ಯಾದಗಿರಿ: ಡಿ. 9ರಂದು ರಾಷ್ಟ್ರೀಯ ಲೋಕ್ ಅದಾಲತ್ (National Lok Adalat) ಆಯೋಜಿಸಿದ್ದು, ಸಾರ್ವಜನಿಕರು ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅತಿ ಶೀಘ್ರವಾಗಿ ಪರಿಹರಿಸಿ, ಜನಸಾಮಾನ್ಯರಿಗೆ ಸಂತೋಷದಿಂದ ಕಳುಹಿಸುವುದೇ ನಮ್ಮ ಧ್ಯೇಯವಾಗಿದೆ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ್ ಕುಮಾರ್ ತಿಳಿಸಿದರು.
ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಿಸಿದ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧಿಕರಣ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು ಸೇರಿದಂತೆ ಹತ್ತಾರು ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗುವುದು ಎಂದು ಅವರು ಹೇಳಿದರು.
ಇದನ್ನೂ ಓದಿ: ICC Rankings: ಶುಭಮನ್ ಗಿಲ್ ನಂ.1 ಬ್ಯಾಟರ್, ಸಿರಾಜ್ ನಂ.1 ಬೌಲರ್
ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇರುವ ಇದೊಂದು ವೇದಿಕೆಯನ್ನು ಸದ್ಬಳಕೆ ಮಾಡಿಕೊಂಡು ಲೋಕ್ ಅದಾಲತ್‌ನ ಸದುಪಯೋಗ ಪಡೆಯಿರಿ ಎಂದು ಅವರು ತಿಳಿಸಿದರು.
ಇದನ್ನೂ ಓದಿ: Job News: ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿದೆ 66 ಸ್ಪೆಷಲಿಸ್ಟ್ ಆಫೀಸರ್ ಹುದ್ದೆ
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರವೀಂದ್ರ ಎಲ್. ಹೊನೋಲೆ, ಜಿಲ್ಲಾ ವಕೀಲ ಸಂಘದ ಅಧ್ಯಕ್ಷ ಸಿ.ಎಸ್. ಮಾಲಿ ಪಾಟೀಲ್ ಉಪಸ್ಥಿತರಿದ್ದರು.