Yashaswini Scheme | ಸಹಕಾರಿಗಳ ಆರೋಗ್ಯ ರಕ್ಷಣೆಗೆ ಯಶಸ್ವಿನಿ; ಹೆಸರು ನೋಂದಣಿಗೆ ಡಿ.31 ಕೊನೆಯ ದಿನ - Vistara News

ಆರೋಗ್ಯ

Yashaswini Scheme | ಸಹಕಾರಿಗಳ ಆರೋಗ್ಯ ರಕ್ಷಣೆಗೆ ಯಶಸ್ವಿನಿ; ಹೆಸರು ನೋಂದಣಿಗೆ ಡಿ.31 ಕೊನೆಯ ದಿನ

ರಾಜ್ಯ ಸರ್ಕಾರ ಮರಳಿ ಜಾರಿಗೆ ತಂದಿರುವ ಯಶಸ್ವಿನಿ ಯೋಜನೆಗೆ (Yashaswini Scheme) ಹೆಸರು ನೊಂದಾಯಿಸಲು ಇನ್ನು ನಾಲ್ಕು ದಿನ ಬಾಕಿ ಇದೆ. ಈ ಯೋಜನೆಯಡಿ ಒಂದು ಸಹಕಾರಿ ಕುಟುಂಬ 5 ಲಕ್ಷ ರೂ. ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದಾಗಿದೆ.

VISTARANEWS.COM


on

Yashaswini Scheme
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಗ್ರಾಮೀಣ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆ ʼಯಶಸ್ವಿನಿʼ (Yashaswini Scheme)ಗೆ ಹೆಸರು ನೊಂದಾಯಿಸಲು ಇನ್ನು ನಾಲ್ಕು ದಿನ ಮಾತ್ರ ಬಾಕಿ ಇದೆ. ಕರ್ನಾಟಕದ ರಾಜ್ಯದ ಗ್ರಾಮೀಣ ಸಹಕಾರಿಗಳಿಗಾಗಿಯೇ ರೂಪಗೊಂಡಿರುವ ಈ ಸ್ವಯಂ-ನಿಧಿ ಶಸ್ತ್ರಚಿಕಿತ್ಸಾ ಯೋಜನೆಗೆ ಹೆಸರು ನೊಂದಾಯಿಸಲು ಡಿಸೆಂಬರ್‌ 31 ಕೊನೆಯ ದಿನವಾಗಿದೆ. ಈ ಯೋಜನೆಯು 2023 ಜನವರಿ1 ರಿಂದ ಡಿಸೆಂಬರ್‌ 31ರ ವರೆಗೆ ಜಾರಿಯಲ್ಲಿರಲಿದೆ.

ಈ ಯೋಜನೆಯಡಿ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬ 5 ಲಕ್ಷ ರೂ. ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದಾಗಿದೆ. ರಾಜ್ಯ ಸರ್ಕಾರವು ಇದಕ್ಕಾಗಿ ಪ್ರಸಕ್ತ ಆಯವ್ಯಯದಲ್ಲಿ 300 ಕೋಟಿ ರೂ. ಅನುದಾನ ನಿಗದಿ ಪಡಿಸಿದೆ. ಈ ಯೋಜನೆಯಡಿ ಗ್ರಾಮೀಣ ಅಥವಾ ನಗರದ ಸಹಕಾರಿಯೊಬ್ಬರು ತಿಂಗಳಿಗೆ ಇಂತಿಷ್ಟರಂತೆ ನಿಗದಿತ ಪ್ರಮಾಣದಲ್ಲಿ ಒಂದು ವರ್ಷದ ಅವಧಿಯಲ್ಲಿ, ಯೋಜನೆಯಲ್ಲಿ ಒಳಗೊಂಡ ಯಾವುದೇ ಶಸ್ತ್ರ ಚಿಕಿತ್ಸೆಯನ್ನು ನಿಗದಿತ ಮಿತಿಯೊಳಗೆ ಷರತ್ತು ಮತ್ತು ನಿಯಮಗಳಿಗೆ ಒಳಪಟ್ಟು ನಗದು ರಹಿತವಾಗಿ ಪಡೆಯಬಹುದಾಗಿರುತ್ತದೆ.

ಕಳೆದ ನವೆಂಬರ್‌ 1 ರಿಂದ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದ್ದು, 30 ಲಕ್ಷ ಮಂದಿಯ ನೋಂದಣಿ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ. ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರಿಗೆ ನಾಲ್ಕು ಜನರ ಕುಟುಂಬಕ್ಕೆ ತಲಾ 500 ರೂ. ಹಾಗೂ ನಗರ ಪ್ರದೇಶದ ಸಹಕಾರಿಗಳಿಗೆ 1,000 ರೂ. ವಂತಿಗೆ ನಿಗದಿ ಪಡಿಸಲಾಗಿದೆ. ನಾಲ್ಕು ಮಂದಿಗಿಂತ ಹೆಚ್ಚಿನ ಸದಸ್ಯರು ಇರುವ ಕುಟುಂಬಗಳಿಗೆ ಹೆಚ್ಚುವರಿ ಸದಸ್ಯರಿಗೆ ತಲಾ 200 ರೂ. ವಂತಿಗೆ ಪಾವತಿಸಿ, ನೊಂದಾಯಿಸಿಕೊಳ್ಳಲು ಸೂಚಿಸಲಾಗಿದೆ.

ಮರಳಿ ಜಾರಿಗೆ ಬಂದ ಯೋಜನೆ
2003ರಲ್ಲಿ ಸಹಕಾರಿ ಇಲಾಖೆಯಲ್ಲಿ ಯಶಸ್ವಿನಿ ಯೋಜನೆಯನ್ನು ಪ್ರಾರಂಭಿಸಲಾಗಿತ್ತು. 2003-04ರಿಂದ 2017-18ರವರೆಗೆ ಈ ಯೋಜನೆ ಜಾರಿಯಲ್ಲಿತ್ತು. ನಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಈ ಯೋಜನೆಯನ್ನು ವರ್ಗಾವಣೆ ಮಾಡಲಾಗಿತ್ತು. 2018ರ ಮೇ ತಿಂಗಳಿನಲ್ಲಿ ಈ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ನಂತರ ಅದೇ ವರ್ಷದ ಜೂನ್‌ನಲ್ಲಿ ಈ ಯೋಜನೆಯನ್ನು ʼಆರೋಗ್ಯ ಕರ್ನಾಟಕ ಯೋಜನೆʼ ಯೊಂದಿಗೆ ವಿಲೀನಗೊಳಿಸಲಾಗಿತ್ತು.

ರಾಜ್ಯದೆಲ್ಲೆಡೆ ಸಹಕಾರಿಗಳು ಮತ್ತು ರೈತರು ನಿರಂತರವಾಗಿ ಒತ್ತಾಯಿಸಿದ ಹಿನ್ನೆಲೆಯಲ್ಲಿ 2022-23ನೇ ಸಾಲಿನ ಬಜೆಟ್‌ನಲ್ಲಿ ಈ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ, ಮರುಜಾರಿಗೊಳಿಸುವುದಾಗಿ ಪ್ರಕಟಿಸಲಾಗಿತ್ತು. ಇದಕ್ಕಾಗಿ 300 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿತ್ತು. ಈ ಯೋಜನೆ ಜಾರಿಗೆ ಸಂಬಂಧ 2022ರ ಅಕ್ಟೋಬರ್‌ 22 ರಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿತ್ತು.

ಯಶಸ್ವಿನಿ ಯೋಜನೆಯಡಿ ಸದಸ್ಯರಿಗೆ ಯೂನಿಕ್‌ ಐಡಿ ಸಂಖ್ಯೆಯುಳ್ಳ ಕಾರ್ಡ್‌ಅನ್ನು ಒದಗಿಸಲಾಗುತ್ತದೆ. ಈ ಕಾರ್ಡಿನಲ್ಲಿ ಪ್ರಾಥಮಿಕ ಸದಸ್ಯರ ಸಹಕಾರ ಸಂಘದ ಸದಸ್ಯತ್ವದ ವಿವರಗಳು ಮತ್ತು ಅವರ ಕುಟುಂಬ ಸದಸ್ಯರ ವಿವರಗಳು, ವಾರ್ಷಿಕ ವಂತಿಗೆ ಪಾವತಿಸಿರುವ ವಿವರ ಹಾಗೂ ಭಾವಚಿತ್ರ ಇರುತ್ತದೆ. ಇದರಲ್ಲಿ ಕುಟುಂಬದ ವಾರ್ಷಿಕ ವೈದ್ಯಕೀಯ ವೆಚ್ಚದ ಮಿತಿಯನ್ನು ಸಹ ಕಾರ್ಡಿನಲ್ಲಿ ನಮೂದಿಸಲಾಗಿರುತ್ತದೆ. ಈ ಯೋಜನೆಯಡಿ ನೋಂದಾಯಿತ ಸದಸ್ಯರು ಈ ಕಾರ್ಡ್‌ ಅನ್ನು ಬಳಸಿ ನಗದು ರಹಿತ ಚಿಕಿತ್ಸೆಗಳನ್ನು ಪಡೆಯಬಹುದಾಗಿದೆ.

ಏನೇನು ಲಾಭ?
ಯಶಸ್ವಿನಿ ಯೋಜನೆಯಡಿಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬಂಧಿಸಿದ ರೋಗಗಳು ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಕಾಯಿಲೆಗಳು, ನರಗಳಿಗೆ ಸಂಬಂಧಿಸಿದ ಸಮಸ್ಯೆ, ಕಣ್ಣಿನ ಕಾಯಿಲೆಗಳು, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬಂಧಿಸಿದ ವಿಶೇಷ ಕಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದ ಯಶಸ್ವಿನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಒದಗಿಸಲಾಗುತ್ತದೆ.

ಪ್ರಾರಂಭಿಕವಾಗಿ ಈ ಹಿಂದಿನ ಯಶಸ್ವಿನಿ ಯೋಜನೆಯಲ್ಲಿ ನೋಂದಾಯಿಸಿದ ನೆಟ್‌ವರ್ಕ್ ಅಸ್ಪತ್ರೆಗಳನ್ನೇ ಸದ್ಯಕ್ಕೆ ಮುಂದುವರಿಸಲಾಗಿದೆ. ನಂತರ ಹೊಸ ಮಾರ್ಗಸೂಚಿಗಳಂತೆ, ಟ್ರಸ್ಟ್‌ನಲ್ಲಿ ತೀರ್ಮಾನಿಸಿ ನೆಟ್‌ವರ್ಕ್ ಆಸ್ಪತ್ರೆಗಳನ್ನು ಅಂತಿಮಗೊಳಿಸಲಾಗುವುದು ಎಂದು ಸರ್ಕಾರ ಪ್ರಕಟಿಸಿದೆ.

“ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕʼʼ ಯೋಜನೆಯಲ್ಲಿ ಅಳವಡಿಸಿಕೊಂಡಿರುವ 1,650 ಕಾಯಿಲೆಗಳಿಗೆ ಚಿಕಿತ್ಸೆಗಳನ್ನು ಯಶಸ್ವಿನಿ ಯೋಜನೆಯಲ್ಲಿ ನೀಡಲಾಗುತ್ತದೆ. ಮುಂದೆ ಯಶಸ್ವಿನಿ ಟ್ರಸ್ಟ್‌ನಲ್ಲಿ ಚರ್ಚಿಸಿ ಅಗತ್ಯತೆ ಕಂಡು ಬಂದಲ್ಲಿ ಹೆಚ್ಚಿನ ಚಿಕಿತ್ಸೆಗಳು ಮತ್ತು ದರಗಳ ಪರಿಷ್ಕರಣೆಗೆ ತೀರ್ಮಾನಿಸಬಹುದಾಗಿದೆ ಎಂದು ಸರ್ಕಾರ ಆದೇಶದಲ್ಲಿ ಹೇಳಿದೆ.

ಯಶಸ್ವಿನಿ ಸದಸ್ಯರು ಜನರಲ್ ವಾರ್ಡ್‌ನಲ್ಲಿ ಸೌಲಭ್ಯ ಪಡೆಯುವಲ್ಲಿ ಅರ್ಹತೆ ಹೊಂದಿರುತ್ತಾರೆ. ಆಸ್ಪತ್ರೆಯಲ್ಲಿ ಒದಗಿಸಿರುವ ಚಿಕಿತ್ಸಾ ಸೌಲಭ್ಯದಲ್ಲಿ ಔಷಧಿ ವೆಚ್ಚ, ಆಸ್ಪತ್ರೆ ವೆಚ್ಚ, ಶಸ್ತ್ರಚಿಕಿತ್ಸೆಯ ವೆಚ್ಚ, ಆವರೇಷನ್ ಥಿಯೇಟರ್ ಬಾಡಿಗೆ, ಅರೆವಳಿಕೆ ತಜ್ಞರ ಫೀ, ಸರ್ಜನ್ ಫೀ, ಕನ್ಸಲ್‌ಟೆಂಟ್ ಫೀ, ಬೆಡ್ ಚಾರ್ಜ್, ನರ್ಸ್ ಫೀ ಇತ್ಯಾದಿ ವೆಚ್ಚ ಒಳಗೊಂಡಿರುತ್ತದೆ.

ಟ್ರಸ್ಟ್‌ನಿಂದ ಅಂಗೀಕೃತವಾದ ಆಸ್ಪತ್ರೆಗಳಲ್ಲಿ ಯಶಸ್ವಿನಿ ಫಲಾನುಭವಿಗಳು ಹೊರರೋಗಿ ಸಲಹೆಯನ್ನು ರೂ 100 ಗಳನ್ನು ಸಾಮಾನ್ಯ ಪರೀಕ್ಷೆಗೆ ಮತ್ತು ವಿಶೇಷ ತಜ್ಞರಿಂದ ಪರೀಕ್ಷೆ ಮಾಡಿಸಿಕೊಳ್ಳಲು ರೂ.200 ಗಳನ್ನು
ಪಾವತಿಸಿ ಮೂರು ತಿಂಗಳವರೆಗೆ ಅದೇ ಕಾರ್ಡ್​​​​​ನಲ್ಲಿ ತಪಾಸಣೆ ಮಾಡಿಸಿಕೊಳ್ಳಬಹುದಾಗಿದೆ.

ಯಾರು ಈ ಸೌಲಭ್ಯ ಪಡೆಯಬಹುದು?
ಕನಿಷ್ಠ 3 ತಿಂಗಳು ಮುಂಚಿತವಾಗಿ ಅರ್ಹ ಗ್ರಾಮೀಣ ಸಹಕಾರ ಸಂಘವೊಂದರ ಸದಸ್ಯರಾದವರು ಈ ಯೋಜನೆಯ ಭಾಗವಾಗಬಹುದಾಗಿದೆ. ಅಲ್ಲದೇ ಗ್ರಾಮೀಣ ಸಹಕಾರ ಸಂಘ/ಬ್ಯಾಂಕುಗಳೊಡನೆ ವ್ಯವಹರಿಸುತ್ತಿರುವ ಗ್ರಾಮೀಣ ಸ್ತ್ರೀ ಶಕ್ತಿ ಗುಂಪು, ಸ್ವ-ಸಹಾಯ ಗುಂಪಿನ ಸದಸ್ಯರು ಮತ್ತು ಅವರ ಕುಟುಂಬದ ಎಲ್ಲ ಸದಸ್ಯರು ಯೋಜನೆಯ ಫಲಾನುಭವಿಯಾಗಬಹುದು.

ಗ್ರಾಮೀಣ ಪ್ರದೇಶದಲ್ಲಿರುವ ಸಹಕಾರಿ ಸಂಘ/ಸಹಕಾರಿ ಬ್ಯಾಂಕುಗಳಲ್ಲಿ ಹಣಕಾಸಿನ ವಹಿವಾಟು ಹೊಂದಿರುವ ಸ್ವ-ಸಹಾಯ ಗುಂಪಿನ ಸದಸ್ಯರು ಕೂಡ ಯೋಜನೆಯ ಸೌಲಭ್ಯ ಪಡೆಯಬಹುದಾಗಿದೆ. ನಗರ/ಪಟ್ಟಣ ಪ್ರದೇಶದಲ್ಲಿ ಸಹಕಾರಿ ಮೀನುಗಾರರು, ಸಹಕಾರಿ ಬೀಡಿ ಕಾರ್ಮಿಕರು ಮತ್ತು ಸಹಕಾರಿ ನೇಕಾರರು ಕೂಡ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಯಶಸ್ವಿನಿ ಯೋಜನೆ ಕುರಿತ ಹೆಚ್ಚಿನ ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ | Yashaswini Scheme | ಯಶಸ್ವಿನಿ ಯೋಜನೆಗೆ 20 ಲಕ್ಷ ನೋಂದಣಿ; ಗಡುವು ಮುಗಿಯಲು ಕೇವಲ ಮೂರು ದಿನ ಬಾಕಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Tips For Healthy Skin: ಈ ಐದು ಸಲಹೆಗಳನ್ನು ಪಾಲಿಸಿ, ಮೊಡವೆಗಳಿಂದ ಪಾರಾಗಿ!

ಉಸಿರಾಟದ ವ್ಯಾಯಾಮ (breathing exercises), ಕೂಲಿಂಗ್ ತಂತ್ರಗಳ (cooling techniques) ಜೊತೆಗೆ ಮುಖದ ಯೋಗವನ್ನು (Tips For Healthy Skin) ಸರಿಯಾಗಿ ಮಾಡುವುದರಿಂದ ಮುಖದಲ್ಲಿ ರಕ್ತದ ಹರಿವನ್ನು ಹೆಚ್ಚಿಸುತ್ತದೆ. ಇದು ಚರ್ಮದ ತೈಲಗಳನ್ನು ಸಮತೋಲನಗೊಳಿಸುತ್ತದೆ. ಇದು ಮೊಡವೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮೊಡವೆಗಳನ್ನು ಕಡಿಮೆ ಮಾಡಲು ಎಲ್ಲರೂ ನೆನಪಿಟ್ಟುಕೊಳ್ಳಬಹುದಾದ ಫೇಸ್ ಯೋಗದ 5 ವಿಷಯಗಳ ಕುರಿತು ಮಾಹಿತಿ (Tips For Healthy Skin) ಇಲ್ಲಿದೆ.

VISTARANEWS.COM


on

By

Tips For Healthy Skin
Koo

ಪಿಸಿಓಎಸ್ (PCOS) ಅಥವಾ ಪಿಸಿಓಡಿ (PCOD), ದೇಹದ ಶಾಖ, ಚರ್ಮದ ರಂಧ್ರಗಳನ್ನು ಮುಚ್ಚಿಹಾಕುವ ಉತ್ಪನ್ನಗಳ ತಪ್ಪು ಬಳಕೆ, ಹಾರ್ಮೋನ್ ಗಳ ಅಸಮತೋಲನ (hormonal imbalances), ನಾವು ಸೇವಿಸುವ ಅಸುರಕ್ಷಿತ ಆಹಾರ.. ಹೀಗೆ ಅನೇಕ ಕಾರಣಗಳಿಂದ ಮುಖದಲ್ಲಿ ಮೊಡವೆ (acne) ಉಂಟಾಗುತ್ತದೆ. ಇದು ಬ್ಯಾಕ್ಟೀರಿಯಾದ ಸೋಂಕಿನಿಂದ (bacterial infection ) ಹೆಚ್ಚಾಗುತ್ತದೆ.

ಉಸಿರಾಟದ ವ್ಯಾಯಾಮ (breathing exercises), ಕೂಲಿಂಗ್ ತಂತ್ರಗಳ (cooling techniques) ಜೊತೆಗೆ ಮುಖದ ಯೋಗವನ್ನು (Tips For Healthy Skin) ಸರಿಯಾಗಿ ಮಾಡುವುದರಿಂದ ಮುಖದಲ್ಲಿ ರಕ್ತದ ಹರಿವನ್ನು ಹೆಚ್ಚಿಸುತ್ತದೆ. ಇದು ಚರ್ಮದ ತೈಲಗಳನ್ನು ಸಮತೋಲನಗೊಳಿಸುತ್ತದೆ. ಇದು ಮೊಡವೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮೊಡವೆಗಳನ್ನು ಕಡಿಮೆ ಮಾಡಲು ನೆನಪಿಟ್ಟುಕೊಳ್ಳಬಹುದಾದ ಫೇಸ್ ಯೋಗದ 5 ವಿಷಯಗಳ ಕುರಿತ ಮಾಹಿತಿ ಇಲ್ಲಿದೆ.


1. ಬಹಳಷ್ಟು ನೀರು ಕುಡಿಯಿರಿ

ಫೇಸ್ ಯೋಗವು ಮುಖದಲ್ಲಿನ ಹೆಚ್ಚುವರಿ ತೈಲವನ್ನು ತೊಡೆದು ಹಾಕಲು ಸಹಾಯ ಮಾಡುತ್ತದೆ. ನೀರಿನಿಂದ ನಿರ್ಗಮಿಸುವ ದೇಹದ ವಿಷಕಾರಿ ದ್ರವವನ್ನು ತೆಗೆದುಹಾಕಿ ಚರ್ಮವನ್ನು ಸ್ವಚ್ಛಗೊಳಿಸುತ್ತದೆ. ನೀರು ಚರ್ಮದ ರಂಧ್ರಗಳನ್ನು ತೆರೆಯಲು ಸಹಾಯ ಮಾಡುತ್ತದೆ ಮತ್ತು ದೇಹದ ತೇವಾಂಶದ ಮಟ್ಟವನ್ನು ಕಾಪಾಡಲು ಸಹಾಯ ಮಾಡುತ್ತದೆ.

2. ಪ್ರಾಣಾಯಾಮ

ಮೊಡವೆ ಪೀಡಿತ ಚರ್ಮಕ್ಕಾಗಿ ಕೂಲಿಂಗ್ ಡೌನ್ ತಂತ್ರಗಳು ಅಥವಾ ಪ್ರಾಣಾಯಾಮವನ್ನು ದಿನಚರಿಯಲ್ಲಿ ಸೇರಿಸಿಕೊಳ್ಳಬೇಕು. ಇದು ಮುಖಕ್ಕೆ ರಕ್ತದ ಹರಿವಿನ ಪ್ರಮಾಣವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

3. ಸರಿಯಾದ ತೈಲವನ್ನು ಬಳಸಿ

ತೆಂಗಿನ ಎಣ್ಣೆಯಂತಹ ಹೆಚ್ಚು ಗಾಢವಾದ ಎಣ್ಣೆಯನ್ನು ಮುಖಕ್ಕೆ ಬಳಸಬೇಡಿ. ಮೊಡವೆಗಳನ್ನು ತೊಡೆದು ಹಾಕಲು ಮತ್ತು ಸುಲಭವಾಗಿ ಚರ್ಮಕ್ಕೆ ಹೀರಿಕೊಳ್ಳಲು ಸಹಾಯವಾಗುವ ಚಹಾ ಮರ ಅಥವಾ ಬೇವಿನ ಎಣ್ಣೆಯಂತಹ ಹಗುರವಾದ ತೈಲಗಳನ್ನು ಬಳಸಿ.

ಇದನ್ನೂ ಓದಿ: Health Tips in Kannada: ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ? ಈ ಸಂಗತಿ ತಿಳಿದುಕೊಂಡಿರಿ

4. ಕನಿಷ್ಠ ಸ್ಪರ್ಶ

ಮುಖದ ಮೇಲೆ ಕನಿಷ್ಠ ಸ್ಪರ್ಶವನ್ನು ಬಳಸುವ ಮೇಕಪ್ ಸಾಮಗ್ರಿಗಳನ್ನು ಬಳಸಿ. ಇದರಿಂದ ಯಾವುದೇ ಮೊಡವೆಗಳು ಉಂಟಾಗುವುದಿಲ್ಲ ಅಥವಾ ಯಾವುದೇ ಬ್ಯಾಕ್ಟೀರಿಯಾ ಸೋಂಕು ಆಗುವುದಿಲ್ಲ. ಒಂದು ಸ್ಥಳದಿಂದ ಇನ್ನೊಂದಕ್ಕೆ ವರ್ಗಾಯಿಸುವುದಿಲ್ಲ.

5. ಮುಖವನ್ನು ತೊಳೆಯುತ್ತಿರಿ

ಸೌಂದರ್ಯ ವರ್ಧಕಗಳು ಚರ್ಮದ ಮೇಲೆ ಬಿಡಬಹುದಾದ ಎಣ್ಣೆಗಳಿಂದ ಮಾಡಲಾಗುತ್ತದೆ. ದೀರ್ಘಕಾಲದವರೆಗೆ ಇರಿಸಲಗುವ ಉತ್ಪನ್ನಗಳು ಹೆಚ್ಚು ಮೊಡವೆಗಳಿಗೆ ಕಾರಣವಾಗಬಹುದು. ಮೇಕಪ್ ನ ಅಗತ್ಯವಿಲ್ಲದೆ ಇದ್ದಾಗ ಚೆನ್ನಾಗಿ ಮುಖವನ್ನು ತೊಳೆಯುವುದರಿಂದ ಚರ್ಮದ ರಂಧ್ರಗಳು ಮುಚ್ಚಿಹೋಗುವುದಿಲ್ಲ ಅಥವಾ ತೈಲಗಳನ್ನು ಬಳಸಿದ ನಂತರ ಮೊಡವೆಗಳನ್ನು ಹುಟ್ಟುಹಾಕುವುದಿಲ್ಲ.

Continue Reading

ಕರ್ನಾಟಕ

Fortis Hospital: ರೋಬೋಟಿಕ್‌ ನೆರವಿನಿಂದ ಇಬ್ಬರಿಗೆ ‘ಸಂಕೀರ್ಣ ಕಿಡ್ನಿ ಕಸಿ’ ಆಪರೇಷನ್ ಸಕ್ಸೆಸ್!

Fortis Hospital: ಕೊನೆಯ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಯೆಮನ್‌ ದೇಶದ 11 ವರ್ಷದ ಬಾಲಕ ಮತ್ತು ಬೆಂಗಳೂರಿನ 34 ವರ್ಷದ ವ್ಯಕ್ತಿಗೆ ರೋಬೋಟಿಕ್‌ ಸಹಾಯದಿಂದ ಅಪರೂಪದ “ಸಂಕೀರ್ಣ ಕಿಡ್ನಿ ಕಸಿ” ಶಸ್ತ್ರಚಿಕಿತ್ಸೆಯನ್ನು ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿ ನಡೆಸಿದೆ ಎಂದು ಯುರೋ ಆಂಕೊಲಾಜಿಸ್ಟ್‌ ಡಾ. ಮೋಹನ್ ಕೇಶವಮೂರ್ತಿ ತಿಳಿಸಿದ್ದಾರೆ.ಆಸ್ಪತ್ರೆಯ ಯುರೋ ಆಂಕೊಲಾಜಿಸ್ಟ್‌ ಡಾ. ಮೋಹನ್ ಕೇಶವಮೂರ್ತಿ ಹಾಗೂ ನೆಫ್ರಾಲಜಿಸ್ಟ್‌ ಡಾ. ಎಸ್‌. ಮಂಜುನಾಥ್ ಅವರ ತಂಡವು ಈ ಶಸ್ತ್ರಚಿಕಿತ್ಸೆ ನಡೆಸಿದೆ.

VISTARANEWS.COM


on

Fortis Hospital doctors team performed a successful complex kidney transplant surgery for two patients with robotic assistance
Koo

ಬೆಂಗಳೂರು: ಕೊನೆಯ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಯೆಮನ್‌ ದೇಶದ 11 ವರ್ಷದ ಬಾಲಕ ಮತ್ತು ಬೆಂಗಳೂರಿನ 34 ವರ್ಷದ ವ್ಯಕ್ತಿಗೆ ರೋಬೋಟಿಕ್‌ ಸಹಾಯದಿಂದ ಅಪರೂಪದ “ಸಂಕೀರ್ಣ ಕಿಡ್ನಿ ಕಸಿ” ಶಸ್ತ್ರಚಿಕಿತ್ಸೆಯನ್ನು ಫೋರ್ಟಿಸ್‌ ಆಸ್ಪತ್ರೆ (Fortis Hospital) ವೈದ್ಯರ ತಂಡ ಯಶಸ್ವಿಯಾಗಿ ನಡೆಸಿದೆ ಎಂದು ಯುರೋ ಆಂಕೊಲಾಜಿಸ್ಟ್‌ ಡಾ. ಮೋಹನ್ ಕೇಶವಮೂರ್ತಿ ಮಾಹಿತಿ ನೀಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೆಮೆನ್‌ ದೇಶದ 11 ವರ್ಷದ ಬಾಲಕ ಮತ್ತು ಬೆಂಗಳೂರಿನ 34 ವರ್ಷದ ವ್ಯಕ್ತಿ ಈ ಇಬ್ಬರಿಗೂ ರೋಬೋಟ್‌ ತಂತ್ರಜ್ಞಾನ ಬಳಸಿ ಯುರೋ ಆಂಕೊಲಾಜಿಸ್ಟ್‌ ಡಾ. ಮೋಹನ್ ಕೇಶವಮೂರ್ತಿ ಹಾಗೂ ನೆಫ್ರಾಲಜಿಸ್ಟ್‌ ಡಾ. ಎಸ್‌. ಮಂಜುನಾಥ್ ಅವರ ತಂಡ ಶಸ್ತ್ರಚಿಕಿತ್ಸೆ ನಡೆಸಿದೆ ಎಂದರು.

ಇದನ್ನೂ ಓದಿ: ICMR Dietary Guidelines: ಊಟದ ಮೊದಲು, ಊಟದ ನಂತರ ಚಹಾ, ಕಾಫಿ ಕುಡಿದರೆ ಏನಾಗುತ್ತದೆ?

ಯೆಮನ್‌ ದೇಶದ 11 ವರ್ಷದ ಅಹ್ಮದ್ ಎಂಬ ಬಾಲಕನು ನಾಲ್ಕನೇ ವಯಸ್ಸಿನಿಂದಲೇ ಮೂತ್ರಪಿಂಡಕ್ಕೆ ಸಂಬಂಧಿಸಿದ ಸ್ಟೆರಾಯ್ಡ್ ರೆಸಿಸ್ಟೆಂಟ್ ನೆಫ್ರೋಟಿಕ್ ಸಿಂಡ್ರೋಮ್ (ಎಸ್‌ಆರ್‌ಎನ್‌ಎಸ್) ನಿಂದ ಬಳಲುತ್ತಿದ್ದರು. ನೆಫ್ರೋಟಿಕ್ ಸಿಂಡ್ರೋಮ್ ಒಂದು ಮೂತ್ರಪಿಂಡದ ಕಾಯಿಲೆಯಾಗಿದ್ದು, ಮೂತ್ರದಲ್ಲಿ ಪ್ರೋಟೀನ್ ಇರುವಿಕೆ, ರಕ್ತದಲ್ಲಿನ ಕಡಿಮೆ ಮಟ್ಟದ ಪ್ರೋಟೀನ್, ಅಧಿಕ ಕೊಲೆಸ್ಟ್ರಾಲ್ ಮತ್ತು ಊತದಿಂದ ಕೂಡಿತ್ತು. ಎಸ್‌ಆರ್‌ಎನ್‌ಎಸ್‌ನಲ್ಲಿ, ಸ್ಟಿರಾಯ್ಡ್‌ಗಳ ಚಿಕಿತ್ಸೆಯ ಹೊರತಾಗಿಯೂ ಮೂತ್ರಪಿಂಡಗಳು ಹೆಚ್ಚಿನ ಪ್ರಮಾಣದ ಪ್ರೋಟೀನ್‌ಗಳನ್ನು ಮೂತ್ರಕ್ಕೆ ಸೋರಿಕೆ ಮಾಡುವುದನ್ನು ಮುಂದುವರಿಸುತ್ತವೆ ಎಂದು ವಿವರಿಸಿದರು.

ಸ್ಟೀರಾಯ್ಡ್‌ಗಳಿಗೆ ಈ ಪ್ರತಿರೋಧವು ನಿರಂತರ ಅಥವಾ ಮರುಕಳಿಸುವ ನೆಫ್ರೋಟಿಕ್ ಸಿಂಡ್ರೋಮ್‌ಗೆ ಕಾರಣವಾಗಬಹುದು, ಇದರಿಂದ ಭವಿಷ್ಯದಲ್ಲಿ ದೀರ್ಘಕಾಲದ ಮೂತ್ರಪಿಂಡ ಕಾಯಿಲೆಗೆ ಕಾರಣವಾಗಬಹುದು. ಇದೇ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕನಿಗೆ ಸಾಕಷ್ಟು ಕಡೆ ಚಿಕಿತ್ಸೆ ಕೊಡಿಸಿದ್ದರೂ ಸಹ ಫಲಕಾರಿಯಾಗದೆ ಕಾಯಿಲೆ ಕೊನೆಯ ಹಂತಕ್ಕೆ ಬಂದು ತಲುಪಿತ್ತು. ಬಳಿಕ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಬಾಲಕನ ವಯಸ್ಸು ಕಡಿಮೆ ಇರುವ ಕಾರಣ, ಸಾಕಷ್ಟು ಮುತುವರ್ಜಿ ವಹಿಸಿ ರೋಬೋಟ್‌ ಸಹಾಯದ ಮೂಲಕ ಬಾಲಕನಿಗೆ ಕಿಡ್ನಿ ಕಸಿ ಮಾಡಲು ನಿರ್ಣಯಿಸಿದೆವು. ರೋಬೋಟ್‌ ಸಹಾಯದಿಂದ ಮಾತ್ರವೇ ನಿಖರವಾಗಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ಬಾಲಕನ ಚಿಕ್ಕಮ್ಮನ ಒಂದು ಕಿಡ್ನಿಯನ್ನು ಹುಡುಗನಿಗೆ ಶಸ್ತ್ರಚಿಕಿತ್ಸೆಯ ಮೂಲಕ ಅಳವಡಿಸಲಾಯಿತು. ಇದೀಗ ಬಾಲಕ ಆರೋಗ್ಯವಾಗಿದ್ದು, ಶಸ್ತ್ರಚಿಕಿತ್ಸೆಯ ಐದು ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಯಿತು ಎಂದು ತಿಳಿಸಿದರು.

ಮತ್ತೊಂದು ಪ್ರಕರಣದಲ್ಲಿ ಬೆಂಗಳೂರಿನ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದ 34 ವರ್ಷದ ಚೇತನ್, ಮೊದಲಿನಿಂದಲೂ ಕೇವಲ ಒಂದು ಕಿಡ್ನಿಯನ್ನು ಮಾತ್ರ ಹೊಂದಿದ್ದರು, ಜತೆಗೆ ಅಧಿಕ ರಕ್ತದೊತ್ತಡ ಇದ್ದ ಕಾರಣ ಅವರ ಒಂದು ಕಿಡ್ನಿಯೂ ಸಹ ಕಾಯಿಲೆಗೆ ತುತ್ತಾಗಿತ್ತು, ಕೊನೆಯ ಹಂತಕ್ಕೆ ತಲುಪಿದ್ದರಿಂದ ಇವರ ಜೀವಕ್ಕೂ ಆಪತ್ತು ಕಾದಿತ್ತು. ಹೀಗಾಗಿ ಇವರಿಗೆ 74 ವರ್ಷದ ಸ್ವಂತ ತಂದೆಯೇ ತಮ್ಮ ಕಿಡ್ನಿಯನ್ನು ದಾನ ಮಾಡಿದ್ದಾರೆ. ಇವರಿಗೂ ಸಹ ರೋಬೋಟ್‌ ಸಹಾಯದ ಮೂಲಕವೇ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಯಶಸ್ವಿಯಾಗಿದೆ ಎಂದು ಅವರು ವಿವರಿಸಿದರು.

ಇದನ್ನೂ ಒದಿ: Google Update: ಕೃತಕ ಬುದ್ಧಿಮತ್ತೆ, ವಂಚನೆ ತಡೆಯಲು ಅಲರ್ಟ್‌; ಗೂಗಲ್‌ ಹೊಸ ಘೋಷಣೆಗಳು ಏನೇನು?

ರೋಬೋಟ್‌ ಶಸ್ತ್ರಚಿಕಿತ್ಸೆಯು ಹೆಚ್ಚು ನಿಖರವಾದ ಛೇದನವನ್ನು ಅನುಸರಿಸಲಿದ್ದು, ಇತರೆ ಯಾವುದೇ ಅಂಗಾಂಗಳಿಗೆ ಘಾಸಿ ಮಾಡುವುದಿಲ್ಲ, ರೋಬೋಟಿಕ್‌ ಶಸ್ತ್ರಚಿಕಿತ್ಸೆಯಿಂದ ವೇಗವಾಗಿಯೂ ಚೇತರಿಸಿಕೊಳ್ಳಲು ನೆರವಾಗಲಿದೆ ಎಂದು ಹೇಳಿದರು.

Continue Reading

ವಿಜಯನಗರ

Vijayanagara News: ಖಾಸಗಿ ಆಸ್ಪತ್ರೆಗಳು ಚಿಕಿತ್ಸಾ ಲೋಪ ಎಸಗಿದರೆ ಕಾನೂನು ಕ್ರಮ: ಡಿಸಿ ಎಚ್ಚರಿಕೆ

Vijayanagara News: ಹೊಸಪೇಟೆ ನಗರದ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಸರಿಯಾಗಿ ಚಿಕಿತ್ಸೆ ನೀಡದೇ ಸಾವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯ ಸಂಘ ಸಂಸ್ಥೆಗಳಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಎಸ್ಪಿ ಶ್ರೀಹರಿಬಾಬು ಅವರ ನೇತೃತ್ವದಲ್ಲಿ ವಿಜಯನಗರ ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಭೆ ನಡೆಯಿತು.

VISTARANEWS.COM


on

private hospitals heads and health department officers Meeting at vijayanagara DC office
Koo

ಹೊಸಪೇಟೆ: ನಗರದ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಸರಿಯಾಗಿ ಚಿಕಿತ್ಸೆ ನೀಡದೇ ಸಾವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯ ಸಂಘ ಸಂಸ್ಥೆಗಳಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಎಸ್ಪಿ ಶ್ರೀಹರಿಬಾಬು ಅವರ ನೇತೃತ್ವದಲ್ಲಿ ವಿಜಯನಗರ ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಡಿಸಿ ಕಚೇರಿ ಸಭಾಂಗಣದಲ್ಲಿ (Vijayanagara News) ಮಂಗಳವಾರ ಸಭೆ ನಡೆಯಿತು.

ಈ ವೇಳೆ ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ್‌ ಮಾತನಾಡಿ, ಸರಿಯಾಗಿ ಚಿಕಿತ್ಸೆ ಸಿಗದೇ ಖಾಸಗಿ ಆಸ್ಪತ್ರೆಗಳಲ್ಲಿ ಸಾವುಗಳು ಸಂಭವಿಸುತ್ತಿವೆ ಎನ್ನುವ ದೂರಿನ ಬಗ್ಗೆ ಖಾಸಗಿ ಆಸ್ಪತ್ರೆಗಳು ಗಂಭೀರವಾಗಿ ಪರಿಗಣಿಸಬೇಕು. ಖಾಸಗಿ ಆಸ್ಪತ್ರೆಗಳಿಗೆ ಬರುವ ಯಾವುದೇ ರೋಗಿಗಳು ಮತ್ತು ಆ ರೋಗಿಯ ಸಂಬಂಧಿಕರೊಂದಿಗೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯು ಸಹನೆ, ಸಂಯಮ ಮತ್ತು ತಾಳ್ಮೆಯಿಂದ ನಡೆದುಕೊಳ್ಳಬೇಕು. ದುರ್ವರ್ತನೆ ತೋರಬಾರದು. ಮಾನವೀಯತೆಯಿಂದ ನಡೆದುಕೊಳ್ಳಬೇಕು. ಲೋಪ ಎಸಗಿರುವುದು ಕಂಡುಬಂದಲ್ಲಿ ಯಾರೇ ಆಗಲಿ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: Facebook, Instagram Down: ಫೇಸ್‌ಬುಕ್‌, ಇನ್​ಸ್ಟಾಗ್ರಾಮ್​ ಸರ್ವರ್​ ಡೌನ್​; ಬಳಕೆದಾರರ ಪರದಾಟ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಮಾತನಾಡಿ, ವೈದ್ಯರನ್ನು ದೇವರ ಸಮಾನ ಎಂದು ನಮ್ಮ ಸಮಾಜವು ವೈದ್ಯರಿಗೆ ಗೌರವಯುತ ಸ್ಥಾನ ನೀಡಿದೆ. ಕೆಲವು ವೈದ್ಯರು ಮತ್ತು ಅವರ ಆಸ್ಪತ್ರೆಗಳಲ್ಲಿನ ಸಿಬ್ಬಂದಿ ತೋರುವ ನಿರ್ಲಕ್ಷ್ಯದಿಂದಾಗಿ ಸಾವುಗಳು ಸಂಭವಿಸಿ ಇಡೀ ವೈದ್ಯ ಸಮೂಹವನ್ನೇ ಕೆಟ್ಟ ದೃಷ್ಟಿಯಿಂದ ನೋಡುವಂತಾಗುತ್ತದೆ. ವೈದ್ಯರು ಮತ್ತು ಸಾರ್ವಜನಿಕ ಮಧ್ಯೆ ಇರುವ ನಂಬಿಕೆಗೆ ಧಕ್ಕೆ ಬಾರದ ಹಾಗೆ ಮತ್ತು ಸಾರ್ವಜನಿಕರಿಗೆ ವೈದ್ಯರ ಮೇಲೆ ವಿಶ್ವಾಸ ಬರುವ ಹಾಗೆ ಎಲ್ಲಾ ವೈದ್ಯರು ಮತ್ತು ಆಯಾ ಆಸ್ಪತ್ರೆಗಳಲ್ಲಿನ ಸಿಬ್ಬಂದಿಯು ಪ್ರಾಮಾಣಿಕಯಿಂದ, ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲದಂತೆ ಕಾರ್ಯ ನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಡಿಎಚ್‌ಒ ಡಾ. ಶಂಕರ್‌ ನಾಯ್ಕ ಮಾತನಾಡಿ, ಖಾಸಗಿ ಆಸ್ಪತ್ರೆಗಳು ಕೆಪಿಎಂಇ ಕಾಯ್ದೆಯ ಅನುಸಾರವೇ ಇರಬೇಕು. ನೋಂದಣಿ ಸಮಯದಲ್ಲಿ ಯಾವ ವೈದ್ಯರು ಮತ್ತು ಯಾವ ಸಿಬ್ಬಂದಿಯನ್ನು ಡಿಕ್ಲೆರೇಷನ್ ಮಾಡಲಾಗಿರುತ್ತದವೋ ಅದೇ ರೀತಿಯ ವೈದ್ಯರು ಮತ್ತು ಅವಶ್ಯಕ ಸಿಬ್ಬಂದಿಯನ್ನು ಆಸ್ಪತ್ರೆಯು ಹೊಂದಿರಬೇಕು. ಇಲ್ಲದಿದ್ದರೆ ಪರವಾನಿಗೆ ರದ್ದುಪಡಿಸಲಾಗುವುದು.

ಯಾವುದೇ ಖಾಸಗಿ ಆಸ್ಪತ್ರೆಗಳು ಕೆಪಿಎಂಇ ಕಾಯ್ದೆಯನ್ನು ಉಲ್ಲಂಘಿಸಿರುವುದು ಗೊತ್ತಾದಲ್ಲಿ ಅಂತಹ ಆಸ್ಪತ್ರೆಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಆಸ್ಪತ್ರೆಯಲ್ಲಿನ ಬಯೋಮೆಡಿಕಲ್ ತ್ಯಾಜ್ಯವನ್ನು ನಿಯಮಾನುಸಾರ ವಿಲೆಗೆ ಕ್ರಮವಹಿಸದಿದ್ದಲ್ಲಿ ಸಹ ಕ್ರಿಮಿನಲ್ ಮೊಕದ್ದಮೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಖಾಸಗಿ ಆಸ್ಪತ್ರೆಯ ಎಲ್ಲಾ ಕೋಣೆಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರವನ್ನು ಪ್ರದರ್ಶಿಸಿ ಅದೇ ರೀತಿ ಪಾಲನೆ ಮಾಡಬೇಕು. ನಿಗದಿಪಡಿಸಿದ ದರಕ್ಕಿಂತ ಅನವಶ್ಯಕವಾಗಿ ಹೆಚ್ಚಿನ ಹಣ ಪಡೆಯಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.

ಇದನ್ನೂ ಓದಿ: Gold Rate Today: ಬಂಗಾರದ ಬೆಲೆ ಏರಿಕೆ; ಮಾರುಕಟ್ಟೆ ದರ ಇಂದು ಹೀಗಿದೆ

ಅಪ್ರಾಪ್ತ ವಯಸ್ಸಿನ ಮಹಿಳೆಯು ಗರ್ಭಿಣಿ ಎಂದು ಗೊತ್ತಾದಲ್ಲಿ ಈ ಬಗ್ಗೆ ಕೂಡಲೇ 1098 ಅಥವಾ ಆರೋಗ್ಯ ಇಲಾಖೆ ಅಥವಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಬೇಕು. ಗಂಡಾಂತರ ಗರ್ಭಿಣಿ ಎಂದು ತಿಳಿದಲ್ಲಿ ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಸಾಂಕ್ರಾಮಿಕ ರೋಗಗಳು, ನಾಯಿ ಕಡಿತ, ಹಾವು ಕಡಿತ ಪ್ರಕರಣಗಳ ಬಗ್ಗೆ ಸಹ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಎನ್ನುವ ನಿಯಮವನ್ನು ಖಾಸಗಿ ಆಸ್ಪತ್ರೆಗಳಲ್ಲಿನ ವೈದ್ಯರು ಮತ್ತು ಸಿಬ್ಬಂದಿಯು ತಪ್ಪದೇ ಪಾಲನೆ ಮಾಡಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಯಿತು.

ಆಸ್ಪತ್ರೆಗಳಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆ ಪ್ರಕರಣಗಳು ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಕೆಪಿಎಂಇ ಕಾಯಿದೆ ಅನುಸಾರ ಕಾರ್ಯನಿರ್ವಹಿಸದೇ ನಿಯಮ ಉಲ್ಲಂಘಿಸಿ ಲೋಪ ಎಸಗಿರುವುದು ಕಂಡುಬಂದಲ್ಲಿ ಕೆಪಿಎಂಇ ಕಾಯಿದೆ ಅಡಿ ಕ್ರಮ ಜರುಗಿಸಲಾಗುವುದು ಎಂದು ಸಭೆಯಲ್ಲಿ ಎಚ್ಚರಿಕೆ ನೀಡಲಾಯಿತು.

ಕೆಪಿಎಂಇ ಕಾಯಿದೆ ಅಡಿಯಲ್ಲಿ ನೋಂದಣಿ ಆಗಿರುವ ಸಂದರ್ಭದಲ್ಲಿ ಖಾಸಗಿ ಆಸ್ಪತ್ರಯ ವೈದ್ಯರು ಹಾಗೂ ಸಿಬ್ಬಂದಿಯ ಹಾಜರಾತಿ ಮತ್ತು ವೇತನದ ವಿವರಗಳನ್ನು ಪರಿಶೀಲಿಸಲು ತಾಲೂಕುಮಟ್ಟದ ತಂಡಗಳನ್ನು ರಚಿಸಿ ಪರಿಶೀಲಿಸಿ ವರದಿಯನ್ನು ಸಲ್ಲಿಸುವಂತೆ ಸಹ ಸಭೆಯಲ್ಲಿ ಸೂಚಿಸಲಾಯಿತು.

ಇದನ್ನೂ ಓದಿ: Miyazaki Mango: ಧಾರವಾಡಕ್ಕೆ ಬಂತು 2.7 ಲಕ್ಷ ರೂ. ಬೆಲೆಯ ಮಾವು!

ಸಭೆಯಲ್ಲಿ ಐಎಂಎ ಅಧ್ಯಕ್ಷ ಡಾ. ಶ್ರೀನಿವಾಸ ದೇಶಪಾಂಡೆ ಹಾಗೂ ಜಿಲ್ಲೆಯ ವಿವಿಧ ಖಾಸಗಿ ಆಸ್ಪತ್ರೆಗಳ ವೈದ್ಯರು ಮತ್ತು ಆರೋಗ್ಯ ಇಲಾಖೆಯ ಎಲ್ಲ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಮತ್ತು ಇತರರು ಇದ್ದರು.

Continue Reading

ಆರೋಗ್ಯ

ICMR Dietary Guidelines: ಊಟದ ಮೊದಲು, ಊಟದ ನಂತರ ಚಹಾ, ಕಾಫಿ ಕುಡಿದರೆ ಏನಾಗುತ್ತದೆ?

ಊಟದ ಮೊದಲು, ಅನಂತರ ಚಹಾ, ಕಾಫಿ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಟೀ ಮತ್ತು ಕಾಫಿಯಲ್ಲಿ ಇರುವ ಕೆಫೀನ್ ಕೇಂದ್ರ ನರಮಂಡಲವನ್ನು ಉತ್ತೇಜಿಸುತ್ತದೆ ಮತ್ತು ಕಾಫಿ, ಟೀ ಮೇಲಿನ ಅವಲಂಬನೆಯನ್ನು ಹೆಚ್ಚಿಸುತ್ತದೆ ಎಂದು ಐಸಿಎಂಆರ್ ಸಂಶೋಧಕರು (ICMR Dietary Guidelines) ತಿಳಿಸಿದ್ದಾರೆ.

VISTARANEWS.COM


on

By

ICMR Dietary Guidelines
Koo

ಊಟದ ಮೊದಲು ಮತ್ತು ಅನಂತರ (Before And After Meals) ಚಹಾ (tea) ಅಥವಾ ಕಾಫಿಯನ್ನು (coffee) ಸೇವಿಸಲೇಬಾರದು ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ತನ್ನ ಆರೋಗ್ಯಕರ ಜೀವನಕ್ಕಾಗಿ ಆಹಾರ ಕ್ರಮದ ಕುರಿತಾಗಿ ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ (ICMR Dietary Guidelines) ಹೇಳಿದೆ. ಟೀ ಮತ್ತು ಕಾಫಿಯಲ್ಲಿ ಇರುವ ಕೆಫೀನ್ (caffeine) ಕೇಂದ್ರ ನರಮಂಡಲವನ್ನು ಉತ್ತೇಜಿಸುತ್ತದೆ ಮತ್ತು ಕಾಫಿ, ಟೀ ಮೇಲಿನ ಅವಲಂಬನೆಯನ್ನು ಹೆಚ್ಚಿಸುತ್ತದೆ ಎಂದು ಐಸಿಎಂಆರ್ ಸಂಶೋಧಕರು ತಿಳಿಸಿದ್ದಾರೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಸಂಶೋಧಕರು ಚಹಾ ಮತ್ತು ಕಾಫಿ ಸೇವನೆಯಲ್ಲಿ ಮಿತವಾಗಿರುವಂತೆ ಸಲಹೆ ನೀಡಿದ್ದಾರೆ. ಭಾರತೀಯ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿರುವ ಈ ಎರಡು ಪಾನೀಯಗಳು ಆರೋಗ್ಯಕರ ಅಭ್ಯಾಸವಲ್ಲ ಎಂದು ತಿಳಿಸಿದ್ದಾರೆ.

ವೈದ್ಯಕೀಯ ಸಂಸ್ಥೆಯು ಇತ್ತೀಚೆಗೆ 17 ಹೊಸ ಆಹಾರ ಮಾರ್ಗಸೂಚಿಗಳನ್ನು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ನ್ಯೂಟ್ರಿಷನ್ (NIN) ಸಹಭಾಗಿತ್ವದಲ್ಲಿ ಪರಿಚಯಿಸಿದೆ. ಇದು ಭಾರತದಾದ್ಯಂತ ಆರೋಗ್ಯಕರ ಆಹಾರ ಪದ್ಧತಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಈ ಮಾರ್ಗಸೂಚಿಗಳು ವೈವಿಧ್ಯಮಯ ಆಹಾರ ಮತ್ತು ಸಕ್ರಿಯ ಜೀವನಶೈಲಿಯ ಮಹತ್ವವನ್ನು ಒತ್ತಿಹೇಳುತ್ತವೆ.

ಸಾಂಸ್ಕೃತಿಕ ಪ್ರಾಮುಖ್ಯತೆಯನ್ನು ಗುರುತಿಸುವಾಗ, ವೈದ್ಯಕೀಯ ತಜ್ಞರು ಸಂಭಾವ್ಯ ಆರೋಗ್ಯದ ಕಾಳಜಿಯಿಂದಾಗಿ ಚಹಾ ಮತ್ತು ಕಾಫಿಯ ಅತಿಯಾದ ಸೇವನೆಯ ವಿರುದ್ಧ ಎಚ್ಚರಿಕೆ ನೀಡಿದ್ದಾರೆ.

ಯಾಕೆ ಒಳ್ಳೆಯದಲ್ಲ?

ಐಸಿಎಂಆರ್ ಸಂಶೋಧಕರು ಟೀ ಮತ್ತು ಕಾಫಿಯು ಕೆಫೀನ್ ಅನ್ನು ಒಳಗೊಂಡಿರುತ್ತದೆ, ಇದು ಕೇಂದ್ರ ನರಮಂಡಲವನ್ನು ಉತ್ತೇಜಿಸುತ್ತದೆ ಮತ್ತು ಶಾರೀರಿಕ ಅವಲಂಬನೆಯನ್ನು ಪ್ರೇರೇಪಿಸುತ್ತದೆ ಎಂದು ವಿವರಿಸಿದ್ದಾರೆ.

ಮಾರ್ಗಸೂಚಿಗಳು ಜನಪ್ರಿಯ ಪಾನೀಯಗಳ ಕೆಫೀನ್ ಅಂಶದ ಮೇಲೆ ಬೆಳಕು ಚೆಲ್ಲಿದೆ. 150 ಮಿಲಿ ಕಪ್ ಕುದಿಸಿದ ಕಾಫಿಯು 80 – 120 ಮಿಲಿ ಗ್ರಾಂ ಕೆಫೀನ್ ಅನ್ನು ಹೊಂದಿರುತ್ತದೆ. ಇನ್ ಸ್ಟೆಂಟ್ ಕಾಫಿ 50 – 65 ಮಿಲಿ ಗ್ರಾಂ ಮತ್ತು ಚಹಾವು 30 – 65 ಮಿಲಿ ಗ್ರಾಂ ಕೆಫೀನ್ ಹೊಂದಿರುತ್ತದೆ ಎಂದು ಐಸಿಎಂಆರ್ ತಿಳಿಸಿದೆ.


ಎಷ್ಟು ಸೇವಿಸಬಹುದು?

ಐಸಿಎಂಆರ್ ಪ್ರತಿದಿನ ಕೇವಲ 300 ಮಿಲಿ ಗ್ರಾಂ ಕೆಫೀನ್ ಸೇವನೆ ಮಾಡಬಹುದು ಎಂದು ಹೇಳಿದೆ. ಟೀ, ಕಾಫಿಯಲ್ಲಿರುವ ಕೆಫೀನ್ ಅಂಶ ದೇಹದಲ್ಲಿ ಕಬ್ಬಿಣವನ್ನು ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡುವ ಕಾರಣ ಊಟಕ್ಕೆ ಮೊದಲು ಮತ್ತು ಅನಂತರ ಕನಿಷ್ಠ ಒಂದು ಗಂಟೆ ಚಹಾ ಅಥವಾ ಕಾಫಿಯನ್ನು ತ್ಯಜಿಸಲು ವೈದ್ಯಕೀಯ ಸಂಸ್ಥೆ ಸಲಹೆ ನೀಡಿದೆ.

ಕೆಫೀನ್‌ಗಳು ಹೊಟ್ಟೆಯಲ್ಲಿ ಕಬ್ಬಿಣವನ್ನು ಹಿಡಿದಿಟ್ಟುಕೊಳ್ಳುತ್ತದೆ. ಇದರಿಂದ ದೇಹಕ್ಕೆ ಕಬ್ಬಿಣವನ್ನು ಸರಿಯಾಗಿ ಹೀರಿಕೊಳ್ಳಲು ಕಷ್ಟವಾಗುತ್ತದೆ. ಇದು ಕಬ್ಬಿಣದ ಕೊರತೆ ಮತ್ತು ರಕ್ತಹೀನತೆಯಂತಹ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅತಿಯಾದ ಕಾಫಿ ಸೇವನೆಯು ಅಧಿಕ ರಕ್ತದೊತ್ತಡ ಮತ್ತು ಹೃದಯದ ಆರೋಗ್ಯಕ್ಕೂ ಒಳ್ಳೆಯದಲ್ಲ ಎಂದು ಹೇಳಿದೆ.

ಇದನ್ನೂ ಓದಿ: ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ

ಬ್ಲ್ಯಾಕ್‌ ಚಹಾದಿಂದ ಪ್ರಯೋಜನ

ಹಾಲು ಇಲ್ಲದೆ ಚಹಾವನ್ನು ಕುಡಿಯುವುದರಿಂದ ರಕ್ತ ಪರಿಚಲನೆಯಲ್ಲಿ ಸುಧಾರಣೆ, ರಕ್ತನಾಳಗಳ ಸಮಸ್ಯೆ ಮತ್ತು ಹೊಟ್ಟೆಯ ಕ್ಯಾನ್ಸರ್‌ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಐಸಿಎಂಆರ್ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಆಹಾರದಲ್ಲಿ ಏನಿರಬೇಕು?

ಆಹಾರಗಳಲ್ಲಿ ಹಣ್ಣು, ತರಕಾರಿ, ಧಾನ್ಯ, ನೇರ ಮಾಂಸ ಮತ್ತು ಸಮುದ್ರಾಹಾರವನ್ನು ಶಿಫಾರಸು ಮಾಡಿರುವ ಐಸಿಎಂಆರ್ ಸಂಶೋಧಕರು ತೈಲ, ಸಕ್ಕರೆ ಮತ್ತು ಉಪ್ಪಿನ ಸೇವನೆಯನ್ನು ಸೀಮಿತಗೊಳಿಸುವಂತೆ ಸೂಚಿಸಿದ್ದಾರೆ.

Continue Reading
Advertisement
Amit Shah
ದೇಶ16 mins ago

Amit Shah: ಪ್ರಚಾರದ ವೇಳೆ ಕೇಜ್ರಿವಾಲ್‌ ನೀಡಿದ ಹೇಳಿಕೆಯಿಂದ ನ್ಯಾಯಾಂಗ ನಿಂದನೆ; ಅಮಿತ್‌ ಶಾ ವಾಗ್ದಾಳಿ

PBKS vs RR
ಕ್ರೀಡೆ21 mins ago

PBKS vs RR: ಸ್ಯಾಮ್‌ ಕರನ್‌ ಏಕಾಂಗಿ ಬ್ಯಾಟಿಂಗ್​ ಹೋರಾಟಕ್ಕೆ ತಲೆ ಬಾಗಿದ ರಾಜಸ್ಥಾನ್​

Anjali Murder Case
ಕ್ರೈಂ39 mins ago

Anjali Murder Case: ಅಂಜಲಿ‌ ಕೊಲೆ‌ ಪ್ರಕರಣದಲ್ಲಿ ಕರ್ತವ್ಯ ಲೋಪ; ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

Participation of young women in science technology information and communication fields should be increased says Isha Ambani
ದೇಶ50 mins ago

Isha Ambani: ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಶ್ಲಾಘಿಸಿದ ಇಶಾ ಅಂಬಾನಿ

Retired Teacher G T Bhatt Bommanahalli 80th celebration programme on May 19
ಉತ್ತರ ಕನ್ನಡ57 mins ago

Uttara Kannada News: ಮೇ 19ರಂದು ನಿವೃತ್ತ ಶಿಕ್ಷಕ ಜಿ. ಟಿ. ಭಟ್ ಬೊಮ್ಮನಹಳ್ಳಿ 80ರ ಸಂಭ್ರಮ

Dalita Sangharsha samiti demands that Minister HK Patil should be dismissed from the Cabinet
ರಾಯಚೂರು1 hour ago

Raichur News: 371 ಜೆ ಮೀಸಲಾತಿ ಮುಂದುವರಿಸದಂತೆ ಸಿಎಂಗೆ ಪತ್ರ ಬರೆದ ಎಚ್.ಕೆ. ಪಾಟೀಲ್ ವಜಾಗೆ ದಸಂಸ ಆಗ್ರಹ

Sandeep Lamichhane
ಕ್ರೀಡೆ1 hour ago

Sandeep Lamichhane: ಅತ್ಯಾಚಾರ ಆರೋಪದಲ್ಲಿ 8 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕ್ರಿಕೆಟಿಗ ಲಮಿಚಾನೆಗೆ ರಿಲೀಫ್; ನಿರಪರಾಧಿ ಎಂದ ಕೋರ್ಟ್​

Shyam Rangeela
ದೇಶ1 hour ago

Shyam Rangeela: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದ ಕಲಾವಿದನ ನಾಮಪತ್ರ ತಿರಸ್ಕಾರ!

Terrorist Arrested
ಕರ್ನಾಟಕ2 hours ago

Terrorist Arrested: ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರನ ಬಂಧನ

Monsoon 2024
ದೇಶ2 hours ago

Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ16 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ19 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌