Site icon Vistara News

Yakshagana Show : ಅ.7ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷನೂಪುರ ʼರಾಜಾ ತ್ರೀʼ ಪ್ರದರ್ಶನ

Yakshagana Show updates Yakshagana Raja Three to be screened on Oct 7

ಬೆಂಗಳೂರು: ರಾಜ್‌ ಭಟ್‌ ಜಕ್ಕೂರು (Raj Bhat Jakkur) ಅವರ ಸಂಯೋಜನೆಯಲ್ಲಿ ಜಲವಳ್ಳಿ ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಅಕ್ಟೋಬರ್‌ 7ರಂದು ರಾತ್ರಿ 9.30ಕ್ಕೆ ನಗರ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷನೂಪುರ ʼರಾಜಾ ತ್ರೀʼ ಪ್ರದರ್ಶನ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ರತ್ನಾಪುರದ ರಾಮ ವಿರಚಿತ ʼರಾಜಾ ಮಯೂರಕೇತನʼ, ಗುಂಡೂ ಸೀತಾರಾಮಯ್ಯ ವಿರಚಿತ ʼರಾಜಾ ಮಥುರಾನಿಕೇತನ ಹಾಗೂ ಅಜ್ಞಾನ ಕವಿ ವಿರಚಿತ ʼರಾಜಾ ಉರಗಕೇತನʼ ಯಕ್ಷಗಾನ ಪ್ರಸಂಗ (Yakshagana Show) ಪ್ರದರ್ಶನವಾಗಲಿದೆ.

ಮದರ್‌ ಫೌಂಡೇಶನ್‌ ಅರ್ಪಿಸುವ ಕಾರ್ಯಕ್ರಮವನ್ನು ಸ್ವರ್ಣರೇಖಾ ಇಂಟೀರಿಯರ್ಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ವಿಸ್ತಾರ ನ್ಯೂಸ್‌ ಚಾನೆಲ್‌ ಮಾಧ್ಯಮ ಸಹಯೋಗ ನೀಡಿದೆ.

ಕೊಳಗಿ, ಜನ್ಸಾಲೆ, ಮೂಡುಬೆಳ್ಳೆ, ಬ್ರಹ್ಮೂರು ಅವರ ಗಾನ ರಸಧಾರೆ, ಅನಿರುದ್ಧ್‌, ಶಶಾಂಕ್‌, ಶ್ರೀನಿವಾಸ್‌ ಪ್ರಭು, ಸುಜನ್‌ ಹಾಗೂ ಅರುಣ ಅವರ ಚಂಡೆ ಮದ್ದಳೆಯ ಜೇಂಕಾರದಲ್ಲಿ ʼರಾಜಾ ತ್ರೀʼ ಪ್ರದರ್ಶನ ಮೂಡಿಬರಲಿದೆ.

ರತ್ನಾಪುರದ ರಾಮ ವಿರಚಿತ ʼರಾಜಾ ಮಯೂರಕೇತನʼ ಪ್ರಸಂಗದಲ್ಲಿ ತಾಮ್ರಧ್ವಜನಾಗಿ ವಿದ್ಯಾಧರ್‌ ಜಲವಳ್ಳಿ, ಮಯೂರಧ್ವಜನಾಗಿ ಮಂಕಿ ಈಶ್ವರ್‌ ನಾಯ್ಕ, ಕೃಷ್ಣನಾಗಿ ನಿಲ್ಕೋಡು ಶಂಕರ ಹೆಗಡೆ, ಅರ್ಜುನನಾಗಿ ಹೆನ್ನಾಬೈಲ್‌ ವಿಶ್ವನಾಥ್‌, ಹಾಸ್ಯ ಪಾತ್ರಗಳಲ್ಲಿ ರಮೇಶ್‌ ಭಂಡಾರಿ, ಸಿತಾರಾಮ ಕುಮಾರ್‌ ಅಭಿನಯಿಸಲಿದ್ದಾರೆ.

ಇದನ್ನೂ ಓದಿ | ದಶಮುಖ ಅಂಕಣ: ಕೋಶ ಓದಲಾಗದಿದ್ದರೆ ದೇಶವನ್ನಾದರೂ ಸುತ್ತಿ!

ಗುಂಡೂ ಸೀತಾರಾಮಯ್ಯ ವಿರಚಿತ ʼರಾಜಾ ಮಥುರಾನಿಕೇತನʼ ಪ್ರದರ್ಶನದಲ್ಲಿ ಕಂಸನಾಗಿ ತೀರ್ಥಹಳ್ಳಿ ಗೋಪಾಲಾಚಾರ್‌, ಉಗ್ರಸೇನಾ ಪಾತ್ರದಲ್ಲಿ ಪ್ರಸನ್ನ ಶೆಟ್ಟಿಗಾರ್‌, ರುಚಿಮತಿಯಾಗಿ ಸಂತೋಷ್‌ ಹಿಲಿಯಾಣ, ದೂತನಾಗಿ ಸೀತಾರಾಮ್‌ ಕುಮಾರ್‌, ಬ್ರಾಹ್ಮಣನಾಗಿ ಶ್ರೀಧರ್‌ ಕಾಸರಕೋಡು, ಮಾಗಧ ಆಗಿ ನಾಗರಾಜ ಭಂಡಾರಿ, ಆಸ್ತೀಯಾಗಿ ಉದಯ ಕಡಬಾಳ್‌, ಪಾಸ್ತಿಯಾಗಿ ಹರೀಶ್‌ ಜಪ್ತಿ, ದೃಮಿಳ ಆಗಿ ಕಾರ್ತಿಕ್‌ ಕಣ್ಣಿ ಬಣ್ಣ ಹಚ್ಚಲಿದ್ದಾರೆ.

ಅಜ್ಞಾತ ಕವಿ ವಿರಚಿತ ʼʼರಾಜಾ ಉರಗಕೇತನʼ ಯಕ್ಷಗಾನದಲ್ಲಿ ರಾಜೇಶ್‌ ಭಂಡಾರಿ, ಪ್ರಕಾಶ್‌ ಕಿರಾಡಿ, ವಿಶ್ವನಾಥ್‌ ಹೆನ್ನಾಬೈಲ್‌ ಅವರು (ಕೌರವ, ಭೀಮ, ಕೃಷ್ಣ ಪಾತ್ರದಲ್ಲಿ), ವಿನಾಯಕ ಗುಂಡುಬಾಳ, ಕಾರ್ತಿಕ್‌ ಹೆಗಡೆ, ಶ್ರೀಕಾಂತ್‌ ರಟ್ಟಾಡಿ, ನಾಗರಾಜ್‌ ದೇವಲ್ಕುಂದ ಪ್ರಮುಖ ಪಾತ್ರಗಳಲ್ಲಿ ರಂಜಿಸಲಿದ್ದಾರೆ.

ಇದನ್ನೂ ಓದಿ: Karnataka Drought : ಕರ್ನಾಟಕದಲ್ಲಿ ಈ ವರ್ಷ ಎದುರಾಗಲಿದೆ ಆಹಾರ ಕೊರತೆ!

ಪ್ರವೇಶ ದರ ಇರಲಿದ್ದು, ಮುಂಗಡ ಟಿಕೆಟ್‌ ಬುಕಿಂಗ್‌ಗಾಗಿ ರಾಜ್‌ ಭಟ್‌ ಮೊ.9019776411 ಸಂಪರ್ಕಿಸಿ.

ರಾಜ್‌ ಭಟ್‌ ಜಕ್ಕೂರು ಅವರು ವಿಸ್ತಾರ ನ್ಯೂಸ್‌ ಸಿಇಒ ಮತ್ತು ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ ಅವರಿಗೆ ಯಕ್ಷನೂಪುರ ರಾಜಾ ತ್ರೀ ಪ್ರದರ್ಶನ ವೀಕ್ಷಣೆಗೆ ಆಗಮಿಸುವಂತೆ ಆಹ್ವಾನ ನೀಡಿದರು.
Exit mobile version