ಯಾದಗಿರಿ: ಪ್ರಸ್ತುತ ರಾಜಕೀಯಕ್ಕೆ ಯುವಕರು (Youth) ಹೆಚ್ಚಿನ ಪ್ರಮಾಣದಲ್ಲಿ ಬರುವ ಅವಶ್ಯಕತೆ ಇದ್ದು, ನಾಯಕರಾದವರು (Leaders) ನೊಂದವರಿಗೆ ನ್ಯಾಯ (Justice) ಒದಗಿಸಿಕೊಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಸಲಹೆ ನೀಡಿದರು.
ನಗರದಲ್ಲಿ ನವೀಕೃತಗೊಂಡ ಗುರುಮಠಕಲ್ ಶಾಸಕರ ನೂತನ ಜನಸಂಪರ್ಕ ಕಚೇರಿ ಲೋಕಾರ್ಪಣೆಗೊಳಿಸಿ ಮಾತನಾಡಿ, ಸರ್ಕಾರದ ಯಾವುದೇ ಯೋಜನೆ ಇರಲಿ, ಜನಕಲ್ಯಾಣಕ್ಕಾಗಿ ಜಾರಿಯಾದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವಾಗಬೇಕು. ಶಾಸಕರಾದವರು, ಸದಾ ಜನರ ಮಧ್ಯೆ ಇದ್ದು ಕೆಲಸ ಮಾಡಬೇಕು ಎಂದು ತಿಳಿಸಿದರು.
ಇದನ್ನೂ ಓದಿ: Krishna ByreGowda : ಅಕ್ಟೋಬರ್ 1ರಿಂದ ಶೇ. 30ರಷ್ಟು ಆಸ್ತಿ ಮಾರ್ಗಸೂಚಿ ದರ ಹೆಚ್ಚಳ!
ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಮಾತನಾಡಿ, ಈ ಹಿಂದೆ ನಮ್ಮ ತಂದೆಯವರು ಗುರುಮಠಕಲ್ ಹಾಗೂ ಯಾದಗಿರಿಯಲ್ಲಿ ಕಚೇರಿ ಆರಂಭಿಸಿ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಒದಗಿಸಿಕೊಡುತ್ತಿದ್ದರು. ಅವರ ಮಾರ್ಗದರ್ಶನದಂತೆ ನಾನೂ ಸಹ ಮುಂದುವರಿಯುವೆ ಎಂದರು.
ಇದನ್ನೂ ಓದಿ: Drought in Karnataka : ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ಬೆಳೆ ಹಾನಿ; 6 ಸಾವಿರ ಕೋಟಿಗಾಗಿ ಕೇಂದ್ರಕ್ಕೆ ಮೊರೆ
ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮನೂರ, ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಜಿಪಂ ಸಿಇಒ ಗರೀಮಾ ಪನ್ವಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಜಿಲ್ಲಾ ಅರಣ್ಯಾಧಿಕಾರಿ ಕಾಜೋಲ್ ಪಾಟೇಲ್, ಅಬಕಾರಿ ಇಲಾಖೆಯ ಜಿಲ್ಲಾ ಅಧಿಕಾರಿ ಇಂದಿರಾಬಾಯಿ, ಡಿವೈಎಸ್ಪಿ ಬಸವೇಶ್ವರ ಹೀರಾ, ಎಡಿಸಿ ಶರಣಬಸಪ್ಪ ಕೋಟೆಪ್ಪಗೋಳ, ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ ಸೇರಿದಂತೆ ಅನೇಕರು ಇದ್ದರು.