ಬೆಂಗಳೂರು: ಇಲ್ಲಿನ ಕನಕಪುರ ರಸ್ತೆಯ ವಾಜರಹಳ್ಳಿ ಮೆಟ್ರೋ ನಿಲ್ದಾಣದ ಬಳಿ ನೂತನವಾಗಿ ನಿರ್ಮಿಸಿರುವ ಝೈಮಸ್ ಆಸ್ಪತ್ರೆಯನ್ನು (Zymus Hospital Opening) ಭಾನುವಾರ ಲೋಕಾರ್ಪಣೆ ಮಾಡಲಾಯಿತು. ಹೆಲ್ತ್ ಕೇರ್ ಗ್ಲೋಬಲ್ ಎಂಟರ್ ಪ್ರೈಸಸ್‌ನ ಎಕ್ಸಿಕ್ಯುಟಿವ್ ಚೇರ್‌ಮನ್ ಡಾ.ಅಜಯ್ ಕುಮಾರ್ ಈ ನೂತನ ಆಸ್ಪತ್ರೆಯ ಉದ್ಘಾಟನೆ ನೆರವೇರಿಸಿದರು.
ಉದ್ಘಾಟನೆ ಬಳಿಕ ಮಾತನಾಡಿದ ಆಸ್ಪತ್ರೆಯ ನಿರ್ದೇಶಕ ರಾಘವೇಂದ್ರ ಬಾಬು, ನಮ್ಮ ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಸೌಲಭ್ಯಗಳಿದ್ದು, ಬೇರೆ ಕಾರ್ಪೋರೇಟ್ ಆಸ್ಪತ್ರೆಗಳಿಗಿಂತ ಹೆಚ್ಚಿನ ಸೇವೆ ನೀಡಲು ಆಸ್ಪತ್ರೆ ಸಜ್ಜಾಗಿದೆ ಎಂದರು. ಆರೋಗ್ಯ ಸೇವೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ ನಮ್ಮ ಆಸ್ಪತ್ರೆ ಸ್ಥಾಪನೆಯಾಗಿದೆ. ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ಸದಾ ಸಿದ್ಧರಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಡಾ.ರಾಜೇಶ್, ಡಾ. ಮಹೇಶ್, ಡಾ. ಅನಿಲ್ ಕುಮಾರ್ ಸೇರಿ ಹಲವರು ಭಾಗಿಯಾಗಿದ್ದರು.