Site icon Vistara News

Physical Abuse: ಬೆಂಗಳೂರಿನಲ್ಲಿ ಯುವತಿ ಮೇಲೆ ಪ್ರಿಯಕರ ಸೇರಿ ಐವರಿಂದ ಗ್ಯಾಂಗ್ ರೇಪ್

gang rape in Mandya

ಬೆಂಗಳೂರು: ಯುವತಿಯ ಮೇಲೆ ಪ್ರಿಯಕರ ಸೇರಿ ಐವರು ಯುವಕರು ಅತ್ಯಾಚಾರ ಮಾಡಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮದುವೆಯಾಗುವುದಾಗಿ ನಂಬಿಸಿ ಅಸ್ಸಾಂನಿಂದ ಬೆಂಗಳೂರಿಗೆ ಯುವತಿಯನ್ನು ಕರೆತಂದಿದ್ದ ಪ್ರಿಯಕರ, ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ (Physical Abuse) ಎಸಗಿದ್ದಾನೆ.

ಯುವತಿ ನೀಡಿದ ದೂರಿನ ಮೇರೆಗೆ ಪ್ರಿಯಕರ ಶಾಹೀದ್ ಉದ್ದೀನ್ ಹಾಗೂ ಆತನ ನಾಲ್ವರು ಸ್ನೇಹಿತರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಕಳೆದ ಒಂದು ವರ್ಷದಿಂದ ಶಾಹೀದ್ ಎಂಬಾತನನ್ನು 20 ವರ್ಷದ ಯುವತಿ ಪ್ರೀತಿಸುತ್ತಿದ್ದಳು. ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಜೂನ್‌ನಲ್ಲಿ ಯುವಕ ಅಸ್ಸಾಂನಿಂದ ಬೆಂಗಳೂರಿಗೆ ಬೆಂಗಳೂರಿಗೆ ಕರೆತಂದಿದ್ದ. ದೊಡ್ಡನಾಗಮಂಗಲದ ಬಾಡಿಗೆ ಮನೆಯಲ್ಲಿ ಯುವತಿಯನ್ನು ಇರಿಸಿದ್ದ.

ಇದನ್ನೂ ಓದಿ | CPI Suspended: ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ಲೋಪ; ಸಿಪಿಐ ಸಸ್ಪೆಂಡ್

ಬಳಿಕ ಸಂತ್ರಸ್ತೆಯ ವಿರೋಧದ ನಡುವೆಯೂ ಆಕೆ ಜತೆಗೆ ಯುವಕ ದೈಹಿಕ ಸಂಪರ್ಕ ಬೆಳೆಸಿದ್ದ. ಇಬ್ಬರ ಖಾಸಗಿ ದೃಶ್ಯಗಳನ್ನು ತನ್ನ ಮೊಬೈಲ್‌ನಲ್ಲಿ ಚಿತ್ರಿಸಿಕೊಂಡಿದ್ದ. ಕೆಲ ದಿನಗಳ ಬಳಿಕ ಶಾಹೀದ್‌ ಬೇರೆ ಹುಡುಗಿ ಜತೆ ಮದುವೆಯಾಗಿದ್ದಾನೆ. ಈ ಬಗ್ಗೆ ಯುವತಿ ಪ್ರಶ್ನೆ ಮಾಡಿದಾಗ ಆರೋಪಿಯು ಬೆಲ್ಟ್‌ನಿಂದ ಹಲ್ಲೆ ನಡೆಸಿ ಮನೆಯ ರೂಮ್‌ನಲ್ಲಿ ಕೂಡಿ ಹಾಕಿದ್ದಾನೆ. ನಂತರ ಪರಿಚಿತ ನಾಲ್ವರನ್ನು ಮನೆಗೆ ಕರೆಸಿ ಸಂತ್ರಸ್ತೆಯ ರೂಮ್‌ಗೆ ಕಳುಹಿಸಿದ್ದ. ಆಕೆ ಎಷ್ಟೇ ಬೇಡಿಕೊಂಡರೂ ಬಿಡದೆ ಗ್ಯಾಂಗ್ ರೇಪ್ ಮಾಡಿದ್ದಾರೆಂದು ದೂರಿನಲ್ಲಿ ಯುವತಿ ತಿಳಿಸಿದ್ದಾರೆ.

ಯುವತಿಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದು ಮಾತ್ರವಲ್ಲದೇ ಆಕೆಯನ್ನು ವೇಶ್ಯಾವಾಟಿಕೆ ದಂಧೆಗೆ ದೂಡಲು ಆರೋಪಿ ಶಾಹೀದ್ ಯತ್ನಿಸಿದ್ದ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

Exit mobile version