ಮಡಿಕೇರಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಅಂದು ವಯಸ್ಸಾಯಿತು ಎಂದು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗೆ ಇಳಿಸಿದರು. ಈಗ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿ ದೊಡ್ಡ ಹುದ್ದೆ ಕೊಟ್ಟಿದ್ದೇವೆ ಎಂದು ಹೇಳುತ್ತಿದ್ದಾರೆ. ಹಾಗಾದರೆ ಅವರಿಗೆ ಈಗ ವಯಸ್ಸು ಹಿಂದಕ್ಕೆ ಹೋಯಿತಾ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಇದು ಬಿಜೆಪಿಯವರ ತಂತ್ರವಷ್ಟೇ. ಯಡಿಯೂರಪ್ಪ ಅವರನ್ನು ಸಮಾಧಾನ ಮಾಡುವ ಸಲುವಾಗಿ ಮತ್ತು ಚುನಾವಣೆಗಾಗಿ ಅವರನ್ನು ಸೇರ್ಪಡೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು.
ಮತ್ತೆ ಮುಖ್ಯಮಂತ್ರಿ ಮಾಡ್ತಾರಾ?
ಈಗ ಇರುವ ಮುಖ್ಯಮಂತ್ರಿಯನ್ನು ತೆಗೆದು ಯಡಿಯೂರಪ್ಪ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡುತ್ತಾರಾ? ಹೆಚ್ಚು ಅಂದರೆ ಯಡಿಯೂರಪ್ಪ ಅವರ ಮಗನಿಗೆ ಟಿಕೆಟ್ ಕೊಡಿಸುತ್ತಾರೆ ಅಷ್ಟೇ ಎಂದು ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ | ನಾವೂ ಮೊಟ್ಟೆ ಎಸೆದೇ ಬಂದಿದ್ದೇವೆ, ನಾವು ಪ್ರತಿಭಟಿಸಿದ್ರೆ ಸಿಎಂ ಎಲ್ಲೂ ಓಡಾಡೋ ಹಾಗಿಲ್ಲ; ಸಿದ್ದರಾಮಯ್ಯ ಕಿಡಿ