ಬೆಂಗಳೂರು: ಇಂದು 9ನೇ ಅಂತಾರಾಷ್ಟ್ರೀಯ ಯೋಗ ದಿನ (Yoga Day 2023) ಆಚರಣೆ ಹಿನ್ನೆಲೆಯಲ್ಲಿ ಯೋಗ ʼವಸುದೈವ ಕುಟಂಬʼಕ್ಕಾಗಿ ಎಂಬ ಘೋಷವಾಕ್ಯದೊಂದಿಗೆ ಆಚರಣೆ ನಡೆಯಲಿದ್ದು, ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ ಹಾಗೂ ಆರೋಗ್ಯ ಕುಟುಂಬ ಇಲಾಖೆಯಿಂದ ವಿಧಾನಸೌಧದ ಮುಂಭಾಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಯೋಜಿಸಲ್ಪಟ್ಟಿದೆ.
ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಉದ್ಘಾಟನೆ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಭಾಧ್ಯಕ್ಷ ಯುಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್, ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ ಬಿ.ಕೆ ವೆಂಕಟೇಶ್ ಪ್ರಸಾದ್, ಅಂತಾರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ಅಂಜು ಬಾಬಿ ಜಾರ್ಜ್, ನಟಿ ಭಾವನಾ ರಾಮಣ್ಣ, ಅದಿತಿ ಪ್ರಭುದೇವ ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆ.
5- 45ರಿಂದ 6-55 ಯೋಗ ಪ್ರದರ್ಶನ ನಡೆಯುತ್ತಿದ್ದು, ವಿವಿಧ ಯೋಗ ಸಂಸ್ಥೆಗಳಿಂದ ಯೋಗ ಪ್ರದರ್ಶನ, 7 ಗಂಟೆಯಿಂದ 7:35 ಸಾಮಾನ್ಯ ಶಿಷ್ಟಾಚಾರದ ಯೋಗಾಭ್ಯಾಸ, 7-45ರಿಂದ 8:30 ರವರೆಗೆ ಸಭಾ ಕಾರ್ಯಕ್ರಮ ನಡೆಯಲಿದೆ.
ಇದನ್ನೂ ಓದಿ: Yoga Day 2023: ವಿಸ್ತಾರ ನ್ಯೂಸ್ ಸಹಯೋಗದಲ್ಲಿ ಇಂದು ಯೋಗ ಪ್ರದರ್ಶನ