Yadgiri News Young people should adopt the principle and ideals of Sharanas says Principal Subhash Chandra Kaulagi Yadgiri News: ಯುವ ಜನತೆ ಶರಣರ ತತ್ವ, ಆದರ್ಶಗಳನ್ನು ಅಳವಡಿಸಿಕೊಳ್ಳಿ: ಪ್ರಾಚಾರ್ಯ ಸುಭಾಶ್ಚಂದ್ರ ಕೌಲಗಿ - Vistara News

ಕರ್ನಾಟಕ

Yadgiri News: ಯುವ ಜನತೆ ಶರಣರ ತತ್ವ, ಆದರ್ಶಗಳನ್ನು ಅಳವಡಿಸಿಕೊಳ್ಳಿ: ಪ್ರಾಚಾರ್ಯ ಸುಭಾಶ್ಚಂದ್ರ ಕೌಲಗಿ

Yadgiri News: ಯಾದಗಿರಿ ಜಿಲ್ಲಾಧಿಕಾರಿ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಶಿವಶರಣ ಹಡಪದ ಅಪ್ಪಣ್ಣನವರ ಜಯಂತ್ಯೋತ್ಸವ ಕಾರ್ಯಕ್ರಮ ಜರುಗಿತು.

VISTARANEWS.COM


on

Hadapada Appanna Jayanti program at Yadgiri
ಯಾದಗಿರಿ ಜಿಲ್ಲಾಧಿಕಾರಿ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಶಿವಶರಣ ಹಡಪದ ಅಪ್ಪಣ್ಣನವರ ಜಯಂತ್ಯೋತ್ಸವ ಕಾರ್ಯಕ್ರಮ ಜರುಗಿತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ಶರಣರು ನಡೆದ ದಾರಿ, ಅವರ ತತ್ವ (Principle) ಸಿದ್ದಾಂತ ಮತ್ತು ಆದರ್ಶಗಳನ್ನು ಇಂದಿನ ಯುವ ಜನತೆ (Young People) ಜೀವನದದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಯಾದಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸುಭಾಶ್ಚಂದ್ರ ಕೌಲಗಿ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಯ ಹಾಗೂ ಹಡಪದ ಅಪ್ಪಣ್ಣನವರ ಜಯಂತ್ಯೋತ್ಸವ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ನಡೆದ ಹಡಪದ ಅಪ್ಪಣ್ಣನವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಶಿವಶರಣ ಹಡಪದ ಅಪ್ಪಣ್ಣನವರು 243 ಕ್ಕೂ ಹೆಚ್ಚು ವಚನಗಳು ಬರೆದು ಜನತೆಗೆ ದಾರಿ ದೀಪವಾಗಿವೆ ಎಂದರು.

ಇದನ್ನೂ ಓದಿ: ನೀತಾ ಮುಕೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ದಿಗ್ಗಜರ ನೇತೃತ್ವದಲ್ಲಿ ಗುರು ಪೂರ್ಣಿಮೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಸಂತೋಷರಾಣಿ ಮಾತನಾಡಿ, ತಿಕ್ಕಾಟ, ಕಂದಾಚಾರಗಳೆಂಬ ದುಸ್ಥಿತಿಯಿಂದ ಹೊರಬರಲು ಮನುಷ್ಯನ ಮನಸ್ಸಿಗೆ ಬದಲಾವಣೆ ಬಯಸಿ, ಮಾನವರ ಮನ ಬದಲಿಸಿ ಸಮಾಜದಲ್ಲಿ ಬದಲಾವಣೆ ತಂದವರು ಶರಣರು. ಕಲ್ಯಾಣ ಕರ್ನಾಟಕದಲ್ಲಿ ನಡೆದ ಅತಿ ದೊಡ್ಡ ಕ್ರಾಂತಿ ಸಾಮಾಜಿಕ ವಚನ ಕ್ರಾಂತಿ. ಈ ಕ್ರಾಂತಿಯಲ್ಲಿ ಶಿವಶರಣ ಹಡಪದ ಅಪ್ಪನವರ ಪಾತ್ರವೂ ಮಹತ್ವದ್ದು. ಆದರಿಂದ ಪ್ರತಿಯೊಬ್ಬರು ಅವರು ನಡೆದ ದಾರಿಯಲ್ಲಿ ನಡೆದರೆ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ ಎಂದರು.

ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: Video Viral : ಹಾವನ್ನು ಅಟ್ಟಾಡಿಸಿ ಕಚ್ಚಿದ ನಾಯಿ, ಹೆಡೆ ಎತ್ತಿ ವಿಷ ಕಕ್ಕಿದ ನಾಗರ; ಇಲ್ಲಿದೆ ರೋಚಕ ವಿಡಿಯೊ!

ಈ ಸಂದರ್ಭದಲ್ಲಿ ಕ್ರೀಡಾ ಇಲಾಖೆ ಅಧಿಕಾರಿ ರಾಜು ಭಾವಿಹಳ್ಳಿ, ಗುರುಪ್ರಸಾದ್ ವೈದ್ಯ, ಹಡಪದ ಅಪ್ಪಣ್ಣನವರ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಅಯ್ಯಣ್ಣ, ಇಬ್ರಾಹಂಪುರ ಮುಖಂಡರಾದ ಮಲ್ಲಿಕಾರ್ಜುನ ದಿಗ್ಗಿ, ಭಾಗಣ್ಣ ಇಟಗಿ, ಶರಣಪ್ಪ ಹೋತಪೇಠ, ಸಂಗಮೇಶ ವಡಗೇರ, ಶಿವಕುಮಾರ ಅಬ್ಬೆ ತುಮಕೂರು, ಮಲ್ಲಿಕಾರ್ಜುನ ವಡಗೇರ, ಚನ್ನಪ್ಪ ಯರಗೊಳ, ಭರತ ವಡಗೇರ, ಸುನಿಲ್ ನಾಯ್ಕಲ್, ಕಮಲಾಕರ್ ವಡಗೇರ, ವಿರುಪಣ್ಣ, ಬಲವಂತ ಮೂದನುರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Drowned: ಆತ್ಮಹತ್ಯೆಗಾಗಿ ನದಿಗೆ ಹಾರಿದ ಮಹಿಳೆ ರಕ್ಷಣೆ, ಬದುಕಿಸಲು ಹೋದ ಗಂಡ- ಬಂಧು ಜಲಸಮಾಧಿ

Drowned: ಮಹಿಳೆ ಲಕ್ಷ್ಮೀ ಶಿವಾನಂದ್(28) ನದಿಗೆ ಹಾರಿ‌ ಆತ್ಮಹತ್ಯೆಗೆ ಯತ್ನಿಸಿದ್ದರು. ಪತ್ನಿ ನದಿಗೆ ಹಾರಿದ್ದನ್ನು ಕಂಡು ಲಕ್ಷ್ಮಿಯ ಗಂಡ ಶಿವಾನಂದ್ ಹಾಗೂ‌ ಸಂಬಂದಿ ರಾಜೂ ಅಂಕಲಗಿ ಆಕೆಯನ್ನು ರಕ್ಷಿಸಲು ನದಿಗೆ ಜಂಪ್ ಮಾಡಿದ್ದರು.

VISTARANEWS.COM


on

drowned kalaburagi
ಲಕ್ಷ್ಮಿ, ಶಿವಾನಂದ, ರಾಜು
Koo

ಕಲಬುರಗಿ: ಆತ್ಮಹತ್ಯೆ ಮಾಡಿಕೊಳ್ಳಲೆಂದು (Self harming attempt) ಭೀಮಾ ನದಿಗೆ (Bhima River) ಹಾರಿ ಕೊಚ್ಚಿ ಹೋಗುತ್ತಿದ್ದ ಮಹಿಳೆಯ ರಕ್ಷಣೆಗೆ (Rescue) ಹೋದ ಇಬ್ಬರು ಸಂಬಂಧಿಕರು ನೀರುಪಾಲು (Drowned) ಆಗಿದ್ದಾರೆ. ಮಹಿಳೆಯನ್ನು ಇತರರು ರಕ್ಷಣೆ ಮಾಡಿದ್ದಾರೆ. ಘಟನೆ ಕಲಬುರಗಿ (Kalaburagi news) ಜಿಲ್ಲೆಯ ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಬಳಿಯ ಭೀಮಾ ಬ್ರಿಡ್ಜ್ ಸಮೀಪ ನಡೆದಿದೆ.

ಮಹಿಳೆ ಲಕ್ಷ್ಮೀ ಶಿವಾನಂದ್(28) ನದಿಗೆ ಹಾರಿ‌ ಆತ್ಮಹತ್ಯೆಗೆ ಯತ್ನಿಸಿದ್ದರು. ಪತ್ನಿ ನದಿಗೆ ಹಾರಿದ್ದನ್ನು ಕಂಡು ಲಕ್ಷ್ಮಿಯ ಗಂಡ ಶಿವಾನಂದ್ ಹಾಗೂ‌ ಸಂಬಂದಿ ರಾಜೂ ಅಂಕಲಗಿ ಆಕೆಯನ್ನು ರಕ್ಷಿಸಲು ನದಿಗೆ ಜಂಪ್ ಮಾಡಿದ್ದರು. ನದಿಯಲ್ಲಿ ಸುಮಾರು 800 ಮೀಟರ್ ದೂರದಲ್ಲಿ ಮಹಿಳೆಯನ್ನು ಮೀನುಗಾರರು ರಕ್ಷಣೆ ಮಾಡಿದ್ದಾರೆ. ಲಕ್ಷ್ಮೀ ರಕ್ಷಣೆಗೆ ಹೋದ ಗಂಡ ಹಾಗೂ ಸಂಬಂಧಿ ನೀರು ಪಾಲಾಗಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಶಿವಾನಂದ ಪತ್ನಿ ಲಕ್ಷ್ಮಿ ಭಿಮಾ ನದಿಗೆ ಹಾರಿದ್ದಳು.

ಇವರು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕಡಣಿ ಗ್ರಾಮದ ನಿವಾಸಿಗಳಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ‌ ಸಿಬ್ಬಂದಿಗಳು ಹಾಗೂ ಅಫಜಲಪುರ ಪೊಲೀಸರು ಭೇಟಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಶವ ಪತ್ತೆ ಹಚ್ಚಿದ್ದಾರೆ. ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ಲಕ್ಷ್ಮಿಗೆ ಚಿಕಿತ್ಸೆ ಕೊಡಿಸಲಾಗಿದೆ. ಕಲಬುರಗಿ ಎಸ್ಪಿ ಅಡ್ಡೂರು‌ ಶ್ರೀನಿವಾಸಲು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೊಲೆ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಆನೇಕಲ್: ಪುರಸಭೆ ಸದಸ್ಯನನ್ನು ಕೊಂದಿದ್ದ ಕುಖ್ಯಾತ ರೌಡಿ ಶೀಟರ್‌ನನ್ನು (Rowdy Sheeter) ಪೊಲೀಸರು ಬಂಧಿಸಿದ್ದಾರೆ. ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಲು (Assault) ಯತ್ನಿಸಿದ ಈತನ ಕಾಲಿಗೆ ಗುಂಡು ಹಾರಿಸಿ (Police Firing) ಬಂಧಿಸಲಾಗಿದೆ. ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಬಂಧಿತ ಕೊಲೆ ಆರೋಪಿ (Murder Culprit).

ಆನೇಕಲ್ ತಾಲ್ಲೂಕಿನ ಮೈಸೂರಮ್ಮನ ದೊಡ್ಡಿ ಬಳಿ ಫೈರಿಂಗ್ ನಡೆದಿದೆ. ಆನೇಕಲ್ ಭಾಗದ ಕುಖ್ಯಾತ ರೌಡಿ ಶೀಟರ್ ಆಗಿರುವ ಜೆಕೆ, ಮೈಸೂರಮ್ಮನ ದೊಡ್ಡಿಯಲ್ಲಿ ಅವಿತು ಕುಳಿತಿದ್ದ. ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನಕ್ಕೆ ತೆರಳಿದ್ದರು. ಸೆರೆಯಾಗುವಂತೆ ಆದೇಶಿಸಿ ಆನೇಕಲ್ ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಗ ಜೆಕೆ ಪೊಲೀಸ್ ಸಿಬ್ಬಂದಿ ಸುರೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾನೆ. ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆಹಿಡಿದಿದ್ದಾರೆ.

ಈತ ಪುರಸಭಾ ಸದಸ್ಯ ಸ್ಕ್ರಾಪ್ ರವಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಕಳೆದ 24ನೇ ತಾರೀಕು ಬುಧವಾರ ಕೊಲೆ ನಡೆದಿತ್ತು. ಸ್ಕ್ರಾಪ್ ರವಿ ಕಚೇರಿಯಲ್ಲಿದ್ದಾಗ ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಗ್ಯಾಂಗ್ ಕಚೇರಿಗೆ ನುಗ್ಗಿ ಕೊಲೆ ಮಾಡಿತ್ತು. ಕಾರ್ತಿಕ್ ಅಲಿಯಾಸ್ ಜೆಕೆ, ಹರೀಶ್ ಅಲಿಯಾಸ್ ಹಂದಿ ಹರೀಶ್, ವಿನಯ್ ಅಲಿಯಾಸ್ ವಿನಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳು.

ಆರೋಪಿಗಳ ಬಂಧನಕ್ಕೆ ಪೊಲೀಸರ ಎರಡು ತಂಡ ರಚಿಸಲಾಗಿತ್ತು. ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಕೊಲೆ ಆರೋಪಿಗಳ ಪೈಕಿ ಹರೀಶ್ ಮತ್ತು ವಿನಯ್ ಕೋರ್ಟಿಗೆ ಶರಣಾಗಿದ್ದಾರೆ. ಪ್ರಮುಖ ಆರೋಪಿ ರೌಡಿ ಶೀಟರ್ ಜೆಕೆ ಕಾರ್ತಿಕ್ ತಲೆಮರೆಸಿಕೊಂಡಿದ್ದ.

ಇದನ್ನೂ ಓದಿ | Brutal Murder: ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು; ಕರ್ನಾಟಕ ಮೂಲದ ದಾವೂದ್‌ ಎಸ್ಕೇಪ್‌

Continue Reading

ಪ್ರಮುಖ ಸುದ್ದಿ

Wayanad Landslide: ವೈನಾಡ್‌ ಭೂಕುಸಿತ ಪರಿಣಾಮ ಕರ್ನಾಟಕ- ಕೇರಳ ರಸ್ತೆ ಸಂಪರ್ಕ ಕಡಿತ, ಬಸ್‌ ಸಂಚಾರ ಸ್ಥಗಿತ

ಭೂಕುಸಿತದಿಂದ ತತ್ತರಿಸಿರುವ (Wayanad landslide, Kerala Landslide) ವೈನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ ಈ ಕ್ರಮ ತೆಗೆದುಕೊಳ್ಳಲಾಗಿದ್ದು, ಬಂಡಿಪುರ ಚೆಕ್‌ಪೋಸ್ಟ್‌ನಲ್ಲಿ (Bandipura Checkpost) ಎನ್‌ಡಿಆರ್‌ಎಫ್ ಹಾಗೂ ಸೇನೆಯ ತಂಡಗಳಿಗೆ ಹಾಗೂ ಪರಿಹಾರ ಸಾಮಗ್ರಿಗಳ ಸಾಗಾಣಿಕೆ ವಾಹನಗಳಿಗೆ ಗ್ರೀನ್‌ ಕಾರಿಡಾರ್‌ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

wayanad landslide bandipur checkpost
Koo

ಕೇರಳ: ಕರ್ನಾಟಕದಿಂದ ಕೇರಳವನ್ನು (Karnataka- Kerala) ಸಂಪರ್ಕಿಸುವ ಮೈಸೂರು- ಸುಲ್ತಾನ್ ಬತ್ತೇರಿ- ವೈನಾಡು ರಸ್ತೆ ಸಂಪರ್ಕವನ್ನು (Road Cut) ಕಡಿತಗೊಳಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ತಂಡಗಳು ಭೂಕುಸಿತದಿಂದ ತತ್ತರಿಸಿರುವ (Wayanad landslide, Kerala Landslide) ವೈನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ ಈ ಕ್ರಮ ತೆಗೆದುಕೊಳ್ಳಲಾಗಿದ್ದು, ಬಂಡಿಪುರ ಚೆಕ್‌ಪೋಸ್ಟ್‌ನಲ್ಲಿ (Bandipura Checkpost) ಎನ್‌ಡಿಆರ್‌ಎಫ್ ಹಾಗೂ ಸೇನೆಯ ತಂಡಗಳಿಗೆ ಹಾಗೂ ಪರಿಹಾರ ಸಾಮಗ್ರಿಗಳ ಸಾಗಾಣಿಕೆ ವಾಹನಗಳಿಗೆ ಗ್ರೀನ್‌ ಕಾರಿಡಾರ್‌ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ. ಬಹುತೇಕ ಬಸ್ಸುಗಳು ಸಂಚಾರ ರದ್ದುಪಡಿಸಿವೆ.

ಗುಂಡ್ಲುಪೇಟೆ ಮಾರ್ಗವಾಗಿ ಸಾಗುವ ಬೆಂಗಳೂರು-ವೈನಾಡ್ ರಾಷ್ಟ್ರೀಯ ಹೆದ್ದಾರಿ 766 ರ ಮಾರ್ಗದಲ್ಲಿ ಸಂಚಾರ ಮುಂಜಾಗ್ರತಾ ಕ್ರಮವಾಗಿ ನಿರ್ಬಂಧಿಸಲಾಗಿದ್ದು, ಪರ್ಯಾಯವಾಗಿ ಗುಂಡ್ಲುಪೇಟೆ-ಬಂಡೀಪುರ-ಗುಡಲೂರ ಮಾರ್ಗದಲ್ಲಿ ತೆರಳಲು ಸೂಚಿಸಲಾಗಿದೆ.

ಕರ್ನಾಟಕ ಸರ್ಕಾರವು ಕೇರಳ ಸರ್ಕಾರದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅಗತ್ಯ ನೆರವು ನೀಡುತ್ತಿದ್ದು, ಗಡಿ ಭಾಗದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹ ಈ ಕುರಿತು ಸೂಕ್ತ ಬೆಂಬಲ ನೀಡಿದ್ದಾರೆ.

ಬಸ್‌ ಸಂಚಾರ ಸ್ಥಗಿತ

ಬೆಂಗಳೂರಿನಿಂದ ಕೇರಳಕ್ಕೆ ಸಂಚಾರ ಮಾಡುವ ಬಹುತೇಕ ಬಸ್ಸುಗಳ ಸಂಚಾರ ಸ್ಥಗಿತಗೊಂಡಿದೆ. ಕರ್ನಾಟಕ ಸಾರಿಗೆ, ಕೇರಳ ಸಾರಿಗೆ ಇಲಾಖೆಗೆ ಸೇರಿದ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಕಣ್ಣೂರು, ನಿಲಾಂಬೂರು, ಕೋಝಿಕ್ಕೋಡ್, ವಡಗಾರ, ತಲಚೇರಿ ಸೇರಿದಂತೆ ಕೆಲ ಭಾಗಗಳಿಗೆ ಮಾತ್ರ ಬೇರೆ ಬೇರೆ ಮಾರ್ಗಗಳ ಮೂಲಕ ಸಂಚಾರ ನಡೆಯುತ್ತಿದೆ.

ಕೇರಳದಿಂದಲೂ ಇಂದು ಬೆಂಗಳೂರಿಗೆ ಬಸ್‌ಗಳು ಬಂದಿಲ್ಲ. ಬೆಂಗಳೂರಿನಿಂದ ಕೇರಳಕ್ಕೆ ನಿತ್ಯ ಕೇರಳ ಸಾರಿಗೆ ಇಲಾಖೆಯ 15ಕ್ಕೂ ಹೆಚ್ಚು ಬಸ್‌ಗಳ ಸಂಚಾರ ಆಗುತ್ತಿತ್ತು. ಇಂದು ಕೇವಲ ಮೂರು ಬಸ್‌ಗಳು ಮಾತ್ರ ಸಂಚರಿಸಿವೆ. ಪ್ರತಿ ನಿತ್ಯ ರಾತ್ರಿ 8 ಗಂಟೆ ಬಳಿಕ ರಾಜ್ಯ ಸಾರಿಗೆಯಿಂದ 10ಕ್ಕೂ ಹೆಚ್ಚು ಬಸ್‌ಗಳ ಸಂಚಾರ ಇರುತ್ತಿದ್ದು, ಇಂದು ಒಂದು ಬಸ್ ಮಾತ್ರ ಕೇರಳಕ್ಕೆ ಪ್ರಯಾಣ ಬೆಳೆಸಿದೆ. ಮುಂಜಾಗ್ರತಾ ಕ್ರಮವಾಗಿ ಎರಡು ರಾಜ್ಯಗಳ ಬಸ್ ಸಂಚಾರ ಸ್ಥಗಿತಗೊಂಡಿದೆ.

ಸಂಜೆಯಿಂದ ಗುಂಡ್ಲುಪೇಟೆ- ಕೇರಳ ರಸ್ತೆ ಸಂಪರ್ಕ ಕೂಡ ಕಡಿತಗೊಂಡ ಹಿನ್ನೆಲೆಯಲ್ಲಿ ಬಸ್‌ಗಳ ಸಂಚಾರಕ್ಕೆ ತಡೆಯಾಗಿದೆ. ಕೇರಳದ ಮುತ್ತುಂಗ ಚೆಕ್​ಪೋಸ್ಟ್​ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ರಸ್ತೆಗಳು ಜಲಾವೃತವಾಗಿ ಬಸ್ ಸಂಚಾರಕ್ಕೆ ಅಡ್ಡಿಯಾಗಿದೆ. ಬೆಳಗ್ಗೆಯಿಂದ ವಯನಾಡು ಭಾಗಕ್ಕೆ ಬೆಂಗಳೂರಿನಿಂದ 21ಕ್ಕೂ ಹೆಚ್ಚು ಬಸ್‌ಗಳು ಸಂಚಾರ ಮಾಡಬೇಕಿತ್ತು. ಆದರೆ ಮಳೆ ಹಾಗೂ ಗುಡ್ಡ ಕುಸಿತದ ಪರಿಣಾಮ 15ಕ್ಕೂ ಹೆಚ್ಚು ಬಸ್‌ಗಳು ಸ್ಥಗಿತಗೊಂಡಿವೆ. ಬಹುತೇಕ ಪ್ರಯಾಣಿಕರು ಸ್ವಯಂಪ್ರೇರಿತವಾಗಿ ಟಿಕೆಟ್ ಕ್ಯಾನ್ಸಲ್ ಮಾಡಿದ್ದಾರೆ. ಉಳಿದಂತೆ ಕೆಲ ಪ್ರಯಾಣಿಕರನ್ನು ಕ್ಲಬ್ ಮಾಡಿ ಮೂರ್ನಾಲ್ಕು ಬಸ್‌ಗಳಲ್ಲಿ ಬೇರೆ ಬೇರೆ ಮಾರ್ಗವಾಗಿ ಕಳಿಸಲು ಅನುವು ಮಾಡಿಕೊಡಲಾಗಿದೆ.

ಭೂಕುಸಿತದ ತ್ಯಾಜ್ಯ ವಿಲೇವಾರಿ

ವಯನಾಡಿನಲ್ಲಿ ಭೂಕುಸಿತದಿಂದ ಉಂಟಾಗಿರುವ ತ್ಯಾಜ್ಯಗಳ ತೆರವಿಗೆ ರಾಜ್ಯದಿಂದ ಅಗತ್ಯ ಜೆಸಿಬಿ, ಕ್ರೇನ್ ಮತ್ತಿತರ ಭಾರೀ ವಾಹನಗಳ ಸೌಕರ್ಯಗಳನ್ನು ಲೋಕೋಪಯೋಗಿ ಇಲಾಖೆ ಕೈಗೊಳ್ಳುತ್ತಿದೆ. ಮುಖ್ಯಮಂತ್ರಿಗಳು ಸ್ವತಃ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದು ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಚರಣೆಗೆ ಎಲ್ಲ ರೀತಿಯ ಬೆಂಬಲ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಡಳಿತ ಸಹಾಯವಾಣಿ

ಸಂತ್ರಸ್ತರಿಗಾಗಿ ಮೈಸೂರು ಜಿಲ್ಲಾಡಳಿತ ಸಹಾಯವಾಣಿ ತೆರೆದಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಕೊಠಡಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. 0821-2423800 ಅಥವಾ 1077 ದೂರವಾಣಿಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡು ದುರಂತದಲ್ಲಿ ಸಾವಿನ ಸಂಖ್ಯೆ 150ಕ್ಕೆ ಏರಿಕೆ; ಇಂದೂ ಭಾರಿ ಮಳೆಯ ಮುನ್ಸೂಚನೆ, ಮುಂದುವರಿದ ಕಾರ್ಯಾಚರಣೆ

Continue Reading

ಕ್ರೈಂ

Police Firing: ಪುರಸಭೆ ಸದಸ್ಯನ ಕೊಲೆ ಮಾಡಿದ್ದ ರೌಡಿ ಕಾಲಿಗೆ ಗುಂಡು ನುಗ್ಗಿಸಿ ಬಂಧಿಸಿದ ಪೊಲೀಸರು

Police Firing: ಆನೇಕಲ್ ತಾಲ್ಲೂಕಿನ ಮೈಸೂರಮ್ಮನ ದೊಡ್ಡಿ ಬಳಿ ಫೈರಿಂಗ್ ನಡೆದಿದೆ. ಆನೇಕಲ್ ಭಾಗದ ಕುಖ್ಯಾತ ರೌಡಿ ಶೀಟರ್ ಆಗಿರುವ ಜೆಕೆ, ಮೈಸೂರಮ್ಮನ ದೊಡ್ಡಿಯಲ್ಲಿ ಅವಿತು ಕುಳಿತಿದ್ದ. ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನಕ್ಕೆ ತೆರಳಿದ್ದರು.

VISTARANEWS.COM


on

anekal JK police firing
ರೌಡಿಶೀಟರ್‌ ಜೆಕೆ, ಇನ್‌ಸ್ಪೆಕ್ಟರ್‌ ತಿಪ್ಪೇಸ್ವಾಮಿ
Koo

ಆನೇಕಲ್: ಪುರಸಭೆ ಸದಸ್ಯನನ್ನು ಕೊಂದಿದ್ದ ಕುಖ್ಯಾತ ರೌಡಿ ಶೀಟರ್‌ನನ್ನು (Rowdy Sheeter) ಪೊಲೀಸರು ಬಂಧಿಸಿದ್ದಾರೆ. ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಲು (Assault) ಯತ್ನಿಸಿದ ಈತನ ಕಾಲಿಗೆ ಗುಂಡು ಹಾರಿಸಿ (Police Firing) ಬಂಧಿಸಲಾಗಿದೆ. ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಬಂಧಿತ ಕೊಲೆ ಆರೋಪಿ (Murder Culprit).

ಆನೇಕಲ್ ತಾಲ್ಲೂಕಿನ ಮೈಸೂರಮ್ಮನ ದೊಡ್ಡಿ ಬಳಿ ಫೈರಿಂಗ್ ನಡೆದಿದೆ. ಆನೇಕಲ್ ಭಾಗದ ಕುಖ್ಯಾತ ರೌಡಿ ಶೀಟರ್ ಆಗಿರುವ ಜೆಕೆ, ಮೈಸೂರಮ್ಮನ ದೊಡ್ಡಿಯಲ್ಲಿ ಅವಿತು ಕುಳಿತಿದ್ದ. ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನಕ್ಕೆ ತೆರಳಿದ್ದರು. ಸೆರೆಯಾಗುವಂತೆ ಆದೇಶಿಸಿ ಆನೇಕಲ್ ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಗ ಜೆಕೆ ಪೊಲೀಸ್ ಸಿಬ್ಬಂದಿ ಸುರೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾನೆ. ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆಹಿಡಿದಿದ್ದಾರೆ.

ಈತ ಪುರಸಭಾ ಸದಸ್ಯ ಸ್ಕ್ರಾಪ್ ರವಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಕಳೆದ 24ನೇ ತಾರೀಕು ಬುಧವಾರ ಕೊಲೆ ನಡೆದಿತ್ತು. ಸ್ಕ್ರಾಪ್ ರವಿ ಕಚೇರಿಯಲ್ಲಿದ್ದಾಗ ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಗ್ಯಾಂಗ್ ಕಚೇರಿಗೆ ನುಗ್ಗಿ ಕೊಲೆ ಮಾಡಿತ್ತು. ಕಾರ್ತಿಕ್ ಅಲಿಯಾಸ್ ಜೆಕೆ, ಹರೀಶ್ ಅಲಿಯಾಸ್ ಹಂದಿ ಹರೀಶ್, ವಿನಯ್ ಅಲಿಯಾಸ್ ವಿನಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳು.

ಆರೋಪಿಗಳ ಬಂಧನಕ್ಕೆ ಪೊಲೀಸರ ಎರಡು ತಂಡ ರಚಿಸಲಾಗಿತ್ತು. ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಕೊಲೆ ಆರೋಪಿಗಳ ಪೈಕಿ ಹರೀಶ್ ಮತ್ತು ವಿನಯ್ ಕೋರ್ಟಿಗೆ ಶರಣಾಗಿದ್ದಾರೆ. ಪ್ರಮುಖ ಆರೋಪಿ ರೌಡಿ ಶೀಟರ್ ಜೆಕೆ ಕಾರ್ತಿಕ್ ತಲೆಮರೆಸಿಕೊಂಡಿದ್ದ.

ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಅರ್ಚಕ ಬಂಧನ

ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ (Physical abuse) ಆರೋಪದಡಿ ಹಾಸನದ ಪ್ರಸಿದ್ಧ ದೇವಾಲಯದ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯ ಪುರದಮ್ಮ ದೇವಾಲಯದ ಪೂಜಾರಿ ದಯಾನಂದ್ (39) ಬಂಧಿತ ವ್ಯಕ್ತಿ.

ಬಾಗಲುಗುಂಟೆ ಠಾಣೆ ಪೊಲೀಸರಿಂದ ಆರೋಪಿ ಬಂಧನವಾಗಿದೆ. ಕೆಲ ದಿನಗಳ ಹಿಂದೆ ಮಹಿಳೆ ನೀಡಿದ ದೂರಿನನ್ವಯ ಬಾಗಲುಗುಂಟೆ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಆರೋಪಿ ದಯಾನಂದ್‌ನ ಪೊಲೀಸರು ಬಂಧಿಸಿದ್ದಾರೆ. ದೋಷ ನಿವಾರಣೆಗಾಗಿ ಪೂಜೆ ಮಾಡುತ್ತೇನೆಂದು ಹಣ ಪಡೆದಿದ್ದ ಪೂಜಾರಿ, ಬಳಿಕ ಮಹಿಳೆಯನ್ನು ಕರೆಸಿಕೊಂಡು ಆತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ದಯಾನಂದ್ ಅರಸೀಕೆರೆ ಬಳಿಯ ಗೊಲ್ಲರಹಳ್ಳಿ ಕುರುಗುಂದ ಗ್ರಾಮ ಪಂಚಾಯಿತಿಯ ಸದಸ್ಯನಾಗಿದ್ದಾನೆ. ಮಹಿಳೆ ಪುರದಮ್ಮ ದೇವಸ್ಥಾನಕ್ಕೆ ಹೋಗಿದ್ದಾಗ ಪರಿಚಯ ಮಾಡಿಕೊಂಡಿದ್ದ. ಶಾಸ್ತ್ರ ಹೇಳುತ್ತಿದ್ದ ಪೂಜಾರಿ ದಯಾನಂದ್‌ಗೆ ಮದುವೆಯಾಗಿ ಎರಡು ಮಕ್ಕಳಿದ್ದಾರೆ. ಮಹಿಳೆಗೆ ಕಂಟಕವಿದೆ‌ ಹೇಳಿ ಆಗಾಗ ಹಣ ಪಡೆಯುತ್ತಿದ್ದ ಎನ್ನಲಾಗಿದೆ. ಒಂದು‌ ಲಕ್ಷಕ್ಕಿಂತ ಹೆಚ್ಚು ಹಣ ಮಹಿಳೆಯಿಂದ ಪಡೆದಿದ್ದ ಎನ್ನಲಾಗಿದೆ.

ಇದನ್ನೂ ಓದಿ | Brutal Murder: ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು; ಕರ್ನಾಟಕ ಮೂಲದ ದಾವೂದ್‌ ಎಸ್ಕೇಪ್‌

Continue Reading

ಪ್ರಮುಖ ಸುದ್ದಿ

Wayanad Landslide: ವೈನಾಡ್‌ ಭೂಕುಸಿತದಲ್ಲಿ 13 ಕನ್ನಡಿಗರು ನಾಪತ್ತೆ; ನಾಲ್ವರ ಶವ ಪತ್ತೆ, ಇನ್ನುಳಿದವರಿಗಾಗಿ ಶೋಧ

Wayanad Landslide: ವೈನಾಡಿನಲ್ಲಿ ಕರ್ನಾಟಕ‌ ಮೂಲದ ನಾಪತ್ತೆಯಾದವರಿಗಾಗಿ ಅಧಿಕಾರಿಗಳು ಸ್ಥಳದಲ್ಲೇ ಇದ್ದು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಗುಂಡ್ಲುಪೇಟೆ ತಹಸೀಲ್ದಾರ್ ರಮೇಶ್ ಬಾಬು ನೇತೃತ್ವದಲ್ಲಿ ನಾಪತ್ತೆಯಾದವರ ಪತ್ತೆಗಾಗಿ ಶೋಧ ನಡೆದಿದೆ.

VISTARANEWS.COM


on

wayanad lanslide
Koo

ಚಾಮರಾಜನಗರ: ಕೇರಳದ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತ (wayanad landslide, kerala landslide) ಪ್ರಕರಣದಲ್ಲಿ ಕರ್ನಾಟಕದ (Karnataka) ಹತ್ತಾರು ಮಂದಿ ಕಣ್ಮರೆ (missing) ಆಗಿದ್ದಾರೆ. ಒಟ್ಟು 13 ಮಂದಿ ನಾಪತ್ತೆಯಾಗಿದ್ದಾರೆ ಎಂಬ ಅಂದಾಜು ಲೆಕ್ಕ ಇದುವರೆಗೆ ಸಿಕ್ಕಿದೆ. ಇವರಲ್ಲಿ ನಾಲ್ಕು ಮಂದಿಯ ಶವ ಸಿಕ್ಕಿದ್ದು, ಇನ್ನುಳಿದವರಿಗಾಗಿ ತೀವ್ರ ಶೋಧ (Rescue operation) ನಡೆಯುತ್ತಿದೆ.

ವೈನಾಡಿನಲ್ಲಿ ಕರ್ನಾಟಕ‌ ಮೂಲದ ನಾಪತ್ತೆಯಾದವರಿಗಾಗಿ ಅಧಿಕಾರಿಗಳು ಸ್ಥಳದಲ್ಲೇ ಇದ್ದು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಗುಂಡ್ಲುಪೇಟೆ ತಹಸೀಲ್ದಾರ್ ರಮೇಶ್ ಬಾಬು ನೇತೃತ್ವದಲ್ಲಿ ನಾಪತ್ತೆಯಾದವರ ಪತ್ತೆಗಾಗಿ ಶೋಧ ನಡೆದಿದೆ. ಈವರೆಗೆ ಗೊತ್ತಾಗಿರುವ, ನಾಪತ್ತೆಯಾಗಿರುವ ರಾಜ್ಯದ 10 ಮಂದಿಯ ಹೆಸರುಗಳು ಹೀಗಿವೆ:

ಗುರುಮಲ್ಲನ್(10)
ಸಾವಿತ್ರಿ (54)
ಸಬಿತಾ (43)
ಶಿವಣ್ಣನ್ (50)
ಅಪ್ಪಣ್ಣನ್(39)
ಅಶ್ವಿನ್ (13)
ಜೀತು (11)
ದಿವ್ಯಾ (35)
ರತ್ನಾ(48)

ಈವರೆಗೆ ರಾಜೇಂದ್ರ (50), ರತ್ನಮ್ಮ(45), ಪುಟ್ಟಸಿದ್ದಶೆಟ್ಟಿ (62), ರಾಣಿ (50) ಎಂಬವರ ಶವರಗಳನ್ನು ರಕ್ಷಣಾ ಪಡೆಗಳು ಹೊರತೆಗೆದಿವೆ.

ಚಾಮರಾಜನಗರ ಮೂಲದ ಇಬ್ಬರ ಸಾವು ಧೃಡ

ಮೆಪ್ಪಾಡಿಯಲ್ಲಿ ವಾಸವಿದ್ದ ಚಾಮರಾಜನಗರದ ಪುಟ್ಟ ಸಿದ್ದಿ(62) ಹಾಗು ರಾಣಿ ಎಂಬವರ ತಾಯಿ ಸಾವಿಗೀಡಾಗಿದ್ದಾರೆ. ಚಾಮರಾಜನಗರ ತಾಲೋಕು ಇರಸವಾಡಿ ಮೂಲದ ರಾಜನ್ ಹಾಗು ರಜನಿ ನಾಪತ್ತೆಯಾಗಿದ್ದಾರೆ. ಕಳೆದ ಮೂವತ್ತು ವರ್ಷಗಳಿಂದ ಕೇರಳದ ಚೂರಲ್ಲಾದಲ್ಲಿ ವಾಸವಿದ್ದ ರಾಜನ್ ಹಾಗು ರಜನಿ(55) ವಾಸವಿದ್ದರು. ರಾಜನ್, ರಜನಿಗಾಗಿ ಶೋಧಕಾರ್ಯ ನಡೆದಿದೆ.

ಚಾಮರಾಜನಗರ ಜಿಲ್ಲೆಯ ರಾಜೇಂದ್ರ(50), ರತ್ನಮ್ಮ(45), ಪುಟ್ಟಸಿದ್ದಶೆಟ್ಟಿ(62), ರಾಣಿ(50) ಇವರ ಶವಗಳು ದೊರೆತಿವೆ. ತ್ರಯಂಬಕಪುರದ ಸ್ವಾಮಿಶೆಟ್ಟಿ ಎಂಬವರಿಗೆ ಗಾಯಗಳಾಗಿವೆ. ರಾಜೇಂದ್ರ, ರತ್ನಮ್ಮ ಚಾಮರಾಜನಗರ ತಾಲೂಕಿನ ಇರಸವಾಡಿ ಗ್ರಾಮದವರು. ಇಬ್ಬರ ಶವ ಇನ್ನೂ ಪತ್ತೆಯಾಗಿಲ್ಲ. ವೈನಾಡು ಜಿಲ್ಲೆಯ ಮೆಪ್ಪಾಡಿಯ ವೈತ್ರಿ ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಗುಂಡ್ಲುಪೇಟೆ ತಹಸೀಲ್ದಾರ್ ರಮೇಶ್‌ ಬಾಬು ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು, ತಹಸೀಲ್ದಾರ್ ನೇತೃತ್ವದ ತಂಡ ಮೃತರ ಕುಟುಂಬಸ್ಥರೊಂದಿಗೆ ಸಂಪರ್ಕದಲ್ಲಿದೆ.

ಮಂಡ್ಯದ ಕುಟುಂಬಕ್ಕೆ ಸಂಕಷ್ಟ

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಝಾನ್ಸಿ, ಝಾನ್ಸಿ ಪುತ್ರ ನಿಹಾಲ್, ಅತ್ತೆ ಲೀಲಾವತಿ ನಾಪತ್ತೆಯಾಗಿದ್ದಾರೆ. ಮೈಸೂರಿನ ಸರಗೂರಿನ ಅನಿಲ್ ಕುಮಾರ್ ಎಂಬುವವರಿಗೆ ಝಾನ್ಸಿರಾಣಿಯನ್ನು ಕುಟುಂಬ ಮದುವೆ ಮಾಡಿಕೊಟ್ಟಿತ್ತು. ಕೇರಳದ ಮುಂಡಕೈಯಲ್ಲಿ ಅನಿಲ್, ಪತ್ನಿ ಝಾನ್ಸಿ, ಪುತ್ರ ನಿಹಾಲ್ ಹಾಗೂ ತಂದೆ-ತಾಯಿ ನೆಲೆಸಿದ್ದರು. ಮುಂಡಕೈ ಗುಡ್ಡ ಕುಸಿತದಲ್ಲಿ ಅನಿಲ್ ತಾಯಿ ಲೀಲಾವತಿ(55), ಪುತ್ರ ನಿಹಾಲ್(2.5). ನಾಪತ್ತೆಯಾಗಿದ್ದು, ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಅನಿಲ್ ಹಾಗೂ ಅವರ ಪತ್ನಿ ಝಾನ್ಸಿ, ತಂದೆ ದೇವರಾಜು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರೂ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಮೂವರಿಗೆ ಕೇರಳದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕುಟುಂಬಸ್ಥರನ್ನು ಕಾಣಲು ಝಾನ್ಸಿರಾಣಿ ಕುಟುಂಬಸ್ಥರು ಕೇರಳಕ್ಕೆ ತೆರಳಿದ್ದಾರೆ.

ಹನಿಮೂನ್‌ಗೆ ಬಂದವರು ಹೆಣವಾದರು

ಬೆಂಗಳೂರಿನಿಂದ ಹನಿಮೂನ್‌ಗೆ ಬಂದಿದ್ದ 4 ಪೈಕಿ ಇಬ್ಬರು ನಾಪತ್ತೆಯಾಗಿದ್ದಾರೆ. ಒರಿಸ್ಸಾ ಮೂಲದ ಎರಡು ನವ ಜೋಡಿಗಳು ಬಂದು ತಂಗಿದ್ದ ರೆಸಾರ್ಟ್‌ ಇವರು ಮಲಗಿದ್ದಲ್ಲೇ ಕೊಚ್ಚಿ ಹೋಗಿದೆ. ರೆಸಾರ್ಟ್‌ನಿಂದ 300 ಮೀಟರ್ ದೂರದಲ್ಲಿ ಕಾರಿನಲ್ಲಿ ಮಲಗಿದ್ದ ಹಾವೇರಿ ಮೂಲದ ಡ್ರೈವರ್ ಮಂಜುನಾಥ್ ಪಾರಾಗಿದ್ದಾರೆ. ಇವರು ದುರಂತದಲ್ಲಿ ಬದುಕುಳಿದಿದ್ದೇ ಅಚ್ಚರಿ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಮಂಜುನಾಥ್ ಮಾಹಿತಿ ನೀಡಿದ್ದಾರೆ.

ಕಾರಿನಲ್ಲಿ ಮಲಗಿದ್ದಕ್ಕೆ ಪ್ರಾಣ ಉಳಿಯಿತು. ರೆಸಾರ್ಟ್‌ನಲ್ಲಿ ಮಲಗಿದ್ರೆ ನಾನು ಬದುಕುತ್ತಿರಲಿಲ್ಲ. ಎತ್ತರದ ಪ್ರದೇಶದಲ್ಲಿ ಕಾರ್ ನಿಲ್ಲಿಸಿದ್ದರಿಂದ ಬಚಾವ್ ಆಗಿದ್ದೇನೆ. ನನ್ನ ಕಾರು ಕೂಡ ಅಲ್ಲೇ ಇದೆ ಎಂದು ಕೇರಳದ ವಯನಾಡಿನಲ್ಲಿ ಕ್ಯಾಬ್ ಡ್ರೈವರ್ ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ಜಿಲ್ಲಾಡಳಿತ ಸಹಾಯವಾಣಿ

ಸಂತ್ರಸ್ತರಿಗಾಗಿ ಮೈಸೂರು ಜಿಲ್ಲಾಡಳಿತ ಸಹಾಯವಾಣಿ ತೆರೆದಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಕೊಠಡಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. 0821-2423800 ಅಥವಾ 1077 ದೂರವಾಣಿಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Wayanad Landslide Explainer: ಪ್ರಕೃತಿ ಮೇಲೆ ಮಾನವನ ವಿಕೃತಿ; ವಯನಾಡು ಭೂಕುಸಿತಕ್ಕೆ ಇಲ್ಲಿದೆ ಕಾರಣಗಳ ಪಟ್ಟಿ

Continue Reading
Advertisement
Narayana Murthy
ದೇಶ2 mins ago

Narayana Murthy: ಜನ ವಾದ ಮಾಡದೆ ಸುಮ್ಮನೆ ಕೆಲಸ ಮಾಡುವುದರಿಂದ ಚೀನಾ ನಮ್ಮ ದೇಶಕ್ಕಿಂತ ಮುಂದಿದೆ: ನಾರಾಯಣಮೂರ್ತಿ ಹೊಸ ವಾದ!

drowned kalaburagi
ಕ್ರೈಂ8 mins ago

Drowned: ಆತ್ಮಹತ್ಯೆಗಾಗಿ ನದಿಗೆ ಹಾರಿದ ಮಹಿಳೆ ರಕ್ಷಣೆ, ಬದುಕಿಸಲು ಹೋದ ಗಂಡ- ಬಂಧು ಜಲಸಮಾಧಿ

ITR Filing
ದೇಶ24 mins ago

ITR Filing: ಐಟಿ ರಿಟರ್ನ್ಸ್ ಫೈಲ್‌ಗೆ ಇಂದು ಅಂತಿಮ ದಿನ; ಗಡುವು ವಿಸ್ತರಣೆಗೆ ಕಾದರೆ ದಂಡ ಕಟ್ಟಬೇಕಾದೀತು!

wayanad landslide bandipur checkpost
ಪ್ರಮುಖ ಸುದ್ದಿ38 mins ago

Wayanad Landslide: ವೈನಾಡ್‌ ಭೂಕುಸಿತ ಪರಿಣಾಮ ಕರ್ನಾಟಕ- ಕೇರಳ ರಸ್ತೆ ಸಂಪರ್ಕ ಕಡಿತ, ಬಸ್‌ ಸಂಚಾರ ಸ್ಥಗಿತ

Wayanad Landslide
ದೇಶ1 hour ago

Wayanad Landslide: ವಯನಾಡು ದುರಂತದಲ್ಲಿ ಸಾವಿನ ಸಂಖ್ಯೆ 150ಕ್ಕೆ ಏರಿಕೆ; ಇಂದೂ ಭಾರಿ ಮಳೆಯ ಮುನ್ಸೂಚನೆ, ಮುಂದುವರಿದ ಕಾರ್ಯಾಚರಣೆ

wayanad landslide
ದೇಶ1 hour ago

Wayanad Landslide: ವಯನಾಡ್‌ ಅಕ್ಷರಶಃ ಸ್ಮಶಾನ; ಭೂಕುಸಿತ ಸ್ಥಳಕ್ಕೆ ರಾಹುಲ್‌, ಪ್ರಿಯಾಂಕಾ ಭೇಟಿ ಸ್ಥಗಿತ

anekal JK police firing
ಕ್ರೈಂ1 hour ago

Police Firing: ಪುರಸಭೆ ಸದಸ್ಯನ ಕೊಲೆ ಮಾಡಿದ್ದ ರೌಡಿ ಕಾಲಿಗೆ ಗುಂಡು ನುಗ್ಗಿಸಿ ಬಂಧಿಸಿದ ಪೊಲೀಸರು

wayanad lanslide
ಪ್ರಮುಖ ಸುದ್ದಿ2 hours ago

Wayanad Landslide: ವೈನಾಡ್‌ ಭೂಕುಸಿತದಲ್ಲಿ 13 ಕನ್ನಡಿಗರು ನಾಪತ್ತೆ; ನಾಲ್ವರ ಶವ ಪತ್ತೆ, ಇನ್ನುಳಿದವರಿಗಾಗಿ ಶೋಧ

Tips for Monsoon
ಲೈಫ್‌ಸ್ಟೈಲ್2 hours ago

Tips for Monsoon: ಮಳೆಗಾಲದಲ್ಲಿ ಬಟ್ಟೆಗಳನ್ನು ಗರಿಗರಿಯಾಗಿ ಇರಿಸುವುದು ಹೇಗೆ?

Ear Infections during Monsoon
ಆರೋಗ್ಯ3 hours ago

Ear Infections During Monsoon: ಮಳೆಗಾಲದಲ್ಲಿ ಕಾಡುವ ಕಿವಿನೋವಿನಿಂದ ಮುಕ್ತರಾಗಲು ಸರಳ ಉಪಾಯ ಇಲ್ಲಿದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ15 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ19 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ20 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌