Site icon Vistara News

Yadgiri News: ಯಾದಗಿರಿಯಲ್ಲಿ ಸಂತ ಸೇವಾಲಾಲ್‌ ಜಯಂತಿ

Saint Sevalal Jayanti celebration in Yadgiri

ಯಾದಗಿರಿ: ಜಿಲ್ಲಾಡಳಿತ, ಜಿ.ಪಂ., ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಸಂತ ಸೇವಾಲಾಲ ಜಯಂತ್ಯೋತ್ಸವ ಸಮಿತಿ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಸಂತ ಸೇವಾಲಾಲ್‌ ಜಯಂತಿ ಆಚರಣೆ ಕಾರ್ಯಕ್ರಮವನ್ನು (Yadgiri News) ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾಧಿಕಾರಿ ಡಾ. ಸುಶೀಲ ಬಿ. ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಸಂತ ಸೇವಾಲಾಲರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಬಳಿಕ ಮಾತನಾಡಿದ ಅವರು, ಸಂತ ಸೇವಾಲಾಲ ಅವರು ಬಂಜಾರ ಸಮಾಜದ ಒಂದು ಶಕ್ತಿ, ಬೆಳಕು ಆಗಿದ್ದಾರೆ. ಅವರ ಮೌಲ್ಯಗಳು, ಸಮಾಜಮುಖಿ ಕಾರ್ಯಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ತಿಳಿಸಿದರು.

ಇದನ್ನೂ ಓದಿ: Karnataka Weather : ಬೆಂಗಳೂರು ಸೇರಿ ಕರಾವಳಿ, ಒಳನಾಡಲ್ಲಿ ತಾಪಮಾನ ಏರಿಕೆ

ಬಂಜಾರ ಸಮಾಜವು ರಾಷ್ಟ್ರದಲ್ಲಿಯೇ ಅತೀ ಶ್ರೇಷ್ಠ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಹೊಂದಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿ.ಪಂ. ಸಿಇಒ ಗರಿಮಾ ಪನ್ವಾರ ಮಾತನಾಡಿದರು.

ಇದನ್ನೂ ಓದಿ: Viral Video: ವಾಕಿಂಗ್‌ ಮಾಡುತ್ತ ಬರೋಬ್ಬರಿ 2 ಟ್ರಕ್‌ ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹ; ಅಧಿಕಾರಿಯ ವಿಡಿಯೊ ವೈರಲ್‌

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಜಯಂತಿ ಸಮಿತಿ ಜಿಲ್ಲಾಧ್ಯಕ್ಷ ದೇವರಾಜ ಎಲ್.ನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಉತ್ತರಾದೇವಿ ಮಠಪತಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಹಿಪಾಲರೆಡ್ಡಿ, ಕೃಷಿ ಇಲಾಖೆಯ ಅಧಿಕಾರಿ ರಾಜಕುಮಾರ ಹಾಗೂ ಸಮಾಜದ ಮುಖಂಡರಾದ ತೇಜರಾಜ್ ರಾಠೋಡ್, ಪರಶುರಾಮ ಚವ್ಹಾಣ್, ವಕೀಲರಾದ ಗೋವಿಂದ ಬಿ ಜಾಧವ್, ಚಂದ್ರಶೇಖರ ಜಾಧವ್, ಮುಖಂಡರಾದ ಕಿಶನ್ ರಾಠೋಡ್ ಅಲ್ಲಿಪುರ, ರಾಮುನಾಯಕ, ರವಿ ಮುದ್ನಾಳ, ವಿನೋದ್ ಕೆ ರಾಠೋಡ್, ಶಂಕರ ರಾಠೋಡ್, ವಿಜಯ್ ಜಾಧವ್ ಜಿನಕೇರಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version