ಚಿಕ್ಕಬಳ್ಳಾಪುರ/ಕಾರವಾರ : ಇಲ್ಲಿನ ಚಿಂತಾಮಣಿಯ ಕನ್ನಂಪಲ್ಲಿ ಕೆರೆಗೆ ಬಿದ್ದು ಯುವಕ (youth Drowned in river) ಮೃತಪಟ್ಟಿದ್ದಾನೆ. ಮಹಮದ್ ದಾನೇಶ್ (17) ಮೃತ ದುರ್ದೈವಿ.
ಚಿಂತಾಮಣಿ ತಾಲ್ಲೂಕಿನ ತಳಗವಾರ ಗ್ರಾಮದ ನಿವಾಸಿ ಆಗಿರುವ ಮಹಮದ್, ಶುಕ್ರವಾರ ಮನೆ ಬಿಟ್ಟು ಹೋಗಿದ್ದ. ಇಂದು ಕೆರೆಯಲ್ಲಿ ಆತನ ಮೃತದೇಹವು ಪತ್ತೆ ಆಗಿದೆ.
ಮೃತದೇಹ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದರು. ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಯುವಕನ ಮೃತದೇಹವನ್ನು ಹೊರ ತೆಗೆದಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Murder Case : ಕುಡಿದ ಮತ್ತಿನಲ್ಲಿ ಸಂಬಂಧಿಕರ ಗಲಾಟೆ; ಕೊಲೆಯಲ್ಲಿ ಅಂತ್ಯ!
ಖಾಸಗಿ ಬಸ್ ಡಿಕ್ಕಿಯಾಗಿ ಪಾದಚಾರಿ ಸಾವು
ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 69ರ ಮಾರುಕಟ್ಟೆ ಬಳಿ ಖಾಸಗಿ ಬಸ್ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಾದಚಾರಿ ಗುರುತು ಪತ್ತೆಯಾಗಿಲ್ಲ. ತಲೆಗೆ ಗಂಭೀರವಾಗಿ ಹೊಡೆತ ಬಿದ್ದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಹೊನ್ನಾವರ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸೀಬರ್ಡ್ ಬಸ್‌ನ್ನು ಸಿದ್ದಾಪುರ ಮೂಲದ ಚಾಲಕ ಜಯಂತ ನಾಯ್ಕ ಬಸ್ ಬಿಟ್ಟು ಪರಾರಿ ಆಗಿದ್ದಾನೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದು, ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ