Site icon Vistara News

Cm Siddaramaiah: ಯುವ ಜನರನ್ನು ಮಾದಕ ವ್ಯಸನಗಳಿಂದ ಪಾರು ಮಾಡಬೇಕಿದೆ: ಸಿದ್ದರಾಮಯ್ಯ

Cm Siddaramaiah

ಬೆಂಗಳೂರು: ಯುವ ಜನರನ್ನು ಮಾದಕ ವ್ಯಸನಗಳಿಂದ ಪಾರು ಮಾಡಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಹೇಳಿದ್ದಾರೆ. ಯುವಕರೇ ಈ ದೇಶದ ಸಂಪತ್ತು. ಅವರು ಮಾದಕವಸ್ತುಗಳ ವ್ಯಸನಿಗಳಾಗದಂತೆ ಜಾಗೃತಿ ಮೂಡಿಸಲು ಸರ್ಕಾರ ಹಾಗೂ ಸಾರ್ವಜನಿಕರು ಕೈಜೋಡಿಸಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು. ಅವರು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್ ಸಹಯೋಗದೊಂದಿಗೆ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಬಳಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವದ ಅಂಗವಾಗಿ ‘ಪೊಲೀಸ್ ರನ್’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಯುವಕರು ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದಾರೆ. ಕರ್ನಾಟಕ ಮತ್ತು ಬೆಂಗಳೂರು ಮಾದಕವಸ್ತು ಮುಕ್ತವಾಗಿಸಲು ಎಲ್ಲರ ಸಹಕಾರ ಅಗತ್ಯ ಎಂದರು.

ಬೆಂಗಳೂರನ್ನು ಹಸಿರಾಗಿಸಬೇಕು

ಹಸಿರು ಕಡಿಮೆಯಾಗುತ್ತಿರುವ ಬೆಂಗಳೂರನ್ನು ಪುನಃ ಹಸಿರು ನಗರವನ್ನಾಗಿಸುವುದು ಹಾಗೂ ಯುವಕರು ಆರೋಗ್ಯವಂತರಾಗಿ ಬದುಕಬೇಕು ಎನ್ನುವುದು ಉದ್ದೇಶದಿಂದ ಪೊಲೀಸ್ ಓಟ ಆಯೋಜಿಸಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಸಿಎಂ ಹೇಳಿದರು.

ಜನರು ಸಮಾಜದ ಆಸ್ತಿಯಾಗಬೇಕು

ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು, ಅದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಬೇಕಿದೆ. ಸೈಬರ್ ಅಪರಾಧಗಳನ್ನು ಮಾಡಬಾರದು ಎಂಬ ಮನೋಭಾವವೂ ಬೆಳೆಯಬೇಕು. ಜನರು ಸಮಾಜದ ಆಸ್ತಿಯಾಗಬೇಕು ಎಂದು ತಿಳಿಸಿದರು. ಗೃಹ ಸಚಿವ ಜಿ. ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತಿತರರು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್ ಸಹಯೋಗದೊಂದಿಗೆ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಬಳಿ ಆಯೋಜಿಸಲಾಗಿರುವ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವದ ಅಂಗವಾಗಿ ‘ಪೊಲೀಸ್ ರನ್’ ಕಾರ್ಯಕ್ರಮ ಕ್ಕೆ ಚಾಲನೆ ನೀಡಿ ಮಾತನಾಡಿದರು.

ಇದನ್ನೂ ಓದಿ: CM Siddaramaiah : ಬಸವಣ್ಣ ಈ ನೆಲದ ಸ್ಫೂರ್ತಿ, ಸಾರ್ವಕಾಲಿಕ ಶಕ್ತಿ; ಸಿದ್ದರಾಮಯ್ಯ

Exit mobile version