Site icon Vistara News

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು: ಪ್ರಧಾನಿ ಮೋದಿ ವಿಶ್ವಾಸ

ಕೃಷ್ಣಾನಗರ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಎರಡನೇ ಹಂತದ ಚುನಾವಣೆ ನಡೆಯಲಿರುವ ಕೃಷ್ಣಾನಗರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ರಾಜ್ಯದಲ್ಲಿ ಇಂದು ಮತದಾನ ಶಾಂತಿಯುತವಾಗಿ ನಡೆಯುತ್ತಿದೆ. ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಜನ ಬದಲಾವಣೆ ಬಯಸಿರುವುದನ್ನು ತೋರಿಸುತ್ತದೆ. ಹಿಂಸಾಚಾರವು ಐವತ್ತು ವರ್ಷಗಳಲ್ಲಿ ಕನಿಷ್ಠ ಮಟ್ಟ ತಲುಪಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ನಡೆದಾಗಲೆಲ್ಲಾ ಬಿಜೆಪಿಗೆ ಗೆಲುವು ಕಟ್ಟಿಟ್ಟ ಎಂದರು.
ನಾನು ಜಲ್ಮುರಿ ಸೇವಿಸಿದ್ದಕ್ಕೆ ಆಡಳಿತಾರೂಢ ಪಕ್ಷ ಟಿಎಂಸಿ ಆಕ್ಷೇಪ ವ್ಯಕ್ತಪಡಿಸಿದೆ. ನಾನು ಜಲ್ಮುರಿ ಸವಿದಿದ್ದಕ್ಕೆ ಟಿಎಂಸಿ ನಾಯಕರು ಮೆಣಸಿನಕಾಯಿ ಉರಿಯನ್ನು ಅನುಭವಿಸುತ್ತಿರುವಂತೆ ಕಾಣುತ್ತಿದೆ ಎಂದು ವ್ಯಂಗ್ಯವಾಡಿದರು.

Exit mobile version