Site icon Vistara News

Yadgiri News: ಭಕ್ತ ಸಾಗರದ ಮಧ್ಯೆ ಸಂಭ್ರಮದಿಂದ ಜರುಗಿದ ಶ್ರೀ ವಿಶ್ವಾರಾಧ್ಯರ ರಥೋತ್ಸವ

Sri Vishwaradhyara rathotsava in Yadgiri

ಯಾದಗಿರಿ: ಕಲ್ಯಾಣ ಕರ್ನಾಟಕದ ಸುಕ್ಷೇತ್ರ, ಯಾದಗಿರಿ ತಾಲೂಕಿನ ಅಬ್ಬೆತುಮಕೂರಿನ ಸಿದ್ಧಿ ಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವವು ಲಕ್ಷಾಂತರ ಭಕ್ತರ ಜಯಘೋಷದ ಮಧ್ಯೆ ಶುಕ್ರವಾರ ಸಂಜೆ ಸಡಗರ ಸಂಭ್ರಮದಿಂದ (Yadgiri News) ಜರುಗಿತು.

ಶ್ರೀಮಠದ ಪೀಠಾಧಿಪತಿ ಡಾ.ಗಂಗಾಧರ ಮಹಾಸ್ವಾಮೀಜಿ ಅವರು ಸಂಜೆ ರಥವನ್ನೇರಿ ಚಾಲನೆ ನೀಡಿದ ಕೂಡಲೇ ಭಕ್ತಾದಿಗಳು “ವಿಶ್ವಾರಾಧ್ಯ ಮಹಾರಾಜ ಕೀ ಜೈ”, “ಗಂಗಾಧರ ಮಹಾರಾಜ ಕೀ ಜೈ” ಎಂಬ ಜಯಘೋಷಗಳೊಂದಿಗೆ ರಥವನ್ನು ಎಳೆದು ಭಕ್ತಿ ಸಮರ್ಪಿಸಿದರು. ನೆರೆದ ಭಕ್ತ ಸಮೂಹ ಉತ್ತುತ್ತಿ, ಬಾಳೆಹಣ್ಣುಗಳನ್ನು ರಥಕ್ಕೆ ಎಸೆದು, ಶ್ರದ್ಧಾ ಭಕ್ತಿಯಿಂದ ನಮಿಸಿ, ಇಷ್ಠಾರ್ಥಗಳನ್ನು ಈಡೇರಿಸುವಂತೆ ಪ್ರಾರ್ಥಿಸಿದರು.

ಇದನ್ನೂ ಓದಿ: Money Guide: ಆನ್‌ಲೈನ್‌ ಮೂಲಕ ಪರ್ಸನಲ್‌ ಲೋನ್‌ಗೆ ಅರ್ಜಿ ಸಲ್ಲಿಸುತ್ತಿದ್ದೀರಾ? ಈ ಅಂಶ ನಿಮ್ಮ ಗಮನದಲ್ಲಿರಲಿ

ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ನೆರೆಯ ಆಂಧ್ರ–ತೆಲಂಗಾಣ ಮತ್ತು ಮಹಾರಾಷ್ಟ್ರ ರಾಜ್ಯಗಳಿಂದಲೂ ಅಸಂಖ್ಯಾತ ಭಕ್ತರು ಶ್ರೀ ವಿಶ್ವಾರಾಧ್ಯರ ಜಾತ್ರೆಗೆ ಆಗಮಿಸಿ, ದರ್ಶನಾಶೀರ್ವಾದ ಪಡೆದು ರಥೋತ್ಸವವನ್ನು ಕಣ್ತುಂಬಿಕೊಂಡರು.

ಶುಕ್ರವಾರ ಬೆಳಗಿನಜಾವ ಶ್ರೀ ವಿಶ್ವರಾಧ್ಯರ ಕರ್ತೃ ಗದ್ದುಗೆಗೆ ಗೋರಟಾ ಸಂಗೀತ ಬಳಗದವರಿಂದ ವಿಶೇಷ ರುದ್ರಾಭಿಷೇಕ ಜರುಗಿತು. ನಂತರ ಹನ್ನೊಂದು ದಿನಗಳ ಕಾಲ ಜರುಗಿದ ಶ್ರೀ ವಿಶ್ವಾರಾಧ್ಯರ ಪುರಾಣದ ಮಂಗಲ ಕಾರ್ಯಕ್ರಮ ಜರುಗಿತು.

ಇದನ್ನೂ ಓದಿ: IPL 2023 : ಐಪಿಎಲ್​ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರು ಇವರು

ಸೇಡಂನ ಶ್ರೀ ಸದಾಶಿವ ಸ್ವಾಮೀಜಿ, ಗೋಲಪಲ್ಲಿಯ ಶ್ರೀ ವರದಾನೇಶ್ವರ ಸ್ವಾಮೀಜಿ ಮತ್ತು ಸೇಡಂನ ಹಾಲಪ್ಪಯ್ಯ ಸ್ವಾಮೀಜಿ, ಗುಂಡಗುರ್ತಿಯ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿಗಳು ಹಾಗೂ ಸಕ ಚನ್ನಾರಡ್ಡಿ ಪಾಟೀಲ ತುನ್ನೂರ, ಸಿದ್ದರಾಮ ಮೇತ್ರೆ, ಮುಖಂಡರಾದ ಡಾ.ಸುಭಾಶ್ಚಂದ್ರ ಕೌಲಗಿ, ಚನ್ನಪ್ಪಗೌಡ ಮೋಸಂಬಿ, ಹಣಮೇಗೌಡ ಬಿರನಕಲ್, ಡಾ.ವಿರೇಶ ಜಾಕಾ, ಸಿದ್ದಣ್ಣಗೌಡ ಕಾಡಂನೋರ್, ಕಸಾಪ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ, ವಿಶ್ವನಾಥ ಶಿರವಾಳ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.

Exit mobile version