ಯಲ್ಲಾಪುರ: ನಮ್ಮ ತಾಲೂಕಿನಲ್ಲಿ ಸಹಕಾರಿ ಕ್ಷೇತ್ರವು (Co-operative sector) ಉತ್ತಮ ವಾತಾವರಣವನ್ನು ಸೃಷ್ಟಿಸಿದೆ, ಅಂತೆಯೇ ಗ್ರಾಮೀಣ (Rural) ಭಾಗದ ರೈತರ (farmer) ಬೆನ್ನೆಲುಬಾಗಿ ನಿಂತಿದೆ ಎಂದು ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಆರ್.ಎನ್. ಹೆಗಡೆ ಗೋರ್ಸಗದ್ದೆ ತಿಳಿಸಿದರು.
ಪಟ್ಟಣದ ವೆಂಕಟರಮಣ ಮಠದಲ್ಲಿ ಜರುಗಿದ ಯಲ್ಲಾಪುರ ಅರ್ಬನ್ ಕೋ ಆಪರೇಟಿವ್ ಬ್ಯಾಂಕಿನ ಬೆಳ್ಳಿ ಹಬ್ಬ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜನರಿಗೆ ಅತ್ಯಂತ ಸಮೀಪದಲ್ಲಿ, ಸುಲಭವಾಗಿ ಕೈಗೆಟಕುವಂತೆ ವ್ಯವಹಾರ ಒದಗಿಸುವಲ್ಲಿ ಸಹಕಾರಿ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತಿದೆ. ಸಹಕಾರಿ ವಲಯದ ಸಬಲೀಕರಣ ಆಗಬೇಕಿದೆ. ಸಿಬ್ಬಂದಿಗಳ, ಆಡಳಿತ ಮಂಡಳಿಯ ಉತ್ತಮ ಆಳ್ವಿಕೆಯ ಫಲವಾಗಿ ಈ ಸಂಸ್ಥೆಯು ಉತ್ತಮವಾಗಿ ಬೆಳೆದು ಬಂದಿದೆ. ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಉತ್ತಮ ಆಡಳಿತದೊಂದಿಗೆ ಸಂಸ್ಥೆ ಮುಂದುವರೆಯಲಿ ಎಂಬುದು ನನ್ನ ಆಶಯ ಎಂದು ಹೇಳಿದರು.
ಇದನ್ನೂ ಓದಿ: The Kerala Story : ಕೇರಳ ಸ್ಟೋರಿ ಸಿನಿಮಾ ನೋಡಲು ರಜೆ ಕೊಟ್ಟ ಕಾಲೇಜು, ವಿರೋಧ ವ್ಯಕ್ತವಾದ ಬಳಿಕ ಹಿಂದೇಟು
ಶ್ರೇಷ್ಠ ಸಹಕಾರಿ ಪ್ರಶಸ್ತಿ ಪುರಸ್ಕೃತ ಜಿ.ಎನ್. ಹೆಗಡೆ ಹಿರೇಸರ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯನ್ನು ಸಹಕಾರಿ ಕ್ಷೇತ್ರಕ್ಕೆ ತಂದು, ಎಲ್ಲಾ ವಿಭಾಗದ ಸರ್ವತೋಮುಖ ಅಭಿವೃದ್ದಿ ಮಾಡಬೇಕು ಎಂಬುದೇ ಎಲ್ಲಾ ಸಹಕಾರಿಗಳ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಯು.ಕೆ. ಬ್ಯಾಂಕ್ ಅಧ್ಯಕ್ಷ ಪ್ರಮೋದ ಹೆಗಡೆ ಮಾತನಾಡಿ, ಉತ್ತಮ ತಂಡವು ಈ ಸಂಸ್ಥೆಯನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಸಂಸ್ಥೆಯು ನಮ್ಮ ಊರಿನ ಹೆಸರನ್ನು ಸಹಕಾರಿ ಕ್ಷೇತ್ರದಲ್ಲಿ ಬೆಳೆಸುತ್ತಿದೆ. ಇದು ಜನ ಸಾಮಾನ್ಯರ ಬ್ಯಾಂಕ್ ಆಗಿದೆ. ಮಧ್ಯಮ ವರ್ಗದ ಜನರ ಕಷ್ಟಗಳಿಗೆ ಸ್ಪಂದಿಸುವ ಮೂಲಕ ಜನರ ಮನಸ್ಸಿನಲ್ಲಿ ಮನೆ ಮಾಡಿದೆ. ರಾಷ್ಟ್ರೀಯ ಬ್ಯಾಂಕ್‌ಗಳಿಗೆ ಪೈಪೋಟಿ ನೀಡುವಂತೆ ಸಹಕಾರಿ ಸಂಸ್ಥೆಗಳು ಬೆಳೆಯುವಂತೆ ಆಗಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ ಪಡೆಯಲು ಜನ ಸಾಮಾನ್ಯರು ಪರದಾಡಬೇಕು. ಆದರೆ ಸಹಕಾರಿ ಬ್ಯಾಂಕ್‌ಗಳು ಜನರ ಕಷ್ಟಕ್ಕೆ ಸ್ಪಂದಿಸಿ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪರಶುರಾಮ ಆಚಾರಿ ವಹಿಸಿದ್ದರು. ಸ್ಕಾಡ್ ವೆಸ್ ಮಹಿಳಾ ಸೌಹಾರ್ದ ಸಂಘದ ಅಧ್ಯಕ್ಷೆ ಸರಸ್ವತಿ ಎನ್ ರವಿ ಮಾತನಾಡಿದರು.
ಇದನ್ನೂ ಓದಿ: WTC Final 2023: ಲಂಡನ್ನಲ್ಲಿ ಅಭ್ಯಾಸ ಆರಂಭಿಸಿದ ಟೀಮ್ ಇಂಡಿಯಾ
ಇದೇ ಸಂದರ್ಭದಲ್ಲಿ ಸಂಘದ ಅಭಿವೃದ್ಧಿಗೆ ಸಹಕರಿಸಿದ ಗಣ್ಯರಿಗೆ ಹಾಗೂ ಉತ್ತಮ ವ್ಯವಹಾರ ನಡೆಸಿದ ಸದಸ್ಯರಿಗೆ ಸಂಘದ ವತಿಯಿಂದ ಗೌರವಿಸಿ, ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ವೈ.ಟಿ.ಎಸ್.ಎಸ್. ಶಿಕ್ಷಣ ಸಮಿತಿ ಅಧ್ಯಕ್ಷ ರವಿಕುಮಾರ ಶ್ಯಾನಭಾಗ್, ಸಂಘದ ಉಪಾಧ್ಯಕ್ಷ ನಾರಾಯಣ ಭಟ್, ಗ್ರಾಮದೇವಿ ದೇವಸ್ಥಾನದ ಟ್ರಸ್ಟಿ ರಾಜೇಂದ್ರ ಭಟ್, ಮಾಜಿ ಅಧ್ಯಕ್ಷರು, ನಿರ್ದೇಶಕರು ಇದ್ದರು. ಕು. ಅದಿತಿ ಭಟ್ ಪ್ರಾರ್ಥಿಸಿದರು. ನಿರ್ದೇಶಕ ನರಸಿಂಹ ಸಭಾಹಿತ ಸ್ವಾಗತಿಸಿದರು. ಸುಧೀರ್ ಕೊಡ್ಕಣಿ ವರದಿ ವಾಚಿಸಿದರು.