Yash Birthday : ಮತ್ತೊಂದು ದುರಂತ; ಬೆಂಗಾವಲು ವಾಹನ ಡಿಕ್ಕಿಯಾಗಿ ಯಶ್‌ ಅಭಿಮಾನಿ ಸಾವು - Vistara News

ಕರ್ನಾಟಕ

Yash Birthday : ಮತ್ತೊಂದು ದುರಂತ; ಬೆಂಗಾವಲು ವಾಹನ ಡಿಕ್ಕಿಯಾಗಿ ಯಶ್‌ ಅಭಿಮಾನಿ ಸಾವು

Yash Birthday : ನಟ ಯಶ್‌ ಹುಟ್ಟುಹಬ್ಬಕ್ಕೆ ಕಟೌಟ್‌ ನಿಲ್ಲಿಸುವ ವೇಳೆ ಮೂವರು ಯುವಕರ ಮೃತಪಟ್ಟ ಬೆನ್ನಿಗೇ, ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದ ಯಶ್‌ ಅವರ ಬೆಂಗಾವಲು ವಾಹನ ಡಿಕ್ಕಿಯಾಗಿ ಗಾಯಗೊಂಡಿದ್ದ ಯುವಕನೂ ಮೃತಪಟ್ಟಿದ್ದಾನೆ.

VISTARANEWS.COM


on

Yash fan dead
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗದಗ: ರಾಕಿಂಗ್‌ ಸ್ಟಾರ್‌ ಯಶ್‌ (Actor Yash) ಅವರ ಮತ್ತೊಬ್ಬ ಅಭಿಮಾನಿ ಸಾವನ್ನಪ್ಪಿದ್ದಾರೆ. ಸೋಮವಾರ ಲಕ್ಷ್ಮೇಶ್ವರದ ಸೂರಣಗಿ ಗ್ರಾಮಕ್ಕೆ ಬಂದಿದ್ದ ಯಶ್‌ ಅವರು ಮರಳುವ ವೇಳೆ ಅವರ ಪೊಲೀಸ್‌ ಬೆಂಗಾವಲು (Police escort vehicle) ವಾಹನ ಡಿಕ್ಕಿಯಾಗಿ ಒಬ್ಬ ಯುವಕ ಗಾಯಗೊಂಡಿದ್ದ. ಆ ಯುವಕ ಈಗ ಚಿಕಿತ್ಸೆ ಫಲಕಾರಿಯಾಗದೆ ಪ್ರಾಣ ಕಳೆದುಕೊಂಡಿದ್ದಾನೆ. ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ನಿಖಿಲ್ (32) ಎಂಬಾತನೇ ಮೃತಪಟ್ಟ ಯುವಕ. ದುರಂತವೆಂದರೆ ನಿಖಿಲ್‌ ಬುಧವಾರ ತನ್ನದೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಬೇಕಾಗಿತ್ತು!

ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದಲ್ಲಿ ವಿದ್ಯುತ್‌ ಶಾಕ್‌ನಿಂದ‌ ಮೃತಪಟ್ಟ ಮೂವರು ಅಭಿಮಾನಿಗಳ (Three Yash fans dead) ಮನೆಗೆ ನಟ ಯಶ್‌ (Actor Yash birthday) ಅವರು ಸೋಮವಾರ ಭೇಟಿ ನೀಡಿ ಸಾಂತ್ವನ ಹೇಳಿದ್ದರು. ಹನುಮಂತ ಹರಿಜನ (21), ಮುರಳಿ ನಡುವಿನಮನಿ (20) ಮತ್ತು ನವೀನ್ ಗಾಜಿ (19) ಎಂಬ ಮೂವರು ಯುವಕರು ಮೃತಪಟ್ಟರೆ, ಮಂಜುನಾಥ್ ಹರಿಜನ, ದೀಪಕ್ ಹರಿಜನ, ಪ್ರಕಾಶ್ ಮ್ಯಾಗೇರಿ ಎಂಬುವವರು ಗಾಯಗೊಂಡಿದ್ದರು.

ಗೋವಾದಲ್ಲಿ ಶೂಟಿಂಗ್‌ನಲ್ಲಿದ್ದ ಯಶ್‌ ಅವರು ಅಲ್ಲಿಂದ ಹುಬ್ಬಳ್ಳಿಗೆ ವಿಶೇಷ ವಿಮಾನದ ಮೂಲಕ ಬಂದು ಅಲ್ಲಿಂದ ಫಾರ್ಚುನರ್‌ ಕಾರಿನಲ್ಲಿ ಸೂರಣಗಿಗೆ ತೆರಳಿದ್ದರು. ಮನೆಯವರಿಗೆ ಸಾಂತ್ವನ ಹೇಳಿ ಮರಳುವ ವೇಳೆ ಗದಗದ ತೇಜಾ ನಗರದ ಬಳಿಕ ಅವಘಡ ಸಂಭವಿಸಿತ್ತು.

ಯುವಕ ನಿಖಿಲ್‌ ಸ್ಕೂಟರ್‌ನಲ್ಲಿ ಸಾಗುತ್ತಾ ತೇಜಾ ನಗರದ ಬಳಿ ರಸ್ತೆ ಕ್ರಾಸ್ ಮಾಡುವ ವೇಳೆ ಯಶ್‌ ಬೆಂಗಾವಲಿಗಿದ್ದ ಪೊಲೀಸ್‌ ವಾಹನ ಡಿಕ್ಕಿಯಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಪೊಲೀಸರು, ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ನಿಖಿಲ್ (32) ಯಶ್‌ ಅಭಿಮಾನಿಯಾಗಿದ್ದು, ಯಶ್‌ ಅವರನ್ನು ನೋಡಲು ಹಾತೊರೆದಿದ್ದ. ಇದೀಗ ಆತನೂ ಮೃತಪಟ್ಟಿದ್ದಾನೆ. ನಿಖಿಲ್‌ ಜನವರಿ 10ರಂದು ತನ್ನದೇ ಜನ್ಮದಿನ ಆಚರಿಸಲು ಸಿದ್ಧತೆ ನಡೆಸಿದ್ದ. ಆದರೆ, ಸಾವು ಅವನನ್ನು ಹಿಂಬಾಲಿಸಿತ್ತು.

ಚೇಸ್‌ ಮಾಡಬೇಡಿ ಎಂದಿದ್ದ ಯಶ್‌

ಸೋಮವಾರ ಮೃತಪಟ್ಟ ಮೂವರು ಯುವಕರ ಕುಟುಂಬಗಳನ್ನು ಭೇಟಿ ಮಾಡಿದ ಯಶ್‌ ಅವರು, ಬಳಿಕ ಮಾಧ್ಯಮಗಳ ಜತೆ ಮಾತನಾಡಿ ಯಾರೂ ಕೂಡಾ ಚೇಸ್‌ ಮಾಡುವುದು, ಬ್ಯಾನರ್‌, ಕಟೌಟ್‌ ಹಾಕುವ ಕೆಲಸ ಮಾಡಬೇಡಿ. ಹಿಂದೆ ಕೂಡಾ ಹಲವು ಅನಾಹುತಗಳು ಆಗಿವೆ. ಹೀಗಾಗಿ ನನಗೆ ಬರ್ತ್‌ಡೇ ಅಂದರೆನೇ ನನಗೆ ಭಯ ಆಗ್ತಿದೆ. ನಿಜವಾಗಲೂ ಈ ಬರ್ತ್‌ಡೇ ಆಚರಿಸದಿರಲು ಇಂಥ ಘಟನೆಗಳೇ ಕಾರಣ. ನನ್ನ ಬರ್ತ್‌ಡೇಯಿಂದ ಯಾರಿಗೂ ತೊಂದರೆ ಆಗಬಾರದು ಎಂದು ಹೇಳಿದ್ದರು.

ನಾನು ಎಲ್ಲರಿಗೂ ಹೇಳುವುದೇನೆಂದರೆ, ಈ ಬೈಕ್‌ ಚೇಸ್‌ ಮಾಡುವುದು, ಪ್ರಾಣಕ್ಕೆ ಅಪಾಯ ತಂದುಕೊಳ್ಳುವುದು ಮಾಡಬೇಡಿ. ನಮ್ಮ ಮೇಲೆ ಪ್ರೀತಿ ಗೌರವ ಇದ್ದರೆ, ಜವಾಬ್ದಾರಿಯಿಂದ ನಡೆದುಕೊಳ್ಳಿ. ನಿಮಗೂ ಕುಟುಂಬಗಳಿವೆ ಎಂದು ಅಭಿಮಾನಿಗಳಿಗೆ ಎಚ್ಚರಿಕೆ ನುಡಿ ಹೇಳಿದರು ಯಶ್‌. ನಿಮಗೆ ಅಭಿಮಾನ ತೋರಿಸಲೇಬೇಕು ಎಂದಿದ್ದರೆ, ಒಳ್ಳೆಯ ಕೆಲಸ ಮಾಡಿ. ತುಂಬ ದೊಡ್ಡದಾಗಿ ಬೆಳೆಯಿರಿ. ಅವರು ಖುಷಿಯಾಗಿದ್ದರೇ ನನಗೆ ಸಂತೋಷ ಎಂದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Dengue Scare: ಸರ್ಕಾರದಿಂದಲೇ ಉಚಿತವಾಗಿ ಡೆಂಗ್ಯೂ ಪರೀಕ್ಷೆ ಮಾಡಿಸಲಿ; ಆರ್.‌ ಅಶೋಕ್‌ ಆಗ್ರಹ

Dengue Scare: ಸಣ್ಣ ವಯಸ್ಸಿನ ಮಕ್ಕಳಿಗೂ ಡೆಂಗ್ಯೂ ರೋಗ ಬರುತ್ತಿದೆ. ಅಧಿಕಾರಿಗಳು ಕೊಠಡಿ ಬಿಟ್ಟು ಹೊರಗೆ ಬರುತ್ತಿಲ್ಲ. ಸರ್ಕಾರ ಡೆಂಗ್ಯೂ ತುರ್ತು ಪರಿಸ್ಥಿತಿ ಘೋಷಣೆ ಮಾಡಿದರೆ ಮಾತ್ರ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯ. ಬೆಂಗಳೂರು ಸೇರಿದಂತೆ ಅನೇಕ ಕಡೆ ಕಸದ ರಾಶಿ ಬಿದ್ದಿದೆ. ಅದನ್ನು ಸ್ವಚ್ಛ ಮಾಡಲು ಸರ್ಕಾರ ಗಮನಹರಿಸಬೇಕು ಎಂದು ಆರ್.ಅಶೋಕ್‌ ಒತ್ತಾಯಿಸಿದರು.

VISTARANEWS.COM


on

Dengue Scare
Koo

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 159 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಒಟ್ಟು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 301ಕ್ಕೆ ಏರಿಕೆಯಾಗಿದೆ. ಇನ್ನು ಜನವರಿಯಿಂದ ಈವರೆಗೂ ಡೆಂಗ್ಯೂನಿಂದ (Dengue Cases) 6 ಸಾವು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇದರ ಬೆನ್ನಲ್ಲೇ, “ರಾಜ್ಯ ಸರ್ಕಾರವೇ ಜನರಿಗೆ ಉಚಿತವಾಗಿ ಡೆಂಗ್ಯೂ ಪರೀಕ್ಷೆ (Dengue Scare) ಮಾಡಿಸಬೇಕು” ಎಂಬುದಾಗಿ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ (R Ashok) ಆಗ್ರಹಿಸಿದ್ದಾರೆ.

ಆರ್‌.ಅಶೋಕ ಅವರು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಡೆಂಗ್ಯೂ ರೋಗಿಗಳನ್ನು ಭೇಟಿ ಮಾಡಿ, ಸೌಲಭ್ಯ ಪರಿಶೀಲಿಸಿದ ಬಳಿಕ ಮಾತನಾಡಿದರು. “ಡೆಂಗ್ಯೂ ರೋಗ ಹೀಗೆ ಹರಡುವಾಗ ಸರ್ಕಾರ ಪ್ರತಿ ತಾಲೂಕಿನಲ್ಲಿ ಟಾಸ್ಕ್‌ ಫೋರ್ಸ್‌ ರಚಿಸಿ ಔಷಧಿ ಪೂರೈಸುವ, ರೋಗ ನಿಯಂತ್ರಿಸುವ ಕ್ರಮಗಳನ್ನು ವಹಿಸಬೇಕಿತ್ತು. ಇವ್ಯಾವುದನ್ನೂ ಸರ್ಕಾರ ಮಾಡಿಲ್ಲ. ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಜನರು ಡೆಂಗ್ಯೂಗೆ ಒಳಗಾಗಿದ್ದಾರೆ. ಇವರಿಗೆ ಪರೀಕ್ಷೆ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ತೈಲ ದರ ಏರಿಕೆ ಸೇರಿದಂತೆ ವಿವಿಧ ತೆರಿಗೆಗಳನ್ನು ಸರ್ಕಾರ ಹಾಕಿರುವಾಗ ಜನರಿಗೆ ಉಚಿತ ಪರೀಕ್ಷೆ ಮಾಡಿಸಲು ಸಾಧ್ಯವಿಲ್ಲವೇ? ಉಚಿತ ಪರೀಕ್ಷೆ ಮಾಡಿದರೆ ಸುಮಾರು 10 ಕೋಟಿ ರೂ. ಖರ್ಚಾಗಬಹುದು. ಅಷ್ಟು ಹಣವನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲವೇ? ಅದಕ್ಕೂ ತೆರಿಗೆ ಹಾಕಬೇಕೆ? ಕೆಲ ಆರೋಗ್ಯ ಕೇಂದ್ರಗಳು 1,000 ರೂ.ವರೆಗೂ ಪರೀಕ್ಷಾ ಶುಲ್ಕ ವಿಧಿಸುತ್ತಿವೆ. ಆದ್ದರಿಂದ ಸರ್ಕಾರ ಕೂಡಲೇ ವೆಚ್ಚವನ್ನು ಭರಿಸಬೇಕು” ಎಂದು ಆಗ್ರಹಿಸಿದರು.

“ರಾಜ್ಯದಲ್ಲಿ ಡೆಂಗ್ಯೂ ರೋಗ ವೇಗವಾಗಿ ಹರಡುತ್ತಿದ್ದು, ಪ್ರತಿ ದಿನ ಮೂರರಿಂದ ನಾಲ್ಕು ಜನರು ಸಾವಿಗೀಡಾಗುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಎಲ್ಲ ಭಾಗಗಳಲ್ಲಿ ಜನರು ಭಯಕ್ಕೊಳಗಾದರೂ ಸರ್ಕಾರಕ್ಕೆ ಇದರ ಭಯ ಬಂದಿಲ್ಲ. 100 ಮಾದರಿ ಪರೀಕ್ಷೆ ಮಾಡಿದರೆ 13-14 ರಲ್ಲಿ ಡೆಂಗ್ಯೂ ಲಕ್ಷಣ ಕಂಡುಬರುತ್ತಿದೆ. ಬೇರೆ ರೋಗಗಳಿರುವ ವ್ಯಕ್ತಿಗಳಿಗೆ ಡೆಂಗ್ಯೂ ಬಂದರೆ ಸಾವಿನ ಸಾಧ್ಯತೆ ಹೆಚ್ಚಿರುತ್ತದೆ. ಎಲ್ಲೆಡೆ ಕಸದ ರಾಶಿ ಇದೆ, ಮಳೆಯಿಂದಾಗಿ ಅಲ್ಲಲ್ಲಿ ನೀರು ಸಂಗ್ರಹವಾಗುತ್ತಿದೆ. ಆದರೂ ಸರ್ಕಾರ ಏನೂ ಕ್ರಮ ವಹಿಸಿಲ್ಲ ಎಂದು ದೂರಿದರು.

“ಅತಿ ಸಣ್ಣ ವಯಸ್ಸಿನ ಮಕ್ಕಳಿಗೂ ಡೆಂಗ್ಯೂ ರೋಗ ಬರುತ್ತಿದೆ. ಅಧಿಕಾರಿಗಳು ಕೊಠಡಿ ಬಿಟ್ಟು ಹೊರಗೆ ಬರುತ್ತಿಲ್ಲ. ಸರ್ಕಾರ ಡೆಂಗ್ಯೂ ತುರ್ತು ಪರಿಸ್ಥಿತಿ ಘೋಷಣೆ ಮಾಡಿದರೆ ಮಾತ್ರ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯ. ಬೆಂಗಳೂರು ಸೇರಿದಂತೆ ಅನೇಕ ಕಡೆ ಕಸದ ರಾಶಿ ಬಿದ್ದಿದೆ. ಅದನ್ನು ಸ್ವಚ್ಛ ಮಾಡಲು ಸರ್ಕಾರ ಗಮನಹರಿಸಬೇಕು. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರನ್ನು ಬಳಸಿಕೊಂಡು ಮನೆ ಮನೆಗೆ ಹೋಗಿ ಪರೀಕ್ಷೆ ಮಾಡಬೇಕು. ಪ್ರತಿ ಆಸ್ಪತ್ರೆಯಲ್ಲಿ ಡೆಂಗ್ಯೂಗೆ ಒಂದು ವಾರ್ಡ್‌ ಮೀಸಲಿಡಬೇಕು” ಎಂದು ಒತ್ತಾಯಿಸಿದರು.

ಆತಂಕ ನಿವಾರಿಸಿ

“ಜನರಲ್ಲಿ ಡೆಂಗ್ಯೂ ಬಗ್ಗೆ ಉಂಟಾಗಿರುವ ಆತಂಕವನ್ನು ನಿವಾರಿಸಲು ಸರ್ಕಾರ ಜಾಗೃತಿ ಮೂಡಿಸಬೇಕು. ಉದ್ಯಾನ, ಸಾರ್ವಜನಿಕ ಸ್ಥಳ, ನೀರು ನಿಲ್ಲುವ ಸ್ಥಳ ಸೇರಿದಂತೆ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್‌ ಮಾಡಿಸಬೇಕು. ಆರೋಗ್ಯ ಸಚಿವರು ಎಲ್ಲ ಜಿಲ್ಲೆಗಳಿಗೆ ಹೋಗಿ ಜನರನ್ನು ಭೇಟಿ ಮಾಡಬೇಕು. ಕಾಂಗ್ರೆಸ್‌ನ ಎಲ್ಲ ಸಚಿವರು, ಶಾಸಕರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಜನರಿಗೆ ಧೈರ್ಯ ಹೇಳಬೇಕು” ಎಂದು ಸಲಹೆ ನೀಡಿದರು.

“ಇದರ ಜತೆಗೆ ಝೀಕಾ, ಕಾಲರಾ ಕೂಡ ಕಂಡುಬಂದಿದೆ. ಸಿಎಂ ಸಿದ್ದರಾಮಯ್ಯ ಅವರ ಜಿಲ್ಲೆಯಲ್ಲೇ ಜನರು ಕಲುಷಿತ ನೀರು ಕುಡಿದು ಸತ್ತಿದ್ದಾರೆ. ಈ ಮೂರು ರೋಗಗಳಿಂದ ಜನರನ್ನು ಕಾಪಾಡಲು ಸರ್ಕಾರ ಹೆಚ್ಚು ಗಮನಹರಿಸಬೇಕು. ಬಿಬಿಎಂಪಿ ಆಯುಕ್ತರಿಗೇ ಸೊಳ್ಳೆ ಕಚ್ಚಿ ಡೆಂಗ್ಯೂ ಬಂದಿರುವುದಾಗ ಬಿಬಿಎಂಪಿ ಬೇರೆಯವರನ್ನು ಕಾಪಾಡಲು ಸಾಧ್ಯವಿಲ್ಲ ಎಂಬ ಆತಂಕ ಜನರಲ್ಲಿ ಮೂಡಿದೆ. ಸಭೆ ಮಾಡುವುದರಿಂದ ಏನೂ ಆಗುವುದಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಬಂದು ಕೆಲಸ ಮಾಡಬೇಕು. ನಗರದಲ್ಲಿ ಬಿದ್ದಿರುವ ರಾಶಿ ಕಸವನ್ನು ವಿಲೇವಾರಿ ಮಾಡಲು ಅಭಿಯಾನದ ಮಾದರಿಯಲ್ಲಿ ಕೆಲಸ ಮಾಡಬೇಕು. ಹೆಚ್ಚು ಹಣ ನೀಡಬೇಕು” ಎಂದರು.

ಇದನ್ನೂ ಓದಿ: Dengue Scare: ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಡೆಂಗ್ಯೂ; ನೂರಾರು ಮಂದಿ ಆಸ್ಪತ್ರೆಗೆ ದಾಖಲು

Continue Reading

ಕೊಡಗು

Elephant attack :ಕಾರಿನ ಮೇಲೆ ಕಾಡಾನೆ ದಾಳಿ; ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Elephant attack : ಕಾರಿನ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು, ಮಕ್ಕಳು ಸೇರಿ ನಾಲ್ವಾರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

VISTARANEWS.COM


on

By

Elephant attack car in Kodagu‌ four people escape
Koo

ಕೊಡಗು: ಮಲೆನಾಡು ಭಾಗದಲ್ಲಿ ಕಾಡಾನೆಗಳ (Wild animal attack) ಉಪಟಳ ಹೆಚ್ಚಾಗುತ್ತಿದ್ದು, ಕೊಡಗಿನಲ್ಲಿ ಕಾರಿನ ಮೇಲೆ ಕಾಡಾನೆ ದಾಳಿ (Elephant attack) ನಡೆಸಿದೆ. ಕಾರಿನೊಳಗೆ ಇದ್ದ ಕುಟುಂಬವೊಂದು ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ. ವೀರಾಜಪೇಟೆಯ ಯಶವಂತ್ ಅವರ ಕುಟುಂಬವು ಕಾಡಾನೆ ದಾಳಿಯಿಂದ ಪಾರಾಗಿದ್ದಾರೆ.

ಯಶವಂತ್‌ ತಮ್ಮ ಕುಟುಂಬದೊಂದಿಗೆ ಟಿ.ಶೆಟ್ಟಿಗೇರಿಯಿಂದ ಇರ್ಪು ಕಡೆ ತೆರಳುತ್ತಿದ್ದಳು. ಈ ವೇಳೆ ಪೊನ್ನಂಪೇಟೆ ತಾಲೂಕಿನ ಕುರ್ಚಿ ಗ್ರಾಮದಲ್ಲಿ ಅಡ್ಡಗಟ್ಟಿದ ಆನೆಯು ಏಕಾಏಕಿ ದಾಳಿ ಮಾಡಿದೆ. ಆನೆ ಹತ್ತಿರ ಬರುತ್ತಿದ್ದಂತೆ ಕಾರಿನಿಂದ ಇಳಿದು ಓಡಿದ್ದಾರೆ. ಈ ವೇಳೆ ಆನೆಯು ಕಾರು ಜಖಂಗೊಳಿಸಿದೆ. ಇಬ್ಬರು ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಕಾಡಾನೆ ಹಾವಳಿಗೆ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಪ್ರತಿನಿತ್ಯ ಗ್ರಾಮದಲ್ಲಿ ಕಾಡಾನೆಗಳು ಅಡ್ಡಾಡುತ್ತಿದ್ದರೂ ಸೆರೆಹಿಡಿಯದೆ ಸುಮ್ಮನಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ಇದನ್ನೂ ಓದಿ: Wild Animals Attack: ವಿಜಯನಗರ: ನಾಡಿಗೆ ನುಗ್ಗಿದ ಕರಡಿಯನ್ನು ರಾತ್ರೋರಾತ್ರಿ ಕಾಡಿಗೆ ಅಟ್ಟಿದ ಅರಣ್ಯ ಇಲಾಖೆ ಸಿಬ್ಬಂದಿ

ರಾಯಚೂರಿನಲ್ಲಿ ಮೂವರ ಮೇಲೆ ದಾಳಿ ಮಾಡಿ ಕಾಲ್ಕಿತ್ತ ಚಿರತೆ

ರಾಯಚೂರು: ಕಾಡುಪ್ರಾಣಿಗಳ ಹಾವಳಿ (Wild Animal Attack) ಹೆಚ್ಚಾಗಿದ್ದು, ಜನ-ಸಾಮಾನ್ಯರು ಆತಂಕದಲ್ಲೇ ಓಡಾಡುವಂತಾಗಿದೆ. ಆಹಾರ ಅರಸಿ ನಾಡಿಗೆ ಕಾಲಿಡುತ್ತಿರುವ ಪ್ರಾಣಿಗಳು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿವೆ. ಜತೆಗೆ ಸಾಕುಪ್ರಾಣಿಗಳನ್ನು ಕೊಂದು ಎತ್ತಿಕೊಂಡು ಹೋಗುತ್ತಿವೆ. ಸದ್ಯ ರಾಯಚೂರಿನ ದೇವದುರ್ಗ ತಾಲ್ಲೂಕಿನ ಕಮದಾಳು ಗ್ರಾಮದಲ್ಲಿ ಮೂವರ ಮೇಲೆ ಚಿರತೆ (Leopard attack) ದಾಳಿ ನಡೆಸಿದೆ.

ಚಿರತೆ ದಾಳಿಯಿಂದಾಗಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮಲ್ಲಣ್ಣ, ರಂಗನಾಥ್‌, ಹನಮೇಶ ಕಮದಾಳ ಗಾಯಾಳುಗಳು. ಸದ್ಯ ಗಾಯಾಳುಗಳನ್ನು ದೇವದುರ್ಗ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಮೂವರು ಜಮೀನಿಗೆ ತೆರಳುತ್ತಿದ್ದಾಗ, ಹಿಂದಿನಿಂದ ಬಂದ ಚಿರತೆಯು ಮೂವರ ಮೇಲೂ ಎರಗಿ ದಾಳಿ ಮಾಡಿ ಗಾಯಗೊಳಿಸಿದೆ.

ಚಿರತೆ ಪ್ರತ್ಯಕ್ಷವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ. ಇನ್ನೂ ಸ್ಥಳಕ್ಕೆ ಪೊಲೀಸ್ ಹಾಗೂ ಅರಣ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಮದಾಳು,ಯರಮಸಾಳ, ಜೇರಬಂಡಿ, ಗುಂಡಗುರ್ತಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಕೂಡಲೇ ಸೆರೆಹಿಡಿಯುವಂತೆ ಜನರು ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bengaluru News : ʻ ಹುಡುಗ- ಹುಡುಗಿಯರ ಸರ್ವಿಸ್ ಬೇಕಾʼ ಎಂದವನ ಹೆಡೆಮುರಿ ಕಟ್ಟಿದ ಖಾಕಿ ಪಡೆ

Bengaluru News : ಬೇರೆ ಬೇರೆ ನಂಬರ್‌ಗಳಿಂದ ಸಿಕ್ಕ ಸಿಕ್ಕವರಿಗೆ ಫೋನ್‌ ಮಾಡಿ ಹುಡುಗ ಹಾಗೂ ಹುಡುಗಿಯರ ಸರ್ವೀಸ್ ಬೇಕಾ ಅಂತ ಕಿರಿಕಿರಿ ನೀಡುತ್ತಿದ್ದ ದುಷ್ಟನನ್ನು (Physical Abuse) ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

Bengaluru News Physical Abuse
Koo

ಬೆಂಗಳೂರು: ಹುಡುಗ ಹಾಗೂ ಹುಡುಗಿಯರ ಸರ್ವಿಸ್ ಬೇಕಾ ಎಂದು ಯುವಕ-ಯುವತಿಯರಿಗೆ ಮಸೇಜ್‌ ಮಾಡುತ್ತಿದ್ದ‌ (Physical Abuse) ಕಿರಾತಕನನ್ನು (Bengaluru News) ಖಾಕಿ ಪಡೆ ಬಂಧಿಸಿದೆ. ಪೂರ್ವ ವಿಭಾಗ ಸೆನ್ ಪೊಲೀಸರು ಆನಂದ್ ಶರ್ಮಾ ಎಂಬಾತನನ್ನು ಬಂಧಿಸಿದ್ದಾರೆ.

ಈ ದುಷ್ಟ ಬೇರೆ ಬೇರೆ ನಂಬರ್‌ಗಳನ್ನು ಬಳಸಿ ಫೋನ್‌ ಮಾಡಿ ಹುಡುಗಿಯರ ಸರ್ವಿಸ್ ಬೇಕಾ ಎಂದು ಕರೆ ಮಾಡುತ್ತಿದ್ದ. ಸುಭಿ ಎಂಬಾಕೆಗೂ ಕರೆ ಮಾಡಿ ಟಾರ್ಚರ್‌ ಕೊಟ್ಟಿದ್ದ. ಹೀಗಾಗಿ ಆಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಮೊಬೈಲ್ ನಂಬರ್ ಆಧರಿಸಿ ಆರೋಪಿ ಆನಂದ್‌ ಶರ್ಮಾನನ್ನು ಪೂರ್ವ ವಿಭಾಗ ಸೆನ್ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂ ವಿ ಸ್ಟೇಜ್ ಪಿಜಿ ಬಳಿ ಆರೋಪಿಯನ್ನು ಬಂಧಿಸಿ, ಆತ ಬಳಿಯಿದ್ದ ಮೊಬೈಲ್ ಫೋನ್ ವಶಪಡಿಸಿಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ: Self Harming : ನಿದ್ದೆ ಇಲ್ಲದೇ ಒದ್ದಾಟ; ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

ಮನೆಗೆ ನುಗ್ಗಿ ಯುವಕನಿಂದ ಬಾಲಕಿ ಮೇಲೆ ಅಮಾನುಷ ಹಲ್ಲೆ; ವಿಡಿಯೊ ನೋಡಿ ಜನಾಕ್ರೋಶ

ನವದೆಹಲಿ: ಅಪ್ರಾಪ್ತ ವಯಸ್ಸಿನ ಬಾಲಕಿಗೆ (minor girl) ದುಷ್ಕರ್ಮಿಯೊಬ್ಬ ಅಮಾನುಷವಾಗಿ ಥಳಿಸಿರುವ ಘಟನೆ ನಡೆದಿದ್ದು, ಇದರ ವಿಡಿಯೋ (Viral Video) ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ ಆಗಿ ವ್ಯಾಪಕ ಜನಾಕ್ರೋಶಕ್ಕೆ ಕಾರಣವಾಗಿದೆ. ತಮ್ಮ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸುವ ವ್ಯಕ್ತಿಯೊಬ್ಬ ಹುಡುಗಿ ಮೇಲೆ ಹಲ್ಲೆ ಮಾಡಿರುವುದನ್ನು ಈ ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ.

ಲಕ್ನೋದ ಬಿ-376 ವಿಶಾಲ್ ಖಂಡ್‌ನ ಗೋಮತಿ ನಗರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಈ ವಿಡಿಯೋವನ್ನು ಆದಿತ್ಯ ಕಮಲ್ ಪಾಂಡೆ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಪ್ರಬಲ್ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ ಅಪ್ರಾಪ್ತ ಬ್ರಾಹ್ಮಣ ಹುಡುಗಿಯ ಮನೆಗೆ ಬಲವಂತವಾಗಿ ಪ್ರವೇಶಿಸಿ, ಅಶ್ಲೀಲವಾಗಿ ನಿಂದಿಸುತ್ತಾನೆ. ಫೋನ್‌ನಲ್ಲಿ ಯಾರೊಂದಿಗಾದರೂ ಮಾತನಾಡುವಂತೆ ಮಾಡುತ್ತಾನೆ. ಈ ಅಪ್ರಾಪ್ತ ಬಾಲಕಿ ಯಾಕೆ ಹಾಗೆ ಹೇಳುತ್ತೀರಿ ಎಂದು ಪ್ರಶ್ನಿಸಿದಾಗ ಆತ ಬಾಲಕಿಗೆ ಕಪಾಳಮೋಕ್ಷ ಮಾಡಿದ್ದಾನೆ. ಬಾಲಕಿಯ ಫೋನ್‌ಗಳನ್ನು ಒಡೆಯಲಾಗಿದೆ, ಬಟ್ಟೆ ಹರಿದು ಹಾಕಲಾಗಿದೆ. ಆಕೆಗೆ ಸಾಕಷ್ಟು ಹಿಂಸೆ ನೀಡಲಾಗಿದೆ. ವ್ಯಕ್ತಿಯು ರಿವಾಲ್ವರ್ ಕೂಡ ಹೊಂದಿದ್ದ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಲಾಗಿದೆ.

ಆರೋಪಿಯನ್ನು ಬಂಧಿಸಿರುವ ಕುರಿತು ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ವಿಡಿಯೋದಲ್ಲಿರುವ ಬಾಲಕಿಯನ್ನು ದೀಪಶಿಖಾ ತಿವಾರಿ ಎಂದು ಗುರುತಿಸಲಾಗಿದ್ದು, ಆ ವ್ಯಕ್ತಿ ಅವರ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸಿದ್ದಾರೆ ಎನ್ನಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Dengue Cases: ರಾಜ್ಯದಲ್ಲಿ ಭಾನುವಾರ 159 ಮಂದಿಗೆ ಡೆಂಗ್ಯೂ ದೃಢ; ಬೆಂಗಳೂರಲ್ಲೇ ಅತಿ ಹೆಚ್ಚು!

Dengue Cases: ರಾಜ್ಯದಲ್ಲಿ ಒಟ್ಟು 301 ಸಕ್ರಿಯ ಪ್ರಕರಣಗಳ ಪೈಕಿ 35 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಅಂದರೆ 80 ಪ್ರಕರಣಗಳು ಪತ್ತೆಯಾಗಿವೆ.

VISTARANEWS.COM


on

Dengue Cases
Koo

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 159 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಒಟ್ಟು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 301ಕ್ಕೆ ಏರಿಕೆಯಾಗಿದೆ. ಇನ್ನು ಜನವರಿಯಿಂದ ಈವರೆಗೂ ಡೆಂಗ್ಯೂನಿಂದ (Dengue Cases) 6 ಸಾವು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಯಲ್ಲಿ 954 ಮಂದಿಗೆ ಟೆಸ್ಟ್‌ ಮಾಡಲಾಗಿದ್ದು, ಈ ಪೈಕಿ 159 ಮಂದಿಯಲ್ಲಿ ಡೆಂಗ್ಯೂ ಸೋಂಕು ಪತ್ತೆಯಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 80, ಚಿಕ್ಕಬಳ್ಳಾಪುರ – 08, ತುಮಕೂರು – 12, ದಾವಣಗೆರೆ – 10, ಗದಗ – 5, ಯಾದಗಿರಿ – 2, ಬೀದರ್ – 13, ಕೊಪ್ಪಳ – 1, ಹಾಸನ – 03, ಚಿಕ್ಕಮಗಳೂರು – 25 ಪ್ರಕರಣಗಳು ಪತ್ತೆಯಾಗಿವೆ.

ಕಳೆದ 24 ಗಂಟೆಗಳಲ್ಲಿ 1 ವರ್ಷದೊಳಗಿನ ಮೂವರು ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಸದ್ಯ 301 ಸಕ್ರಿಯ ಪ್ರಕರಣಗಳ ಪೈಕಿ 35 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಾಸನದಲ್ಲಿ ಶಂಕಿತ ಡೆಂಗ್ಯೂಗೆ 26 ವರ್ಷದ ಯುವತಿ ಬಲಿ

ಹಾಸನ: ಶಂಕಿತ ಡೆಂಗ್ಯೂಗೆ (Dengue Cases in Hassan) 26 ವರ್ಷದ ಯುವತಿ ಬಲಿಯಾಗಿರುವ ಘಟನೆ ಹಾಸನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಜಿಲ್ಲೆಯ ಅರಸೀಕೆರೆ ತಾಲೂಕಿನ ಮುದುಡಿ ತಾಂಡ್ಯ ಗ್ರಾಮದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಜೂಲೂನಾಯ್ಕ-ಸುಮಿತ್ರಾದೇವಿ ಎಂಬುವವರ ಪುತ್ರಿ ಸುಪ್ರಿತಾ (26) ಮೃತ ಯುವತಿ. ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿರುವಾಗಲೇ ಸುಪ್ರಿತಾಗೆ ಬಹುಅಂಗಾಗ ವೈಫಲ್ಯವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸುಪ್ರಿತಾ ಮೃತಪಟ್ಟಿದ್ದಾಳೆ. ಇದರಿಂದ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ಸಾವಿನ ಸಂಖ್ಯೆ ಏಳಕ್ಕೆ ಏರಿದೆ.

ಮೈಸೂರಿನಲ್ಲಿ ಜಯದೇವ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಸಾವು

ಮೈಸೂರು: ಜಿಲ್ಲೆಯಲ್ಲಿ ಡೆಂಗ್ಯೂಗೆ ಎರಡನೇ ಬಲಿಯಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಲಲಿತಾ ಮೃತಪಟ್ಟವರು. ಮೂರು ದಿನಗಳ ಹಿಂದೆ ಹುಣಸೂರು ಸಮುದಾಯ ಆರೋಗ್ಯಾಧಿಕಾರಿ ಮೃತಪಟ್ಟ ಬೆನ್ನಲ್ಲೇ ಇದೀಗ ಮತ್ತೊಬ್ಬರು ಡೆಂಗ್ಯೂ ಜ್ವರದಿಂದ (Dengue Cases in Mysore) ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ | Dengue Scare: ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಡೆಂಗ್ಯೂ; ನೂರಾರು ಮಂದಿ ಆಸ್ಪತ್ರೆಗೆ ದಾಖಲು

ಮೈಸೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. 3 ದಿನಗಳ ಹಿಂದೆ ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿತ್ತು. ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮುದಾಯ ಆರೋಗ್ಯಾಧಿಕಾರಿ ನಾಗೇಂದ್ರ (32) ಮೃತ ಮೃತಪಟ್ಟಿದ್ದರು.

Continue Reading
Advertisement
Vastu Tips
ಧಾರ್ಮಿಕ8 mins ago

Vastu Tips: ಮನೆಯಲ್ಲಿ ನೆಮ್ಮದಿ ನೆಲೆಸಬೇಕೆ? ಹಾಗಿದ್ದರೆ ಅಡುಗೆ ಒಲೆಯ ದಿಕ್ಕು ಸರಿಯಾಗಿರಲಿ!

dina Bhavishya
ಭವಿಷ್ಯ1 hour ago

Dina Bhavishya : ಇತರರ ವಿರುದ್ಧ ದ್ವೇಷ ಕಾರುತ್ತಾ ಹೋದರೆ ಹೆಚ್ಚಾಗುತ್ತೆ ಈ ರಾಶಿಯವರ ಮಾನಸಿಕ ಒತ್ತಡ

School Principal
ದೇಶ6 hours ago

School Principal: ಶಾಲೆಯಲ್ಲೇ ಮಹಿಳಾ ಟೀಚರ್‌ ಜತೆ ಪ್ರಿನ್ಸಿಪಾಲ್‌ ರೊಮ್ಯಾನ್ಸ್;‌ ವೈರಲ್‌ ಫೋಟೊ ಇಲ್ಲಿದೆ

WCPL 2024
ಪ್ರಮುಖ ಸುದ್ದಿ6 hours ago

WCPL 2024 : ಸಿಪಿಎಲ್​​ನ ಟ್ರಿನ್​ಬ್ಯಾಗೊ ರೈಡರ್ಸ್​ ತಂಡಕ್ಕೆ ಜೆಮಿಮಾ, ಶಿಖಾ ಸೇರ್ಪಡೆ

KRS Inflow
ದೇಶ7 hours ago

KRS Inflow: ಕೆಆರ್‌ಎಸ್‌ಗೆ ದಾಖಲೆಯ 11 ಸಾವಿರ ಕ್ಯುಸೆಕ್‌ ನೀರು ಒಳಹರಿವು; ಸೋಮವಾರದಿಂದ ನಾಲೆಗಳಿಗೆ ನೀರು

Abhishek Sharma
ಕ್ರೀಡೆ7 hours ago

Abhishek Sharma : 47 ಎಸೆತಕ್ಕೆ ಶತಕ ಬಾರಿಸಿ ಹಲವಾರು ದಾಖಲೆ ಮುರಿದಿ ಅಭಿಷೇಕ್​ ಶರ್ಮಾ

Dengue Scare
ಕರ್ನಾಟಕ7 hours ago

Dengue Scare: ಸರ್ಕಾರದಿಂದಲೇ ಉಚಿತವಾಗಿ ಡೆಂಗ್ಯೂ ಪರೀಕ್ಷೆ ಮಾಡಿಸಲಿ; ಆರ್.‌ ಅಶೋಕ್‌ ಆಗ್ರಹ

World Biryani Day:
ಪ್ರಮುಖ ಸುದ್ದಿ8 hours ago

World Biryani Day : ಕೋಲ್ಕತಾ, ಹೈದರಾಬಾದ್ ಬಿರಿಯಾನಿ ತಿಂದಿರಬಹುದು; ಇವುಗಳ ಹಿನ್ನೆಲೆ ಗೊತ್ತಾ?

Accident
Latest8 hours ago

Accident: ಟೆರೇಸ್ ಮೇಲೆ ನಿಂತು ಜಗಳ ನೋಡುತ್ತಿದ್ದ ಮಹಿಳೆಗೇ ಬಿತ್ತು ಗುಂಡೇಟು!

Puri Jagannath Rath Yatra
ಪ್ರಮುಖ ಸುದ್ದಿ8 hours ago

Puri Jagannath Rath Yatra: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಒಬ್ಬನ ಸಾವು, 400 ಭಕ್ತರಿಗೆ ಗಾಯ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ10 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ13 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ13 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ24 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌