ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌ನ ಉಮೇಶ್ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್ ಮೇಟಿಯವರ ತಂದೆ ಹೆಚ್.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿದೆ.
ಬಾಗಲಕೋಟೆಯಲ್ಲಿ ಕಾಂಗ್ರೆಸ್‌ನ ಉಮೇಶ್ ಮೇಟಿ ಭರ್ಜರಿ ಗೆಲುವು

