ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ - Vistara News

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

VISTARANEWS.COM


on

ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಪ್ರಚಂಡ ಜಯಭೇರಿ ಸಾಧ್ಯತೆ, ಪಶ್ಚಿಮ ಬಂಗಾಳದಲ್ಲಿ ದೀದಿಗೆ ಸಮಬಲದ ಟಕ್ಕರ್‌, ತಮಿಳುನಾಡು-ಕೇರಳಂನಲ್ಲಿ ವೋಟ್‌ ಶೇರ್‌ ಹೆಚ್ಚಳ – ಪಂಚ ರಾಜ್ಯಗಳ ಎಕ್ಸಿಟ್‌ ಪೋಲ್‌ನಲ್ಲಿ ಬಿಜೆಪಿ ಕುರಿತ ಈ ಸಮೀಕ್ಷೆ ನಿಜವಾದರೆ ಅದು ಮತ್ತೊಮ್ಮೆ ಮೋದಿ ಮ್ಯಾಜಿಕ್‌ ಎಂದೇ ಹೇಳಬಹುದು.
ಪಂಚ ರಾಜ್ಯಗಳ ಚುನಾವಣಾ ಸನ್ನಿವೇಶವೇ ಮೋದಿ ನೇತೃತ್ವದ ಬಿಜೆಪಿಗೆ ಒಂದು ಸವಾಲಾಗಿತ್ತು. ಮಧ್ಯಪ್ರಾಚ್ಯ ಯುದ್ಧದ ಪರಿಣಾಮಗಳು ಪ್ರಧಾನಿ ಮೋದಿಯವರಿಗೆ ಅತಿದೊಡ್ಡ ಸವಾಲು ಸೃಷ್ಟಿಸಿತ್ತು. ಏಕಾಏಕಿ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ, ಹೊಟೇಲು-ಇತರ ಉದ್ಯಮಗಳಿಗೆ ಕಮರ್ಶಿಯಲ್‌ ಗ್ಯಾಸ್‌ ಪೂರೈಕೆ ಬುಡಮೇಲು, ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ. ಇವೆಲ್ಲಾ ಚುನಾವಣೆಯ ಮುಖ್ಯ ವಿಷಯಗಳಾಗಿದ್ದವು. ಹರಿಯಾಣ, ಮಹಾರಾಷ್ಟ್ರ, ದೆಹಲಿ, ಬಿಹಾರ ಗೆಲುವಿನ ನಂತರ ಅಸ್ಸಾಂ, ಪುದುಚೇರಿ, ಮುಖ್ಯವಾಗಿ ಪಶ್ಚಿಮ ಬಂಗಾಳವನ್ನು ಗೆಲ್ಲಲ್ಲೇ ಬೇಕಾದ ಹಠಕ್ಕೆ ಬಿಜೆಪಿ ಬಿದ್ದಿತ್ತು. ಈ ಗೆಲುವಿಗೆ ಬಿಜೆಪಿ ಅವಲಂಬಿಸಿದ್ದು ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು. ಸಂಕಷ್ಟದ ಕಾಲದಲ್ಲಿ ಮೋದಿ ಸರ್ಕಾರ ನಿರ್ವಹಿಸಿದ ರೀತಿ ಜನ ಮೆಚ್ಚುಗೆಗೆ ಪಾತ್ರವಾಗಿತ್ತು. ಗೃಹ ಬಳಕೆ ಗ್ಯಾಸ್‌ ಪೂರೈಕೆ ವ್ಯತ್ಯಯವಾಗಲು ಮೋದಿ ಸರ್ಕಾರ ಬಿಡಲಿಲ್ಲ. ಬಹುತೇಕ ದೇಶಗಳು ಪೆಟ್ರೋಲ್‌, ಡೀಸೆಲ್‌ ಬೆಲೆ ಶೇಕಡಾ 20ರಿಂದ 30 ರಷ್ಟು ಏರಿಕೆ ಮಾಡಿದರೂ, ಮೋದಿ ಸರ್ಕಾರ ಸಾಧಾರಣ ಪೆಟ್ರೋಲ್‌ ಡೀಸೆಲ್‌ ಬೆಲೆ ಏರಿಸಲಿಲ್ಲ. ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ನೇರ ಜನರ ಮೇಲೆ ಬೀಳಲು ಮೋದಿ ಸರ್ಕಾರ ಬಿಡಲಿಲ್ಲ.
ಪ.ಬಂಗಾಳ ಗೆದ್ದರೆ ಅತಿ ದೊಡ್ಡ ಸಾಧನೆ:
ದೀದಿ ನಾಡನ್ನು ಗೆಲ್ಲಲು ಬಿಜೆಪಿ ಕಳೆದ 15 ವರ್ಷಗಳಿಂದ ಶಕ್ತಿ ಮೀರಿ ಶ್ರಮಿಸುತ್ತಿದೆ. ಈ ಸಲ, ದೀದಿ ನಾಡಲ್ಲಿ ಮೋದಿ ಹವಾ ಸೃಷ್ಟಿಯಾಗಿದೆ ಎಂದೇ ಎಕ್ಸಿಟ್‌ ಪೋಲ್‌ಗಳು ಹೇಳುತ್ತಿವೆ. ಬಂಗಾಳವನ್ನು ಗೆದ್ದರೆ ಬಿಜೆಪಿಯ ದಿಗ್ವಿಜಯದ ಪಟ್ಟಿಯಲ್ಲೊಂದು ಮೈಲಿಗಲ್ಲು. ಮೋದಿ ಜನಪ್ರಿಯತೆ ಕಡಿಮೆಯಾಗಿಲ್ಲ, ಬದಲಿಗೆ ಇನ್ನಷ್ಟು ಗಟ್ಟಿಯಾಗುತ್ತಿದೆ ಎನ್ನುವುದರ ಸೂಚಕ.
ಇನ್ನು ಪುದುಚೇರಿ, ತಮಿಳುನಾಡು, ಕೇರಳಂನಲ್ಲೂ ಮೋದಿ ಜನಪ್ರಿಯತೆ ಇನ್ನಷ್ಟು ಹೆಚ್ಚಾಗಿರೋದು ಎಕ್ಸಿಟ್‌ ಪೋಲ್‌ ದತ್ತಾಂಶಗಳು ಹೇಳುತ್ತಿವೆ. ತಮಿಳುನಾಡು, ಕೇರಳಂನಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಸಾಧ್ಯತೆಗಳು ಇಲ್ಲದೇ ಹೋದರೂ ಕೂಡಾ, ಬಿಜೆಪಿಯ ಮತ ಪ್ರಮಾಣ ಏರಿಕೆಯಾಗಿದೆ ಎನ್ನುತ್ತಿವೆ ಸಮೀಕ್ಷೆಗಳು.
ಹಾಗೇ ನೋಡಿದರೆ, ಜಾಗತಿಕ ಮಟ್ಟದಲ್ಲಿ ಮೋದಿ ಅತಿ ಜನಪ್ರಿಯ ವ್ಯಕ್ತಿ. ಮಾರ್ಚ್‌ 2026ರ ಅವಧಿಯಲ್ಲಿ ಮೋದಿ ಅಪ್ರೂವಲ್‌ ರೇಟ್‌ ಶೇ 70ರಷ್ಟಿತ್ತು. ವಿಶ್ವದ ಜನಪ್ರಿಯ ನಾಯಕರ ಸಾಲಿನಲ್ಲಿ ಪ್ರಧಾನಿ ಮೋದಿಯೇ ಮೊದಲಿಗರಾಗಿದ್ದಾರೆ.

Continue Reading

Latest

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

VISTARANEWS.COM


on

ಇತ್ತೀಚೆಗೆ ಸಿಎಂ ಕುರ್ಚಿ ಬಗ್ಗೆ ರಾಜಕೀಯ ವಲಯದಲ್ಲಿ ತುಸು ಹೆಚ್ಚಾಗಿಯೇ ಚರ್ಚೆ ನಡೆಸುತ್ತಿದೆ. ಈ ಮಧ್ಯೆ ‘ದಲಿತ ಸಿಎಂ’ ಕಾರ್ಡ್ ಮತ್ತೆ ಮುನ್ನಲೆಗೆ ಬಂದಿದ್ದು- ಅಕ್ಷರಶಃ ಸಿಎಂ ಕುರ್ಚಿ ‘ಮ್ಯೂಸಿಕಲ್ ಚೇರ್’ ಆಗಿದೆ.

ಈ ನಡುವೆ, ‘ನಾಯಕತ್ವ ಬದಲಾವಣೆಗೆ ಇನ್ನೂ ಸಮಯ ಇದೆ’ ಎನ್ನುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಾತ್ಕಾಲಿಕ ರಿಲೀಫ್ ನೀಡಿದ್ದಾರೆ.

ದಲಿತ ಸಿಎಂ… ಮುನ್ನಲೆಗೆ
ಇಷ್ಟು ದಿನ ಅಪ್ಪನ ಪರ ಬ್ಯಾಟ್ ಬೀಸುತ್ತಿದ್ದ ಶಾಸಕ ಯತೀಂದ್ರ, ಇದೀಗ ವರಸೆ ಬದಲಿಸಿದ್ದಾರೆ. ಒಂದು ವೇಳೆ ಸಿಎಂ ಪಟ್ಟವನ್ನು ನಮ್ಮ ತಂದೆ ಬಿಡುವ ಸಂದರ್ಭ ಬಂದದ್ದೇ ಆದಲ್ಲಿ, ಈ ಹುದ್ದೆಗೆ ಮಲ್ಲಿಕಾರ್ಜುನ ಖರ್ಗ ಸೂಕ್ತ ಆಯ್ಕೆ ಎಂದು ಹೇಳಿದ್ದಾರೆ. ಇದಕ್ಕೆ ಪೂರಕ ಎಂಬಂತೆ ದನಿಗೂಡಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್- ಖರ್ಗೆ ಅವರಿಗೆ ರಾಜ್ಯದ ಸ್ಥಿತಿಗತಿ ಗೊತ್ತಿದೆ. ಅವರು ಸಿಎಂ ಆದರೆ ಒಳ್ಳೆಯದು ಎಂದಿದ್ದಾರೆ.

ರೇಸ್ ನಲ್ಲಿ…
ಖರ್ಗೆ ಪರವಾದ ಡಾ.ಜಿ.ಪರಮೇಶ್ವರ್ ಹೇಳಿಕೆ ಏನೇ ಇದ್ದರೂ, ಸಿಎಂ ಆಗುವ ಆಸೆ ಅವರಲ್ಲೂ ಇದೆ. ಇದನ್ನು ಅವರು ಆಪ್ತರ ಬಳಿಯೂ ಹೇಳಿಕೊಂಡಿದ್ದಾರೆ. ಸಾರ್ವಜನಿಕವಾಗಿಯೂ ಕೆಲವೆಡೆ ಅವರು ತಮಾಷೆಯ ದನಿಯಲ್ಲೇ ತಮ್ಮ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಉಳಿದಂತೆ, ಹಿರಿಯ ಸಚಿವ ಕೆ.ಎಚ್.ಮುನಿಯಪ್ಪ ಸಹ ಈ ಕೋಟಾ ಅಡಿ ಸಿಎಂ ಆಗಲು ತಾವೂ ಅರ್ಹ ಎಂಬ ಸಂದೇಶವನ್ನು ಹೈಕಮಾಂಡ್ ಗೆ ದಾಟಿಸಿದ್ದಾರೆ.

ಎಂ.ಬಿ. ಪಾಟೀಲ್‌ ಸಹ ಆಕಾಂಕ್ಷಿ
ಸಿಎಂ ಸೀಟ್ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್ ಇದಕ್ಕಾಗಿ ಶತಪ್ರಯತ್ನ ಮುಂದುವರಿಸಿರುವುದು ಒಂದು ಕಡೆಯಾದರೆ, ಮತ್ತೊಂದೆಡೆ, ಹಿರಿಯ ಸಚಿವ ಎಂ.ಬಿ.ಪಾಟೀಲ್, ಲಿಂಗಾಯತ ಸಮುದಾಯಕ್ಕೆ ಸಿಎಂ ಹುದ್ದೆ ನೀಡಬೇಕು ಎಂದು ಮತ್ತೊಂದು ಜಾತಿ ಕಾರ್ಡ್ ಪ್ಲೇ ಮಾಡಿದ್ದಾರೆ. ಒಟ್ಟಿನಲ್ಲಿ, ಮೇ.20ಕ್ಕೆ ಕಾಂಗ್ರೆಸ್ ಸರಕಾರಕ್ಕೆ ಮೂರು ವರ್ಷ ತುಂಬಲಿದ್ದು, ಸಿಎಂ ಹುದ್ದೆ ಬದಲಾವಣೆ ಕುರಿತು ನೂರು ಮಾತುಗಳು ಪಕ್ಷದ ಒಳಗೇ ಕೇಳಿ ಬರುತ್ತಿದೆ.

Continue Reading

Latest

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

VISTARANEWS.COM


on

ಮತದಾನೋತ್ತರ ಸಮೀಕ್ಷೆ ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದೆ. ಚೊಚ್ಚಲ ಪ್ರಯತ್ನದಲ್ಲೇ ವಿಜಯ್‌ ಕಿಂಗ್‌ ಅಥವಾ ಕಿಂಗ್‌ ಮೇಕರ್‌ ಆಗಬಹುದಾದದ ಒಂದು ಸಾಧ್ಯತೆಯೇ ಇದಕ್ಕೆ ಕಾರಣ. ಎಲ್ಲಾ ಸಮೀಕ್ಷೆಗಳು ಡಿಎಂಕೆ-ಕಾಂಗ್ರೆಸ್‌ ಮೈತ್ರಿಕೂಟದ ಗೆಲುವನ್ನು ಅಂದಾಜಿಸಿವೆ. ಆದರೆ, ಆಕ್ಸಿಸ್‌ ಮೈ ಇಂಡಿಯಾ ಮಾತ್ರ ವಿಜಯ್‌ ಕಿಂಗ್‌ ಅಥವಾ ಕಿಂಗ್‌ ಮೇಕರ್‌ ಆಗಬಹುದಾದ ಸಾಧ್ಯತೆಯನ್ನು ಹೇಳಿದೆ.
ಟಿವಿಕೆ-ಎಐಎಡಿಎಂಕೆ ಮಾತುಕತೆ?
ಎಕ್ಸಿಟ್‌ ಪೋಲ್‌ ಬೆನ್ನಲ್ಲೇ ಟಿವಿಕೆಯ ಅಗತ್ಯತೆಯನ್ನು ಎನ್‌ಡಿಎ ಮನಗಂಡಿದೆ. ಟಿವಿಕೆ ಜೊತೆ ಮೈತ್ರಿ ಮಾಡಿಕೊಂಡರೆ ಅಧಿಕಾರಕ್ಕೇರುವ ಒಂದು ಸಾಧ್ಯತೆಯನ್ನು ಎನ್‌ಡಿಎ ಪರಿಶೀಲಿಸುತ್ತಿದೆ. ಹಾಗಾಗಿಯೇ, ಫಲಿತಾಂಶಕ್ಕೂ ಮುನ್ನ ವಿಜಯ್‌ ಜೊತೆ ಮಾತುಕತೆಗೆ ಎಐಎಡಿಎಂಕೆ ಮುಂದಾಗಿದೆ. ಇದು ತಮಿಳು ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.
ನಾಯಕರೊಂದಿಗೆ ಸ್ಟಾಲಿನ್‌ ಸಭೆ
ಟಿವಿಕೆ-ಎಐಎಡಿಎಂಕೆ ಮಾತುಕತೆ ಸಾಧ್ಯತೆಯ ಬೆನ್ನಲ್ಲೇ ಡಿಎಂಕೆ ಎಚ್ಚೆತ್ತುಕೊಂಡಿದೆ. ರಿಸಲ್ಟ್‌ ದಿನದ ಕಾರ್ಯತಂತ್ರದ ಕುರಿತಂತೆ ಮುಖ್ಯಮಂತ್ರಿ ಸ್ಟಾಲಿನ್‌, ಪಕ್ಷದ ಹಿರಿಯ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಅಧಿಕಾರಕ್ಕಾಗಿ ಟಿವಿಕೆ-ಎನ್‌ಡಿಎ ಸಂಭಾವ್ಯ ಮೈತ್ರಿಯ ಪರಿಣಾಮದ ಬಗ್ಗೆಯೂ ಚರ್ಚೆ ನಡೆಸಲಾಗಿದೆ.
ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ತಮಿಳುನಾಡಲ್ಲಿ ಟಿವಿಕೆಗೆ 98ರಿಂದ 120 ಸೀಟುಗಳು ಸಿಗಲಿವೆ. ಡಿಎಂಕೆ-ಕಾಂಗ್ರೆಸ್‌ ಮೈತ್ರಿಕೂಟಕ್ಕೆ 92ರಿಂದ 110 ಹಾಗೂ 22ರಿಂದ 32 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲ್ಲುವ ಸಾಧ್ಯತೆಗಳಿವೆ. ಸಮೀಕ್ಷೆಯ ಈ ಫಲಿತಾಂಶವೇ ತಮಿಳುನಾಡು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ

Continue Reading

Latest

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

VISTARANEWS.COM


on

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌
ಐದು ರಾಜ್ಯಗಳ ಎಕ್ಸಿಟ್‌ ಪೋಲ್‌ ಫಲಿತಾಂಶ ಹೊರಬಿದ್ದಿದೆ. ಅಸ್ಸಾಂನಲ್ಲಿ ಬಿಜೆಪಿ, ಕೇರಳದಲ್ಲಿ ಯುಡಿಎಫ್‌, ಪುದುಚೇರಿಯಲ್ಲಿ ಎನ್‌ಡಿಎ ಜಯಭೇರಿ ಬಾರಿಸಲಿದೆ ಎಂದು ಎಲ್ಲಾ ಎಕ್ಸಿಟ್‌ ಪೋಲ್‌ಗಳು ಹೇಳಿವೆ. ಆದರೆ, ಪ.ಬಂಗಾಳ ಮತ್ತು ತಮಿಳುನಾಡು ಮತದಾನೋತ್ತರ ಸಮೀಕ್ಷೆಗಳು ಮಾತ್ರ ಭಿನ್ನ ಫಲಿತಾಂಶ ನೀಡಿವೆ.
ಅಸ್ಸಾಂನಲ್ಲಿ ಕಮಲ ಕಿಲಕಿಲ:
126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಸಾಧ್ಯತೆಯನ್ನು ಎಲ್ಲಾ ಎಕ್ಸಿಟ್‌ ಪೋಲ್‌ಗಳು ಹೇಳಿವೆ. ಹಿಮಂತ ಬಿಸ್ವ ಶರ್ಮಾ ಎರಡನೇ ಅವಧಿಗೆ ಸಿಎಂ ಆಗುವ ಸಾಧ್ಯತೆ ಹೆಚ್ಚಿವೆ. ಆಕ್ಸಿಸ್‌ ಮೈ ಇಂಡಿಯಾ, ಪಿ-ಮಾರ್ಕ್‌, ಮಾಟ್ರಿಜ್‌, ಜೆವಿಸಿ ಮತ್ತು ಚಾಣಕ್ಯ ಸ್ಟ್ರಾಟಜಿಸ್‌ ಬಿಜೆಪಿ ಭಾರೀ ಬಹುಮತ ದಾಖಲಿಸಲಿದೆ ಎಂದು ಭವಿಷ್ಯ ನುಡಿದಿವೆ. ಕಾಂಗ್ರೆಸ್‌ ಪ್ರತಿಪಕ್ಷಕ್ಕೆ ಸೀಮಿತಗೊಳ್ಳಲಿದೆ.
ಕೇರಳಂನಲ್ಲಿ ಯುಡಿಎಫ್‌ಗೆ ಅಧಿಕಾರ?:
ಕೇರಳಂ ವಿಧಾನಸಭೆಯ ಬಲ 140. ಬಹುಮತಕ್ಕೆ 71 ಸೀಟುಗಳು ಬೇಕು. ಕೇರಳಂನಲ್ಲಿ ಹ್ಯಾಟ್ರಿಕ್‌ ದಾಖಲಿಸುವ ಎಲ್‌ಡಿಎಫ್‌ ಕನಸು ನುಚ್ಚುನೂರಾಗುವ ಸಾಧ್ಯತೆಗಳಿವೆ. ಈ ಸಲ ಕಾಂಗ್ರೆಸ್‌ ನೇತೃತ್ವದ ಯುನೈಟೆಡ್‌ ಡೆಮಾಕ್ರಾಟಿಕ್‌ ಫ್ರಂಟ್‌ – ಯುಡಿಎಫ್‌, ಜಯಭೇರಿ ಬಾರಿಸಲಿದೆ ಎಂದು ಆಕ್ಸಿಸ್‌ ಮೈ ಇಂಡಿಯಾ, ಪಿ-ಮಾರ್ಕ್‌, ಮಾಟ್ರಿಜ್‌, ಮನೋರಮಾ ನ್ಯೂಸ್‌ ಸಿವೋಟರ್ಸ್‌ ಮತ್ತು ಜೆವಿಸಿ ಸಮೀಕ್ಷೆಗಳು ಹೇಳಿವೆ. ಬಿಜೆಪಿ ಕೇರಳಂನಲ್ಲಿ ಮೂರರಿಂದ ಏಳು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಗಳಿವೆ.
ಪುದುಚೇರಿಯಲ್ಲಿ ಎನ್‌ಡಿಎ?:
ಪುದುಚೇರಿ ವಿಚಾರದಲ್ಲಿ ಎಕ್ಸಿಟ್‌ ಪೋಲ್‌ ಏಜೆನ್ಸಿಗಳಿಗೆ ಯಾವುದೇ ಅನುಮಾನ ಇಲ್ಲ. 30 ಸದಸ್ಯಬಲದ ಪುದುಚೇರಿ ಅಸೆಂಬ್ಲಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ದಿಗ್ವಿಜಯ ಬಾರಿಸಲಿದೆ ಎಂದು ಎಲ್ಲಾ ಚುನಾವಣೋತ್ತರ ಭವಿಷ್ಯ ನುಡಿದಿವೆ.
ಪ. ಬಂಗಾಳದಲ್ಲಿ ದೀದಿಯೋ, ಮೋದಿಯೋ?
ಪಶ್ಚಿಮ ಬಂಗಾಳದ ಎಕ್ಸಿಟ್‌ ಪೋಲ್‌ನಲ್ಲಿ ಏಕಮತ ಇಲ್ಲ. 6 ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ, 4 ಸಮೀಕ್ಷೆಗಳು ಬಿಜೆಪಿ ಗೆಲುವಿನ ಭವಿಷ್ಯ ನುಡಿದಿವೆ. 2 ಸಮೀಕ್ಷೆಗಳು ಟಿಎಂಸಿಯೇ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿವೆ. ಪಿ-ಮಾರ್ಕ್‌, ಮಾಟ್ರಿಜ್‌, ಜೆವಿಸಿ, ಚಾಣಕ್ಯ ಈ ನಾಲ್ಕು ಸಮೀಕ್ಷೆಗಳಲ್ಲಿ ಬಿಜೆಪಿ ಸರಿಸುಮಾರು 150ಕ್ಕೂ ಅಧಿಕ ಸೀಟು ಗಳಿಸುವ ಸಾಧ್ಯತೆಗಳಿವೆ ಎಂದು ಹೇಳಿವೆ. ಪೀಪಲ್ಸ್‌ ಪಲ್ಸ್‌, ಜನಮತ ಪೋಲ್ಸ್‌ ಈ ಎರಡೂ ಸಮೀಕ್ಷೆಗಳ ಪ್ರಕಾರ ಟಿಎಂಸಿ 170ರಿಂದ 200 ಸೀಟು ಗೆದ್ದು ಅಧಿಕಾರದಲ್ಲಿ ಮುಂದುವರಿಯಲಿದೆ. ಅಂದ ಹಾಗೆ, 294 ಸದಸ್ಯ ಬಲದ ಪ.ಬಂಗಾಳ ಅಸೆಂಬ್ಲಿಯಲ್ಲಿ ಅಧಿಕಾರಕ್ಕೇರಲು 147 ಸೀಟುಗಳನ್ನು ಗೆಲ್ಲಲೇ ಬೇಕು.
ದ್ರಾವಿಡ ದಂಗಲ್‌ನಲ್ಲಿ ಅಚ್ಚರಿ ಫಲಿತಾಂಶ?:
ತಮಿಳುನಾಡಿನಲ್ಲಿ ಬಹುತೇಕ ಎಲ್ಲಾ ಎಕ್ಸಿಟ್‌ ಪೋಲ್‌ಗಳು ಡಿಎಂಕೆ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಭವಿಷ್ಯ ನುಡಿದಿವೆ. ಎಐಎಡಿಎಂಕೆ ನೇತೃತ್ವದ ಎನ್‌ಡಿಎ 50 ರಿಂದ 80 ಸ್ಥಾನಗಳನ್ನು ಗಳಿಸುವ ಸಾಧ್ಯತೆಗಳಿವೆ. ಆದರೆ, ಇಲ್ಲೊಂದು ಟ್ವಿಸ್ಟ್‌ ಇದೆ. ಆಕ್ಸಿಸ್‌ ಮೈ ಇಂಡಿಯಾ ಮಾತ್ರ ವಿಜಯ್‌ ನೇತೃತ್ವದ ಟಿವಿಕೆಗೆ ಬಹುಮತ ಸಿಗಲಿದೆ ಎಂದು ಹೇಳಿದೆ. ದಳಪತಿ ವಿಜಯ್‌ ನೇತೃತ್ವದ ಟಿವಿಕೆ ತನ್ನ ಚೊಚ್ಚಲ ಯತ್ನದಲ್ಲೇ 98ರಿಂದ 120 ಸ್ಥಾನ ಗಳಿಸುವ ಸಾಧ್ಯತೆಗಳಿವೆ ಎಂದು ಆಕ್ಸಿಸ್‌ ಮೈ ಇಂಡಿಯಾ ಹೇಳಿವೆ. 234 ಸದಸ್ಯಬಲದ ತಮಿಳುನಾಡು ಅಸೆಂಬ್ಲಿಯಲ್ಲಿ ಅಧಿಕಾರಕ್ಕೇರಲು 117 ಸೀಟುಗಳು ಬೇಕು.

Continue Reading
Advertisement
Latest14 minutes ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest18 hours ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest18 hours ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest18 hours ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest21 hours ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest21 hours ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest23 hours ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest23 hours ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest24 hours ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest2 days ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌