Site icon Vistara News

Yadgiri News: ಶುದ್ಧ ಕುಡಿಯುವ ನೀರು ಪೂರೈಕೆ ಮಾಡಿ: ಶಾಸಕ ಚನ್ನಾರೆಡ್ಡಿ ಪಾಟೀಲ ಖಡಕ್‌ ಸೂಚನೆ

Meeting at Taluk Panchayat Hall at Wadagera town Yadgiri

ಯಾದಗಿರಿ: ಗ್ರಾಮೀಣ (Rural) ಭಾಗದ ಜನರಿಗೆ ನೀರಿನ ಸಮಸ್ಯೆಯಾಗದಂತೆ ಶುದ್ಧ ಕುಡಿಯುವ ನೀರಿನ ಘಟಕ ಆದಷ್ಟು ಬೇಗ ದುರಸ್ತಿ ಮಾಡಿ, ಶುದ್ಧ ಕುಡಿಯುವ ನೀರು ಪೂರೈಕೆ (Pure Drinking Water) ಮಾಡಬೇಕು ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಡಗೇರಾ ಪಟ್ಟಣದ ತಾಲೂಕಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳ ಜತೆ ಅವರು ಸಭೆ ನಡೆಸಿ, ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ನೀರಿನ ಸಮಸ್ಯೆ ಇದ್ದರೆ ಕೂಡಲೇ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು. ಕಲುಷಿತ ನೀರು ಸೇವಿಸಿ ವಾಂತಿ ಬೇಧಿ ಪ್ರಕರಣಗಳು ಜಿಲ್ಲೆಯ ಕೆಲ ಕಾಣಿಸಿಕೊಂಡಿವೆ. ಹೀಗಾಗಿ ಇಂತಹ ಘಟನೆ ಜರುಗದಂತೆ ಪಂಚಾಯಿತಿ ಮಟ್ಟದ ಅಧಿಕಾರಿಗಳು ಅಗತ್ಯ ಮುಂಜ್ರಾಗತೆ ವಹಿಸಿ, ಅಗತ್ಯ ಕ್ರಮವಹಿಸಿ ಶುದ್ಧ ನೀರು ಪೂರೈಕೆ ಮಾಡಬೇಕೆಂದು ತಿಳಿಸಿದರು.

ಇದನ್ನೂ ಓದಿ: Money Guide: ಪಿಪಿಎಫ್‌, ಅಂಚೆ ಕಚೇರಿ; ಮಧ್ಯಮ ವರ್ಗದವರ ಹೂಡಿಕೆಗೆ ಇವು ಬೆಸ್ಟ್‌ ಪ್ಲಾನ್‌ಗಳು!

ಮಳೆ ಕೊರತೆಯಿಂದ ಈಗ ಬೆಳೆ ಹಾನಿಯಾಗುತ್ತಿದ್ದು ಕೃಷಿ ಹಾಗೂ ಕಂದಾಯ ಅಧಿಕಾರಿಗಳು ಬೆಳೆ ಹಾನಿ ಸಮೀಕ್ಷೆಯನ್ನು ಸಮರ್ಪಕವಾಗಿ ಮಾಡಬೇಕು ಎಂದು ಸೂಚಿಸಿದ ಅವರು, ಈಗಾಗಲೇ ಸರ್ಕಾರ ವಡಗೇರಾ ತಾಲೂಕು ಬರಗಾಲ ಪೀಡಿತ ತಾಲೂಕು ಎಂದು ಘೋಷಣೆ ಮಾಡಿದ್ದು, ನೀರಿನ ಕೊರತೆಯಾಗದಂತೆ ಅಗತ್ಯ ಕ್ರಮವಹಿಸಬೇಕು ಎಂದರು.

ಗ್ರಾಮ ಲೆಕ್ಕಾಧಿಕಾರಿಗಳು ತಾವು ಕಾರ್ಯನಿರ್ವಹಿಸುವ ಕೇಂದ್ರ ಸ್ಥಾನದಲ್ಲಿದ್ದು ಜನರಿಗೆ ಸಮಸ್ಯೆಯಾಗದಂತೆ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು, ಅದೆ ರೀತಿ ಹಳೆ ವಿದ್ಯುತ್ ತಂತಿಗಳನ್ನು ತೆರವು ಮಾಡಿ ಹೊಸ ವಿದ್ಯುತ್ ತಂತಿಗಳನ್ನು ಅಳವಡಿಸಬೇಕು. ರೈತರಿಗೆ ಸಮಸ್ಯೆಯಾಗದಂತೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: Tips To Prevent Vegetables: ಬೇಸಿಗೆಯಲ್ಲಿ ತರಕಾರಿಗಳು ಹಾಳಾಗದಂತೆ ರಕ್ಷಿಸಿಕೊಳ್ಳುವುದು ಹೇಗೆ?

ತಾಪಂ ಇಒ ಮಲ್ಲಿಕಾರ್ಜುನ ಸಂಗವಾರ, ವಡಗೇರಾ ತಹಸೀಲ್ದಾರ್‌ ಹಲೀಮಾ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Exit mobile version