Site icon Vistara News

Amithab Bacchan :14ನೇ ವರ್ಷಕ್ಕೆ ಕಾಲಿಟ್ಟ ʼರಾವಣ್ʼ ಚಿತ್ರ; ಮಗನನ್ನು ಹೊಗಳಿ ಸೊಸೆಯನ್ನು ನಿರ್ಲಕ್ಷಿಸಿದ ಅಮಿತಾಭ್!

Amithab Bacchan

ಮುಂಬೈ: ಬಾಲಿವುಡ್‌ ಖ್ಯಾತ ನಟ ಅಮಿತಾಭ್‌ ಬಚ್ಚನ್ (Amithab Bacchan) ತಮ್ಮ ನಟನೆಯ ಮೂಲಕ ಎಲ್ಲರ ಮನ ಸೆಳೆದವರು. ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡುವ ಮೂಲಕ ಜನಪ್ರಸಿದ್ಧರಾಗಿದ್ದಾರೆ. ಇನ್ನು ಬಿಗ್‌ ಬಿ ಕುಟುಂಬವು ಕೂಡ ಸಿನಿಮಾ ರಂಗದಲ್ಲಿ ಹೆಸರು ಮಾಡಿದೆ. ಮಗ ಅಭಿಷೇಕ್ ಬಚ್ಚನ್, ಪತ್ನಿ ಜಯಾ ಬಚ್ಚನ್, ಸೊಸೆ ಐಶ್ವರ್ಯಾ ರೈ ಬಚ್ಚನ್ ಅವರು ಕೂಡ ಸಿನಿಮಾ ರಂಗದಲ್ಲಿ ಮಿಂಚಿದವರೇ. ಆದರೆ ಇದೀಗ ನಟ ಅಮಿತಾಭ್ ಬಚ್ಚನ್ ಅವರನ್ನು ಜನರು ಸೋಶಿಯಲ್ ಮೀಡಿಯಾದಲ್ಲಿ ಹಿಗ್ಗಾಮುಗ್ಗಾ ಟ್ರೋಲ್ ಮಾಡಿದ್ದಾರೆ.

ಇತ್ತೀಚೆಗೆ ನಟ ಅಮಿತಾಭ್ ಬಚ್ಚನ್ ಅವರು ತಮ್ಮ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ತಮ್ಮ ಮಗ ಅಭಿಷೇಕ್ ಬಚ್ಚನ್ ಅಭಿನಯದ ‘ರಾವಣ್’ ಚಿತ್ರ 14ನೇ ವರ್ಷಕ್ಕೆ ಕಾಲಿಟ್ಟ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಅಭಿಷೇಕ್ ಅವರ ನಟನೆಯನ್ನು ಹೊಗಳಿದ್ದಾರೆ. ಆದರೆ ಅದರಲ್ಲಿ ನಟಿಸಿದ ತಮ್ಮ ಸೊಸೆ ಐಶ್ವರ್ಯಾ ರೈ ಬಚ್ಚನ್ ಅವರ ಬಗ್ಗೆ ಎಲ್ಲೂ ಉಲ್ಲೇಖ ಮಾಡಲಿಲ್ಲ.

ತಮ್ಮ ಸೊಸೆ ಐಶ್ವರ್ಯಾ ರೈ ಬಚ್ಚನ್ ಅವರನ್ನು ಉಲ್ಲೇಖಿಸದೆ ನಿರ್ಲಕ್ಷ್ಯ ಮಾಡಿದ್ದಕ್ಕೆ ನೆಟ್ಟಿಗರು ಅಮಿತಾಭ್ ಬಚ್ಚನ್ ಅವರನ್ನು ಟ್ರೋಲ್ ಮಾಡಿದ್ದಾರೆ. ಮಣಿರತ್ನಂ ಅವರ ನಿರ್ದೇಶನದ ‌ʼರಾವಣ್ʼ ಚಿತ್ರ ಬಿಡುಗಡೆಯಾಗಿ ಜೂನ್ 18, 2024ಕ್ಕೆ 14 ವರ್ಷ ಪೂರೈಸಿದೆ. ಅಭಿಷೇಕ್ ಬಚ್ಚನ್ ಅಭಿಮಾನಿ ಸಂಘವೊಂದು ಈ ದಿನವನ್ನು ಆಚರಿಸಲು ಪೋಸ್ಟ್ ಅನ್ನು ಹಂಚಿಕೊಂಡಿದೆ. ಆಗ ಅಮಿತಾಭ್ ಬಚ್ಚನ್ ಅವರು ಚಿತ್ರವನ್ನು ಪೋಸ್ಟ್ ಮಾಡಿ, “ಅಭಿಷೇಕ್ ಅಭಿನಯ ಮರೆಯಲಾಗದಂತಹದು. ನಿಮ್ಮ ಇತರ ಚಿತ್ರಗಳಿಗಿಂತ ಈ ಚಿತ್ರ ತುಂಬಾ ಭಿನ್ನವಾಗಿದೆ. ಮತ್ತು ಇದು ಕಲಾವಿದನಿಗೆ ನಿಜವಾದ ಮೌಲ್ಯವನ್ನು ನೀಡುತ್ತದೆ” ಎಂದು‌ ಶ್ಲಾಘಿಸಿ ಬರೆದಿದ್ದಾರೆ.

ಆದರೆ ಈ ಚಿತ್ರದಲ್ಲಿ ನಟಿ ಐಶ್ವರ್ಯಾ ರೈ ಬಚ್ಚನ್ ಅಭಿಷೇಕ್ ಜೊತೆ ಮುಖ್ಯ ಪಾತ್ರದಲ್ಲಿ ನಟಿಸಿದ್ದರು ಮತ್ತು ಅವರ ಅಭಿನಯವನ್ನು ಅಭಿಮಾನಿಗಳು ಹೊಗಳಿದ್ದರು. ಆದರೆ ಈ ಪೋಸ್ಟ್ ನಲ್ಲಿ ಅಮಿತಾಭ್‌ ಬಚ್ಚನ್ ಅವರು ಎಲ್ಲೂ ತಮ್ಮ ಸೊಸೆ ಐಶ್ವರ್ಯಾ ರೈ ಬಚ್ಚನ್ ಬಗ್ಗೆ ಉಲ್ಲೇಖಿಸಿಲ್ಲ. ಹೀಗಾಗಿ ಈ ಬಗ್ಗೆ ನೆಟ್ಟಿಗರು ಅಮಿತಾಭ್ ಅವರನ್ನು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Working Hours: ಅತಿ ಹೆಚ್ಚು ಕೆಲಸದ ಸಮಯ ಹೊಂದಿರುವ ದೇಶಗಳಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ?

ಈ ಹಿಂದೆ ಕೂಡ ಕಜಾ ರಾರೇ ಹಾಡು 19ನೇ ವರ್ಷಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ ಅಮಿತಾಭ್ ಅವರು ಅಭಿಷೇಕ್ ಅವರನ್ನು ಹೊಗಳಿ ತಮ್ಮ ಸೊಸೆ ನಟಿ ಐಶ್ವರ್ಯಾ ರೈ ಬಚ್ಚನ್ ಬಗ್ಗೆ ಉಲ್ಲೇಖಿಸಿರಲಿಲ್ಲ. ಕಜಾ ರಾರೇ ಹಾಡಿನಲ್ಲಿ ಅಮಿತಾಭ್ ಬಚ್ಚನ್, ಅಭಿಷೇಕ್ ಬಚ್ಚನ್ ಹಾಗೂ ನಟಿ ಐಶ್ವರ್ಯಾ ರೈ ಬಚ್ಚನ್ ಕಾಣಿಸಿಕೊಂಡಿದ್ದರು.
ಇದರಿಂದ ಅಮಿತಾಭ್ ಬಚ್ಚನ್ ಅವರ ಕುಟುಂಬದಲ್ಲಿ ಸಮಸ್ಯೆ ಇರಬೇಕು. ಹಾಗಾಗಿ ಅವರು ತಮ್ಮ ಸೊಸೆಯ ಬಗ್ಗೆ ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ ಎಂಬುದಾಗಿ ಜನರು ಮಾತನಾಡಿಕೊಳ್ಳುತ್ತಿದ್ದಾರೆ.

Exit mobile version