ಕಲಬುರಗಿ: ಅಫಜಲಪುರ ಶಾಸಕ (Congress MLA) ಎಂ.ವೈ ಪಾಟೀಲ್ ಅವರು ಚುನಾವಣಾ ಪ್ರಚಾರಕ್ಕೆ ಹೋಗುತ್ತಿದ್ದ ವೇಳೆ ಅವರಿಗೆ ಬಿಜೆಪಿ ಕಾರ್ಯಕರ್ತರು ಘೇರಾವ್ ಕೂಗಿದ ಘಟನೆ ನಡೆದಿದೆ ಈ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.
ಕೈ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಬಡದಾಳ ಗ್ರಾಮಕ್ಕೆ ತೆರಳಿದ ಶಾಸಕ ಎಂ.ವೈ.ಪಾಟೀಲ್ ಅವರಿಗೆ ರಸ್ತೆ ಮಾಡುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ರಸ್ತೆ ಮಾಡಿ ಅಂದಾಗ ಎಲ್ಲಿ ಹೋಗಿದ್ರಿ ಅಂತಾ ಕೈ ಶಾಸಕರಿಗೆ ಬಿಜೆಪಿ ಕಾರ್ಯಕರ್ತರು ಜೋರಾಗಿ ಪ್ರಶ್ನಿಸಿದ್ದಾರೆ. ಅಲ್ಲದೆ ಜೈ ಶ್ರೀರಾಮ ಘೋಷಣೆ ಹಾಕಿರು. ಈ ವೇಳೆ ಕಾಂಗ್ರೆಸ್ ಹಾಗೂ ಕಮಲ ಕಾರ್ಯಕರ್ತರ ನಡುವೆ ಚಕಮಕಿ ನಡೆದಿದೆ.
ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ ಅನ್ನುತ್ತಿದ್ದಂತೆ ಜೈ ಕಾಂಗ್ರೆಸ್ ಅಂತಾ ಕೈ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಈ ವೇಳೆ ಎರಡು ಪಕ್ಷದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.
ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯ ವಿಶೇಷ ವಿಮಾನಕ್ಕೆ ಬೆಳಗಾವಿ ವಿಮಾನ ನಿಲ್ದಾಣ ಎಂಟ್ರಿಗೆ ನಿರಾಕರಣೆ ಮಾಡಲಾಗಿದೆ.ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರ ವಿಮಾನ ಇದೇ ಏರ್ಪೋರ್ಟ್ನಲ್ಲಿರುವ ಕಾರಣ ಸಿಎಂ ವಿಮಾನಕ್ಕೆ ಅನುಮತಿ ದೊರಕಿಲ್ಲ.
ಸಿಎಂ ಸಿದ್ದರಾಮಯ್ಯ ಅವರು ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಹೊರಟಿದ್ದರು. ಆದರೆ, ಅಲ್ಲಿ ಲ್ಯಾಂಡಿಂಗ್ ಗೆ ಅನುಮತಿ ಸಿಕ್ಕಿಲ್ಲ. ಬೆಳಗ್ಗೆ 11.05ಕ್ಕೆ ಬೆಂಗಳೂರಿನಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಿಎಂ ವಿಮಾನ ಬರಬೇಕಿತ್ತು. ಅಲ್ಲಿಂದ ಅವರು ಶಿರಸಿಗೆ ತೆರಳಲು ಯೋಜನೆ ಹಾಕಲಾಗಿತ್ತು. ಆದರೆ ಪಿಎಂ ವಿಮಾನ ಇರುವ ಕಾರಣ ಅಲ್ಲಿ ಅವಕಾಶ ಸಿಕ್ಕಿಲ್ಲ.
ಇದನ್ನೂ ಓದಿ: Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ಬದಲಿಗೆ ಪಕ್ಕದ ಕೊಲ್ಲಾಪುರ ವಿಮಾನ ನಿಲ್ದಾಣದಲ್ಲಿ ಸಿಎಂ ವಿಮಾನ ಲ್ಯಾಂಡ್ ಆಗಲಿದೆ. ಮಧ್ಯಾಹ್ನ 12 ಗಂಟೆಗೆ ಕೊಲ್ಲಾಪುರದ ಛತ್ರಪತಿ ರಾಜಾರಾಮ್ ಮಹಾರಾಜ್ ವಿಮಾನ ನಿಲ್ದಾಣದಲ್ಲಿ ಅವರ ವಿಮಾನ ಇಳಿಯಲಿದೆ. ಬಳಿಕ ಹೆಲಿಕಾಪ್ಟರ್ ಮೂಲಕ ಕಾಗವಾಡ ತಾಲೂಕಿನ ಉಗಾರ್ ಖುರ್ದ ಗೆ ಅವರು ಹೋಗಲಿದ್ದಾರೆ.