ಯಾದಗಿರಿ: ಜಿಲ್ಲೆಯ ಶಹಾಪೂರ ತಾಲೂಕಿನ ಇಬ್ರಾಹಿಂಪುರ ಗ್ರಾಮದಲ್ಲಿರುವ ಶ್ರೀ ಸಾಯಿ ಸಿದ್ದಾಶ್ರಮ, ಸಾಯಿ ಮಂದಿರದ 2ನೇ ವರ್ಷದ ಜಾತ್ರಾ ಮಹೋತ್ಸವವು ಏ.23 ರಂದು ಜರುಗಲಿದ್ದು, ಅಂದು ದೇವಸ್ಥಾನದಲ್ಲಿ 101 ನವ ಜೋಡಿಯ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಂದಿರದ ಅಧ್ಯಕ್ಷ ಮಹಾರಾಜ ದಿಗ್ಗಿ (Yadgiri News) ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸಾಯಿ ಮಂದಿರದ 3 ದಿನಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ, ಮಾತನಾಡಿದ ಅವರು, ಮೊದಲನೇ ದಿನ ಏ.23 ರಂದು ಬೆಳಿಗ್ಗೆ ಸಾಯಿಬಾಬಾ ಮೂರ್ತಿಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆಯುವವು ಎಂದು ತಿಳಿಸಿದರು.
ನಂತರ ಜರುಗುವ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನಿಧ್ಯವನ್ನು ಗುರುಮಿಠಕಲ್ ಖಾಸಾ ಮಠದ ಪೀಠಾಧಿಪತಿ ಶಾಂತವೀರ ಸ್ವಾಮೀಜಿ, ಸರೂರ ಗುರುಪೀಠದ ಶಾಂತಮಯ ಸ್ವಾಮೀಜಿ, ದೋರನಹಳ್ಳಿ ಚಿಕ್ಕ ಮಠದ ಶಿವಲಿಂಗ ರಾಜೇಂದ್ರ ಸ್ವಾಮೀಜಿ, ಸೂಗೂರ ಎನ್. ಭೋಜಲಿಂಗೇಶ್ವರ ಸಿದ್ದ ಸಂಸ್ಥಾನ ಮಠದ ಹಿರಗಪ್ಪ ತಾತ, ಗೊಲ್ಲಪಲ್ಲಿ ವಾಲ್ಮೀಕಿ ಪೀಠದ ವರದಾನಂದೇಶ್ವರ ಸ್ವಾಮೀಜಿ, ಚಿಗರಳ್ಳಿಯ ಸಿದ್ದಬಸವ ಕಬೀರಾನಂದ ಸ್ವಾಮೀಜಿ, ಹೋತಪೇಠ ಕೈಲಾಸ ಮಠದ ಶಿವಲಿಂಗೇಶ್ವರ ಸ್ವಾಮೀಜಿ, ಶಹಾಪುರದ ಏಕದಂಡಗಿ ಮಠದ ಕಾಳಹಸ್ತೇಂದ್ರ ಸ್ವಾಮೀಜಿ, ಗಬ್ಬೂರವಾಡಿಯ ಬಳಿರಾಮ ಮಹಾರಾಜರು, ಜುಬೇರ ಗೋಗಿಯ ಸೈಯದ್ ಷಾ ಚಾಂದ್ ಹುಸೇನಿ, ತಂಗಡಗಿಯ ಮಲ್ಲಣ್ಣಪ್ಪ ಶರಣರು, ಮಹಲ್‌ರೋಜಾದ ಮಲ್ಲಿಕಾರ್ಜುನ ಮುತ್ಯಾ ಹಾಗೂ ಮಾಲಳ್ಳಿಯ ಕೆಂಚರಾಯ ಪೂಜಾರಿ ವಹಿಸುವರು.
ಇದನ್ನೂ ಓದಿ: UPSC EXAM-2023: ಲಕ್ಷಾಂತರ ರೂಪಾಯಿ ಸಂಬಳವಿದ್ದ ಉದ್ಯೋಗವನ್ನೇ ತೊರೆದಿದ್ದ ಯುಪಿಎಸ್‌ಸಿ ಟಾಪರ್ ಆದಿತ್ಯ ಶ್ರೀವಾಸ್ತವ
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಮತ್ತು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ನೆರವೇರಿಸುವರು.
ಶ್ರೀ ಸಾಯಿ ಬಾಬಾ ಮೂರ್ತಿಗೆ ಪುಷ್ಪಾರ್ಚನೆಯನ್ನು ಗುರುಮಿಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ, ಮಾಜಿ ಸಚಿವರಾದ ಡಾ. ಎ.ಬಿ ಮಾಲಕರಡ್ಡಿ, ಬಾಬುರಾವ್ ಚಿಂಚನಸೂರ, ಮಾಜಿ ಶಾಸಕರಾದ ಗುರು ಪಾಟೀಲ್ ಶಿರವಾಳ, ಅಮಾತೆಪ್ಪ ಕಂದಕೂರ, ಕೆಪಿಸಿಸಿ ಉಪಾಧ್ಯಕ್ಷ ಮರಿಗೌಡ ಪಾಟೀಲ್ ಹುಲಕಲ್, ಕಾಂಗ್ರೆಸ್ ಹಿರಿಯ ಮುಖಂಡ ಎ.ಸಿ ಕಾಡ್ಲೂರ, ಅಹಿಂದ ಮುಖಂಡರಾದ ಹಣಮೇಗೌಡ ಬೀರನಕಲ್ ಮಾಡುವರು, ಅತಿಥಿಗಳಾಗಿ ವಿವಿಧ ಪಕ್ಷಗಳ ಮುಖಂಡರು, ಗಣ್ಯರು ಉಪಸ್ಥಿತರಿರುವರು, ಸಾಯಿ ಮಂದಿರದ ಅಧ್ಯಕ್ಷ ಮಹಾರಾಜ ದಿಗ್ಗಿ ಅಧ್ಯಕ್ಷತೆ ವಹಿಸುವರು ಎಂದು ಅವರು ಮಾಹಿತಿ ನೀಡಿದರು.
ಏ.24 ರಂದು ಬುದವಾರ ಸಂಜೆ 4 ಗಂಟೆಗೆ ದೇವಸ್ಥಾನದ ಆವರಣದಲ್ಲಿ ನಡೆಯುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕನಕ ಗುರುಪೀಠ ತಿಂಥಣಿ ಬ್ರಿಡ್ಜ್‌ನ ಶ್ರೀಗಳಾದ ಸಿದ್ದರಾಮನಂದಪುರಿ ಸ್ವಾಮೀಜಿ, ಹುಲಿಜಂತಿಯ ಮಾಳಿಂಗರಾಯ ಮಹಾರಾಜರು, ಶಹಾಪುರ ಏಕದಂಡಗಿ ಮಠದ ಅಜ್ಜೇಂದ್ರ ಸ್ವಾಮೀಜಿ ವಹಿಸುವರು.
ಇದನ್ನೂ ಓದಿ: IPL 2024: ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ಗೆ ಬಿತ್ತು 12 ಲಕ್ಷ ದಂಡದ ಬರೆ
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ, ಮಾಜಿ ಸಚಿವ ರಾಜುಗೌಡ, ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಖ್ಯಾತ ನಟ, ಕ್ರೇಜಿ ಸ್ಟಾರ್ ವಿ. ರವಿಚಂದ್ರನ್ ನೆರವೇರಿಸುವರು.
ಕಾರ್ಯಕ್ರಮದಲ್ಲಿ ನಾಡಿನ ಖ್ಯಾತ ಕಲಾ ತಂಡಗಳು ತಮ್ಮ ಪ್ರದರ್ಶನ ನೀಡುವರು, ಏ.25 ರಂದು ಗುರುವಾರ ಮಂದಿರದ ಆವರಣದಲ್ಲಿ ಗ್ರಾಮೀಣ ಕ್ರೀಡೆಯಾದ ಕುಸ್ತಿ ಪಂದ್ಯಾವಳಿ ಜರುಗುವುದು, ವಿಜೇತರಾದವರಿಗೆ ಬೆಳ್ಳಿ ಕಡಗ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಗುವುದು ಎಂದು ವಿವರಿಸಿದರು.
ಇದನ್ನೂ ಓದಿ: Public Exam: 5, 8, 9ನೇ ತರಗತಿ ಪಬ್ಲಿಕ್ ಪರೀಕ್ಷೆ ಮೌಲ್ಯಮಾಪನದಲ್ಲಿ ಲೋಪ; ವಿವರ ಸಲ್ಲಿಕೆಗೆ ಸರ್ಕಾರ ಸೂಚನೆ
ಈ ವೇಳೆ ಭೀಮಾಶಂಕರ ಇಬ್ರಾಹಿಂಪುರ, ಸೂರ್ಯಕಾಂತ ಅಲ್ಲಿಪೂರ, ಮರೆಪ್ಪ, ಡಿ. ಬಾಸ್ಕರ ಅಲ್ಲಿಪೂರ, ಮಾಳಪ್ಪ ಯಾದವ, ಖಾಜಾ ಮೈನೂದ್ದೀನ್ ನಾಯ್ಕಲ್, ಅಲ್ಲಿಸಾಬ್ ನಾಯ್ಕಲ್, ಶಿವು ಬೆಳಗುಂದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.