ ನ್ಯಾಯ (Justice) ಒದಗಿಸಿಕೊಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಸಲಹೆ ನೀಡಿದರು.
ನಗರದಲ್ಲಿ ನವೀಕೃತಗೊಂಡ ಗುರುಮಠಕಲ್ ಶಾಸಕರ ನೂತನ ಜನಸಂಪರ್ಕ ಕಚೇರಿ ಲೋಕಾರ್ಪಣೆಗೊಳಿಸಿ ಮಾತನಾಡಿ, ಸರ್ಕಾರದ ಯಾವುದೇ ಯೋಜನೆ ಇರಲಿ, ಜನಕಲ್ಯಾಣಕ್ಕಾಗಿ ಜಾರಿಯಾದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವಾಗಬೇಕು. ಶಾಸಕರಾದವರು, ಸದಾ ಜನರ ಮಧ್ಯೆ ಇದ್ದು ಕೆಲಸ ಮಾಡಬೇಕು ಎಂದು ತಿಳಿಸಿದರು.
ಇದನ್ನೂ ಓದಿ: Krishna ByreGowda : ಅಕ್ಟೋಬರ್ 1ರಿಂದ ಶೇ. 30ರಷ್ಟು ಆಸ್ತಿ ಮಾರ್ಗಸೂಚಿ ದರ ಹೆಚ್ಚಳ!
ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಮಾತನಾಡಿ, ಈ ಹಿಂದೆ ನಮ್ಮ ತಂದೆಯವರು ಗುರುಮಠಕಲ್ ಹಾಗೂ ಯಾದಗಿರಿಯಲ್ಲಿ ಕಚೇರಿ ಆರಂಭಿಸಿ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಒದಗಿಸಿಕೊಡುತ್ತಿದ್ದರು. ಅವರ ಮಾರ್ಗದರ್ಶನದಂತೆ ನಾನೂ ಸಹ ಮುಂದುವರಿಯುವೆ ಎಂದರು.
ಇದನ್ನೂ ಓದಿ: Drought in Karnataka : ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ಬೆಳೆ ಹಾನಿ; 6 ಸಾವಿರ ಕೋಟಿಗಾಗಿ ಕೇಂದ್ರಕ್ಕೆ ಮೊರೆ
ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮನೂರ, ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಜಿಪಂ ಸಿಇಒ ಗರೀಮಾ ಪನ್ವಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಜಿಲ್ಲಾ ಅರಣ್ಯಾಧಿಕಾರಿ ಕಾಜೋಲ್ ಪಾಟೇಲ್, ಅಬಕಾರಿ ಇಲಾಖೆಯ ಜಿಲ್ಲಾ ಅಧಿಕಾರಿ ಇಂದಿರಾಬಾಯಿ, ಡಿವೈಎಸ್ಪಿ ಬಸವೇಶ್ವರ ಹೀರಾ, ಎಡಿಸಿ ಶರಣಬಸಪ್ಪ ಕೋಟೆಪ್ಪಗೋಳ, ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ ಸೇರಿದಂತೆ ಅನೇಕರು ಇದ್ದರು.
ಉಡುಪಿ
Weather report : ಉತ್ತರ ಕರ್ನಾಟಕಕ್ಕೆ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಲ್ಲಿ ತಗ್ಗದ ಅಬ್ಬರ
Rain News : ಉತ್ತರ ಒಳನಾಡಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಲ್ಲಿ ಸಾಮಾನ್ಯವಾಗಿದೆ. ಸೆ.23-24ರಂದು ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.
ಬೆಂಗಳೂರು: ಇನ್ನರೆಡು ದಿನ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚೆನಯನ್ನು (weather report) ನೀಡಲಾಗಿದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗಲಿದೆ.
ಗುಡುಗು ಜತೆಗೆ ಬಿರುಗಾಳಿ ಮುನ್ನೆಚ್ಚರಿಕೆ
ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ.
ಬೆಂಗಳೂರಲ್ಲಿ ವ್ಯಾಪಕ ಮಳೆ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Assault Case : ಕೈ ತಾಗಿದ್ದಕ್ಕೆ ಯುವಕರ ಮಧ್ಯೆ ಕಿರಿಕ್; ಖಾನಾಪುರದಲ್ಲಿ ಬಿಗುವಿನ ವಾತಾವರಣ
ನೈರುತ್ಯ ಮುಂಗಾರು ಗುರುವಾರ ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿದ್ದರೆ ಕರಾವಳಿಯಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಸೇಡಂನಲ್ಲಿ 7 ಸೆಂ.ಮೀ ಮಳೆಯಾಗಿದೆ. ಚಿಂಚೋಳಿ, ಸುಲೇಪೇಟದಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಕದ್ರಾ, ಚಿತ್ತಾಪುರ, ಸೈದಾಪುರ, ಇಂಡಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಕಾರವಾರ, ಮುಧೋಳೆ ಜೇವರ್ಗಿ, ಶಹಾಪುರ, ಬೆಂಗಳೂರು ನಗರ, ಕುಣಿಗಲ್‌ನಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.
ಕ್ಯಾಸಲ್ ರಾಕ್, ಗೇರ್ಸೊಪ್ಪ, ಆಳಂದ, ನೆಲೋಗಿ, ಅಡಕಿ, ಯಡ್ರಾಮಿ, ಗುಂಡಗುರ್ತಿ ಕಟ್ಕೋಲ್ , ದೇವದುರ್ಗ , ಧಾರವಾಡ, ಕುಂದಗೋಳ , ಬೀದರ್ PTO, ಬೀದರ್, ಔರಾದ್ , ದೇವರಹಿಪ್ಪರಗಿ , ಶ್ರೀರಂಗಪಟ್ಟಣ ಹಾಗೂ ಪೊನ್ನಂಪೇಟೆ, ಬೆಂಗಳೂರು ಹಾಲ್ ವಿಮಾನ ನಿಲ್ದಾಣ ತಲಾ 1 ಸೆಂ. ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Weather Report : ರಾಜ್ಯದಲ್ಲಿ ವಾರಾಂತ್ಯದವರೆಗೂ ಮಳೆ ಗಸ್ತು!
Rain News : ರಾಜ್ಯದ 20 ಜಿಲ್ಲೆಗಳಲ್ಲಿ ಮಳೆರಾಯನಿಗೆ ಬಿಡುವೇ ಇರುವುದಿಲ್ಲ. ವಾರಾಂತ್ಯದವರೆಗೂ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.
ಬೆಂಗಳೂರು: ರಾಜ್ಯದಲ್ಲಿ ವಾರಾಂತ್ಯದವರೆಗೂ ಮಳೆರಾಯನ (Rain News) ಗಸ್ತು ಇರಲಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದರೆ, ಇತ್ತ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಭರ್ಜರಿ ಮಳೆಯಾಗುವ (Weather report) ಸಾಧ್ಯತೆ ಇದೆ.
ಬೆಂಗಳೂರು ಟು ಮೈಸೂರು ಭಾರಿ ಮಳೆ
ದಕ್ಷಿಣ ಒಳನಾಡಿನ ಮೈಸೂರು, ರಾಮನಗರ ಮತ್ತು ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ , ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಮಂಡ್ಯದಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿಯ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ವಿಜಯಪುರದಲ್ಲಿ ಅಲ್ಲಲ್ಲಿ ಹಗುರದಿಂದ ಕೂಡಿದ ಮಳೆ ಇರಲಿದೆ.
ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಲ್ಲಿ ರಾತ್ರಿಗೆ ಮಳೆ ಕಾಟ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಕೆಲವೆಡೆ ಬಿರುಗಾಳಿ ಸಾಧ್ಯತೆ
ಮುಂದಿನ 48 ಗಂಟೆಯಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ. ಇನ್ನುಳಿದಂತೆ ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
ಇದನ್ನೂ ಓದಿ: Lina Mukherjee: ಇಸ್ಲಾಮಿಕ್ ದೇಶದಲ್ಲಿ ಹಂದಿ ಮಾಂಸ ತಿಂದ ಟಿಕ್‌ಟಾಕ್ ಸ್ಟಾರ್‌ಗೆ 2 ವರ್ಷ ಜೈಲು ಶಿಕ್ಷೆ!
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 22 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 32 ಡಿ.ಸೆ – 23 ಡಿ.ಸೆ
ಬೆಳಗಾವಿ: 29 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ
ಸೆಪ್ಟೆಂಬರ್ 22ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ
ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯ | ಗರಿಷ್ಠ ಮಟ್ಟ (ಅಡಿಗಳಲ್ಲಿ) | ಇಂದಿನ ಮಟ್ಟ (ಅಡಿಗಳಲ್ಲಿ) | ಒಳ ಹರಿವು (ಕ್ಯೂಸೆಕ್) | ಹೊರ ಹರಿವು (ಕ್ಯೂಸೆಕ್) |
ಕೆಆರ್‌ಎಸ್ ಜಲಾಶಯ (KRS Dam) | 38.04 | 20.61 | 6016 | 5735 |
ಆಲಮಟ್ಟಿ ಜಲಾಶಯ (Almatti Dam) | 519.6 | 114.73 | 405 | 405 |
ಮಲಪ್ರಭಾ ಜಲಾಶಯ (Malaprabha Dam) | 633.80 | 21.44 | 0 | 194 |
ಘಟಪ್ರಭಾ ಜಲಾಶಯ (Ghataprabha Dam) | 662.91 | 42.40 | 2311 | 181 |
ತುಂಗಾಭದ್ರಾ ಜಲಾಶಯ (Tungabhadra Dam) | 497.71 | 62.92 | 4378 | 10316 |
ಭದ್ರಾ ಜಲಾಶಯ (Bhadra Dam) | 657.73 | 43.23 | 290 | 290 |
ಕಬಿನಿ ಜಲಾಶಯ (Kabini Dam) | 696.13 | 14.80 | 3166 | 4390 |
ಹಾರಂಗಿ (Harangi Dam) | 871.38 | 8.06 | 1335 | 2791 |
ಲಿಂಗನಮಕ್ಕಿ (Linganamakki Dam) | 554.44 | 68.30 | 5493 | 5393 |
ಹೇಮಾವತಿ (Hemavathi Dam) | 890.58 | 17.66 | 4986 | 1300 |
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Weather Report : 20 ಜಿಲ್ಲೆಗಳಲ್ಲಿ ಮಳೆರಾಯನಿಗೆ ಬಿಡುವೇ ಇಲ್ಲ!
Rain News : ರಾಜ್ಯಾದ್ಯಂತ ವರುಣಾರ್ಭಟ ತಗ್ಗಿದೆ. ಇನ್ನೆರಡು ದಿನಗಳು ಕರಾವಳಿಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದರೆ, ಒಳನಾಡಲ್ಲಿ (Weather report) ಮಂಕಾಗಿದೆ.
ಬೆಂಗಳೂರು: ಸೆ.22ರಂದು ರಾಜ್ಯಾದ್ಯಂತ ಹಗುರ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.
ದಕ್ಷಿಣ ಒಳನಾಡಿನ ಮೈಸೂರು, ರಾಮನಗರ ಮತ್ತು ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ , ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಮಂಡ್ಯದಲ್ಲಿ ಸಾಧಾರಣ ಮಳೆಯಾಗಲಿದೆ.
ಉಳಿದಂತೆ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿಯ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ವಿಜಯಪುರದಲ್ಲಿ ಅಲ್ಲಲ್ಲಿ ಹಗುರದಿಂದ ಕೂಡಿದ ಮಳೆ ಇರಲಿದೆ.
ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಲ್ಲಿ ಸಾಧಾರಾಣ ಮಳೆ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಗುಡುಗು ಜತೆಗೆ ಬಿರುಗಾಳಿಯ ಮುನ್ನೆಚ್ಚರಿಕೆ
ಮುಂದಿನ 48 ಗಂಟೆಯಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ. ಇನ್ನುಳಿದಂತೆ ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
ಸೆ.20ರಂದು ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಾಮಾನ್ಯವಾಗಿ, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಗೋಕರ್ಣದಲ್ಲಿ 5 ಸೆಂ.ಮೀ, ಕಾರವಾರ, ಅಂಕೋಲ ,ಕುಮಟ, ತಿಪಟೂರಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಕೂಟ, ಲೋಕಾಪುರ, ತುಮಕೂರಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಉಳಿದಂತೆ ಬೆಳಿಕೇರಿ, ಹೊನಾವರ, ಶಿರಾಳಿ, ಬೆಳ್ತಂಗಡಿ, ಬೆಂಗಳೂರು ನಗರ, ಹುಣಸೂರು, ದಾವಣಗೆರೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಯಾದಗಿರಿ
Yadgiri News: ಜಾನುವಾರುಗಳಿಗೆ ಕಡ್ಡಾಯವಾಗಿ ಕಾಲುಬಾಯಿ ರೋಗ ಲಸಿಕೆ ಹಾಕಿಸಿ: ಡಿಸಿ ಡಾ. ಸುಶೀಲಾ
Yadgiri News: ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 4ನೇ ಸುತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ ಸುಶೀಲಾ ಬಿ .ಮಾತನಾಡಿದರು.
ಯಾದಗಿರಿ: ಜಾನುವಾರುಗಳಿಗೆ (cattle) ಬರುವ ಕಾಲುಬಾಯಿ ರೋಗದಿಂದ ಮುಕ್ತ ಮಾಡುವಲ್ಲಿ ಪಶುಪಾಲನೆ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಸಾರ್ವಜನಿಕರು ಲಸಿಕಾ (Vaccine) ಕಾರ್ಯಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಸುಶೀಲಾ ಬಿ. ಕೋರಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 4ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಹಾಗೂ ಲಸಿಕಾ ಕಾರ್ಯಕ್ರಮದ ಅರಿವು ಮೂಡಿಸುವ ಬಿತ್ತಿಪತ್ರಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಲಸಿಕೆದಾರರು ನಿಮ್ಮ ಗ್ರಾಮಕ್ಕೆ, ಮನೆ ಬಾಗಿಲಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕುವರು. ಯಾರೂ ಕೂಡ ತಮ್ಮ ಎಮ್ಮೆ, ದನ ಕರುಗಳು ಲಸಿಕೆಯಿಂದ ವಂಚಿತರಾಗದಂತೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ: NASA: ಚಂದ್ರನ ದಕ್ಷಿಣ ಧ್ರುವದ ಬೆರಗುಗೊಳಿಸುವ ಚಿತ್ರ ಕ್ಲಿಕ್ಕಿಸಿದ ನಾಸಾ, ಏನಿದೆ ಅದರಲ್ಲಿ?
ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗವಾದ ಕಾಲುಬಾಯಿ ರೋಗವನ್ನು ತಡೆಯಲು ದನ, ಎಮ್ಮೆ ಮತ್ತು ಕರುಗಳಿಗೆ ಕಡ್ಡಾಯವಾಗಿ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಿಸಿ ಜಿಲ್ಲೆಯಲ್ಲಿ ಶೇ.100 ಲಸಿಕಾ ಪ್ರಗತಿ ಸಾಧಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಸೆ. 26 ರಿಂದ ಅಕ್ಟೋಬರ್ 25 ರವರೆಗೆ ಉಚಿತವಾಗಿ 4ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯಲಿದ್ದು ದನ, ಎಮ್ಮೆ ಮತ್ತು ಕರುಗಳಿಗೆ ಲಸಿಕೆ ನೀಡಲಾಗುತ್ತದೆ ಎಂದು ಡಿಸಿ ತಿಳಿಸಿದರು.
ಈ ಕಾಲುಬಾಯಿ ರೋಗವು ಎತ್ತು, ಹೋರಿ, ಹಸು, ಎಮ್ಮೆ ಮತ್ತು ಹಂದಿಗಳಲ್ಲಿ ಹರಡುವ ಮಾರಕ ರೋಗವಾಗಿದೆ. ರೋಗದಿಂದ ಪೂರ್ಣ ಸುರಕ್ಷತೆಗಾಗಿ ಮೂರು ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವುದು ಅತ್ಯಗತ್ಯವಾಗಿರುತ್ತದೆ ಎಂದರು.
ಜಿಲ್ಲೆಯ ಎಲ್ಲಾ ತಾಲೂಕುಗಳು ಸೇರಿದಂತೆ 2,33,336 ದನಗಳು ಹಾಗೂ 57438 ಎಮ್ಮೆಗಳು ಒಟ್ಟು 290774 ಜಾನುಗಳು ಇರುತ್ತವೆ. ಒಟ್ಟು 290800 ಲಸಿಕೆಗಳು ಜಿಲ್ಲೆಯಲ್ಲಿ ಸಂಗ್ರಹವಿದ್ದು, 192 ಸಿಬ್ಬಂದಿಗಳು ಲಸಿಕಾಕರಣದಲ್ಲಿ ಭಾಗಿಯಾಗಲಿದ್ದಾರೆ ಎಂದು ಸಂಬಂಧಿಸಿದ ಅಧಿಕಾರಿಯು ಮಾಹಿತಿ ನೀಡಿದರು.
ಇದನ್ನೂ ಓದಿ: Wall collapsed : ವಸತಿ ಶಾಲೆಯಲ್ಲಿ ಗೋಡೆ ಕುಸಿದು ಬಾಲಕ ಸಾವು; ಇನ್ನಿಬ್ಬರು ಗಂಭೀರ
ಈ ಸಂದರ್ಭದಲ್ಲಿ ಪಶುಪಾಲನೆ ಇಲಾಖೆ ಉಪನಿರ್ದೇಶಕ ಡಾ. ರಾಜು ದೇಶಮುಖ, ಪಾಲಿಕ್ಲಿನಿಕ್ ಉಪನಿರ್ದೇಶಕ ಡಾ. ರಶೀದ್ ಇಕ್ಬಾಲ್ ಸೇರಿದಂತೆ ಎಲ್ಲಾ ತಾಲೂಕಿನ ಪಶುವೈದ್ಯಾಧಿಕಾರಿಗಳು, ಸಹಾಯಕ ನಿರ್ದೇಶಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
-
ಪ್ರಮುಖ ಸುದ್ದಿ11 hours ago
Lina Mukherjee: ಇಸ್ಲಾಮಿಕ್ ದೇಶದಲ್ಲಿ ಹಂದಿ ಮಾಂಸ ತಿಂದ ಟಿಕ್‌ಟಾಕ್ ಸ್ಟಾರ್‌ಗೆ 2 ವರ್ಷ ಜೈಲು ಶಿಕ್ಷೆ!
-
ಪ್ರಮುಖ ಸುದ್ದಿ24 hours ago
Rupert Murdoch: ಫಾಕ್ಸ್ ಮತ್ತು ನ್ಯೂಸ್ ಕಾರ್ಪ್ ಅಧ್ಯಕ್ಷ ಹುದ್ದೆ ತೊರೆದ ‘ಮಾಧ್ಯಮ ದೊರೆ’ ರೂಪರ್ಟ್ ಮುರ್ಡೋಕ್
-
ಪ್ರಮುಖ ಸುದ್ದಿ3 hours ago
Ipsos poll Survey: ಟ್ರುಡೋ ಜನಪ್ರಿಯತೆ ಕುಸಿತ, ಕೆನಡಾ ಪಿಎಂ ಆಗಲು ಪ್ರತಿಪಕ್ಷ ನಾಯಕನೇ ಬೆಸ್ಟ್!
-
ಉಡುಪಿ9 hours ago
FB Profile Deleted: 20ಕ್ಕೂ ಅಧಿಕ ಹಿಂದು ಜಾಗರಣ ವೇದಿಕೆ ನಾಯಕರ ಫೇಸ್ ಬುಕ್ ಪ್ರೊಫೈಲ್ ಏಕಕಾಲದಲ್ಲಿ ಡಿಲೀಟ್!
-
ಸುವಚನ17 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕಲೆ/ಸಾಹಿತ್ಯ22 hours ago
Painting: ಕೇವಲ 328 ರೂ.ಗೆ ಖರೀದಿಸಿದ ಪೇಂಟಿಂಗ್ 1.5 ಕೋಟಿ ರೂಪಾಯಿಗೆ ಹರಾಜು!
-
ಕರ್ನಾಟಕ21 hours ago
Honey Bee Attack: ಶವ ಸಂಸ್ಕಾರಕ್ಕೆಂದು ಹೋದವರ ಮೇಲೆ ಹೆಜ್ಜೇನು ದಾಳಿ; 10 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
-
ಆರೋಗ್ಯ14 hours ago
Health Tips: ಎಳನೀರು ಒಳ್ಳೆಯದೆಂದು ಕುಡಿಯುವ ಮೊದಲು ಅದರ ಅವಗುಣಗಳೂ ಗೊತ್ತಿರಲಿ!