ದೆಹಲಿ: ಬಿಜೆಪಿ ನಾಯಕಿ ದಿವಂಗತ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್ (Bansuri Swaraj) ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ತಾಯಿಯ ಸಂಪ್ರದಾಯವನ್ನು ಮುಂದುವರಿಸಿದ್ದಾರೆ. ಲೋಕಸಭೆಯಲ್ಲಿ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಸಂದರ್ಭದಲ್ಲಿ, ತಾಯಿ ಸುಷ್ಮಾ ಸ್ವರಾಜ್ ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದನ್ನು ನೆಟ್ಟಿಗರು ನೆನಪಿಸಿಕೊಂಡಿದ್ದಾರೆ.
“ತಾಯಿಯಂತೆ ಮಗಳು’ ಎಂಬ ಶೀರ್ಷಿಕೆಯಡಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಸುಷ್ಮಾ ಸ್ವರಾಜ್ ಹಾಗೂ ಬಾನ್ಸುರಿ ಸ್ವರಾಜ್ ಇಬ್ಬರೂ ಲೋಕಸಭೆಯಲ್ಲಿ ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿರುವ ವೀಡಿಯೋವನ್ನು ಸಂಯೋಜಿಸಲಾಗಿದೆ. ದಿವಂಗತ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್ ಅವರಿಗೆ ನವದೆಹಲಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಲಾಗಿತ್ತು. ಅಲ್ಲಿ ಅವರು ಎದುರಾಳಿ ಎಎಪಿಯ ಸೋಮನಾಥ್ ಭಾರ್ತಿ ಅವರನ್ನು 78,370 ಮತಗಳ ಅಂತರದಿಂದ ಸೋಲಿಸಿದ್ದರು.
BJP MP @BansuriSwaraj ji takes oath in Sanskrit. Amazing 👏🏻 pic.twitter.com/9cjICdZLNO
— Mr Sinha (@MrSinha_) June 24, 2024
ಇದನ್ನೂ ಓದಿ: ವೃದ್ಧ ರೋಗಿಯ ಮೇಲೆ ದರ್ಪ ತೋರಿದ ಆಸ್ಪತ್ರೆ ಸಿಬ್ಬಂದಿ; ಆಘಾತಕಾರಿ ವಿಡಿಯೊ
1975ರ ತುರ್ತು ಪರಿಸ್ಥಿತಿ ಹೇರಿಕೆ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಕಟ್ಟುನಿಟ್ಟಿನ ಮನವಿಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ನಡುವೆ ಮಾತಿನ ಚಕಮಕಿ ನಡೆಯುವ ಮೂಲಕ 18ನೆಯ ಲೋಕಸಭೆಯ ಮೊದಲ ದಿನ ಅಂತ್ಯಗೊಂಡಿತು. ಪ್ರಧಾನಿ ಸೇರಿದಂತೆ ಹೊಸದಾಗಿ ಚುನಾಯಿತರಾದ ಒಟ್ಟು 262 ಸಂಸದರು ಪ್ರಮಾಣ ವಚನ ಸ್ವೀಕರಿಸಿದರು.