ಯಾದಗಿರಿ: ಪ್ರಧಾನಮಂತ್ರಿ ಅವರ 15 ಅಂಶಗಳ ಕಾರ್ಯಕ್ರಮವನ್ನು ಸಮರ್ಪಕವಾಗಿ ಅರ್ಹರಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಡಾ. ಸುಶೀಲ ಬಿ. ಸಂಬಂಧಿಸಿದ ಅಧಿಕಾರಿಗಳಿಗೆ (Yadgiri News) ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿ ಅವರ 15 ಅಂಶಗಳ ಕಾರ್ಯಕ್ರಮ ಜಿಲ್ಲಾ ಮಟ್ಟದ 2024-25ನೇ ಸಾಲಿನ ಮೊದಲನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯಾದಗಿರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಒಟ್ಟು 49 ಘೋಷಿತ ಕೊಳಚೆ ಪ್ರದೇಶಗಳಿದ್ದು, ಅಲ್ಲಿ ಸುಮಾರು 50, 226 ಜನಸಂಖ್ಯೆ ವಾಸಿಸುತ್ತಿದ್ದು, ಇದರಲ್ಲಿ ಅಲ್ಪಸಂಖ್ಯಾತರ 1081 ಕುಟುಂಬಗಳಿದ್ದು, ಸುಮಾರು 6445 ಅಲ್ಪಸಂಖ್ಯಾತ ಜನರು ವಾಸಿಸುತ್ತಿದ್ದಾರೆ. ಇವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿಪಡಿಸಲು ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಇದನ್ನೂ ಓದಿ: Pralhad joshi: ನವೀಕರಿಸಬಹುದಾದ ಇಂಧನ ಉತ್ಪಾದನೆ; ವಿಶ್ವದಲ್ಲೇ 4ನೇ ಸ್ಥಾನದಲ್ಲಿ ಭಾರತ
ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾರ್ವಜನಿಕ ಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ, ಜಿಲ್ಲಾ ಪಂಚಾಯಿತಿ, ಕೈಗಾರಿಕೆ, ಕೌಶಲ್ಯಾಭಿವೃದ್ಧಿ ಮತ್ತಿತರ ಇಲಾಖೆಗಳು ತಮ್ಮ ಇಲಾಖೆ ವ್ಯಾಪ್ತಿಯ ಕಾರ್ಯಕ್ರಮಗಳನ್ನು ಅಲ್ಪಸಂಖ್ಯಾತರಿಗೆ ತಲುಪಿಸಿ, ಪ್ರಗತಿ ಸಾಧಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು ಎಂದು ಸೂಚಿಸಿದರು.
ಇದನ್ನೂ ಓದಿ: Samsung Galaxy: ಎಐ ಆಧರಿತ ಗ್ಯಾಲಕ್ಸಿ ಝಡ್ ಫೋಲ್ಡ್ 6, ಝಡ್ ಫ್ಲಿಪ್6 ಹೇಗಿದೆ? ದರ ಎಷ್ಟು?
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಪಿಒ ಗುರುನಾಥ ಗೌಡಪ್ಪನ್ನೋರ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಕೆ. ಪ್ರವೀಣಕುಮಾರ್, ಲೀಡ್ ಬ್ಯಾಂಕ್ ಮ್ಯಾನೇಜರ್ ಭೀಮರಾವ್ ಪಂಚಾಳ, ಕೌಶಲ್ಯಾಭಿವೃದ್ದಿ ಇಲಾಖೆ ಸಹಾಯಕ ನಿರ್ದೇಶಕ ಬಸಪ್ಪ ಎಸ್ ತಳವಾಡಿ, ನಗರಸಭೆಯ ಕಾರ್ಯಪಾಲಕ ಅಭಿಯಂತರ ರಜನಿಕಾಂತ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.