ಯಾದಗಿರಿ: ನಗರದ ಜಿಲ್ಲಾಸ್ಪತ್ರೆಗೆ (District Hospital) ಬುಧವಾರ ಬೆಳಗ್ಗೆ ಜಿಲ್ಲಾಧಿಕಾರಿ ಡಾ. ಸುಶೀಲ ಬಿ. ಅವರು ದಿಢೀರ್ ಭೇಟಿ (Visit) ನೀಡಿ ಪರಿಶೀಲನೆ (inspection) ನಡೆಸಿದರು.
ಆಸ್ಪತ್ರೆಯ ಎಲ್ಲಾ ವಾರ್ಡ್‌ಗಳು, ಚುಚ್ಚು ಮದ್ದು ಕೊಠಡಿ, ಔಷಧ ವಿತರಣಾ ಕೊಠಡಿ, ಅಪರೇಷನ್ ಕೊಠಡಿ ಸೇರಿದಂತೆ ಎಲ್ಲಾ ವಿಭಾಗಗಳಿಗೂ ಸಂಚರಿಸಿ ಅಸ್ಪತ್ರೆಯ (education news) ಬಗ್ಗೆ ಮಾಹಿತಿ ಪಡೆದು, ಒಳ ರೋಗಿಗಳ ಆರೋಗ್ಯ ವಿಚಾರಿಸಿದರು.
ಆಸ್ಪತ್ರೆಯಲ್ಲಿನ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಕಲೆಹಾಕಿ, ವೈದ್ಯಕೀಯ ಸೇವೆಯ ಗುಣಮಟ್ಟದ ಬಗ್ಗೆ ಖುದ್ದು ಪರಿಶೀಲಿಸಿದರು.
ಇದನ್ನೂ ಓದಿ: UGC NET results: ಯುಜಿಸಿ ನೆಟ್ ಫಲಿತಾಂಶ 2023 ಪ್ರಕಟ; ನಿಮ್ಮ ರಿಸಲ್ಟ್ ಹೀಗೆ ಚೆಕ್ ಮಾಡಿ
ಬಳಿಕ ಮಾತನಾಡಿದ ಅವರು, ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ, ಉತ್ತಮ ವೈದ್ಯಕೀಯ ಸೌಲಭ್ಯ ಒದಗಿಸಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ವೈದ್ಯರು, ನರ್ಸ್‌ಗಳು ಹಾಗೂ ಸಿಬ್ಬಂದಿಯವರು ಸರಿಯಾಗಿ ಸ್ಪಂದಿಸಬೇಕು. ಯಾವುದೇ ಕಾರಣಕ್ಕೂ ಔಷಧಿಯ ಕೊರತೆಯಾಗಬಾರದು. ಜವಾಬ್ದಾರಿ ತೆಗೆದುಕೊಂಡು ಯಾವುದೇ ದೂರು ಬಾರದ ರೀತಿಯಲ್ಲಿ ಕಾಳಜಿಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಹಾಜರಾಗುವಾಗ ವೈದ್ಯರು, ಸಿಬ್ಬಂದಿಗಳು ಸಮಯಪಾಲನೆ ಮಾಡಿ ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.
ಇದನ್ನೂ ಓದಿ: Rain News : ಮಳೆಗೆ 212ಕ್ಕೂ ಹೆಚ್ಚು ಗ್ರಾಮಗಳ ಕರೆಂಟ್ ಕಟ್; ರೈಲು ಸಂಚಾರ ಸ್ಥಗಿತ
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ. ರಿಜ್ವಾನ್ ಆಫ್ರೀನ್ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.