ಉಡುಪಿ
Suicide case : ಕುಡಿತ ಬಿಡಿಸಲು ಆಸ್ಪತ್ರೆಗೆ ಕರೆತಂದ ತಾಯಿ, ಅಲ್ಲಿಂದ ತಪ್ಪಿಸಿಕೊಂಡು ಹೋಗಿ ನದಿಗೆ ಹಾರಿದ ಮಗ
ಮಗನನ್ನು ಹೇಗಾದರೂ ಕುಡಿತದ ಕುಣಿಕೆಯಿಂದ ರಕ್ಷಿಸಬೇಕು ಎನ್ನುವುದು ಆ ತಾಯಿಯ ಆಸೆಯಾಗಿತ್ತು. ಅಕೆ ಏನೇನೋ ಪ್ರಯತ್ನಗಳನ್ನು ಮಾಡಿದ್ದರು. ಕೊನೆಗೆ ಅಸ್ಪತ್ರೆಗೆ ಕರೆತಂದರು. ಅದರೆ ಆತ ಮಾತ್ರ ಅಲ್ಲಿಂದ ತಪ್ಪಿಸಿಕೊಂಡು ನದಿಗೆ ಹಾರಿದ್ದಾನೆ (Suicide case).
ಉಡುಪಿ: ಮಗನ ಕುಡಿತದ ದುರಾಭ್ಯಾಸವನ್ನು ಹೇಗಾದರೂ ಮಾಡಿ ಬಿಡಿಸಬೇಕು ಎಂದು ಪ್ರಯತ್ನ ಮಾಡುತ್ತಿದ್ದ ತಾಯಿ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ, ಆ ಮಗ ಮಾತ್ರ ತಾಯಿಯ ಕಣ್ಣು ತಪ್ಪಿಸಿಕೊಂಡು ಹೋಗಿದ್ದಾನೆ. ಮಾತ್ರವಲ್ಲ, ಸೇತುವೆಯ ಮೇಲಿಂದ ನದಿಗೆ ಹಾರಿ ಪ್ರಾಣವನ್ನೇ (Suicide case) ಕಳೆದುಕೊಂಡಿದ್ದಾನೆ.
ಕನ್ಯಾನ ಗ್ರಾಮದ ದಿ.ಕುಪ್ಪಯ್ಯ ಶೆಟ್ಟಿ ಅವರ ಪುತ್ರ ರವಿರಾಜ್ ಶೆಟ್ಟಿ (33) ಆತ್ಮಹತ್ಯೆ ಮಾಡಿಕೊಂಡವರು. ಇವರು ಕುಂದಾಪುರ ಸಮೀಪ ತಲ್ಲೂರು ರಾಷ್ಟ್ರೀಯ ಹೆದ್ದಾರಿ ಬಳಿ ರಾಜಾಡಿಯಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಪರೀತ ಕುಡಿತದ ಚಟಕ್ಕೆ ಬಿದ್ದದ್ದ ಮಗನನ್ನು ಚಿಕಿತ್ಸೆ ನೀಡಿ ಹೇಗಾದರೂ ಮಾಡಿ ಸರಿ ಮಾಡಬೇಕು ಎನ್ನುವುದು ತಾಯಿಯ ಆಸೆಯಾಗಿತ್ತು. ಅದರ ಜತೆಗೆ ಮಗ ಕೆಲವೊಂದು ದಿನಗಳಿಂದ ತೀರಾ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ. ಇದಕ್ಕೆಲ್ಲ ಪರಿಹಾರ ಒದಗಿಸಲು ತಾಯಿ ಮುಂದಾಗಿದ್ದರು.
ತಾಯಿಯ ಮಾತಿಗೆ ಮಣಿದ ಮಗ ಭಾನುವಾರ ಬೆಳಗ್ಗೆ ಆಸ್ಪತ್ರೆಗೆ ಬಂದಿದ್ದ. ಆದರೆ, ಆಸ್ಪತ್ರೆಯಲ್ಲಿ ತಾಯಿ ಯಾವುದೋ ಬೇರೆ ಕೆಲಸದಲ್ಲಿದ್ದಾಗ ಅವರ ಕಣ್ಣಿಗೆ ಕಾಣದಂತೆ ತಪ್ಪಿಸಿಕೊಂಡ. ತಾಯಿ ಅತ್ತಿತ್ತ ಹುಡುಕಿದಾಗ ಕಾಣಲಿಲ್ಲ. ಈ ನಡುವೆ ಆತ ಅಲ್ಲಿಂದ ತಪ್ಪಿಸಿಕೊಂಡು ಆಸ್ಪತ್ರೆಯಿಂದ ಸ್ವಲ್ಪ ದೂರ ಇರುವ ರಾಜಾಡಿ ಬಳಿ ಬಂದು ಸೇತುವೆ ಮೇಲಿಂದ ನದಿಗೆ ಹಾರಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಧಾವಿಸಿದರಾದರೂ ಜೀವಂತವಾಗಿ ಮೇಲೆತ್ತಲು ಸಾಧ್ಯವಾಗಿಲ್ಲ. ಸ್ಥಳೀಯ ಮೀನುಗಾರ ನೆರವಿನಿಂದ ರವಿರಾಜ್ ಮೃತ ದೇಹವನ್ನು ಮೇಲಕ್ಕೆತ್ತಲಾಗಿದೆ.
ಕುಂದಾಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Women commits suicide : ಕೌಟುಂಬಿಕ ಕಲಹ ಹಿನ್ನೆಲೆ, 3 ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ
ಉಡುಪಿ
Ayodhya Ram Mandir: ಅಯೋಧ್ಯೆಯಲ್ಲಿ 25,000 ಭಕ್ತರ ವಸತಿ ಸಾಮರ್ಥ್ಯದ ಯಾತ್ರಿ ಭವನ ನಿರ್ಮಾಣ: ಪೇಜಾವರ ಶ್ರೀ
Ayodhya Ram Mandir: ರಾಮ ಮಂದಿರದ ಲೋಕಾರ್ಪಣೆಯ ವೇಳೆಗೆ ಅಯೋಧ್ಯೆಗೆ ದೇಶದ ವಿವಿಧೆಡೆಯಿಂದ ಆಗಮಿಸುವ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ 25,000 ಜನರ ವಸತಿ ಸಾಮರ್ಥ್ಯದ ಬೃಹತ್ ಯಾತ್ರಿ ಭವನ ನಿರ್ಮಿಸಲಾಗುತ್ತಿದೆ ಎಂದು ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಿಳಿಸಿದ್ದಾರೆ.
ಉಡುಪಿ: ಅಯೋಧ್ಯೆ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿಶ್ವಸ್ಥರಾಗಿರುವ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮಂಗಳವಾರ ಅಯೋಧ್ಯೆಗೆ ಭೇಟಿ ನೀಡಿ ರಾಮ ಮಂದಿರ ನಿರ್ಮಾಣ ಕಾರ್ಯದ (Ayodhya Ram Mandir) ಪ್ರಗತಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ ಶ್ರೀಗಳು, ಮಂದಿರ ನಿರ್ಮಾಣ ಕಾರ್ಯ ವೇಗದಿಂದ ನಡೆಯುತ್ತಿದ್ದು, ಪ್ರಸ್ತುತ ಗರ್ಭಗುಡಿಯ ಉಭಾಪೀಠದ ಮೇಲೆ ಸ್ತಂಭಗಳ ಜೋಡಣೆ ಮತ್ತು ಗೋಡೆ ನಿರ್ಮಾಣ ನಡೆಯುತ್ತಿದೆ. ಮುಂದಿನ 10 ದಿನಗಳಲ್ಲಿ ಚಾವಣಿಯ ಶಿಲಾ ಬೀಮ್ ಮತ್ತು ಶಿಲಾ ಹೊದಿಕೆಗಳನ್ನು ಅಳವಡಿಸುವ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.
ಮಂದಿರದ ಲೋಕಾರ್ಪಣೆಯ ವೇಳೆಗೆ ದೇಶದ ವಿವಿಧೆಡೆಯಿಂದ ಆಗಮಿಸುವ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ 25,000 ಜನರ ವಸತಿ ಸಾಮರ್ಥ್ಯದ ಬೃಹತ್ ಯಾತ್ರಿ ಭವನ ನಿರ್ಮಿಸಲಾಗುತ್ತಿದೆ. ಮಂದಿರದಲ್ಲಿ ಪ್ರತಿಷ್ಠಾಪಿಸಲಾಗುವ ಶ್ರೀ ರಾಮ, ಸೀತೆ, ಲಕ್ಷ್ಮಣ ವಿಗ್ರಹಗಳ ನಿರ್ಮಾಣಕ್ಕಾಗಿ ಕರ್ನಾಟಕದ ಹೆಗ್ಗಡೆ ದೇವನಕೋಟೆ, ಕಾರ್ಕಳ, ತಮಿಳುನಾಡಿನ ಮಹಾಬಲಿಪುರಂ, ರಾಜಸ್ಥಾನ ಹಾಗೂ ನೇಪಾಳಗಳಿಂದ ಶಿಲೆಗಳನ್ನು ತರಲಾಗಿದ್ದು, ಶಿಲ್ಪಿಗಳು ಅವುಗಳ ಪರಿಶೀಲನೆ ನಡೆಸಿ ಉತ್ತಮವಾದವುಗಳನ್ನು ಆಯ್ದುಕೊಂಡು ಪ್ರತಿಮೆಗಳನ್ನು ನಿರ್ಮಿಸಲಿದ್ದಾರೆ ಎಂದು ಶ್ರೀಗಳು ತಿಳಿಸಿದರು.
ಇದನ್ನೂ ಓದಿ | Actor Chetan Ahimsa : ಹಿಂದು ಧರ್ಮದ ವಿರುದ್ಧ ಅವಹೇಳನಕಾರಿ ಪೋಸ್ಟ್; ನಟ ಚೇತನ್ ಅಹಿಂಸಾ ಅರೆಸ್ಟ್
ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ವಿಶ್ವ ಹಿಂದು ಪರಿಷತ್ ಮುಖಂಡ ಗೋಪಾಲ್ ಜೀ, ಶ್ರೀಗಳ ಆಪ್ತ ಕಾರ್ಯದರ್ಶಿ ಕೃಷ್ಣ ಭಟ್, ಅಯೋಧ್ಯೆ ಪೇಜಾವರ ಮಠದ ವ್ಯವಸ್ಥಾಪಕ ಮಹೇಂದ್ರ ದುಬೆ ಉಪಸ್ಥಿತರಿದ್ದರು.
ಮಾ.22ರಂದು ಕುಷ್ಟಗಿ ತಾಲೂಕಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಭೇಟಿ
ಕೊಪ್ಪಳ: ಪಂಚಮುಖಿ ಆಂಜನೇಯ ದೇವಸ್ಥಾನ ಉದ್ಘಾಟನೆ ಹಿನ್ನೆಲೆಯಲ್ಲಿ ಮಾ.22 ರಂದು ಕುಷ್ಟಗಿ ತಾಲೂಕಿನ ಶಾಖಾಪೂರ ಗ್ರಾಮಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಭೇಟಿ ನೀಡಲಿದ್ದಾರೆ. ದೇವಸ್ಥಾನವನ್ನು ರಾಜ್ಯಪಾಲರು ಲೋಕಾರ್ಪಣೆ ಮಾಡಲಿದ್ದು, ಸಂಸದ ಕರಡಿ ಸಂಗಣ್ಣ, ಶಾಸಕ ಅಮರೇಗೌಡ ಬಯ್ಯಾಪುರ, ಹುನಗುಂದ ಶಾಸಕ ದೊಡ್ಡನಗೌಡ ಸೇರಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ.
ಉಡುಪಿ
Karnataka Rain: ಮುಂದಿನ 24 ಗಂಟೆಯಲ್ಲಿ ಉಡುಪಿ, ಬೆಂಗಳೂರು, ಬೀದರ್‌ನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
Karnataka Rain: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (weather report) ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ ಸಾಧ್ಯತೆ ಎಂಬ ಮಾಹಿತಿ ಇಲ್ಲಿದೆ.
ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು (Rain alert) ಹವಾಮಾನ ಇಲಾಖೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ತುಮಕೂರಿನಲ್ಲೂ ಮಳೆಯ ಅಬ್ಬರ ಇರಲಿದೆ.
ಬೆಂಗಳೂರು ನಗರದಲ್ಲಿ ಭಾಗಶ: ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮಳೆ ಪ್ರಮಾಣ ಹೀಗಿದೆ?
ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಶನಿವಾರ ಮಳೆಯಾಗಿದೆ. ಬೀದರ್‌ನ ಔರಾದ್, ಕೋಲಾರದ ಚಿಂತಾಮಣಿ, ರಾಯಲ್ಪಾಡು ತಲಾ 4 ಸೆ.ಮೀ ಮಳೆ ಆಗಿದ್ದು, ಗೇರುಸೊಪ್ಪ, ಚಿಂಚೋಳಿ, ಮಂತಾಲ, ಮನ್ನಾಳಿ, ಸಿಂದಗಿ, ಸೈದಾಪುರದಲ್ಲಿ ತಲಾ 2 ಸೆ.ಮೀ ಮಳೆಯಾಗಿದೆ.
ಬ್ರಹ್ಮಾವರ, ಬೀದರ್, ಹುಮನಾಬಾದ್, ಅಫಜಲಪುರ, ಸುಲೇಪೇಟೆ, ರಾಯಚೂರು, ಮಧುಗಿರಿ, ರಾಮನಗರ, ವೈ.ಎನ್. ಹೊಸಕೋಟೆ, ಶಿರಾ, ಶೃಂಗೇರಿ, ಕುಡುತಿನಿ, ಹರದನಹಳ್ಳಿಯಲ್ಲಿ ತಲಾ 1 ಸೆ.ಮೀ ಮಳೆಯಾಗಿದೆ. ಇನ್ನು ಪಣಂಬೂರು ಹಾಗೂ ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 35.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಬಾಗಲಕೋಟೆಯಲ್ಲಿ ಕನಿಷ್ಠ ಉಷ್ಣಾಂಶ 14.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ವೀಕೆಂಡ್ ಮೋಜಿಗೆ ಮಳೆರಾಯ ಅಡ್ಡಿ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವೀಕೆಂಡ್ ಮೋಜಿಗೆ ಮಳೆರಾಯ ಅಡ್ಡಿಯಾಗಿದ್ದ. ಉಡುಪಿಯಲ್ಲಿ ಬೆಳಗ್ಗಿನಿಂದಲೇ ತುಂತುರು ಮಳೆ ಶುರುವಾಗಿದ್ದರಿಂದ ಜನರ ಕೆಲಸ ಕಾರ್ಯಗಳಿಗೆ ಕಿರಿಕಿರಿ ಉಂಟಾಗಿತ್ತು. ಇನ್ನು ಕಳೆದ ಒಂದು ವಾರದಿಂದ ತಾಪಮಾನ 35 ರಿಂದ 37 ಡಿಗ್ರಿವರೆಗೂ ಹೆಚ್ಚಾಗಿತ್ತು. ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಕರಾವಳಿ ಜನರಿಗೆ ತುಂತುರು ಮಳೆಯಿಂದ ವಾತಾವರಣ ತಂಪಾಗಿತ್ತು. ಮುಂದಿನ ಒಂದು ವಾರಗಳ ಕಾಲ ಸಾಧಾರಣ ಮಳೆ ಆಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.
ಆಲಿಕಲ್ಲು ಮಳೆಗೆ ಕಲ್ಲಂಗಡಿ ಬೆಳೆ ನಾಶ
ಕಲಬುರಗಿ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ಮಳೆ ಅವಾಂತರದಿಂದ ಲಕ್ಷಾಂತರ ರೂಪಾಯಿ ಕಲ್ಲಂಗಡಿ ಬೆಳೆ ನಾಶವಾಗಿದೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಅಲ್ಲಪೂರ್ ಗ್ರಾಮದಲ್ಲಿ ಆಲಿಕಲ್ಲು ಮಳೆಯಿಂದಾಗಿ ಶರಣಗೌಡ ಪಾಟೀಲ ಎಂಬುವವರ 3.5 ಎಕರೆಯಲ್ಲಿ ಬೆಳೆದಿದ್ದ ಕಲ್ಲಂಗಡಿ ಬೆಳೆ ಹಾಳಾಗಿದೆ. 5 ಲಕ್ಷ ರೂ. ಖರ್ಚು ಮಾಡಿ ಬೆಳೆ ಬೆಳೆಯಲಾಗಿತ್ತು, 2 ದಿನದಲ್ಲಿ ಕಟಾವು ಮಾಡಲು ಬಂದಿದ್ದ ಕಲ್ಲಂಗಡಿ ಹಣ್ಣುಗಳು ಹಾಳಾಗಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಅವೈಜ್ಞಾನಿಕ ರಸ್ತೆ ಕಾಮಗಾರಿ
ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಯಿಂದ ಮಳೆ ನೀರು ರೈತರ ಹೊಲಕ್ಕೆ ನುಗ್ಗಿದೆ. ಪರಿಣಾಮ ಹತ್ತಾರು ಎಕರೆಗಳಷ್ಟು ಜಮೀನಿನಲ್ಲಿ ಬೆಳೆಸಿದ್ದ ಜೋಳ ಮುಳುಗಿ ನಷ್ಟವಾಗಿದೆ. ಬೀದರ್ ತಾಲೂಕಿನ ಮರಕಲ್ ಗ್ರಾಮಸ್ಥರಿಂದ ಗುತ್ತಿಗೆ ದಾರನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕಟಾವಿಗೆ ಬಂದಿದ್ದ ಜೋಳ ನೀರು ಪಾಲಾಗಿದೆ ಎಂದು ರಸ್ತೆ ತಡೆದು ಮರಕಲ್ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ: Bengaluru Auto Bandh: ಬೈಕ್ ಟ್ಯಾಕ್ಸಿಗೆ ವಿರೋಧ; ಇಂದು ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ
ರಸ್ತೆ ಕಾಮಗಾರಿಯ ಗುತ್ತಿಗೆ ಪಡೆದವರು ರೈತರ ಬೆಳೆ ಹಾನಿ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು. ಸ್ಥಳಕ್ಕೆ ಸ್ಥಳೀಯ ಶಾಸಕ ರಹೀಂಖಾನ್ ಭೇಟಿ ನೀಡಿ, ಸೂಕ್ತ ಪರಿಹಾರ ಕೊಡಿಸುವುದಾಗಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Ayodhya Rama Mandir : ಆಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಕಾರ್ಕಳದಿಂದ ಹೊರಟಿದೆ ನೆಲ್ಲಿಕಾರು ಶಿಲೆ
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ (Ayodhya Rama Mandir) ಕಾರ್ಕಳದ ಈದು ಗ್ರಾಮದಿಂದ ಕಲ್ಲನ್ನು ಒಯ್ಯಲಾಗಿದೆ. ಜಮೀನಿನಲ್ಲಿ ಮಲಗಿದ್ದ ಕಲ್ಲಿಗೆ ಮಂದಿರದ ಭಾಗವಾಗುವ ಯೋಗ ಎನ್ನುತ್ತಾರೆ ಇಲ್ಲಿನ ಜನರು.
ಕಾರ್ಕಳ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ರಾಮ ಮಂದಿರದಲ್ಲಿ (Ayodhya Rama Mandir) ಪ್ರತಿಷ್ಠಾಪನೆಯಾಗುವ ರಾಮ ಲಲ್ಲಾನ ಮೂರ್ತಿಗಾಗಿ ನೇಪಾಳದ ಗಂಡಕಿ ನದಿಯಿಂದ ಸಾಲಿಗ್ರಾಮ ಶಿಲೆಯನ್ನು ತಂದಿರುವುದು ಎಲ್ಲರಿಗೂ ಗೊತ್ತು. ಈ ದೇವಸ್ಥಾನಕ್ಕೆ ನಾನಾ ಕಡೆಗಳಿಂದ ಅತ್ಯಂತ ಜತನದಿಂದ ಆಯ್ದ ಶಿಲೆ ಮತ್ತು ಸಾಮಗ್ರಿಗಳನ್ನೇ ಬಳಸಲಾಗುತ್ತಿದೆ ಎನ್ನುವುದಕ್ಕೆ ಇದೊಂದು ಉದಾಹರಣೆ. ದೇಶದ ನಾನಾ ಭಾಗಗಳಿಂದಲೂ ಆಯ್ದ ಶಿಲೆಗಳು, ಇತರ ವಸ್ತುಗಳು ರವಾನೆಯಾಗುತ್ತಿವೆ. ಅಂತೆಯೇ ಕರಿಕಲ್ಲಿಗಾಗಿ ಅನ್ವರ್ಥ ನಾಮವನ್ನು ಪಡೆದ ಕಾರ್ಕಳದಿಂದಲೂ ಶಿಲೆಯೊಂದನ್ನು ರವಾನಿಸಲಾಗಿದೆ. ಆ ಮೂಲಕ ರಾಮ ಮಂದಿರದ ನಿರ್ಮಾಣದಲ್ಲಿ ಇಲ್ಲಿನ ಶಿಲೆಯೂ ಭಾಗಿಯಾಗುವಂತಾಗಿದೆ.
ಕಾರ್ಕಳ ತಾಲೂಕಿನ ಈದು ಗ್ರಾಮದ ತುಂಗಾ ಪೂಜಾರಿಯವರ ಜಾಗದಲ್ಲಿದ್ದ ನೆಲ್ಲಿಕಾರು ಶಿಲೆಯನ್ನು ಗುರುವಾರ ರಾತ್ರಿ ಬೃಹತ್ ಲಾರಿಯ ಮೂಲಕ ಅಯೋಧ್ಯೆಗೆ ಕಳುಹಿಸಿಕೊಡಲಾಗಿದೆ. ಕೆಲವು ತಿಂಗಳುಗಳ ಹಿಂದೆ ಖ್ಯಾತ ಶಿಲಾ ತಜ್ಞ ಕುಶೀಪ್ ಬನ್ಸಾಲ್ ಅವರು ಈದುವಿಗೆ ಬಂದು ಈ ಶಿಲೆಯನ್ನು ಪರಿಶೀಲಿಸಿದ್ದರು. ದೇಶಾದ್ಯಂತ ನಡೆಯುವ ಶೋಧ ಕಾರ್ಯದ ಭಾಗವಾಗಿ ಇಲ್ಲಿಯೂ ಹುಡುಕಾಟ ನಡೆದಿತ್ತು. ಅವರಿಗೆ ಸ್ಥಳೀಯ ಶಿಲ್ಪಿಗಳು ಮತ್ತು ಬಜರಂಗದಳ ಕಾರ್ಯಕರ್ತರು ನೆರವಾಗಿದ್ದರು.
ಅಯೋಧ್ಯೆಗೆ ರವಾನೆಯಾದ ಶಿಲೆಯು ಸುಮಾರು 9 ಟನ್ ತೂಕವಿದೆ. 7 ಅಡಿ ಅಗಲ ಮತ್ತು 5 ಅಡಿ ದಪ್ಪವಿದೆ. ಕ್ರೇನ್ ಸಹಾಯದಿಂದ ಇದನ್ನು ಲಾರಿಗೆ ಹಾಕಲಾಯಿತು. ಬಳಿಕ ಅದ್ಧೂರಿ ಪೂಜೆಯೊಂದಿಗೆ ಕಳುಹಿಸಿಕೊಡಲಾಯಿತು.
ಕಾರ್ಕಳ ಕಲ್ಲಿಗೇ ಫೇಮಸ್
ಕಾರ್ಕಳದ ಕರಿಕಲ್ಲು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರಿ ಪ್ರಸಿದ್ಧಿ ಪಡೆದಿದೆ. ಕರಿಕಲ್ಲಿನ ನಗರಿ ಎಂದು ಕರೆಯಲ್ಪಡುವ ಕಾರ್ಕಳದ ನೆಲ್ಲಿಕಾರಿನ ಶಿಲೆಗಳು ಭಾರಿ ಜನಪ್ರಿಯ. ರಾಷ್ಟ್ರಪತಿ ಭವನದಲ್ಲಿ ಇಡಲಾಗಿರುವ ಕಾರ್ಕಳದ ಬಾಹುಬಲಿ, ಮಾನಸ್ತಂಭದ ಪ್ರತಿಕೃತಿಗಳು ನೆಲ್ಲಿಕಾರು ಶಿಲೆಯಿಂದ ಮಾಡಲಾಗಿದ್ದು. ಕವಿ ಮುದ್ದಣ, ಮಿಥುನ ನಾಗ, ಸೋಮನಾಥ ಪುರದ ದ್ವಾರ , ಗಜಸಿಂಹ, ಗೇಟ್ ವೇ, ಕಲ್ಲಿನ ಕಾರಂಜಿ, ಚೆನ್ನಿಗರಾಯ ದೇವರ ಸೇರಿದಂತೆ ಒಟ್ಟು ಹತ್ತು ವಿಗ್ರಹಗಳನ್ನು ಕರಿಕಲ್ಲಿನಿಂದ ಮಾಡಿ ಇಡಲಾಗಿದೆ. ದೆಹಲಿಯ ಗುರುಗ್ರಾಮ ರಸ್ತೆಯಲ್ಲಿರುವ 15 ಅಡಿ ಎತ್ತರದ ಮಹಾವೀರ ವಿಗ್ರಹವೂ ಕರಿಕಲ್ಲಿನದ್ದೆ. ದೆಹಲಿಯಲ್ಲಿರುವ ಮಹಾವೀರನ ಪ್ರತಿಮೆ, ರಾಜಸ್ಥಾನದ ಅಲ್ವಾರ್ ಚಂದ್ರಪ್ರಭಾ ತೀರ್ಥಂಕರರ ಪ್ರತಿಮೆ, ಗುರುವಾಯೂರಿನ ಶ್ರೀಕೃಷ್ಣ, ಕೆನಡಾದ ಟೊರಂಟೊದಲ್ಲಿರುವ ದೇವೇಂದ್ರ ದೇವರ ವಿಗ್ರಹ, ಜಪಾನ್ ಅವಲೋಹಿತೇಶ್ವರ ಪ್ರತಿಮೆ, ಇಂಗ್ಲೆಂಡ್‌ನ ಮ್ಯೂಸಿಯಂನಲ್ಲಿರುವ ಕೃಷ್ಣನ ವಿಗ್ರಹವೂ ಕರಿಕಲ್ಲಿನದ್ದೆ. ಇತ್ತೀಚೆಗೆ ಮಲೇಷಿಯಾದಲ್ಲಿ ದುರ್ಗ ವಿಗ್ರಹವನ್ನು ನಿರ್ಮಿಸಲಾಗಿದೆ.
ಕಲ್ಕುಡನ ಪಾದ ಸ್ಪರ್ಶದಿಂದ ಪುನೀತವಾದ ಕಾರ್ಕಳದ ಪುಣ್ಯ ಮಣ್ಣಿನಲ್ಲಿ, ಬ್ರಹ್ಮಬೈದರ್ಕಳ ಆರಾಧನೆ ಮಾಡುವ ಕುಟುಂಬವೊಂದರ ಭೂಮಿಯಲ್ಲಿದ್ದ ತುಳುನಾಡಿನ ಕೃಷ್ಣ ಶಿಲೆಗೆ ಅಯೋಧ್ಯೆಯ ರಾಮ ಮಂದಿರದ ಭಾಗವಾಗುವ ಯೋಗ ಬಂದಿರುವುದು ವಿಶೇಷ ಎನ್ನುತ್ತಾರೆ ಈದುವಿನ ನಾಗರಿಕರು.
ಇದನ್ನೂ ಓದಿ : Ram Mandir: ಅಯೋಧ್ಯೆ ರಾಮಮಂದಿರದ ಗರ್ಭಗುಡಿ ಹೇಗಿದೆ? ಇಲ್ಲಿವೆ ನೂತನ ಫೋಟೊಗಳು
ಉಡುಪಿ
Karnataka Rain: ಕೋಲಾರ, ಬೀದರ್, ರಾಯಚೂರು, ಬಾಗಲಕೋಟೆಯಲ್ಲಿ ಭರ್ಜರಿ ಮಳೆ; ರಾಜ್ಯದಲ್ಲಿ ಇನ್ನೂ 2 ದಿನ ಇದೆ ವರ್ಷಧಾರೆ
ರಾಜ್ಯದ ಅಲ್ಲಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹಮಾವಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಕೊಡಗು ಹಾಗೂ ಬೆಂಗಳೂರಿನ ಸುತ್ತಮುತ್ತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಬೆಂಗಳೂರು: ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ರಾಜ್ಯದ ಅಲ್ಲಲ್ಲಿ (Karnataka Rain) ಗುರವಾರವೂ ಮಳೆ ಮುಂದುವರಿದಿದೆ. ಕೋಲಾರ, ರಾಯಚೂರು, ಬಾಗಲಕೋಟೆ ಸೇರಿದಂತೆ ಹಲವು ಕಡೆ ವರುಣನ ಸಿಂಚನವಾಗಿದೆ. ಕೋಲಾರದಲ್ಲಿ ಬಿರುಗಾಳಿ ಸಹಿ ಆಲಿಕಲ್ಲು ಮಳೆಯಾಗಿದೆ.
ಹವಾಮಾನ ಇಲಾಖೆ ಪ್ರಕಾರ, ಮುಂದಿನ ಎರಡು ದಿನಗಳ ಕಾಲ ರಾಜ್ಯದ ಅಲ್ಲಲ್ಲಿ ಅಲ್ಪ ಪ್ರಮಾಣದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಕೊಡಗು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಮೆಜೆಸ್ಟಿಕ್ ಸೇರಿದಂತೆ ಅಲ್ಲಲ್ಲಿ ಸಾಧಾರಣದಿಂದ ಭರ್ಜರಿ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಗಂಟೆಗೂ ಹೆಚ್ಚು ಕಾಲ ಪ್ರಯಾಣಿಕರು ಕಿರಿಕಿರಿ ಅನುಭವಿಸಿದರು. ಅಲ್ಲದೆ, ಕೋಲಾರ, ಬೀದರ್, ರಾಯಚೂರು, ಬಾಗಲಕೋಟೆ ಸೇರಿದಂತೆ ರಾಜ್ಯದ ಇನ್ನೂ ಹಲವು ಕಡೆ ಭಾರಿ ಮಳೆಯಾದ ವರದಿಯಾಗಿದೆ.
ಕೋಲಾರದಲ್ಲಿ ಆಲಿಕಲ್ಲು ಮಳೆ; ಅಪಾರ ನಷ್ಟ
ಗುರುವಾರ ಸಂಜೆ ಕೋಲಾರ ಜಿಲ್ಲೆಯ ಅಲ್ಲಲ್ಲಿ ಭಾರಿ ಮಳೆಯಾಗಿದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದ್ದರಿಂದ ಅಪಾರ ಪ್ರಮಾಣದ ನಷ್ಟವಾಗಿದೆ. ಬಿರುಗಾಳಿ ಸಂಬಂಧ ಆರ್‌ಟಿಒ ಕಚೇರಿ ಬಳಿ ಇರುವ ಕೋಲಾರ-ಬಂಗಾರಪೇಟೆ ಮಾರ್ಗದ ರಸ್ತೆಗೆ ಮರವೊಂದು ಅಡ್ಡಲಾಗಿ ಬಿದ್ದು ಸಂಚಾರ ವ್ಯತ್ಯಯವಾಗಿದೆ. ಈ ಸಂಬಂಧ ಸಂಚಾರಿ ಪೊಲೀಸರು ಮರ ತೆರವು ಕಾರ್ಯಾಚರಣೆ ನಡೆಸಿದ್ದು, ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಿದ್ದಾರೆ.
ಇದನ್ನೂ ಓದಿ: Karnataka Elections : ಅಪಾಯದಲ್ಲಿರುವುದು ಸಂವಿಧಾನವಲ್ಲ, ಕಾಂಗ್ರೆಸ್ ಎಂದ ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ
ಕೋಲಾರದಲ್ಲಿ ಗಾಳಿಯ ರಭಸಕ್ಕೆ ತಗಡಿನ ಶೀಟ್ ಗಾಳಿಗೆ ಹಾರಿವೆ. ಬಿರುಸಿನಿಂದ ಸುರಿದ ಮಳೆಗೆ ನಗರದ ಹಲವು ಚರಂಡಿಗಳು ತುಂಬಿ ರಸ್ತೆ ಮೇಲೆ ಹರಿದಿವೆ. ಆಲಿಕಲ್ಲು ಮಳೆಯ ಹೊಡೆತಕ್ಕೆ ಮಾವು ಬೆಳೆಗಾರರು ಕಂಗಾಲಾಗಿದ್ದಾರೆ. ತೋಟಗಾರಿಕೆ ಬೆಳೆಗಳಾದ ಬೀನ್ಸ್, ಟೊಮೇಟೊ, ಹೂ ತೋಟಗಳಲ್ಲೂ ಅಪಾರ ನಷ್ಟವಾಗಿವೆ.
ಕುಸಿದು ಬಿದ್ದ ಮನೆಯ ಸಜ್ಜೆ
ಕೋಲಾರ ನಗರದ ಕಾರಂಜಿಕಟ್ಟೆಯ ಹತ್ತನೇ ಕ್ರಾಸ್ ಬಳಿ ಮನೆಯ ಸಜ್ಜೆಯೊಂದು ಕುಸಿದುಬಿದ್ದ ಘಟನೆ ನಡೆದಿದೆ. ಸುಬ್ರಹ್ಮಣ್ಯ ಎಂಬುವರ ಮಾಲೀಕತ್ವದ ಮನೆಯ ಸಜ್ಜೆ ಕುಸಿತಗೊಂಡಿದೆ. ಸಾರ್ವಜನಿಕರು ಹೆಚ್ಚಾಗಿ ಓಡಾಡುವ ರಸ್ತೆ ಇದಾಗಿದ್ದು, ಅಂಗಡಿ ಬಳಿ ನಿಂತಿದ್ದ ಇಬ್ಬರು ಅದೃಷ್ಟವಶಾತ್ ಪಾರಾಗಿದ್ದಾರೆ. ಬಿರುಗಾಳಿ, ಗುಡುಗು ಮಿಂಚಿನೊಂದಿಗೆ ಸುಮಾರು ಇಪ್ಪತ್ತು ನಿಮಿಷಗಳ ಕಾಲ ಮಳೆ ಸುರಿದಿದೆ.
ಬೀದರ್‌ನಲ್ಲಿ ಅರ್ಧ ಗಂಟೆಗೂ ಹೆಚ್ಚು ಮಳೆ
ಗಡಿ ಜಿಲ್ಲೆಯಾದ ಬೀದರ್‌ನಲ್ಲಿ ಮಳೆಯಾಗಿದೆ. ಬಿಸಿಲಿನ ಬೇಗೆಗೆ ಬೆಂಡಾಗಿದ್ದ ಬೀದರ್ ಜನತೆಗೆ ಮಳೆ ತಂಪೆರೆದಿದೆ. ನಗರಾದ್ಯಂತ ಅರ್ಧ ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆಯಾಗಿದೆ. ನಗರದ ಪ್ರಮುಖ ರಸ್ತೆಗಳು ಜಲಾವೃತವಾಗಿವೆ.
ದೇವದುರ್ಗದಲ್ಲಿ ಎತ್ತು ಬಲಿ
ರಾಯಚೂರು ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದಾಗಿ ಭಾರಿ ಅವಾಂತರ ಸೃಷ್ಟಿಯಾಗಿದೆ. ದೇವದುರ್ಗ, ಲಿಂಗಸಗೂರು ತಾಲೂಕಿನಲ್ಲಿ ವರುಣ ಅಬ್ಬರಿಸಿದ್ದಾನೆ. ದೇವದುರ್ಗ ತಾಲೂಕಿನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಗಲಗ ಗ್ರಾಮದಲ್ಲಿ ರೈತ ಹನುಮಂತಪ್ಪ ಗೊಲ್ಲರ ಎಂಬುವವರಿಗೆ ಸೇರಿದ ಎತ್ತೊಂದು ಸಿಡಿಲು ಬಡಿದು ಮೃತಪಟ್ಟಿದೆ.
ಇದನ್ನೂ ಓದಿ: MP Kumaraswamy: ನಾನು ದಲಿತನೆಂಬ ಕಾರಣಕ್ಕೆ ನನ್ನ ವಿರುದ್ಧ ಪಿತೂರಿ: ಎಂ.ಪಿ. ಕುಮಾರಸ್ವಾಮಿ ಕಣ್ಣೀರು
ತೇರದಾಳದಲ್ಲಿ ಮನೆಗೆ ಬಡಿದ ಸಿಡಿಲು
ಬಾಗಲಕೋಟೆ ಜಿಲ್ಲೆಯ ಅಲ್ಲಲ್ಲಿ ಬುಧವಾರ ರಾತ್ರಿಯಿಂದಲೇ ಮಳೆ ಸುರಿದಿದೆ. ತೇರದಾಳ ಪಟ್ಟಣದ ಅಲ್ಲಮಪ್ರಭು ದೇವಸ್ಥಾನ ಬಳಿ ಮನೆಯೊಂದಕ್ಕೆ ಸಿಡಿಲು ಬಡಿದು ಮೇಲ್ಭಾಗದ ಗೋಡೆಗೆ ಹಾನಿಯಾಗಿದೆ. ಸಿಡಿಲಿನ ಹೊಡೆತಕ್ಕೆ ಅಲ್ಲಲ್ಲಿ ಗೋಡೆಯ ಪ್ಲಾಸ್ಟರ್ ಕಿತ್ತುಹೋಗಿದೆ. ಪ್ರಭು ಹಳಿಂಗಳಿ ಎಂಬುವರಿಗೆ ಸೇರಿದ ಮನೆಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.
-
ಸುವಚನ15 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ21 hours ago
ವಿಸ್ತಾರ ಸಂಪಾದಕೀಯ: ಪಬ್ಲಿಕ್ ಪರೀಕ್ಷೆ ಗೊಂದಲ; ವಿದ್ಯಾರ್ಥಿಗಳು, ಪೋಷಕರ ಮೇಲೆ ಮಾನಸಿಕ ಒತ್ತಡ
-
ಆಟೋಮೊಬೈಲ್22 hours ago
Oscar 2023 : ನಾಟು ನಾಟು ಹಾಡಿಗೆ ಡಾನ್ಸ್ಮಾಡಿದ ಟೆಸ್ಲಾ ಕಾರುಗಳು! ಇಲ್ಲಿದೆ ನೋಡಿ ವಿಡಿಯೊ
-
ಕ್ರಿಕೆಟ್6 hours ago
IND VS AUS: ಭಾರತ-ಆಸ್ಟ್ರೇಲಿಯಾ ಅಂತಿಮ ಏಕದಿನ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ಕರ್ನಾಟಕ10 hours ago
Shivamogga politics : ಯುಗಾದಿ, ರಂಜಾನ್ಗೆ ಶುಭ ಕೋರಿ ಫ್ಲೆಕ್ಸ್ ಹಾಕಿಸಿದ ಆಯನೂರು, ಹರಕು ಬಾಯಿ ಮುಚ್ಚಲಿ ಅಂದಿದ್ದು ಯಾರಿಗೆ?
-
ಧಾರ್ಮಿಕ9 hours ago
Ugadi 2023 : ಜಗದ ಆದಿ ಈ ಯುಗಾದಿ!
-
ಅಂಕಣ10 hours ago
ನನ್ನ ದೇಶ ನನ್ನ ದನಿ ಅಂಕಣ: ಪಂಜಾಬ್ ನಾಶವಾಗುವುದು ಒಳ್ಳೆಯ ಲಕ್ಷಣವಲ್ಲ
-
ಕರ್ನಾಟಕ11 hours ago
Drugs Mafia : ಸಾಗರದಲ್ಲಿ ಡ್ರಗ್ಸ್ ಮಾರಾಟ ಯತ್ನ: ಲಾಂಗ್ ಸಹಿತ ಇಬ್ಬರ ಅರೆಸ್ಟ್, ಕೊಲೆ ಸಂಚೂ ಬಯಲು