Site icon Vistara News

ಯಾದಗಿರಿಯಲ್ಲಿ ‘ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್’ ಕಾರ್ಯಕ್ರಮಕ್ಕೆ ಚಾಲನೆ

Vistara News Best Teacher Award -2023 programme inauguration by Yadgiri DC Sushila B. at Yadgiri

ಯಾದಗಿರಿ: ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ -2023 (Vistara News Best Teacher Award -2023) ರ ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯ ಸಾಧಕ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಯಾದಗಿರಿಯ ಶಾಸ್ತ್ರಿ ವೃತ್ತದ ಸಮೀಪದ ಎನ್.ವಿ.ಎಂ. ರೆಸಿಡೆನ್ಸಿ ಸಭಾಂಗಣದಲ್ಲಿ ಸೋಮವಾರ ಸಂಜೆ ನಡೆಯಿತು.

ಶಶಿ ಸೂಪರ್ ಬಜಾರ್, ಎನ್.ವಿ.ಎಂ ರೆಸಿಡೆನ್ಸಿ, ಪಾಟೀಲ್‌ ಡಿಜಿಟಲ್ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳ ಬದುಕು ರೂಪಿಸುವ ಹೆಮ್ಮೆಯ ಶಿಕ್ಷಕರಿಗೆ ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ ನೀಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. ಸಾಧಕ ಶಿಕ್ಷಕರನ್ನು ಗುರುತಿಸಿ, ಅವರಿಗೆ ಪ್ರಶಸ್ತಿ ನೀಡುತ್ತಿರುವುದರಿಂದ ಶಿಕ್ಷಕರ ಜವಾಬ್ದಾರಿ ಹೆಚ್ಚಿಸಿದೆ ಎಂದು ತಿಳಿಸಿದರು.

ಉತ್ತಮ ಸಮಾಜ ನಿರ್ಮಾಣ ಮಾಡಲು ಶಿಕ್ಷಕರ ಪಾತ್ರ ಮುಖ್ಯವಾಗಿದೆ‌. ಮಕ್ಕಳು ಶಾಲೆ ಬಿಟ್ಟರೆ ಶಿಕ್ಷಕರು ಮಕ್ಕಳ ಕಾಳಜಿ ವಹಿಸಿ ಅಂತಹ ಮಕ್ಕಳ ಮನೆಗೆ ತೆರಳಿ ಮುಖ್ಯವಾಹಿನಿಗೆ ತರುವ ಕಾರ್ಯ ನಿರಂತರವಾಗಿ ಮಾಡುವ ಜವಾಬ್ದಾರಿ ಹೊಂದಬೇಕು. ಯಾದಗಿರಿ ಜಿಲ್ಲೆಯು ಶೈಕ್ಷಣಿಕ ಮಟ್ಟದಲ್ಲಿ ಹಿಂದುಳಿದಿದ್ದು, ಶಿಕ್ಷಣ ಮಟ್ಟ ಅಭಿವೃದ್ಧಿ ಪಡಿಸಲು ಶಿಕ್ಷಕರು ಹೆಚ್ಚು ಶ್ರಮವಹಿಸಿ ಶಿಕ್ಷಣ ನೀಡಬೇಕಿದೆ ಎಂದ ಅವರು, ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಯಲ್ಲಿ ಶಿಕ್ಷಕರು ಶ್ರಮವಹಿಸಿ ಈ ಬಾರಿ ಉತ್ತಮ ಫಲಿತಾಂಶ ಬರುವ ಕಾರ್ಯ ಮಾಡಬೇಕು ಎಂದರು.

ಇದನ್ನೂ ಓದಿ: Teachers Recruitment: ಪ್ರಾಥಮಿಕ, ಪ್ರೌಢ ಶಾಲೆ ಶಿಕ್ಷಕರ ನೇಮಕ; ಒಟ್ಟು ಎಷ್ಟು ಹುದ್ದೆ ನಿರೀಕ್ಷೆ?

ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡಿದ್ದ ಬಿಜೆಪಿ ಮುಖಂಡ ಮಹೇಶ್ ರೆಡ್ಡಿ ಮುದ್ನಾಳ ಮಾತನಾಡಿ, ವಿಸ್ತಾರ ನ್ಯೂಸ್ ಹಲವು ವಿಭಿನ್ನ ಕಾರ್ಯಕ್ರಮ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಕೃಷಿ, ಆರೋಗ್ಯ, ಶಿಕ್ಷಣ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರದ ಕಾರ್ಯಕ್ರಮ ಮೂಲಕ ಎಲ್ಲಾ ವರ್ಗದವರ ಕಾಳಜಿ ತೊರುತ್ತಿದೆ.

ಎಲೆಮರೆ ಕಾಯಿಯಂತೆ ಜ್ಞಾನ ದಾಸೋಹ ಮಾಡುತ್ತಿರುವ ಶಿಕ್ಷಕರನ್ನು ಗುರುತಿಸಿ ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ ಪ್ರದಾನ ಮಾಡುವ ಕಾರ್ಯ ಉತ್ತಮವಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಜಿಲ್ಲಾ ಲೀಡ್ ಕಾಲೇಜು ಪ್ರಾಂಶುಪಾಲ ಡಾ‌.ಸುಭಾಶ್ಚಂದ್ರ ಕೌಲಗಿ ಮಾತನಾಡಿ, ವಿಸ್ತಾರ ನ್ಯೂಸ್ ನಿರೀಕ್ಷೆಗೂ ಮೀರಿ ಜನರಿಗೆ ತಲುಪುವ ಕೆಲಸ ಮಾಡುತ್ತಿದೆ ಎಂದರು.

ಇದನ್ನೂ ಓದಿ: Weight Loss Tips: ದೇಹ ತೂಕ ಇಳಿಸಲು ಸಹಕಾರಿ ಈ ಈರುಳ್ಳಿ ಹೂವು!

ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಬಿ.ಆರ್.ಸಿ ಮಲ್ಲಿಕಾರ್ಜುನ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್-2023 ಪ್ರಶಸ್ತಿ ಪುರಸ್ಕೃತ ಶಿಕ್ಷಕರು.

ಪ್ರಶಸ್ತಿ ಪುರಸ್ಕೃತ ಶಿಕ್ಷಕರು

ಕಾರ್ಯಕ್ರಮದಲ್ಲಿ ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ ಗೆ ಆಯ್ಕೆಯಾದ ಕಂದಕೂರು ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕಿ ಮಧುಮತಿ ಎಚ್.ಸಿಂಗೆ, ಬಿಳ್ಹಾರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಕೊಟ್ರಬಸಪ್ಪ ಕಡ್ಲಿ, ತೀರ್ಥ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ವೀರಣ್ಣಗೌಡ ಬಿ. ಪಾಟೀಲ, ಯಾದಗಿರಿಯ ನವನಂದಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಜ್ಯೋತಿ ಎಚ್.ಪಾಟೀಲ್, ಯಾದಗಿರಿಯ ನವನಂದಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುರೇಖಾ ಜಿ.ಶೆಕ್ ಸಿಂದೆ, ರಾಮಸಮುದ್ರ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ನಿಂಗಣ್ಣ ಟಿ.ವಡಗೇರಿ, ಕಲಬುರಗಿಯ ದಿಶಾ ಪಿಯು ಕಾಲೇಜಿನ ಉಪನ್ಯಾಸಕರಾದ ಸಂತೋಷ ಜಾಕಾಪುರೆ, ಅಂಬರೀಶ್ ಜಿಡಗಿ, ಕಲಬುರಗಿಯ ಸರ್ವಜ್ಞ ಪಿಯು ಕಾಲೇಜುನ ಉಪನ್ಯಾಸಕ ಅಶೋಕ್ ಎಚ್.ಕಾಬಾ, ಯಾದಗಿರಿಯ ಶಾಂತಿ ಸದನ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ರೇಣುಕಾ ಎಂ.ಹೊಸಮನಿ ಅವರಿಗೆ ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ -2023 ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಲಾಯಿತು.

ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್-2023 ಪ್ರಶಸ್ತಿ ಪುರಸ್ಕೃತ ಶಿಕ್ಷಕರು.

ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ, ಪ್ರೌಢ ಶಾಲೆ ಸಹ ಶಿಕ್ಷಕರ ಸಂಘ ಜಿಲ್ಲಾ ಘಟಕ, ಪ್ರಾಥಮಿಕ ಶಿಕ್ಷಕರ ಸಂಘ ಜಿಲ್ಲಾ ಘಟಕ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತನಾರತಿ ಸಾಂಸ್ಕೃತಿಕ ಪ್ರತಿಷ್ಠಾನ, ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಜಿಲ್ಲಾ ಘಟಕ ಇವರ ಸಹಕಾರದಲ್ಲಿ ಕಾರ್ಯಕ್ರಮವು ಅದ್ಭುತವಾಗಿ ಮೂಡಿಬಂತು.

ಕಾರ್ಯಕ್ರಮದಲ್ಲಿ ವಿಸ್ತಾರ ನ್ಯೂಸ್‌ನ ಬಳ್ಳಾರಿ ಬ್ಯೂರೋ ಮುಖ್ಯಸ್ಥ ಶಶಿಧರ ಮೇಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಯಡಿಯೂರ ಶ್ರೀ ಸಂಗೀತ ಪಾಠ ಶಾಲೆಯ ಸಂಗೀತ ಕಲಾವಿದರಾದ ಶರಣಕುಮಾರ ವಠಾರ, ನಾಗರಾಜ್ ಶಹಾಪುರ, ಮಹೇಶ್ ಶಿರವಾಳ, ಶರಣು ಕೊಲಕುಂದಾ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು . ಸುರಪುರದ ಶ್ರೀ ಖಾಸ್ಗತೇಶ್ವರ ನೃತ್ಯ ಕಲಾ ಸಂಸ್ಥೆಯ ತರಬೇತಿದಾರ ಅನೀಲ್‌ ಕುಮಾರ್ ಕಟ್ಟಿಮನಿ ಅವರ ಕಲಾ ತಂಡದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

ಇದನ್ನೂ ಓದಿ: Money Guide: ಆನ್‌ಲೈನ್‌ ಸಾಲದ ವಂಚನೆಯ ಕೂಪಕ್ಕೆ ಬೀಳದಿರಲು ಏನು ಮಾಡಬೇಕು?

ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಗುರುನಾಥ, ರಾಜನಕೊಳ್ಳೂರು ಪ್ರಥಮ ದರ್ಜೆ ಗುತ್ತಿಗೆದಾರ ಬಿ‌.ಎಂ.ಅಳ್ಳಿಕೋಟೆ, ಶಶಿ ಸೂಪರ್‌ ಬಜಾರ್‌ನ ಮಾಲೀಕ ಮಲ್ಲಿಕಾರ್ಜುನ ಶಿರಗೋಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸುಲೈಮಾನ್ ನದಾಫ್, ವಿಸ್ತಾರ ನ್ಯೂಸ್ ಜಿಲ್ಲಾ ವರದಿಗಾರ ನಾಗಪ್ಪ ಮಾಲಿಪಾಟೀಲ, ರಾಜುಕುಂಬಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಅಮರಯ್ಯ ಜಾಲಿಬೆಂಚಿ ನಿರೂಪಿಸಿ, ವಂದಿಸಿದರು.

Exit mobile version