ಶಿವಮೊಗ್ಗ: ಗಣೇಶ ಮೂರ್ತಿ ತರುವ ವೇಳೆ ಮಚ್ಚು, ಲಾಂಗು ಹಿಡಿದು ಯುವಕರು ನೃತ್ಯ ಮಾಡಿರುವ ಘಟನೆ (Ganesh Chaturthi) ಭದ್ರಾವತಿ ತಾಲೂಕು ಅರಕೆರೆ ಗ್ರಾಮದಲ್ಲಿ ನಡೆದಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಯುವಕರ ಉದ್ಧಟತನಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
ಮಚ್ಚು, ಲಾಂಗು ಹಿಡಿದು ಯುವಕರು ಡಾನ್ಸ್ ಮಾಡಿರುವ ವಿಡಿಯೊ ವೈರಲ್ ಬೆನ್ನಲ್ಲೇ ಎಚ್ಚೆತ್ತ ಹೊಳೆಹೊನ್ನೂರು ಠಾಣೆ ಪೊಲೀಸರು, ಯುವಕರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಗ್ರಾಮಸ್ಥರ ಮಧ್ಯಸ್ಥಿಕೆಯಲ್ಲಿ ರಾಜಿ ಪಂಚಾಯಿತಿ ನಡೆಸಿದಾಗ, ಉದ್ದೇಶಪೂರ್ವಕವಾಗಿ ನಡೆಸಿದ ಕೃತ್ಯವಲ್ಲ ಎಂದ ಹುಡುಗರು ಹೇಳಿದ್ದಾರೆ. ನಂತರ ಪೊಲೀಸರು ಯುವಕರ ಪೂರ್ವಾಪರ ವಿಚಾರಿಸಿ ಎಚ್ಚರಿಕೆ ನೀಡಿ ವಾಪಸ್ ಕಳುಹಿಸಿದ್ದಾರೆ.
ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಪೊಲೀಸ್ ಕಾನ್ಸ್‌ಟೇಬಲ್ ಸಾವು
ಧಾರವಾಡ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಪೊಲೀಸ್ ಕಾನ್ಸ್‌ಟೇಬಲ್ ಮೃತಪಟ್ಟಿರುವ ಘಟನೆ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ನಡೆದಿದೆ. ಹುಚ್ಚೇಶ ಹಿರೇಗೌಡರ (37) ಮೃತ ಕ್ಯಾನ್ಸ್‌ಟೇಬಲ್. ಇದೇ ವೇಳೆ ಹಿಂಬದಿ ಕುಳಿತಿದ್ದ ಲಕ್ಷ್ಮೀ ಎಂಬ ಮಹಿಳಾ ಕಾನ್ಸ್‌ಟೇಬಲ್‌ಗೆ ಗಂಭೀರ ಗಾಯಗಳಾಗಿವೆ.
ಇದನ್ನೂ ಓದಿ | Police torture: ವಿಚಾರಣೆಗೆ ಕರೆಸಿ ಚಿತ್ರಹಿಂಸೆ; ಮಾಡದ ತಪ್ಪಿಗೆ ಹೊಡೆತ ತಿಂದು ಆತ್ಮಹತ್ಯೆ ಮಾಡಿಕೊಂಡನಾ ಆ ನಾಗರಾಜ್?
ಛಬ್ಬಿ ಗಣೇಶೋತ್ಸವ ಬಂದೋಬಸ್ತ್‌ಗೆ ತೆರಳಿದ್ದ ಸಿಬ್ಬಂದಿ ಡ್ಯೂಟಿ ಮುಗಿಸಿ ಮರಳಿ ಬರುವಾಗ ಅಪಘಾತ ನಡೆದಿದೆ. ಎದುರಿನಿಂದ ಬಂದ ಅಪರಿಚಿತ ವಾಹನ ಡಿಕ್ಕಿಯಾಗಿ ಕಾನ್ಸ್‌ಟೇಬಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.