Site icon Vistara News

Yadgiri News: ಬೆಳೆ ಸಮೀಕ್ಷೆ ಗುರಿ ಸಾಧನೆಗೆ ಅಧಿಕಾರಿಗಳು ಒತ್ತುಕೊಡಿ: ಡಿಸಿ ಡಾ. ಸುಶೀಲ

Officers should emphasize on achieving crop survey targets says yadgiri DC Dr Sushila b

ಯಾದಗಿರಿ: ಬೆಳೆ ಸಮೀಕ್ಷೆಯಲ್ಲಿ ರೈತರಿಗೆ ತೊಂದರೆಯಾಗದ ರೀತಿಯಲ್ಲಿ ಅಧಿಕಾರಿಗಳು ಕಾರ್ಯ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ. ಸುಶೀಲ ಬಿ. ನಿರ್ದೇಶನ (Yadgiri News) ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಮಾತನಾಡಿದ ಅವರು, ರೈತರು ನಡೆಸುವ ಬೆಳೆ ಸಮೀಕ್ಷೆಯನ್ನು ಇಲಾಖೆಯ ಮೇಲ್ವಿಚಾರಕರು ಸರಿಯಾಗಿ ಪರಿಶೀಲಿಸಿ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪ್ರಸ್ತಕ ಸಾಲಿನಲ್ಲಿ ಕೂಡ ಬೆಳೆ ಸಮೀಕ್ಷೆ ಗುರಿ ಸಾಧನೆಗೆ ಒತ್ತುಕೊಡಬೇಕು. ರೈತರ ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಅವರಿಂದ ಸ್ವೀಕರಿಸಿರುವ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಶೀಘ್ರ ವಿಲೇವಾರಿ ಮಾಡಿ ಪ್ರಗತಿ ಸಾಧಿಸಿ ಎಂದರು.

ರೈತರು ಮಾಡಿದ ಬೆಳೆ ಸಮೀಕ್ಷೆ ದತ್ತಾಂಶವು ಮುಂಬರುವ ದಿನಗಳಲ್ಲಿ ಅತಿವೃಷ್ಟಿ, ಅನಾವೃಷ್ಟಿ, ಬೆಳೆ ಹಾನಿ, ಬೆಂಬಲ ಬೆಲೆ, ಬೆಳೆವಿಮೆ ಹಾಗೂ ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳಿಂದ ಸೌಲಭ್ಯ ಪಡೆಯಲು ಸಹಕಾರಿಯಾಗಲಿದೆ ಎಂದು ಡಿಸಿ ತಿಳಿಸಿದರು.

ಇದನ್ನೂ ಓದಿ: Tulsi Tea Benefits: ನಿತ್ಯವೂ ತುಳಸಿ ಚಹಾ ಕುಡಿಯುವುದರಿಂದ ಏನೆಲ್ಲ ಲಾಭಗಳಿವೆ ಗೊತ್ತೇ?

ಜಿಲ್ಲೆಯಲ್ಲಿ ಜಮೀನು ಸರ್ವೇ ಕಾರ್ಯಗಳ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ, ಇಲಾಖೆಯ ಹಾಗೂ ನೋಂದಾಯಿತ ಸರ್ವೇಯರ್‌ಗಳಿಗೆ ಪ್ರಕರಣಗಳನ್ನು ಹಂಚಿಕೆ ಮಾಡಿದ ನಂತರ, ಸಂಬಂಧಪಟ್ಟ ಸ್ಥಳಕ್ಕೆ ಭೇಟಿ ನೀಡಿ, ಶೀಘ್ರದಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಸರ್ವೇಯರ್‌ಗಳ ಪ್ರಗತಿಯನ್ನು ನಿರಂತರವಾಗಿ ಗಮನಿಸಲು ತಿಳಿಸಿದ ಅವರು, ಎಲ್ಲಾ ತಹಸೀಲ್ದಾರರು ಸರ್ಕಾರಿ ಜಮೀನಿಗೆ ಸಂಬಂಧಿಸಿದಂತೆ ಲ್ಯಾಂಡ್ ಬೀಟ್ ಆ್ಯಪ್‌ನಲ್ಲಿ ಕಾಲೋಚಿತ ಗೊಳಿಸಲು ಸೂಚಿಸಿದರು.

ಜಿಲ್ಲೆಯಲ್ಲಿ ವ್ಯಾಪಕ ಮಳೆಯಾದ ಸಂದರ್ಭದಲ್ಲಿ ಪ್ರವಾಹ, ಜನ, ಜಾನುವಾರು ಪ್ರಾಣಹಾನಿ, ವಾಸದ ಮನೆ ಹಾನಿ ಹಾಗೂ ಸಾರ್ವಜನಿಕ ಆಸ್ತಿಹಾನಿಯಾಗುವ ಸಾಧ್ಯತೆಗಳಿದ್ದು, ಅಂತಹ ಸಂದರ್ಭದಲ್ಲಿ ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತುರ್ತು ಕ್ರಮಕೈಗೊಳ್ಳಬೇಕು ಎಂದರು.

ಮಳೆಯಿಂದ ಜಾನುವಾರು ಪ್ರಾಣ ಹಾನಿ, ವಾಸದ ಮನೆ ಹಾನಿಯಾಗಿದ್ದಲ್ಲಿ ತಕ್ಷಣ ಪರಿಹಾರ ವಿತರಣೆ ಮಾಡಲು ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು ಎಂದು ಸೂಚನೆ ನೀಡಿದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ; ಇಂದಿನ ದರ ಇಷ್ಟಿದೆ

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಕೃಷಿ ಇಲಾಖೆ ಉಪ ನಿರ್ದೇಶಕಿ ಮಂಜುಳಾ ಸೇರಿದಂತೆ ಎಲ್ಲಾ ತಾಲೂಕಿನ ತಹಶೀಲ್ದಾರರು, ಕಂದಾಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

Exit mobile version