Yadgiri News: ಮಕ್ಕಳಲ್ಲಿ ವೈಜ್ಞಾನಿಕ ಜ್ಞಾನ ಹೆಚ್ಚಿಸಲು ವಿಜ್ಞಾನ ವಸ್ತು ಪ್ರದರ್ಶನ ಸಹಾಯಕ: ಶರಣಗೌಡ ಕಂದಕೂರು - Vistara News

ಯಾದಗಿರಿ

Yadgiri News: ಮಕ್ಕಳಲ್ಲಿ ವೈಜ್ಞಾನಿಕ ಜ್ಞಾನ ಹೆಚ್ಚಿಸಲು ವಿಜ್ಞಾನ ವಸ್ತು ಪ್ರದರ್ಶನ ಸಹಾಯಕ: ಶರಣಗೌಡ ಕಂದಕೂರು

Yadgiri News: ಯಾದಗಿರಿ ನಗರದ ಶಾಂತಿ ಸದನ ಶಾಲೆಯಲ್ಲಿ ಅಗಸ್ತ್ಯ ಫೌಂಡೇಶನ್ ಸಹಯೋಗದಲ್ಲಿ ವಿಜ್ಞಾನ ಮೇಳ ಕಾರ್ಯಕ್ರಮ ಜರುಗಿತು.

VISTARANEWS.COM


on

Science fair programme at Yadgiri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ಆಧುನಿಕತೆ ಭರಾಟೆಯಲ್ಲಿ ವೈಜ್ಞಾನಿಕ ಆವಿಷ್ಕಾರಗಳಿಂದ ತಂತ್ರಜ್ಞಾನ (Technology) ಬಳಕೆ ಹೆಚ್ಚಾಗುತ್ತಿದೆ. ವಿಜ್ಞಾನ ವಸ್ತುಗಳ ಪ್ರದರ್ಶನವು ಮಕ್ಕಳಿಗೆ ವೈಜ್ಞಾನಿಕ ಜ್ಞಾನ ಹೆಚ್ಚಿಸಲು ಸಹಾಯಕವಾಗಿದೆ ಎಂದು ಶಾಸಕ ಶರಣಗೌಡ ಕಂದಕೂರು (Yadgiri News) ತಿಳಿಸಿದರು.

ನಗರದ ಶಾಂತಿ ಸದನ ಶಾಲೆಯಲ್ಲಿ ಅಗಸ್ತ್ಯ ಫೌಂಡೇಶನ್ ಸಹಯೋಗದೊಂದಿಗೆ ವಿಜ್ಞಾನ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯದ ಜತೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗಿಯಾಗಬೇಕು. ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಕ್ಕಳಲ್ಲಿ ಜ್ಞಾನ ಮಟ್ಟ ಸುಧಾರಣೆ ಕಾಣಲಿದೆ. ವಿಜ್ಞಾನ ಮೇಳ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಸಹಾಯಕವಾಗಿದೆ ಎಂದರು.

ಇದನ್ನೂ ಓದಿ: Money Guide: EPF vs PPF; ಈ ಎರಡು ಯೋಜನೆಗಳಲ್ಲಿ ಯಾವುದು ಉತ್ತಮ? ಇಲ್ಲಿದೆ ಸಂಪೂರ್ಣ ವಿವರ

ಈ ಕಾರ್ಯಕ್ರಮವು ಮಕ್ಕಳ ಪ್ರತಿಭೆ ಗುರುತಿಸುವ ವೇದಿಕೆಯಾಗಿದೆ‌. ಮಕ್ಕಳು ಆಸಕ್ತಿ ತಿಳಿದುಕೊಳ್ಳಲು ಈ ಮೇಳ ಸಹಾಯವಾಗಲಿದೆ‌. ಶಾಂತಿ ಸದನ ಶಾಲೆಯು ಹಮ್ಮಿಕೊಂಡ ಈ ಕಾರ್ಯಕ್ರಮವು ಮಕ್ಕಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಶಾಲೆಯ ಪ್ರಾಂಶುಪಾಲ ಸಂತೋಷ ದಾಸ್ ಮಾತನಾಡಿ, ಮಕ್ಕಳು ಆಸಕ್ತಿ ವಹಿಸಿ ಈ ಮೇಳದಲ್ಲಿ ಅನೇಕ ವಸ್ತುಗಳನ್ನು ಪ್ರದರ್ಶನ ಮಾಡಿದ್ದಾರೆ. ಆಹಾರ ಮೇಳದಿಂದ ಮಕ್ಕಳ ಕಲಿಕೆಗೆ ಅನುಕೂಲವಾಗಲಿದೆ. ವಿಜ್ಞಾನ ಮೇಳವು ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಅರಿವು ಮೂಡಿಸಲು ನೆರವಾಗಲಿದೆ ಎಂದರು.

ಇದನ್ನೂ ಓದಿ: Aadhaar seeding: ಪಹಣಿಗೂ ಮಾಡಿ ಆಧಾರ್ ಲಿಂಕ್;‌ ‘ಲಿಂಕಿಂಗ್‌’ ಲೋಕದಲ್ಲಿ ರೈತ ಹೈರಾಣ!

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಸಾಹೇಬರೆಡ್ಡಿ ಬಕ್ಕಾ, ಡಾ.ಸುದತ್ ದರ್ಶನಾಪುರ, ಸಾಬಣ್ಣ, ಬಸವಂತರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

Yadgiri News: ಶಿಕ್ಷಣ ಜತೆಗೆ ಸ್ಪರ್ಧಾ ಮನೋಭಾವನೆ ಮೂಡಿಸಿ; ಶಾಸಕ ಶರಣಗೌಡ ಕಂದಕೂರ

Yadgiri News: ಯಾಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಕೊಟಗೇರಾ ಗ್ರಾಮದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಯಾದಗಿರಿ ವತಿಯಿಂದ 24 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಡಾ. ಬಿ.ಆರ್ ಅಂಬೇಡ್ಕರ್‌ ವಸತಿ ಶಾಲೆ ಕಟ್ಟಡವನ್ನು ಗುರುಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಉದ್ಘಾಟಿಸಿದರು.

VISTARANEWS.COM


on

Dr BR Ambedkar Residential School building inaugurated by MLA Sharana Gowda Kandakura at Kotagera village
Koo

ಯಾದಗಿರಿ: ಪ್ರಸಕ್ತ ದಿನಗಳಲ್ಲಿ ಶಿಕ್ಷಣಕ್ಕೆ ಎಲ್ಲರೂ ಒತ್ತು ನೀಡುವುದು ಅವಶ್ಯಕವಾಗಿದೆ, ಈ ನಿಟ್ಟಿನಲ್ಲಿ ವಸತಿ ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳೆಂದು ಭಾವಿಸಿ, ಅವರಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಅವರಲ್ಲಿ ಸ್ಪರ್ಧಾ ಮನೊಭಾವನೆ ಮೂಡಿಸಿದಲ್ಲಿ ಮಾತ್ರ ಅವರಲ್ಲಿರುವ ಪ್ರತಿಭೆಗಳು, ಜ್ಞಾನ ವಿಕಾಸವಾಗುತ್ತದೆ ಎಂದು ಗುರುಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ (Yadgiri News) ತಿಳಿಸಿದರು.

ಜಿಲ್ಲೆಯ ಗುರುಮಠಕಲ್ ಮತಕ್ಷೇತ್ರದ ಕೊಟಗೇರಾ ಗ್ರಾಮದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಯಾದಗಿರಿ ವತಿಯಿಂದ 24 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಡಾ. ಬಿ.ಆರ್. ಅಂಬೇಡ್ಕರ್‌ ವಸತಿ ಶಾಲೆ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ, ಆರೋಗ್ಯ, ಶುದ್ಧ ಕುಡಿಯುವ ನೀರು, ಉದ್ಯೋಗ ಸೃಷ್ಟಿಗೆ ಹೆಚ್ಚು ಗಮನ ನೀಡುತ್ತಿದ್ದೇನೆ, ಕಾರಣ ಗ್ರಾಮೀಣ ಭಾಗದ ಜನರು ತಮ್ಮ ಮಕ್ಕಳಿಗೆ ತಪ್ಪದೇ ಶಿಕ್ಷಣ ಒದಗಿಸಲು ಪ್ರಯತ್ನಿಸಬೇಕೆಂದು ಸಲಹೆ ನೀಡಿದರು.

ಇಂತಹ ಒಳ್ಳೆಯ ಪರಿಸರದಲ್ಲಿ ಸುಸಜ್ಜಿತ ವಸತಿ ಶಾಲೆ ನಿರ್ಮಾಣ ಮಾಡಲಾಗಿದೆ, ಇಲ್ಲಿನ ಶಿಕ್ಷಕರು ಪರಿಸರ ಸ್ವಚ್ಚತೆಗೆ ಆದ್ಯತೆ ನೀಡುವ ಜತೆಗೆ ನಿಮಗೆ ತಂಗಲು ವಸತಿ ಗೃಹಗಳನ್ನು ನಿರ್ಮಾಣ ಮಾಡಲಾಗಿದೆ, ಇಲ್ಲಿಯೇ ಎಲ್ಲರೂ ವಾಸ ಮಾಡಿ, ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚು ಬೋಧನೆ ಮಾಡುವ ಜತೆಗೆ ಅವರ ಚಟುವಟಿಕೆಗಳ ಮೇಲೆ ಗಮನ ಹರಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Kannada New Movie: ಅದ್ಧೂರಿಯಾಗಿ ನಡೆದ ’ದ ಪ್ರಸೆಂಟ್’ ಚಿತ್ರದ ಮುಹೂರ್ತ

ಜಿಲ್ಲೆಯಲ್ಲಿ 3 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆಯಿದೆ, ನಾನು ಕೂಡ ಸರ್ಕಾರದ ಮೇಲೆ ಶಿಕ್ಷಕರ ನೇಮಕಕ್ಕೆ ಒತ್ತಡ ಹಾಕಿದ್ದೇನೆ, ಅಲ್ಲದೇ ಜಿಲ್ಲಾ ಕೇಂದ್ರ ಯಾದಗಿರಿಯಲ್ಲಿ 2 ಬಿಸಿಎಂ ವಸತಿ ನಿಲಯಗಳ ಸ್ಥಾಪನೆಗೆ ಕ್ರಮ ಕೈಗೊಂಡಿದ್ದೇನೆ ಎಂದರು.

ನೆರೆಯ ಮೊಟನಳ್ಳಿ ಕ್ರಾಸ್ ಹತ್ತಿರ ಇರುವ ಮೋರಾರ್ಜಿ ವಸತಿ ಶಾಲೆ ದುರಸ್ತಿಗೆ ಆದಷ್ಟು ಬೇಗನೇ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಅನುಕೂಲತೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಮತಕ್ಷೇತ್ರದಲ್ಲಿ ನಿರುದ್ಯೋಗ ಸಮಸ್ಯೆಯಿಂದ ಸಾವಿರಾರು ಜನರು ಉದ್ಯೊಗ ಹರಸಿ ಬೃಹತ್ ನಗರಗಳಿಗೆ ವಲಸೆ ಹೋಗಿದ್ದಾರೆ, ಉನ್ನತ ಅಭ್ಯಾಸ ಮಾಡಿದ ನಮ್ಮ ಯುವಕರು ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ, ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಬೃಹತ್ ಕೈಗಾರಿಕಾ ಸಚಿವರಾಗಿದ್ದಾರೆ, ಕಡೆಚೂರ-ಬಾಡಿಯಾಲ ಭಾಗದಲ್ಲಿ 3 ಸಾವಿರ ಎಕರೆ ಕೈಗಾರಿಕಾ ಭೂಮಿಯಿದೆ, ನಾನೂ ಈಗಾಗಲೇ ಅವರನ್ನು ಭೇಟಿಯಾಗಿ ಇಲ್ಲಿನ ವಾಸ್ತವಿಕ ಪರಿಸ್ಥಿತಿಯನ್ನು ವಿವರಿಸಿ, ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಅದ್ಯತೆ ನಿಡಬೇಕೆಂದು ಮನವಿ ಮಾಡಿದ್ದೇನೆ, ಅವರಿಂದಲೂ ಕೂಡ ಸಕರಾತ್ಮಕ ಬೆಂಬಲ ದೊರೆಯಲಿದೆ ಎಂದು ಹೇಳಿದರು.

ಇದನ್ನೂ ಓದಿ: Kannada New Movie: ಸಿದ್ದು ಪೂರ್ಣಚಂದ್ರ ನಿರ್ದೇಶನದ ನೂತನ ಚಿತ್ರ ‘ಈ ಪಾದ ಪುಣ್ಯ ಪಾದ’ ಶೀರ್ಷಿಕೆ ಅನಾವರಣ

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಸರೋಜಾ, ಕ್ಷೇತ್ರ ಶಿಕ್ಷಣಾಧಿಕಾರಿ ಋಷಿಕೇಶ, ಬಿಆರ್‌ಸಿ ಮಲ್ಲಿಕಾರ್ಜುನ, ಮೋಟನಳ್ಳಿ ಗ್ರಾ.ಪಂ ಅಧ್ಯಕ್ಷೆ ಧನಲಕ್ಷ್ಮಿ, ಪ್ರಾಂಶುಪಾಲೆ ರಮಾಭಾಯಿ, ಗುರುಮಠಕಲ್ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಾಪಣ್ಣ ಮನ್ನೆ, ಬ್ಲಾಕ್ ಜೆಡಿಎಸ್ ಅಧ್ಯಕ್ಷ ಪ್ರಕಾಶ ನೀರಟ್ಟಿ, ರಾಮಣ್ಣ ಕೋಟಗೇರಾ, ಸುಭಾಶ್ಚಂದ್ರ ಕಟಕಟಿ ಹೊನಗೇರಾ, ದೀಪಕ್ ಬೆಳ್ಳಿ, ರವಿ ಪಾಟೀಲ್, ಅಶೋಕ ಕೋಟಗೇರಾ, ಬಂದಪ್ಪಗೌಡ ಲಿಂಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Continue Reading

ಮಳೆ

Karnataka Weather : ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಸೇರಿ ವಿವಿಧೆಡೆ ಮಳೆ ಅಬ್ಬರ; ಆರೆಂಜ್‌ ಅಲರ್ಟ್‌ ಘೋಷಣೆ

Karnataka Weather Forecast : ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜೂನ್‌ 27ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Heavy Rain Alert) ಸಾಧ್ಯತೆಯಿದೆ. ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕ (Rain News) ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಭಾಗದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಊತ್ತರ ಒಳನಾಡಿನ ಕೆಲ ಪ್ರದೇಶದಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಬೆಳಗಾವಿಯಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ.

ಮಲೆನಾಡಿನ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲಿಯಸ್‌ ಇರಲಿದೆ.

ಆರೆಂಜ್‌ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.

ಜೂನ್‌ 27ರವರೆಗೆ ಮೀನುಗಾರರಿಗೆ ಎಚ್ಚರಿಕೆ

ಜೂನ್‌ 27 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ

ಇದನ್ನೂ ಓದಿ: Tumkur Shoot out : ತುಮಕೂರಿನಲ್ಲಿ ಸದ್ದು ಮಾಡಿದ ಪೊಲೀಸ್ ತುಪಾಕಿ; ಸರಗಳ್ಳನ ಹೆಡೆಮುರಿ ಕಟ್ಟಿದ ಖಾಕಿ

ಮಾನ್ಸೂನ್‌ಗೂ ಕಾಲಿಟ್ಟ ಟ್ರೆಂಚ್‌ ಕೋಟ್‌ ಫ್ಯಾಷನ್‌!

ಮಳೆಗಾಲಕ್ಕೂ ಟ್ರೆಂಚ್‌ ಕೋಟ್‌ (Monsoon trench coat fashion) ಫ್ಯಾಷನ್‌ ಎಂಟ್ರಿ ನೀಡಿದೆ. ಹೌದು, ಕೇವಲ ಚಳಿಗಾಲದಲ್ಲಿ ಟ್ರೆಂಡಿಯಾಗುತ್ತಿದ್ದ, ಟ್ರೆಂಚ್‌ ಕೋಟ್‌ಗಳು ಇದೀಗ ಮಾನ್ಸೂನ್‌ ಸೀಸನ್‌ಗೂ ಕಾಲಿಟ್ಟಿದ್ದು, ಸೆಲೆಬ್ರೆಟಿಗಳನ್ನು ಮಾತ್ರವಲ್ಲ, ಸಾಮಾನ್ಯ ಹುಡುಗಿಯರನ್ನು ಸವಾರಿ ಮಾಡತೊಡಗಿವೆ. ಇದಕ್ಕೆ ಪೂರಕ ಎಂಬಂತೆ, ಕಿಂಗ್‌ ಖಾನ್‌ ಮಗಳು ಹಾಗೂ ನಟಿ ಸುಹಾನಾ ಖಾನ್‌ ಟ್ರೆಂಚ್‌ ಕೋಟ್‌ ಧರಿಸಿದ್ದು, ಈ ಫ್ಯಾಷನ್‌ ಜೆನ್‌ ಜಿ ಹುಡುಗಿಯರನ್ನು ಸೆಳೆದಿದೆ. ಮಾನ್ಸೂನ್‌ನಲ್ಲೂ ಟ್ರೆಂಚ್‌ ಕೋಟ್‌ ಕ್ಲಾಸಿಯಾಗಿ ಕಾಣಿಸುತ್ತದೆ ಎಂಬುದನ್ನು ಪ್ರೂವ್‌ ಮಾಡಿದೆ.

Monsoon Trench Coat Fashion

ಟ್ರೆಂಚ್‌ಕೋಟ್‌ ವೆರೈಟಿ ವಿನ್ಯಾಸ

ಟ್ರೆಂಚ್‌ ಕೋಟ್‌ಗಳು ನೋಡಲು ಒಂದೇ ಬಗೆಯದ್ದಾಗಿ ಕಾಣುತ್ತವಾದರೂ ಸ್ಟಿಚ್ಚಿಂಗ್‌ ನಾನಾ ಶೈಲಿಯಲ್ಲಿರುತ್ತವೆ. ಸ್ಲೀಕ್‌ ಲುಕ್‌, ಫಾರ್ಮಲ್‌ ಬ್ಲೇಜರ್‌ ಸ್ಟೈಲ್‌ನಲ್ಲೂದೊರಕುತ್ತವೆ. ಮೊದಲೆಲ್ಲಾ ಹಿಲ್‌ ಸ್ಟೇಷನ್‌ಗಳಲ್ಲಿ ಮಾತ್ರ ಇವುಗಳ ಬಳಕೆ ಹೆಚ್ಚಾಗಿತ್ತು. ಬರಬರುತ್ತಾ ಸಿನಿಮಾ ತಾರೆಯರ ವಾರ್ಡ್‌ರೋಬ್‌ ಸೇರಿದ ನಂತರ ಸಾಮಾನ್ಯ ಹುಡುಗಿಯರ ಮನಸ್ಸನ್ನು ಗೆಲ್ಲತೊಡಗಿದವು. ಸ್ವೆಟರ್‌ ಹಾಗೂ ಜಾಕೆಟ್‌ ಧರಿಸುವಂತೆ, ಟ್ರೆಂಚ್‌ ಕೋಟ್‌ಗಳನ್ನು ಧರಿಸುವುದು ಹೆಚ್ಚಾಯಿತು ಎನ್ನುತ್ತಾರೆ ಜಿಯಾ.

ಕ್ಲಾಸಿಕ್‌ ಲುಕ್‌ ಗ್ಯಾರಂಟಿ

ಅಂದಹಾಗೆ, ವೆಸ್ಟರ್ನ್‌ ಲುಕ್‌ ನೀಡುವಲ್ಲಿಈ ಟ್ರೆಂಚ್‌ ಕೋಟ್‌ಗಳು ಪ್ರಮುಖ ಪಾತ್ರ ವಹಿಸುತ್ತವೆ. ಡಿಸೈನರ್‌ ಋತು ಹೇಳುವಂತೆ, ಇದೀಗ ಇಂಡೋ – ವೆಸ್ಟರ್ನ್ ಸ್ಟೈಲ್‌ನಲ್ಲೂ ಈ ಕೋಟ್‌ಗಳನ್ನು ಬಳಸುವುದು ಹೆಚ್ಚಾಗತೊಡಗಿದೆ. ಹಾಗಾಗಿ ಫಾರ್ಮಲ್‌ , ಎಥ್ನಿಕ್‌ ಡ್ರೆಸ್‌ ಧರಿಸುವ ಮಾನಿನಿಯರಿಗೂ ಪ್ರಿಯವಾಗತೊಡಗಿವೆ ಎನ್ನುತ್ತಾರೆ ಅವರು.

ಹೀಗಿರಲಿ ಟ್ರೆಂಚ್‌ ಕೋಟ್‌ ಸ್ಟೈಲಿಂಗ್‌

  • ಟ್ರೆಂಚ್‌ ಕೋಟ್‌ ಬೆಚ್ಚಗಿಡುವುದರಿಂದ ಧರಿಸುವವರು ಸಿಂಪಲ್‌ ಇನ್ನರ್‌ ಡ್ರೆಸ್‌ ಧರಿಸುವುದು ಬೆಸ್ಟ್.
  • ಉದ್ದಗಿರುವವರಿಗೆ ಯಾವುದೇ ಬಗೆಯ ಟ್ರೆಂಚ್‌ ಕೋಟ್‌ ಆದರೂ ಸೂಟ್‌ ಆಗುತ್ತವೆ.
  • ಪ್ಲಂಪಿಯಾಗಿರುವವರು ಆದಷ್ಟು ಡಿಸೈನರ್‌ ಕೋಟ್‌ ಧರಿಸುವುದು ಉತ್ತಮ.
  • ವಿಂಟೆಂಜ್‌ ಹಾಗೂ ರಾಯಲ್‌ ಕಲರ್‌ಗಳ ಟ್ರೆಂಚ್‌ ಕೋಟ್‌ಗಳು ರಾಯಲ್‌ ಲುಕ್‌ ನೀಡುತ್ತವೆ.
  • ಪ್ರಿಂಟೆಡ್‌ ಕೋಟ್‌ಗಳು ಟ್ರೆಂಡ್‌ನಲ್ಲಿಲ್ಲ.
  • ಫಿಟ್ಟಿಂಗ್‌ ಇದ್ದರೇ ಮಾತ್ರ ಚೆನ್ನಾಗಿ ಕಾಣಿಸುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

Karnataka Weather Forecast : ರಾಜ್ಯಾದ್ಯಂತ ನೈರುತ್ಯ ಮುಂಗಾರು ದುರ್ಬಲವಾಗಿದ್ದರೂ, ಕರಾವಳಿ ಹಾಗೂ ಒಳನಾಡಿನ ವಿವಿಧೆಡೆ ಮಳೆಯು (Rain News) ಅಬ್ಬರಿಸುತ್ತಿದೆ. ಕಡಲ ತೀರದಲ್ಲಿ ಅಲೆಗಳು ಆಳೆತ್ತರದಲ್ಲಿ ಅಪ್ಪಳಿಸುತ್ತಿದ್ದು, ನಾಳೆಗೂ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರಾವಳಿಯಲ್ಲಿ ವರುಣಾರ್ಭಟ (Rain News) ಮುಂದುವರೆದಿದೆ. ಕಳೆದ ಎರಡು ಮೂರು ದಿನಗಳಿಂದ ಕರಾವಳಿಯಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುತ್ತಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿದ್ದು, ಭಾರೀ ಗಾಳಿ ಹಿನ್ನೆಲೆಯಲ್ಲಿ ದಡಕ್ಕೆ ಆಳೆತ್ತರದ ಅಲೆಗಳು ಅಪ್ಪಳಿಸುತ್ತಿದೆ. ರೆಡ್‌ ಅಲರ್ಟ್‌ ನೀಡಲಾಗಿದ್ದು, ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್ ಬಿದ್ದಿದೆ. ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಮುನ್ಸೂಚನೆ (Karnataka Weather Forecast) ನೀಡಿದೆ.

ಜೂನ್‌ 25ರವರೆಗೆ ಕರಾವಳಿ ಮತ್ತು ದಕ್ಷಿನ ಒಳನಾಡಿನಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳಾದ ಬೀದರ್‌, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ , ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ವಿಜಯನಗರದಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿ ಬೀಸಲಿದೆ.

ರಾಜ್ಯಾದ್ಯಂತ ಮುಂಗಾರು ದುರ್ಬಲವಾಗಿದ್ದರೂ, ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಪಣಂಬೂರು, ಭಾಲ್ಕಿ 5 ಸೆಂ.ಮೀ, ಮಂಗಳೂರು ವಿಮಾನ ನಿಲ್ದಾಣ , ಕೊಟ್ಟಿಗೆಹಾರ ತಲಾ 4 ಸೆಂ.ಮೀ ಮಳೆಯಾಗಿದೆ. ಉಡುಪಿ, ಸುಳ್ಯ, ಬಾದಾಮಿ, ದೇವರಹಿಪ್ಪರಗಿಯಲ್ಲಿ 3 ಸೆಂ.ಮೀ ಮಳೆಯಾಗಿದೆ. ಧರ್ಮಸ್ಥಳ, ಮಂಕಿ, ಪುತ್ತೂರು , ಅಂಕೋಲಾ, ರೋನ್, ಭಾಗಮಂಡಲ, ಆಗುಂಬೆಯಲ್ಲಿ 2 ಸೆಂ.ಮೀ ಮಳೆಯಾಗಿದೆ. ಕಾರವಾರ, ಮೂಲ್ಕಿ, ಕುಂದಾಪುರ, ಬೆಳ್ತಂಗಡಿ, ಹೊನ್ನಾವರ, ಕಾರ್ಕಳ, ಉಪ್ಪಿನಂಗಡಿ, ನರಗುಂದ, ನಿಪ್ಪಾಣಿ, ಶಹಪುರ, ಕುಷ್ಟಗಿ, ಲಿಂಗನಮಕ್ಕಿ ಎಚ್‌ಎಂಎಸ್ , ಪೊನ್ನಂಪೇಟೆಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Weather : ಕರಾವಳಿಗೆ ವರ್ಷಧಾರೆಯ ಎಚ್ಚರಿಕೆ; ಬೆಂಗಳೂರಿನಲ್ಲಿ ಹೇಗೆ?

Rain News : ಕರಾವಳಿ ಹಾಗೂ ಒಳನಾಡಿನ ಭಾಗದಲ್ಲಿ ಮಳೆಯು ಅಬ್ಬರಿಸಲಿದ್ದು, ಹವಾಮಾನ ಇಲಾಖೆ (karnataka Weather Forecast) ಮುನ್ನೆಚ್ಚರಿಕೆಯನ್ನು ನೀಡಿದೆ. ವಿವಿಧೆಡೆ ಮಳೆಯೊಂದಿಗೆ ಬಿರುಗಾಳಿ ಬೀಸಲಿದ್ದು, ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ (Rain News) ನಿರೀಕ್ಷೆಯಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಸುತ್ತಮುತ್ತ ಪ್ರತ್ಯೇಕವಾಗಿ ಅತಿ ಹೆಚ್ಚು ಮಳೆಯಾಗುವ (Heavy Rain) ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು ಗಾಳಿಯೊಂದಿಗೆ (30-40 ಕಿ.ಮೀ) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಸಾಕಷ್ಟು ವ್ಯಾಪಕವಾದ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಬೆಳಗಾವಿ ಮತ್ತು ಕಲಬುರಗಿಯಲ್ಲಿ ಭಾರಿ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Theft case : ಕಳ್ಳತನ ಮಾಡುತ್ತಿರುವಾಗಲೇ ಕಳ್ಳ ಲಾಕ್‌; ಸಿಸಿ ಕ್ಯಾಮೆರಾ ಲೈವ್ ಸ್ಟ್ರೀಮ್ ಆಧರಿಸಿ ಅರೆಸ್ಟ್‌

ಇಲ್ಲೆಲ್ಲ ಸಿಕ್ಕಾಪಟ್ಟೆ ಮಳೆ

ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯು 40-50 ಕಿ.ಮೀ ವೇಗದಲ್ಲಿ ಬೀಸದಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ. ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ದಾವಣಗೆರೆ, ಮಂಡ್ಯ ಮತ್ತು ಮೈಸೂರಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ

ಹೈವೇವ್‌ ಅಲರ್ಟ್‌!

ಜೂನ್‌ 24ರಂದು ಕರಾವಳಿಯಲ್ಲಿ ಗಂಟೆಗೆ 35 ರಿಂದ 55 ಕಿ.ಮೀ ವೇಗದಲ್ಲಿ ತೀವ್ರ ಗಾಳಿ ಬೀಸಲಿದೆ. ದಕ್ಷಿಣ ಕನ್ನಡದ ಮುಲ್ಕಿಯಿಂದ ಮಂಗಳೂರಿನವರೆಗೆ ಅಲೆಗಳ ಎಚ್ಚರಿಕೆ ನೀಡಲಾಗಿದೆ. 2.8 ರಿಂದ 3.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಹೇಳಲಿದೆ. ಇನ್ನೂ ಉಡುಪಿಯ ಬೈಂದೂರಿನಿಂದ ಕಾಪುವರೆಗೆ ಹೈ ವೇವ್ ಅಲರ್ಟ್ ನೀಡಲಾಗಿದೆ. 2.9 – 3.2 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳದವರೆಗೆ 3.0 -3.3 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಅಪ್ಪಳಿಸಲಿದೆ. ಹೀಗಾಗಿ ಪ್ರವಾಸಿಗರು ಹಾಗೂ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Gold Rate Today
ಚಿನ್ನದ ದರ9 mins ago

Gold Rate Today: ಆಭರಣಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

ಕ್ರೀಡೆ13 mins ago

IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

Rashmika Mandanna Ayushmann Khurrana Team Up For Horror Comedy
ಟಾಲಿವುಡ್19 mins ago

Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

Self Harming
ಕರ್ನಾಟಕ25 mins ago

Self Harming: ಕೆಲಸದಿಂದ ತೆಗೆದು ಕಿರುಕುಳ; ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

jewellery robbery case
ಕ್ರೈಂ25 mins ago

Robbery Case: 30 ಸೆಕೆಂಡ್‌ನಲ್ಲಿ ಇಡೀ ಜ್ಯುವೆಲ್ಲರಿ ದರೋಡೆ, ಸಿಸಿಟಿವಿಯಲ್ಲಿ ಕೃತ್ಯ ಸೆರೆ

Parineethi Chopra
Latest37 mins ago

Parineethi Chopra: ಏಳುಮಲ್ಲಿಗೆ ತೂಕದ ಚೆಲುವೆ ಪರಿಣಿತಿ ಚೋಪ್ರಾ ಸಿಕ್ಕಾಪಟ್ಟೆ ದಪ್ಪಗಾಗಿದ್ದು ಯಾಕೆ?

Asaduddin Owais
ದೇಶ40 mins ago

Asaduddin Owais: ಪ್ರಮಾಣ ವಚನ ಸ್ವೀಕರಿಸಿ ‘ಜೈ ಪ್ಯಾಲೆಸ್ತೀನ್​’ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದು? ಕಾನೂನು ಏನು ಹೇಳುತ್ತದೆ?

Actor Darshan support by anchor hemalatha
ಸ್ಯಾಂಡಲ್ ವುಡ್44 mins ago

‌Actor Darshan: ರೇಣುಕಾಸ್ವಾಮಿಯನ್ನ ಹೀರೊ ಮಾಡೋದು ನಿಲ್ಲಿಸಿ, ದರ್ಶನ್‌ನ ಬಿಟ್ಟುಕೊಡಲ್ಲ ಎಂದ ಖ್ಯಾತ ನಿರೂಪಕಿ!

Life threat
ಕರ್ನಾಟಕ59 mins ago

Life threat: ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ; ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

Para Badminton Ranking
ಕ್ರೀಡೆ1 hour ago

Para Badminton Ranking: ಮೊದಲ ಬಾರಿಗೆ ವಿಶ್ವ ನಂ.1 ಸ್ಥಾನಕ್ಕೇರಿದ ಕನ್ನಡಿಗ ಸುಹಾಸ್‌ ಯತಿರಾಜ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌