Site icon Vistara News

Yadgiri News: ರಾಜಾವೇಣುಗೋಪಾಲ ನಾಯಕಗೆ ಬೆಂಬಲಿಸಿ, ಗೆಲ್ಲಿಸಿ: ಸಚಿವ ದರ್ಶನಾಪುರ

Surapura assembly constituency by election Congress candidate Rajavenugopal Nayaka filed nomination

ಯಾದಗಿರಿ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ (Guarantee Scheme) ಜತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಸುರಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ರಾಜಾವೇಣುಗೋಪಾಲ ನಾಯಕ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಿ ತರಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ (Yadgiri News) ಮನವಿ ಮಾಡಿದರು.

ಸುರಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನಲೆ ಕಾಂಗ್ರೆಸ್ ಅಭ್ಯರ್ಥಿ ರಾಜಾವೇಣುಗೋಪಾಲ ನಾಯಕ ರೋಡ್‌ ಶೋ ನಡೆಸಿ ಮತಯಾಚಿಸಿದರು.

ಸುರಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನಲೆ ಕಾಂಗ್ರೆಸ್ ಅಭ್ಯರ್ಥಿ ರಾಜಾವೇಣುಗೋಪಾಲ ನಾಯಕ ಅವರ ನಾಮಪತ್ರ ಸಲ್ಲಿಸುವ ಕಾರ್ಯಕ್ರಮ ಮುನ್ನ ಕಾಂಗ್ರೆಸ್ ಹಮ್ಮಿಕೊಂಡ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದ ಸಚಿವರು, ದಿ. ರಾಜಾವೆಂಕಟಪ್ಪ ನಾಯಕ ಅವರು ಸುರಪುರ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ರಾಜಾವೆಂಕಟಪ್ಪ ನಾಯಕ ಅವರ ಪುತ್ರ ರಾಜಾವೇಣುಗೋಪಾಲ ನಾಯಕ ಅವರು ಈಗ ಚುನಾವಣೆಗೆ ಸ್ಪರ್ಧೆ ಮಾಡಿದ್ದು, ಮತದಾರರು ಹೆಚ್ಚಿನ ಮತಗಳಿಂದ ಅವರನ್ನು ಗೆಲ್ಲಿಸಿ ತರಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ: Uttara Kannada News: ಬನವಾಸಿಯ ಐತಿಹಾಸಿಕ ಶ್ರೀ ಉಮಾಮಧುಕೇಶ್ವರ ದೇವರ ಮಹಾರಥೋತ್ಸವ

ರಾಜ್ಯದಲ್ಲಿ ಬರಗಾಲ ಆವರಿಸಿದ್ದರೂ ಕೇಂದ್ರ ಸರ್ಕಾರ ರಾಜ್ಯರ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ ಮಾಡಿಲ್ಲ. ಕೇಂದ್ರ ಸರ್ಕಾರ ರೈತರ ಕಾಳಜಿ ತೊರುತ್ತಿಲ್ಲ ಎಂದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಭ್ಯರ್ಥಿ ರಾಜಾವೇಣುಗೋಪಾಲ ನಾಯಕ ಮಾತನಾಡಿ, ಕ್ಷೇತ್ರದ ಮತದಾರರು ನನ್ನ ಪಾಲಿನ ತಂದೆ, ತಾಯಿ ಇದ್ದಂತೆ. ಕ್ಷೇತ್ರದ ಜನರ ಮಗನಾಗಿ ಜನ ಸೇವೆ ಮಾಡುತ್ತೇನೆ. ತಂದೆ ಅವರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಅವರ ಹಾದಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: Diabetic Controle: ಕಾಡುವ ಮಧುಮೇಹ ನಿಯಂತ್ರಣಕ್ಕೆ ಇಲ್ಲಿದೆ ಸುಲಭ ತಂತ್ರ

ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ. ಕುಮಾರನಾಯಕ ಮಾತನಾಡಿದರು.

ಭರ್ಜರಿ ರೋಡ್ ಶೋ

ನಂತರ ಕಾಂಗ್ರೆಸ್ ಅಭ್ಯರ್ಥಿ ರಾಜಾವೇಣುಗೋಪಾಲ ನಾಯಕ ಅವರು ರೋಡ್ ಶೋ ನಡೆಸಿ ಮತಯಾಚನೆ ನಡೆಸಿದರು. ವಸಂತ ಮಹಲ್‌ನಿಂದ ಸುರಪುರ ತಹಸೀಲ್ದಾರ್‌ ಕಚೇರಿವರೆಗೆ ರೋಡ್ ಶೋ ನಡೆಸಿದರು. ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ರೋಡ್ ಶೋದಲ್ಲಿ ಪಾಲ್ಗೊಂಡಿದ್ದರು.

ಮೆರವಣಿಗೆ ನಂತರ ತಹಸೀಲ್ದಾರ್‌ ಕಚೇರಿಗೆ ತೆರಳಿ, ಕಾಂಗ್ರೆಸ್ ಅಭ್ಯರ್ಥಿ ರಾಜಾವೇಣುಗೋಪಾಲ ನಾಯಕ ನಾಮಪತ್ರ ಸಲ್ಲಿಸಿದರು.

ಇದನ್ನೂ ಓದಿ: IPL 2024 : ಆರ್​ಸಿಬಿ, ಕೊಹ್ಲಿಯ ನೆರವು ಸ್ಮರಿಸಿದ ಕೆ. ಎಲ್ ರಾಹುಲ್​

ಈ ವೇಳೆ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸರೆಡ್ಡಿ ಪಾಟೀಲ ಅನಪುರ, ರಾಜಾ ಕೃಷ್ಣಪ್ಪ ನಾಯಕ, ಕೆಪಿಸಿಸಿ ಕಾರ್ಯದರ್ಶಿ ವಿಠಲ್ ಯಾದವ್‌, ರಾಜಶೇಖರ ಪಾಟೀಲ್ ವಜ್ಜಲ್, ಚಂದ್ರಶೇಖರ ದಂಡಿನ್, ರವಿಚಂದ್ರ ಆಲ್ದಾಳ, ಗುಂಡಪ್ಪ ಸೊಲ್ಲಾಪೂರ ಕಕ್ಕೇರಾ, ಮಲ್ಲಣ್ಣ ಸಾಹುಕಾರ, ಶಂಕ್ರಣ್ಣ ವಣಕ್ಯಾಳ, ರಾಜಾ ಕುಮಾರನಾಯಕ, ಶಾಂತಗೌಡ ಚನ್ನಪಟ್ಟಣ, ಹಣಮಂತ್ರಾಯ ಮಕಾಶಿ, ಅಬ್ದುಲ್ ಗಫರ್ ನಗನೂರಿ, ದೊಡ್ಡದೇಸಾಯಿ ದೇವರಗೋನಾಲ್‌ ಸೇರಿದಂತೆ ಸಹಸ್ರಾರು ಕಾಯಕರ್ತರು ಇದ್ದರು.

Exit mobile version