ಬೆಳಗಾವಿ: ಜಾತ್ರೆ ಸಂಭ್ರಮದಲ್ಲಿದ್ದ ಯುವಕನೊಬ್ಬನ ಮೇಲೆ ತಂಡವೊಂದು ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಗೋಕಾಕ್ ಫಾಲ್ಸ್‌ನಲ್ಲಿ ನಡೆಸಿದೆ. ಇದು ಹಳೆ ವೈಷಮ್ಯದಿಂದ ನಡೆಸಿದ ಕೃತ್ಯವೆಂದು ಹೇಳಲಾಗಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನಲ್ಲಿರುವ ಗೋಕಾಕ್ ಫಾಲ್ಸ್‌ನ ಮಹಾಲಿಂಗೇಶ್ವರ ಜಾತ್ರೆಯಲ್ಲಿ ಶನಿವಾರ ರಾತ್ರಿ ಗೋಕಾಕ ಫಾಲ್ಸ್ ನಿವಾಸಿ ವಿನೋದ ಬೇಟಗೇರಿ (28 ) ಎಂಬಾತನಿಗೆ ಚೂರಿಯಿಂದ ಇರಿಯಲಾಗಿದೆ. ಗಂಭೀರವಾಗಿ ಗಾಯಗೊಂಡ ವಿನೋದನನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿನೋದ ಜಾತ್ರೆ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ 7 ಜನರ ತಂಡ ದಾಳಿ ನಡೆಸಿದೆ. ಇದೊಂದು ಹಳೆ ವೈಷಮ್ಯದಿಂದ ನಡೆದ ದಾಳಿಯಾಗಿರುವುದರಿಂದ ದಾಳಿ ಮಾಡಿದವರ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಹೀಗಾಗಿ ಅವರು ಒಬ್ಬ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಇತರ 6 ಜನರಿಗೆ ಹುಡುಕಾಡುತ್ತಿದ್ದಾರೆ.
ಗೋಕಾಕ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಿಪ್ಪನ್ ಪೇಟೆಯ ವೈದ್ಯ ತುಮಕೂರಿನಲ್ಲಿ ರೈಲಿನಿಂದ ಬಿದ್ದು ಮೃತ್ಯು
ರಿಪ್ಪನ್‌ಪೇಟೆ: ತುಮಕೂರು ಜಿಲ್ಲೆಯ ಕ್ಯಾತಸಂದ್ರ ಬಳಿ ಚಲಿಸುತಿದ್ದ ರೈಲಿನಿಂದ ಬಿದ್ದು ಪಟ್ಟಣದ ಶಬರೀಶನಗರದ ವೈದ್ಯರೊಬ್ಬರು ಮೃತಪಟ್ಟಿರುವ (Death News) ಘಟನೆ ನಡೆದಿದೆ. ಶಬರೀಶನಗರದ ಡಾ. ಗುರುರಾಜ್ ((46) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಶುಕ್ರವಾರ ಬೆಂಗಳೂರಿನಿಂದ – ಶಿವಮೊಗ್ಗಕ್ಕೆ ರೈಲಿನಲ್ಲಿ ಸಂಚರಿಸುತಿದ್ದಾಗ ಕ್ಯಾತಸಂದ್ರದ ಬಳಿ ರೈಲಿನ ಬಾಗಿಲು ತಾಗಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಡಾ. ಗುರುರಾಜ್ ರಿಪ್ಪನ್‌ಪೇಟೆ, ಹೊಸನಗರ ಮತ್ತು ಗೌತಮಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಸಂಪೆಕಟ್ಟೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚಿಗೆ ಉನ್ನತ ಶಿಕ್ಷಣವನ್ನೂ ಮುಗಿಸಿದ್ದರು.
ರಿಪ್ಪನ್‌ಪೇಟೆ ಪಟ್ಟಣದ ಶಬರೀಶ ನಗರದ ನಿವೃತ್ತ ಶಿಕ್ಷಕ ದಿ. ಗಂಗಾಧರಪ್ಪ ಅವರ ಪುತ್ರರಾದ ಡಾ. ಗುರುರಾಜ್ ಗ್ರಾಮೀಣ ಭಾಗದಲ್ಲಿ ಉತ್ತಮ ವೈದ್ಯಕೀಯ ಸೇವೆ ಸಲ್ಲಿಸಿ ಜನರ ಪ್ರೀತಿಗೆ ಪಾತ್ರರಾಗಿದ್ದರು.
ಮೃತದೇಹವನ್ನು ತುಮಕೂರಿನಲ್ಲಿ ಮರಣೋತ್ತರ ಪರೀಕ್ಷೆ ಮುಗಿಸಿ ರಿಪ್ಪನ್‌ಪೇಟೆಯ ಸರ್ಕಾರಿ ಆಸ್ಪತೆಯಲ್ಲಿ ಅಂತಿಮ ದರ್ಶನಕ್ಕೆ ತರಲಾಗಿತ್ತು. ಈ ಸಂಧರ್ಭದಲ್ಲಿ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ವೈದ್ಯರ ಮೃತದೇಹದ ಅಂತಿಮ ದರ್ಶನ ಪಡೆದರು.
ಇದನ್ನೂ ಓದಿ : Woman missing : ಮನೆಯಿಂದ ಹೊರಹೋದ ಮಹಿಳೆ ಮರಳಿ ಬಂದಿಲ್ಲ, ಮಾನಸಿಕ ಖಿನ್ನತೆಯೇ ಕಾರಣ?