Site icon Vistara News

Yuva Nidhi Scheme: ಬೆಳಗಾವಿಯಲ್ಲಿ ಅತಿ ಹೆಚ್ಚು ನಿರುದ್ಯೋಗಿ ಯುವ ಜನತೆ!

Yuva Nidhi Scheme Belagavi has the highest number of unemployed youth

ಬೆಂಗಳೂರು: ಬೆಳಗಾವಿಯಲ್ಲಿ ಅತಿ ಹೆಚ್ಚು ನಿರುದ್ಯೋಗಿ ಯುವಕರು (Unemployed youth) ಇದ್ದಾರೆ ಎಂಬ ವಿಷಯ ಇದೀಗ ಬಹಿರಂಗವಾಗಿದೆ. ಈ ವಿಚಾರ ಬೆಳಕಿಗೆ ಬಂದಿದ್ದು ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ (Congress Guarantee Scheme) ಯೋಜನೆಯಿಂದ! ಅಂದರೆ ಐದನೇ ಗ್ಯಾರಂಟಿಯಾದ ಯುವನಿಧಿ ಯೋಜನೆಗೆ (Yuva Nidhi Scheme) ಬೆಳಗಾವಿಯಲ್ಲೇ ಅತಿ ಹೆಚ್ಚು ಯುವ ಜನತೆ ನೋಂದಣಿ ಮಾಡಿಸಿದ್ದಾರೆ. ಹೀಗಾಗಿ ಈ ಜಿಲ್ಲೆಯಲ್ಲಿ ನಿರುದ್ಯೋಗಿಗಳು ಹೆಚ್ಚು ಮಂದಿ ಇದ್ದಾರೆ ಎಂಬ ಸತ್ಯ ಗೊತ್ತಾಗಿದೆ.

ಯುವನಿಧಿ ಯೋಜನೆಗೆ ಈವರೆಗೂ 1,24,183 ನಿರುದ್ಯೋಗಿ ಯುವಕ, ಯುವತಿಯರಿಂದ ನೋಂದಣಿಯಾಗಿದೆ. ಕಳೆದ ಡಿಸೆಂಬರ್ 26ರಿಂದ ನೋಂದಣಿ ಪ್ರಕ್ರಿಯೆಗೆ ಚಾಲನೆ ದೊರೆತಿದೆ. 45 ದಿನದಲ್ಲಿ 1.24 ಲಕ್ಷ ಜನರಿಂದ ನೋಂದಣಿ ಮಾಡಿಕೊಳ್ಳಲಾಗಿದೆ. ಸೇವಾಸಿಂಧು ಪೋರ್ಟಲ್‌ನಲ್ಲಿ ನಿರುದ್ಯೋಗಿ ಯುವ ಜನತೆ ನೋಂದಣಿ ಮಾಡಿಕೊಂಡಿದ್ದಾರೆ. ಈ ದತ್ತಾಂಶದಿಂದ ಬೆಳಗಾವಿಯಲ್ಲೇ ಅತಿ‌ ಹೆಚ್ಚು ನಿರುದ್ಯೋಗಿಗಳಿದ್ದಾರೆ ಎಂಬ ಸಂಗತಿ ಗೊತ್ತಾಗಿದೆ.

ಪ್ರತಿ ತಿಂಗಳು ಪ್ರಮಾಣ ಪತ್ರ ಸಲ್ಲಿಸಿದರೆ ಮಾತ್ರ ಯುವನಿಧಿ ಹಣ ಜಮೆ

ಅಭ್ಯರ್ಥಿಗಳು ಯುವನಿಧಿ ಯೋಜನೆಯನ್ವಯ ಪ್ರತಿ ತಿಂಗಳು ಹಣ ಪಡೆಯಬೇಕಾದರೆ ಪ್ರತಿ ತಿಂಗಳಲ್ಲೂ ತಮಗೆ ಕೆಲಸ ಸಿಕ್ಕಿಲ್ಲ, ಉನ್ನತ ಶಿಕ್ಷಣಕ್ಕೆ ದಾಖಲಾಗಿಲ್ಲ ಎಂದು ಸ್ವಯಂ ಘೋಷಿತ ಪ್ರಮಾಣ ಪತ್ರವನ್ನು ಸೇವಾ ಸಿಂಧು ಪೋರ್ಟಲ್‌ ಮೂಲಕ ಅಪ್ಲೋಡ್ ಮಾಡಬೇಕಿದೆ.

ಈ ಸಂಬಂಧ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಒಂದು ವೇಳೆ ಮಾಹಿತಿಯನ್ನು ಅಪ್ಲೋಡ್‌ ಮಾಡದೇ ಇದ್ದರೆ ಅಂಥವರಿಗೆ ಆ ತಿಂಗಳ ಹಣ ಜಮೆ ಆಗುವುದಿಲ್ಲ. ಹೀಗಾಗಿ ಪ್ರತಿ ತಿಂಗಳು ಅಪ್ಡೇಟ್‌ ಮಾಡುವುದು ಕಡ್ಡಾಯವಾಗಿದೆ. ಸುಳ್ಳು ಮಾಹಿತಿ ನೀಡಿದರೆ ಅಂಥವರ ಮೇಲೆ ಕ್ರಮ ಕೈಗೊಳ್ಳುವುದಲ್ಲದೆ ಪಡೆದ ಹಣವನ್ನು ವಸೂಲಿ ಮಾಡುವುದಾಗಿಯೂ ಸರ್ಕಾರ ಹೇಳಿದೆ.

ಸರ್ಕಾರ ಎಲ್ಲಿಂದ ಮಾಹಿತಿ ಪಡೆಯಲಿದೆ?

ನ್ಯಾಷನಲ್ ಅಕಾಡೆಮಿಕ್ ಡಿಪಾಸಿಟರಿಯಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಪದವೀಧರರ ಪ್ರಮಾಣ ಪತ್ರಗಳಿದ್ದು, ಅಲ್ಲಿಂದಲೂ ಮಾಹಿತಿ ಪಡೆಯಲಾಗುತ್ತಿದೆ. ದಾಖಲೆಗಳು ಹೊಂದಾಣಿಕೆಯಾಗಿ ಫಲಿತಾಂಶ ಬಂದು ಆರು ತಿಂಗಳು ಆದ ಅಭ್ಯರ್ಥಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಇಷ್ಟಿದ್ದರೂ ಅಭ್ಯರ್ಥಿಗಳು ಪ್ರತಿ ತಿಂಗಳು ಕೆಲಸ ಸಿಕ್ಕಿಲ್ಲ, ಉನ್ನತ ಶಿಕ್ಷಣಕ್ಕೆ ಹೋಗಿಲ್ಲ ಎಂದು ಸ್ವಯಂ ಘೋಷಿತ ಪ್ರಮಾಣ ಪತ್ರವನ್ನು ಅಪ್ಲೋಡ್ ಮಾಡಬೇಕಿದೆ.

ಯುವ ನಿಧಿ ನೋಂದಣಿ ಹೇಗೆ? ಇಲ್ಲಿದೆ ವಿಡಿಯೋ

ಅರ್ಹತೆ ಏನು?

ಯಾರು ಫಲಾನುಭವಿಗಳು?

ಯಾರು ಅನರ್ಹರು?

ಯುವ ನಿಧಿಗೆ ಅರ್ಜಿ ಸಲ್ಲಿಕೆ ಹೇಗೆ?

ಇದನ್ನೂ ಓದಿ: Housing Scheme: ರಾಜೀವ್ ವಸತಿ ಯೋಜನೆಗೆ ನೋಂದಣಿ ಶುರು; ಸ್ವಂತ ಸೂರು ನಿಮ್ಮದಾಗಲು ಹೀಗೆ ಮಾಡಿ

ಯುವ ನಿಧಿ ಅರ್ಜಿ ಎಲ್ಲಿ ಸಲ್ಲಿಸಬೇಕು?

ಯುವನಿಧಿಗೆ ಅರ್ಹತೆ ಹೊಂದಿರುವ ಯುವಕ ಯುವತಿಯರು ‘ಸೇವಾ ಸಿಂಧು’ ಪೋರ್ಟಲ್‌, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳು, ಗ್ರಾಮ ಒನ್‌ಗಳಲ್ಲಿ ಅರ್ಜಿ ಸಲ್ಲಿಸಬಹುದು.

Exit mobile version