Site icon Vistara News

Power Point with HPK : ರಾಜ್ಯದಲ್ಲಿ YST ಟ್ಯಾಕ್ಸ್‌ ಇದೆ; ಲೋಕಾಯುಕ್ತಕ್ಕೆ ಭ್ರಷ್ಟಾಚಾರದ ತನಿಖೆ ವಹಿಸಿ: ಡಾ. ಅಶ್ವತ್ಥನಾರಾಯಣ

Ashwath Narayana in Power point with HPK

ಬೆಂಗಳೂರು: ಪೇಸಿಎಂ ಸೇರಿದಂತೆ ಹಲವು ಅಭಿಯಾನಗಳನ್ನು ಕಾಂಗ್ರೆಸ್‌ನವರು ಆಧಾರ ರಹಿತವಾಗಿ ಮಾಡಿದರು. ಸುಳ್ಳನ್ನು ಸತ್ಯದ ತಲೆ ಮೇಲೆ ಹೊಡೆದಂತೆ ಹೇಳುವುದರಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಿಸ್ಸೀಮರು. ಅದೇ ರೀತಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಸಹ. ಅವರ ಈ ಆಪಾದನೆಯನ್ನು ನಾವು ನಿರ್ಲಕ್ಷ್ಯ ಮಾಡಿರುವುದು ಸಹ ನಮ್ಮ ಸೋಲಿಗೆ ಒಂದು ಕಾರಣವಾಗಿದೆ. ಆದರೆ, ಇದೇ ಈಗ ಪುನರಾವರ್ತನೆ ಆಗಿದೆ. ಈಗ ವೈಎಸ್‌ಟಿ ಟ್ಯಾಕ್ಸ್‌ ಬಂದಿದೆ ಎಂದು ಬೆಂಗಳೂರಿನ ಮಲ್ಲೇಶ್ವರ ಶಾಸಕ, ಮಾಜಿ ಡಿಸಿಎಂ ಡಾ. ಸಿ.ಎನ್.‌ ಅಶ್ವತ್ಥನಾರಾಯಣ (Dr CN Ashwathnarayan) ಅವರು ಪವರ್‌ ಪಾಯಿಂಟ್‌ ವಿತ್ ಎಚ್‌ಪಿಕೆ (Power Point with HPK) ಸಂದರ್ಶನದಲ್ಲಿ ಹೇಳಿದರು.

ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ (Hariprakash Konemane) ಅವರು ನಡೆಸಿಕೊಡುವ “ಪವರ್‌ ಪಾಯಿಂಟ್‌ ವಿತ್‌ ಎಚ್‌ಪಿಕೆ” ವಿಶೇಷ ಸಂದರ್ಶನದಲ್ಲಿ ಮಾತನಾಡಿದ‌ ಡಾ. ಸಿ.ಎನ್.‌ ಅಶ್ವತ್ಥನಾರಾಯಣ, ಈ ಸರ್ಕಾರ ಭ್ರಷ್ಟಾಚಾರ ಮಾಡುತ್ತಿದೆ. ಈಗ ನಾವು ವಾಪಸ್‌ ಕೇಳುವ ಪರಿಸ್ಥಿತಿ ಬಂದಿದೆ. ರಾಜ್ಯದಲ್ಲಿ ಹೊಸ ಟ್ಯಾಕ್ಸ್‌ ಪರಿಪಾಠ ಬಂದಿದೆ. ವೈಎಸ್‌ಟಿ ಟ್ಯಾಕ್ಸ್‌ ಸಂಸ್ಕೃತಿ ಬಂದಿದೆ ಎಂದು ಆರೋಪಿಸಿದರು.

ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ದೊಡ್ಡ ಪ್ರಮಾಣದಲ್ಲಿ ಆದಾಯವನ್ನು ಗಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆಯನ್ನೂ ಎದುರಿಸುತ್ತಿದ್ದಾರೆ. ಇಂದು ರಾಜ್ಯ ಸರ್ಕಾರದಲ್ಲಿ ದುಡ್ಡಿಲ್ಲ. ಹಾಗಾಗಿ ದುಡ್ಡು ಹೇಗೆ ಮಾಡಬಹುದು? ಹೆಚ್ಚಿನ ಆದಾಯವನ್ನು ಹೇಗೆ ಗಳಿಸಬಹುದು ಎಂದು ಸಿಎಂ ಸಿದ್ದರಾಮಯ್ಯ ಅವರಿಗೂ ಹೇಳಿಕೊಟ್ಟು ರಾಜ್ಯ ಸರ್ಕಾರದ ಖಜಾನೆಯನ್ನು ತುಂಬಿಕೊಡಲಿ. ಅಲ್ಲದೆ, ರಾಜ್ಯ ಯುವ ಜನತೆಗೂ ಹೇಳಿಕೊಡಲಿ ಎಂದು ಡಾ. ಸಿ.ಎನ್.‌ ಅಶ್ವತ್ಥನಾರಾಯಣ ವ್ಯಂಗ್ಯವಾಡಿದರು.

ಇದನ್ನೂ ಓದಿ: Power Point with HPK : ಎಸ್‌ಟಿ ಸೋಮಶೇಖರ್‌, ಭೈರತಿ ಬಸವರಾಜ್‌ಗೆ ಕಾಂಗ್ರೆಸ್‌ನಿಂದ ಬ್ಲ್ಯಾಕ್‌ಮೇಲ್‌!

ಯಡಿಯೂರಪ್ಪ ಅವರನ್ನು ನಿರ್ಲಕ್ಷ್ಯ ಮಾಡಿಲ್ಲ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಮ್ಮ ನಾಯಕರು. ಅವರನ್ನು ನಮ್ಮ ಪಕ್ಷದಲ್ಲಿ ನಿರ್ಲಕ್ಷ್ಯ ಮಾಡಿಲ್ಲ. ತಮ್ಮ ಅವಧಿಯಲ್ಲಿಯೇ ಇನ್ನೊಬ್ಬ ನಾಯಕನಿಗೆ ಅವಕಾಶ ಸಿಗಲಿ ಎಂಬ ಕಾರಣಕ್ಕೆ ಯಡಿಯೂರಪ್ಪ ಅವರೇ ಸ್ವಯಂ ಪ್ರೇರಿತರಾಗಿ ಅಧಿಕಾರವನ್ನು ಬಿಟ್ಟುಕೊಟ್ಟರು. ಇಂದಿಗೂ ಅವರ ಮಾರ್ಗದರ್ಶನವನ್ನು ನಾವು ಪಡೆಯುತ್ತಿದ್ದೇವೆ ಎಂದು ಡಾ. ಸಿ.ಎನ್.‌ ಅಶ್ವತ್ಥನಾರಾಯಣ ಹೇಳಿದರು.

Exit mobile version