Site icon Vistara News

Yadgiri News: ಗೃಹಲಕ್ಷ್ಮಿ ಯೋಜನೆಯ ಸದುಪಯೋಗಪಡಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ

Yadgiri DC Dr Sushila Press Statement

ಯಾದಗಿರಿ: ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು (State Govt) ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು (Gruha Lakshmi Scheme) ಜಾರಿಗೊಳಿಸಿದ್ದು, ಅರ್ಹ ಮಹಿಳಾ ಫಲಾನುಭವಿಗಳು (Women beneficiaries) ಇದರ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ. ತಿಳಿಸಿದ್ದಾರೆ.

ಈ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳನ್ನು ನೋಂದಾಯಿಸಿಕೊಳ್ಳಲು ಈಗಾಗಲೇ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅವಕಾಶ ಮಾಡಿಕೊಡಲಾಗಿದೆ.

ನಗರ ಪ್ರದೇಶ ವ್ಯಾಪ್ತಿಯಲ್ಲಿ ಈ ಯೋಜನೆಯಡಿ ಫಲಾನುಭವಿಗಳನ್ನು ನೋಂದಾಯಿಸಿಕೊಳ್ಳಲು, ಯಾದಗಿರಿ ಜಿಲ್ಲೆಯ ಯಾದಗಿರಿ ನಗರಸಭೆ ವ್ಯಾಪ್ತಿಯಲ್ಲಿ 5 ಕೇಂದ್ರಗಳು, ಶಹಾಪುರ ನಗರಸಭೆ ವ್ಯಾಪ್ತಿಯಲ್ಲಿ 5 ಕೇಂದ್ರಗಳು, ಸುರಪುರ ನಗರಸಭೆ ವ್ಯಾಪ್ತಿಯಲ್ಲಿ 5 ಕೇಂದ್ರಗಳು, ಗುರುಮಠಕಲ್ ಪುರಸಭೆ ವ್ಯಾಪ್ತಿಯಲ್ಲಿ 3 ಕೇಂದ್ರಗಳು, ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ 3 ಕೇಂದ್ರಗಳು, ಕಕ್ಕೇರಾ ಪುರಸಭೆ ವ್ಯಾಪ್ತಿಯಲ್ಲಿ 3 ಕೇಂದ್ರಗಳು, ಹುಣಸಗಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಕೇಂದ್ರಗಳು ಮತ್ತು ಭೀಮರಾಯನಗುಡಿ ಅಧಿಸೂಚಿತ ಪ್ರದೇಶ ಸಮಿತಿ ವ್ಯಾಪ್ತಿಯಲ್ಲಿ 1 ಕೇಂದ್ರವನ್ನು ಸ್ಥಾಪಿಸಲಾಗಿದೆ.

ಇದನ್ನೂ ಓದಿ: Viral News : ಮಕ್ಕಳ ಕೈಗೆ ಕಾರಿನ ಕೀ ಕೊಟ್ಟರೆ ಅನಾಹುತ ಖಾತರಿ; ಇಲ್ಲಿದೆ ನೋಡಿ ಒಂದು ಘಟನೆ

ನಗರ ಪ್ರದೇಶ ವ್ಯಾಪ್ತಿಯ ಸಾರ್ವಜನಿಕರು ಆಯಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ವಾರ್ಡ್‌ಗಳಲ್ಲಿ ಸ್ಥಾಪಿಸಿದ ಕೇಂದ್ರಗಳಲ್ಲಿ ಈ ಯೋಜನೆಯಡಿ ಫಲಾನುಭವಿಗಳನ್ನು ನೋಂದಾಯಿಸಿಕೊಂಡು ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಸಹಕಾರ ನೀಡಲು ತಿಳಿಸಿದೆ.

ಅರ್ಹ ಮಹಿಳಾ ಫಲಾನುಭವಿಗಳು ನಗರ ವ್ಯಾಪ್ತಿಯಲ್ಲಿ ಸ್ಥಾಪಿಸಿದ ಕೇಂದ್ರಗಳ ವಿವರಕ್ಕಾಗಿ ಆಯಾ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ ಸದುಪಯೋಗ ಪಡೆದುಕೊಳ್ಳಬೇಕು. ಅರ್ಹ ಫಲಾನುಭವಿಗಳು ಪತಿ ಪತ್ನಿ ಆಧಾರ್ ಕಾರ್ಡ್, ಯಜಮಾನಿ ಮಹಿಳೆಯ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದೂ ನಮೂದಿಸಿರುವ ರೇಷನ್ ಕಾರ್ಡ್ ಪ್ರತಿ ಹೊಂದಿರಬೇಕು.

ಇದನ್ನೂ ಓದಿ: Asian Games: ನೇರ ಪ್ರವೇಶ, ಕುಸ್ತಿಪಟುಗಳ ಮಧ್ಯೆ ಒಗ್ಗಟ್ಟು ಮುರಿಯುವ ಹುನ್ನಾರ; ಸಾಕ್ಷಿ ಮಲಿಕ್​ ಆರೋಪ

ಈ ಯೋಜನೆಯಡಿ ಅರ್ಜಿ ಸಲ್ಲಿಕೆಗೂ ಮುಂಚಿತವಾಗಿ ತಮ್ಮ ಮೊಬೈಲ್‌ಗೆ ಬರುವ ಮೆಸೇಜ್ ಆಧಾರದಲ್ಲಿ, ಮೇಲೆ ತಿಳಿಸಿದ ಸಂಬಂಧಿಸಿದ ಕೇಂದ್ರಕ್ಕೆ ಭೇಟಿ ನೀಡಬಹುದಾಗಿದೆ. ಮೊಬೈಲ್ ಮೆಸೇಜ್‌ನಲ್ಲಿ ತಿಳಿಸುವ ದಿನಾಂಕ, ಸಮಯ, ಕೇಂದ್ರಕ್ಕೆ ಮೇಲ್ಕಂಡ ದಾಖಲಾತಿಗಳೊಂದಿಗೆ ಹಾಜರಾಗಿ ಅರ್ಜಿ ಸಲ್ಲಿಸಿ ಮಂಜೂರಾತಿ ಪತ್ರ ಪಡೆಯಬೇಕು. ತದನಂತರ ನಗದು ಸೌಲಭ್ಯವು ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version