ವಿಜಯಪುರ: ಬಟ್ಟೆ ತೊಳೆಯಲು ಕಾಲುವೆಗೆ ಹೋಗಿದ್ದ ಯುವಕನೊಬ್ಬ ಕಾಲು ಜಾರಿ ನೀರಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ.
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಹೊರ ಭಾಗದಲ್ಲಿ ಕಾಲುವೆ ಇದೆ. ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಗೆ ಬಟ್ಟೆ ತೊಳೆಯಲು ಹೋಗಿದ್ದ ದುರ್ಗಪ್ಪಾ ಗೊಲ್ಲರ (20) ಕಾಲುವೆಐ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಗ್ರಾಮದ ಮೂವರು ಯುವಕರು ಬಟ್ಟೆ ತೊಳೆಯಲು ಕಾಲುವೆಗೆ ಇಳಿದಿದ್ದರು. ಈ ನಡುವೆ ಮೂವರೂ ಜಾರಿ ನೀರಿಗೆ ಬಿದ್ದಿದ್ದಾರೆ. ಉಳಿದ ಇಬ್ಬರು ಈಜಿ ಪಾರಾಗಿದ್ದಾರೆ. ಆದರೆ, ದುರ್ಗಪ್ಪಾ ಈಜು ಬಾರದೇ ಪ್ರಾಣ ಕಳೆದುಕೊಂಡಿದ್ದಾನೆ. ಜೊತೆಗಿದ್ದ ಇಬ್ಬರು ಯುವಕರು ದುರ್ಗಪ್ಪನ ರಕ್ಷಣೆಗೆ ಪ್ರಯತ್ನಿಸಿದರೂ ಅದು ಸಾಧ್ಯವಾಗಲಿಲ್ಲ.
ದುರ್ಗಪ್ಪನ ಶವಕ್ಕಾಗಿ ಸ್ಥಳೀಯರು ಶೋಧ ನಡೆಸುತ್ತಿದ್ದಾರೆ. ಸ್ಥಳಕ್ಕೆ ಮನಗೂಳಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಆಗಮಿಸಿದ್ದು ಹುಡುಕಾಟ ನಡೆಯುತ್ತಿದೆ.
ಬಸ್ ಹಾಗೂ ಲಾರಿ ಡಿಕ್ಕಿ: ೧೫ಕ್ಕೂ ಹೆಚ್ಚು ಮಂದಿಗೆ ಗಾಯ
ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ 15 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗೊಲ್ಲಪಲ್ಲಿ ಗ್ರಾಮದ ಬಳಿ ಘಟನೆ ನಡೆದಿದ್ದು, ಗಾಯಾಳುಗಳನ್ನು ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎರಡು ಆಂಬ್ಯುಲೆನ್ಸ್ ಮೂಲಕ ಗಾಯಾಳುಗಳ ರವಾನಿಸಲಾಗಿದೆ.
ಇದನ್ನೂ ಓದಿ Rain News | ಸೇತುವೆ ದಾಟಲು ಹೋಗಿ ಇಬ್ಬರು ನೀರುಪಾಲು; ಶೋಧಕಾರ್ಯದಲ್ಲಿ ಅಗ್ನಿಶಾಮಕ ಸಿಬ್ಬಂದಿ