ಯಾದಗಿರಿ: ರಾಜ್ಯ ಸರ್ಕಾರದ (State Government) ರೈತ ವಿರೋಧಿ ನೀತಿ (Anti Farmer Policy) ಹಾಗೂ ಬಿಜೆಪಿ ಮುಖಂಡರ ಮೇಲೆ ಹಾಕಿರುವ ಸುಳ್ಳು ಕೇಸ್ (Case) ರದ್ದುಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹುಣಸಗಿ ಪಟ್ಟಣದಲ್ಲಿ ಮಾಜಿ ಸಚಿವ ರಾಜುಗೌಡ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ (BJP Protest) ನಡೆಸಿದರು.
ಜಿಲ್ಲೆಯ ಹುಣಸಗಿ ಪಟ್ಟಣದ ಬಸವೇಶ್ವರ ವೃತ್ತದಿಂದ ತಹಸೀಲ್ದಾರ್ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಸರ್ಕಾರದ ವಿರುದ್ಧ ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ರಾಜುಗೌಡ ಮಾತನಾಡಿ, ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದಲ್ಲಿ ನೀರು ಇದ್ದರೂ ಸರ್ಕಾರ ಅವೈಜ್ಞಾನಿಕ ವಾರಬಂದಿ ಜಾರಿಗೆ ತಂದಿದ್ದಾರೆ, ಅವೈಜ್ಞಾನಿಕ ವಾರಬಂದಿ ರದ್ದು ಮಾಡಿ, ರೈತರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: Money Guide : ಗೃಹ ಸಾಲದ ಬಡ್ಡಿ ಲೆಕ್ಕಾಚಾರ ಮಾಡೋದು ಹೇಗೆ? ಇಲ್ಲಿದೆ ಸರಳ ವಿವರಣೆ
ವಿದ್ಯುತ್ ಕೊರತೆಯಿಂದ ಜಮೀನುಗಳಿಗೆ ನೀರು ಹರಿಸಿಕೊಳ್ಳಲು ರೈತರಿಗೆ ಸಾಧ್ಯವಾಗುತ್ತಿಲ್ಲ, ಐಪಿಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಿ ರೈತರ ಬೆಳೆ ಬೆಳೆಯಲು ಅನುಕೂಲ ಮಾಡಬೇಕೆಂದು ಆಗ್ರಹಿಸಿದರು.
ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಲಾಗಿದ್ದು, ರಾಜಕೀಯ ದ್ವೇಷಕ್ಕೆ ಸುಳ್ಳು ಕೇಸ್ ಹಾಕಲಾಗಿದೆ ಎಂದು ಆರೋಪಿಸಿದ ಅವರು, ತಪ್ಪಿತಸ್ಥ ಪಿಎಸ್‌ಐ ಅವರನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿದರು.
ಈ ವೇಳೆ ಬಿಜೆಪಿ ಮುಖಂಡ ಬಬ್ಲುಗೌಡ ಮಾತನಾಡಿ, ಸರ್ಕಾರ ರೈತರಿಗೆ ಮೋಸ ಮಾಡುವ ಕೆಲಸ ಮಾಡಿದೆ, ರಾಜಕೀಯ ಲಾಭಕ್ಕಾಗಿ ರೈತರ ಜತೆ ಚಲ್ಲಾಟವಾಡಬೇಡಿ ಎಂದ ಅವರು, ವಾರಬಂದಿ ರದ್ದು ಮಾಡಬೇಕು. ಬಿಜೆಪಿ ಕಾರ್ಯಕರ್ತರ ಮೇಲಿನ ಸುಳ್ಳು ಕೇಸ್ ರದ್ದು ಮಾಡಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಸನಗೌಡ ಯಡಿಯಾಪುರು ಮಾತನಾಡಿದರು.
ಪ್ರತಿಭಟನೆ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು.
ಇದನ್ನೂ ಓದಿ: Viral News: ಶಾಲೆ ತೊರೆದು 37 ವರ್ಷಗಳ ಬಳಿಕ ಪಿಯುಸಿ ಪರೀಕ್ಷೆ ಬರೆದ ಆಟೋ ಡ್ರೈವರ್!
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಸುರೇಶ್ ಸಜ್ಜನ್, ಎಚ್.ಸಿ. ಪಾಟೀಲ,ಬಸವರಾಜ ಸ್ಥಾವರಮಠ, ಕೃಷ್ಣಾ ಮುದನೂರು, ರಂಗಣ್ಣಗೌಡ ದೇವಿಕೇರಿ, ವೆಂಕಟೇಶ ಸಾಹುಕಾರ, ರಾಜಾ ಹಣಮಪ್ಪ ನಾಯಕ ತಾತಾ, ವಿರೇಶ್ ಚಿಂಚೋಳಿ, ಗದ್ದೆಪ್ಪ ಪೂಜಾರಿ ಸೇರಿದಂತೆ ಅನೇಕರು ಇದ್ದರು.