Site icon Vistara News

Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

Shivasharane Hemaraddi Mallamma Jayanti celebration in Srisailam

ಯಾದಗಿರಿ: ಇಲ್ಲಿಗೆ ಸಮೀಪದ ಆಂಧ್ರಪ್ರದೇಶದ ಶ್ರೀಶೈಲಂನ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಸಹಸ್ರಾರು ಭಕ್ತರ ಮಧ್ಯೆ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಅವರ 602ನೇ ಜಯಂತಿಯನ್ನು ಶ್ರದ್ದಾ ಭಕ್ತಿ ಹಾಗೂ ಸಂಭ್ರಮದಿಂದ (Yadgiri News) ಆಚರಿಸಲಾಯಿತು.

ಸಮಾರಂಭದಲ್ಲಿ ಮಾತನಾಡಿದ ಶ್ರೀಶೈಲಂ ಮಲ್ಲಿಕಾರ್ಜುನ ದೇವಸ್ಥಾನ ಆಡಳಿತ ಮಂಡಳಿಯ ಟ್ರಸ್ಟ್‌ನ ಕಾರ್ಯನಿರ್ವಾಹಕ ಅಧಿಕಾರಿ ಪೆದ್ದುರಾಜು ಮಾತನಾಡಿ, 14ನೇ ಶತಮಾನದಲ್ಲಿ ಮಲ್ಲಮ್ಮ ತನ್ನ ಕೌಟುಂಬಿಕ ಜೀವನದ ಜತೆಗೆ ಆಧ್ಯಾತ್ಮಿಕ ಸಾಧನೆ ಮೂಲಕ ಪರಶಿವ ಮಲ್ಲಿಕಾರ್ಜುನನ ಕೃಪೆಗೆ ಪಾತ್ರಳಾಗಿ ಮನುಕುಲಕ್ಕೆ ಮಾನವೀಯ ಸಂದೇಶಗಳನ್ನು ನೀಡಿದ್ದಾಳೆ ಎಂದು ತಿಳಿಸಿದರು.

ಇದನ್ನೂ ಓದಿ: Aadhaar Card Fact Check: 10 ವರ್ಷಗಳ ಹಿಂದಿನ ಆಧಾರ್ ಕಾರ್ಡ್‌ ಜೂ. 14ರ ಬಳಿಕ ರದ್ದಾಗುತ್ತದೆಯೆ?

ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ ಕರ್ಮಭೂಮಿಯಾದ ಶ್ರೀಶೈಲಂನಲ್ಲಿ ಕರ್ನಾಟಕದ ವೀರಶೈವ ಲಿಂಗಾಯತ ರಡ್ಡಿ ಸಮಾಜದವರು ಭವ್ಯ ಮಲ್ಲಮ್ಮ ದೇವಸ್ಥಾನ ನಿರ್ಮಾಣ ಮಾಡಿದ್ದಲ್ಲದೇ ಕ್ಷೇತ್ರದ ಪ್ರಗತಿಗೆ ಮಹತ್ವದ ಕೊಡುಗೆ ನೀಡಿಕೊಂಡು ಬಂದಿದ್ದಾರೆ, ಅವರ ಶ್ರಮದಿಂದ ಆಂದ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕ ಭಕ್ತರ ಮದ್ಯೆ ಸಾಮರಸ್ಯ ವಾತಾವರಣ ಮೂಡಿದೆ ಎಂದು ಅಭಿಪ್ರಾಯಪಟ್ಟರು.

ದೇವಸ್ಥಾನಕ್ಕೆ ಆಗಮಿಸುವ ಸಕಲ ಭಕ್ತಾದಿಗಳಿಗೆ ಟ್ರಸ್ಟ್ ವತಿಯಿಂದ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.

ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಮುಖ್ಯ ಅರ್ಚಕ ಗುರುಪಾದಯ್ಯಸ್ವಾಮಿ ಮಾತನಾಡಿ, ಹಲವಾರು ವರ್ಷಗಳಿಂದ ಹೇಮರಡ್ಡಿ ಮಲ್ಲಮ್ಮ ಭಕ್ತರ ಸಹಕಾರದಿಂದ ಇಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ಸಾಮಾಜಿಕ ಕಾರ್ಯಗಳನ್ನು ನಡೆಸಿಕೊಂಡು ಅವರ ಸಾಧನೆಯನ್ನು ಎಲ್ಲರಿಗೂ ತಿಳಿಸುವ ಕೆಲಸ ಮಾಡಿಕೊಂಡು ಬಂದಿದ್ದೇವೆ ಎಂದು ತಿಳಿಸಿದರು.

ಇದಕ್ಕೂ ಮೊದಲು ದೇವಸ್ಥಾನದಲ್ಲಿ ಮಲ್ಲಮ್ಮನ ಮೂರ್ತಿಗೆ ಪಂಚಾಮೃತ ಅಭಿಷೇಕ, ಮುತೈದೆಯರಿಗೆ ಉಡಿ ತುಂಬುವ, ತೊಟ್ಟಿಲ ಉತ್ಸವ ಕಾರ್ಯಕ್ರಮ, ಮಹಾ ಮಂಗಳಾರತಿ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ 54 ಹುದ್ದೆ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಸಮಾರಂಭದಲ್ಲಿ ಉಪ ಕಾರ್ಯನಿರ್ವಾಹಕ ಅಧಿಕಾರಿ ಹರಿದಾಸರು, ಶಂಕ್ರಯ್ಯಸ್ವಾಮಿ, ಅರ್ಚಕರಾದ ಓಂಕಾರಯ್ಯಸ್ವಾಮಿ, ಮಲ್ಲಮ್ಮ ತಾಳಿಕೋಟಿ, ವೆಂಕಟರಡ್ಡಿ ಮಾಲಿ ಪಾಟೀಲ್ ಹತ್ತಿಕುಣಿ, ಗದಗ ಜಿಲ್ಲೆಯ ನ್ಯಾಯವಾದಿ ವಿರೇಂದ್ರ ಶಿರೋಳ, ಶಿವಪ್ಪಗೌಡ, ಸಿದ್ದಣ್ಣ ಸೇರಿದಂತೆ ಕನ್ನಡಿಗ ಭಕ್ತರು ಹಾಗೂ ಇತರರು ಉಪಸ್ಥಿತರಿದ್ದರು.

Exit mobile version