ಕಲಬುರಗಿ ಜಿಲ್ಲೆಯ ಮಕ್ಕಳನ್ನು ಅವಮಾನಿಸಬೇಡಿ, ಅವರೂ ಬುದ್ದಿವಂತರು; ಬಿಜೆಪಿ ಮುಖಂಡರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು - Vistara News

Latest

ಕಲಬುರಗಿ ಜಿಲ್ಲೆಯ ಮಕ್ಕಳನ್ನು ಅವಮಾನಿಸಬೇಡಿ, ಅವರೂ ಬುದ್ದಿವಂತರು; ಬಿಜೆಪಿ ಮುಖಂಡರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕಲಬುರಗಿ ಜಿಲ್ಲೆಯಲ್ಲಿನ ಮಕ್ಕಳಿಗೆ “ದಡ್ಡರು” ಎಂಬ ಹಣೆಪಟ್ಟಿಯನ್ನು ಕಟ್ಟುವುದನ್ನು ಬಿಜೆಪಿ ಬಿಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ರಾಜ್ಯ ಬಿಜೆಪಿ ಮುಖಂಡರಿಗೆ ತಿರುಗೇಟು ನೀಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ತಮ್ಮ ವಿರುದ್ಧ ಬಿಜೆಪಿ ಐಟಿ ಸೆಲ್‌ ವೈರಲ್‌ ಮಾಡಿರುವ ನಕಲಿ ಪೋಟೋ ಹಂಚಿಕೊಂಡಿರುವ ಸಚಿವರು, ಕಡಿಮೆ ವೇತನದಿಂದ ಕಂಗೆಟ್ಟಿರುವ ಬಿಜೆಪಿಯ IT ಸೆಲ್ ಮತ್ತದರ ಟ್ರೋಲ್ ಆರ್ಮಿ ಬಗ್ಗೆ ನನಗೆ ಕನಿಕರವಿದೆ, @BJP4Karnataka ದ ಟ್ರೋಲ್ ಆರ್ಮಿ ಇಂತಹ ನಕಲಿ ಮತ್ತು ಅನೈತಿಕ ಕೆಲಸಗಳಿಂದ ನಮ್ಮನ್ನು ಕುಗ್ಗಿಸಬಹುದು ಎಂದು ತಿಳಿದಿದ್ದರೆ ಅದು ಅವರ ಭ್ರಮೆಯಷ್ಟೇ.. ಎಂದು ತಿರುಗೇಟು ನೀಡಿದ್ದಾರೆ.
ನನ್ನನ್ನು ಕೆಟ್ಟದಾಗಿ ಬಿಂಬಿಸಲು ಎಲ್ಲಾ ಅನೈತಿಕ ದಾರಿಗಳನ್ನೂ ಬಳಸುತ್ತಿರುವ ಬಿಜೆಪಿಯ ಪ್ರಯತ್ನ ಹೀಗೆಯೇ ಮುಂದುವರೆಯಲಿ…ಕಲಬುರಗಿಯ ವಿದ್ಯಾರ್ಥಿಗಳನ್ನು ಅವಮಾನಿಸುತ್ತಿರುವ ಬಿಜೆಪಿ, ಅವರ ಆತ್ಮಸ್ಥೈರ್ಯವನ್ನು, ಆತ್ಮವಿಶ್ವಾಸವನ್ನು ಅಡಗಿಸುವ ಪ್ರಯತ್ನ ಮಾಡುತ್ತಿದೆ ಎಂದು ಆಪಾದಿಸಿದ್ದಾರೆ.
@BJP4Karnataka, ನಿಮಗೆ ಸಮಸ್ಯೆ ಇದ್ದರೆ ನನ್ನನ್ನು ನಿಂದಿಸಿ, ಕಲಬುರಗಿಯ ಮಕ್ಕಳನ್ನು ಅಪಹಾಸ್ಯ ಮಾಡುತ್ತಿರುವುದೇಕೆ?
ಜಿಲ್ಲೆಯ ಶೇಕಡಾವಾರು ಫಲಿತಾಂಶ 85% ಇರಬಹುದು, ಕಳೆದ ಶೈಕ್ಷಣಿಕ ವರ್ಷಕ್ಕಿಂತ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ, ರಾಜ್ಯದಲ್ಲೂ ಮತ್ತು ಕಲಬುರಗಿ ಜಿಲ್ಲೆಯಲ್ಲೂ…
ಶೈಕ್ಷಣಿಕ ಗುಣಮಟ್ಟದ ಸುಧಾರಣೆ ಮಾಡಿಕೊಳ್ಳುವ ಶಕ್ತಿ ನಮ್ಮ ಜಿಲ್ಲೆಯ ಮಕ್ಕಳಲ್ಲಿದೆ, ಮತ್ತು ಅದು ಸಾಧ್ಯವಾಗುತ್ತದೆ ಕೂಡ.
ಆದರೆ ಪ್ರತಿ ಬಾರಿಯೂ ಕಲಬುರಗಿ ಜಿಲ್ಲೆಯ ಮಕ್ಕಳನ್ನು ಅವಮಾನಿಸುತ್ತಿರುವ ಬಿಜೆಪಿ ರಾಜಕೀಯ ದಿವಾಳಿತನದೊಂದಿಗೆ ನೈತಿಕ ಪ್ರಜ್ಞೆಯೂ ದಿವಾಳಿಯಾಗಿರುವುದನ್ನು ನಿರೂಪಿಸುತ್ತಿದೆ.
ಕಲಬುರಗಿ ಜಿಲ್ಲೆಯಲ್ಲಿನ ಬಿಜೆಪಿ ನಾಯಕರ ಮತ್ತು ಕಾರ್ಯಕರ್ತರ ಮಕ್ಕಳಿಗೂ “ದಡ್ಡರು” ಎಂಬ ಹಣೆಪಟ್ಟಿಯನ್ನು ಬಿಜೆಪಿ ಕಟ್ಟುತ್ತಿದೆಯೇ?
ಜಿಲ್ಲೆಯ ಮಕ್ಕಳ ಮನಸಿನ ಮೇಲೆ ದುಷ್ಪರಿಣಾಮ ಬೀರುವಂತಹ ಮಾತುಗಳನ್ನಾಡುತ್ತಿರುವ ಬಿಜೆಪಿಗೆ ಕನಿಷ್ಠ ಸಾಮಾನ್ಯ ಪ್ರಜ್ಞೆ ಇಲ್ಲದಿರುವುದು ನಾಡಿನ ದುರಂತ.
ಕಲಬುರಗಿ ಜಿಲ್ಲೆಯ ಮಕ್ಕಳ ಶ್ರಮವನ್ನು, ಅವರ ಬೌದ್ಧಿಕ ಸಾಮರ್ಥ್ಯವನ್ನು ಅವಮಾನಿಸುವ, ಅವರ ಆತ್ಮವಿಶ್ವಾಸವನ್ನು ಕುಗ್ಗಿಸುವ ಕೆಲಸವನ್ನು ಬಿಜೆಪಿ ನಿಲ್ಲಿಸಬೇಕು ಎಂದು ತಾಕೀತು ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಟೆಹರಾನ್‌ನಲ್ಲಿ ವಿಮಾನ ಹಾರಾಟ ಪುನರಾರಂಭ: ಪಾಕ್‌ಗೆ ಆಗಮಿಸಿದ ಇರಾನ್‌ ನಿಯೋಗ: ಯುದ್ಧದ ಅಂತ್ಯದ ಮುನ್ಸೂಚನೆಯೇ ?

VISTARANEWS.COM


on

ಟೆಹರಾನ್‌: ಟೆಹರಾನ್‌ನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾಣಿಜ್ಯ ವಿಮಾನಗಳ ಹಾರಾಟವನ್ನು ಇರಾನ್‌ ಇಂದಿನಿಂದ ಪುನರಾರಂಭಿಸಿದೆ. ಅಮೆರಿಕ-ಇಸ್ರೇಲ್‌ ವಿರುದ್ಧ ಯುದ್ಧ ಆರಂಭವಾಗದ ಆರಂಭವಾದ ಎರಡು ತಿಂಗಳ ನಂತರ ಇಂದು ವಿಮಾನಗಳು ಸಂಚಾರ ಆರಂಭಿಸಿವೆ. ಟೆಹರಾನ್‌ನ ಇಮಾಮ್ ಖಮೇನಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಸ್ತಾಂಬುಲ್, ಓಮನ್ ರಾಜಧಾನಿ ಮಸ್ಕತ್ ಮತ್ತು ಸೌದಿ ಅರೇಬಿಯಾದ ಮದೀನಾ ನಗರಗಳಿಗೆ ವಿಮಾನಗಳು ಪ್ರಯಣ ಬೆಳೆಸಿವೆ ಎಂದು ಇರಾನ್ ಸರ್ಕಾರಿ ಸ್ವಾಮ್ಯದ ಮಾಧ್ಯಮಗಳು ವರದಿ ಮಾಡಿವೆ.
ಇಂದು ಬೆಳಿಗ್ಗೆ ಇಸ್ತಾಂಬುಲ್‌ಗೆ ಮೂರು ವಿಮಾನಗಳು ಪ್ರಯಾಣ ಬೆಳೆಸಿವೆ ಎಂದು ಫ್ಲೈಟ್‌ ರಾಡಾರ್-24 ಮಾಹಿತಿ ಹಂಚಿಕೊಂಡಿದೆ.

ಪಾಕಿಸ್ತಾನ ತಲುಪಿದ ಇರಾನ್‌ ನಿಯೋಗ:
ಈ ಮಧ್ಯೆ ಪಾಕಿಸ್ತಾನಕ್ಕೆ ಭೇಟಿ ನೀಡಿರುವ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ನೇತೃತ್ವದ ನಿಯೋಗವು, ನಿನ್ನೆ ರಾತ್ರಿಯೇ ಇಸ್ಲಮಾಬಾದ್‌ ತಲುಪಿದೆ. ಇರಾನ್‌ ಸರ್ಕಾರದ ವಕ್ತಾರ ಇಸ್ಮಾಯಿಲ್ ಬುಕಾಯ್ ಹಾಗೂ ಇತರರು ನಿಯೋಗದಲ್ಲಿದ್ದಾರೆ. ಪ್ರಾದೇಶಿಕ ಶಾಂತಿಯನ್ನು ಉತ್ತೇಜಿಸುವ ಪ್ರಯತ್ನದ ಭಾಗವಾಗಿ ಪಾಕಿಸ್ತಾನದ ನಾಯಕರ ಜತೆ ಚರ್ಚೆ ನಡೆಸಲು ಈ ನಿಯೋಗ ಆಗಮಿಸಿದೆ ಎಂದು ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಇಸ್ಮಾಯಿಲ್‌ ಬಕಾಯ್‌ ತಿಳಿಸಿದ್ದಾರೆ.
ಅಮೆರಿಕದೊಂದಿಗೆ ಯಾವುದೇ ಮಾತುಕತೆಗಳು ನಿಗದಿಯಾಗಿಲ್ಲ. ಅಮೆರಿಕದ ಜತೆ ನೇರ ಮಾತುಕತೆ ನಡೆಸಲೂ ಒಪ್ಪಿಕೊಂಡಿಲ್ಲ. ಇರಾನ್‌ ಮತ್ತು ಅಮೆರಿಕದ ನಡುವೆ ಯಾವುದೇ ಸಭೆ ನಿಗದಿಯಾಗಿಲ್ಲ. ಆದರೆ ಇರಾನ್‌ ಅಭಿಪ್ರಾಯವನ್ನು ಪಾಕಿಸ್ತಾನಕ್ಕೆ ತಿಳಿಸಲಾಗುವುದು ಎಂದು ಇರಾನ್ ವಿದೇಶಾಂಗ ಸಚಿವಾಲಯವು ಸ್ಪಷ್ಟಪಡಿಸಿದೆ.
ಅಮೆರಿಕ ಹೇರಿರುವ ಆಕ್ರಮಣಕಾರಿ ಯುದ್ಧವನ್ನು ಕೊನೆಗೊಳಿಸಲು ಮತ್ತು ನಮ್ಮ ಪ್ರದೇಶದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಪಾಕಿಸ್ತಾನ ನಡೆಸುತ್ತಿರುವ ಮಧ್ಯಸ್ಥಿಕೆ ಪ್ರಯತ್ನಗಳಿಗೆ ಪೂರಕವಾಗಿ ವಿದೇಶಾಂಗ ಸಚಿವ ಅರಾಘ್ಚಿ ಅವರು ಪಾಕ್‌ ಉನ್ನತ ಮಟ್ಟದ ಅಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ ಎಂದು ಬಕಾಯ್‌ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಹೇಳಿದ್ದಾರೆ.

Continue Reading

Latest

ಪರಮಾಣು ಶಸ್ತ್ರಾಸ್ತ್ರಗಳು ಶಾಂತಿಯ ಉದ್ದೇಶಕ್ಕೆ ಬಳಕೆಯಾಗಲಿ: ವಿಶ್ವಸಂಸ್ಥೆ ಕಳಕಳಿ

VISTARANEWS.COM


on

ನ್ಯೂಯಾರ್ಕ್:‌ ಜಗತ್ತು ಚೆರ್ನೋಬಿಲ್ ದುರಂತದ 40 ನೇ ವಾರ್ಷಿಕೋತ್ಸವ ಆಚರಿಸುತ್ತಿದೆ. ಈ ವೇಳೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಪರಮಾಣು ಶಸ್ತ್ರಾಸ್ತ್ರಗಳ ಶಾಂತಿಯುತ ಬಳಕೆಗೆ ಕರೆ ನೀಡಿದೆ.


ಚೆರ್ನೋಬಿಲ್‌ ದುರಂತದ ಸ್ಮರಣಾರ್ಥ ಶುಕ್ರವಾರ ಇಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷೆ ಅನ್ನಾಲೆನಾ ಬೇರ್ಬಾಕ್ ಅವರು, ಚೆರ್ನೋಬಿಲ್‌ನ ಪ್ರಮಾಣವು, ಪರಮಾಣು ತಂತ್ರಜ್ಞಾನವನ್ನು ಶಾಂತಿಯುತವಾಗಿ ಬಳಸಿದಾಗಲೂ ಇತರ ತಂತ್ರಜ್ಞಾನಗಳಿಗಿಂತ ಮೂಲಭೂತವಾಗಿ ಭಿನ್ನವಾಗಿದೆ ಎಂದು ಒತ್ತಿ ಹೇಳಿದರು.


ಏಪ್ರಿಲ್ 26, 1986 ರಂದು ಚೆರ್ನೋಬಿಲ್ ಪರಮಾಣು ವಿದ್ಯುತ್ ಸ್ಥಾವರ ಇತಿಹಾಸದಲ್ಲಿಯೇ ಅತ್ಯಂತ ಭೀಕರವಾದ ಪರಮಾಣು ಅಪಘಾತಗಳಲ್ಲಿ ಒಂದನ್ನು ಕಂಡಿತು. ಆ ದಿನ, ಸರಣಿ ಸ್ಫೋಟಕಗಳು ನಂ. 4 ರಿಯಾಕ್ಟರ್ ಅನ್ನು ಹಾಳು ಮಾಡಿ, ಉಕ್ರೇನ್, ಬೆಲಾರಸ್ ಮತ್ತು ಯುರೋಪಿನ ಇತರ ಭಾಗಗಳಲ್ಲಿ ವಿಕಿರಣಶೀಲ ಮಾಲಿನ್ಯವನ್ನು ಹರಡಿತು.


8 ಮಿಲಿಯನ್‌ಗಿಂತಲೂ ಹೆಚ್ಚು ಜನರು ವಿಕಿರಣಕ್ಕೆ ಒಡ್ಡಿಕೊಂಡರು, ಸಾವಿರಾರು ಜನರು ಸತ್ತರು ಮತ್ತು ಮಕ್ಕಳು ಲ್ಯುಕೇಮಿಯಾ ಮತ್ತು ಇತರ ಕಾಯಿಲೆಗಳನ್ನು ಬೆಳೆಸಿಕೊಂಡರು ಎಂದು ಬೇರ್‌ಬಾಕ್ ಹೇಳಿದರು, ಅನೇಕರಿಗೆ ಅವರ ಉಳಿದ ಜೀವನವನ್ನು ರೂಪಿಸುವ ದೀರ್ಘಾವಧಿಯ ಆರೈಕೆಯ ಅಗತ್ಯವಿತ್ತು.


ಯುಎನ್ ಕಾರ್ಯದರ್ಶಿ, ಜನರಲ್ ಆಂಟೋನಿಯೊ ಗುಟೆರೆಸ್ ಇದನ್ನು ಇತಿಹಾಸದಲ್ಲಿ ಅತ್ಯಂತ ಮಹತ್ವದ ಪರಮಾಣು ಅಪಘಾತ ಎಂದು ಬಣ್ಣಿಸಿದರು. ಚೆರ್ನೋಬಿಲ್ ರಾಷ್ಟ್ರೀಯ ದುರಂತ ಮಾತ್ರವಲ್ಲ, ಪರಮಾಣು ಅಪಘಾತಗಳ ಪರಿಣಾಮಗಳನ್ನು ಅಂತರರಾಷ್ಟ್ರೀಯ ಸಮುದಾಯವ ಹಂಚಿಕೊಳ್ಳುತ್ತದೆ ಎಂಬ ಪಾಠವಾಗಿದೆ ಎಂದು ಅವರು ಹೇಳಿದರು.


ವಿಶ್ವಸಂಸ್ಥೆಯ ರಷ್ಯಾದ ಉಪ ಖಾಯಂ ಪ್ರತಿನಿಧಿ ಡಿಮಿಟ್ರಿ ಚುಮಾಕೋವ್, ಸರಿಯಾದ ವಿವೇಕವಿಲ್ಲದೆ ಯಾವುದೇ ತಂತ್ರಜ್ಞಾನಗಳು, ಉತ್ತಮ ಉದ್ದೇಶವನ್ನು ಹೊಂದಿರುವವುಗಳು ಸಹ ಬೆದರಿಕೆಯ ಮೂಲವಾಗಬಹುದು ಎಂದು ಹೇಳಿದರು.

Continue Reading

Latest

ರಾಜಕುಮಾರ್‌ ಸಮಾಧಿಗೆ ಭೂಮಿ: ವಿವಾದ ಹುಟ್ಟು ಹಾಕಿದ ನಟ ಚೇತನ್‌ ವಿರುದ್ಧ ಅಭಿಮಾನಿಗಳ ಆಕ್ರೋಶ; ದೂರು ದಾಖಲು

VISTARANEWS.COM


on

ಬೆಂಗಳೂರು: ವರನಟ ಡಾ. ರಾಜ್‌ಕುಮಾರ್ ಅವರ ಸಮಾಧಿ ಸ್ಥಳಕ್ಕೆ ಕಂಠೀರವ ಸ್ಟುಡಿಯೋ ಆವರಣದಲ್ಲಿ 2.5 ಎಕರೆ ಭೂಮಿ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಟ ಚೇತನ್ ಅಹಿಂಸಾ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ರಾಜ್ಯಾದ್ಯಂತ ರಾಜಕುಮಾರ್‌ ಅಭಿಮಾನಿಗಳು ಚೇತನ್‌ ವಿರುದ್ಧ ತಿರುಗಿ ಬಿದ್ದಿದ್ದಾರೆ. ಅನೇಕ ಸಂಘಸಂಸ್ಥೆಗಳು ಅವರ ವಿರುದ್ಧ ದೂರು ದಾಖಲಿಸಿವೆ.
ರಾಜ್‌ಕುಮಾರ್ ಅಭಿಮಾನಿಗಳ ಸಂಘಟನೆ ರಾಜಕುಮಾರ್ ಸೇನೆ ಬಸವೇಶ್ವರನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿ ನಟ ಚೇತನ್ ಅಹಿಂಸಾ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಪಡಿಸಿದೆ. ರಾಜ್‌ಕುಮಾರ್ ಅಭಿಮಾನಿಗಳಾದ ನಮಗೆ ಅವಮಾನ ಉಂಟಾಗಿದ್ದು, ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದೂ ಆಗ್ರಹಿಸಿದ್ದಾರೆ‌.
ಡಾ. ರಾಜ್‌ಕುಮಾರ್ ಅವರ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? 21ನೇ ಶತಮಾನದಲ್ಲಿ ಪ್ರಮುಖ ಹೋರಾಟವೇ ಭೂಮಿಯಾಗಿದೆ. ಸರ್ಕಾರ ಅದನ್ನು ಗಮನದಲ್ಲಿಟ್ಟುಕೊಂಡು ಭೂಮಿಯನ್ನು ಸಾರ್ವಜನಿಕರ ಉಪಯೋಗಕ್ಕೆ ಹಂಚಬೇಕು. ಮತಗಳ ಲಾಭದ ಉದ್ದೇಶದಿಂದ ಹಂಚಬಾರದು ಅಣ್ಣಾವ್ರ ಜನ್ಮದಿನದಂದೇ ಸಾಮಾಜಿಕ ಜಾಲತಾಣಗಳಲ್ಲಿ ಚೇತನ್ ಪೋಸ್ಟ್ ಮಾಡಿದ್ದರು
ತಮ್ಮ ಅಭಿಪ್ರಾಯ ಕುರಿತು ಪ್ರತಿಕ್ರಿಯೆ ನೀಡಿರುವ ಚೇತನ್, ನಾನು ಆಕ್ಷೇಪ ಎತ್ತಿದ್ದು ರಾಜ್ ಕುಮಾರ್ ಅವರಿಗೆ ಸಂಬಂಧಿಸಿದ್ದಲ್ಲ. ನಾನು ಅಮೇರಿಕಾದಲ್ಲಿ ಇದ್ದಾಗಲೂ ಅವರ ಸಿನೆಮಾ ನೋಡಿಕೊಂಡು ಬೇಳೆದಿದ್ದೇನೆ. ಚಿತ್ರರಂಗಕ್ಕೆ ಅವರು ಕೊಟ್ಟ ಕೊಡುಗೆ ಅಪಾರ. ಆದರೆ ಅವರ ಕಾಲಾನಂತರ ಅವರ ಹೆಸರಲ್ಲಿ ಸರ್ಕಾರ ಭೂಮಿ ಕೊಟ್ಟಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದೇನೆ. ಮತ ಗಳಿಕೆಯ ಉದ್ದೇಶದಿಂದಲೇ ಸರ್ಕಾರ ಭೂಮಿ ಕೊಟ್ಟಿದೆ. ಅದರ ಬಗ್ಗೆ ಪ್ರಶ್ನೆ ಎತ್ತಿದ್ದೇನೆ. ಚಿತ್ರರಂಗದಲ್ಲಿ ಸಾಕಷ್ಟು ಮಂದಿ ಕೊಡುಗೆ ಕೊಟ್ಟಿದ್ದಾರೆ ಎಂದಿದ್ದಾರೆ.
ಚೇತನ್‌ ಹೇಳಿಕೆಯಲ್ಲಿ ಏನಿದೆ?
ಸರ್ಕಾರಗಳು ಭೂಮಿಯನ್ನು ಮಂಜೂರು ಮಾಡುವಾಗ ಕೇವಲ ಮತ ಬ್ಯಾಂಕ್ ಮೇಲೆ ಕಣ್ಣಿಡಬಾರದು. ಅದರ ಬದಲು ದೂರದೃಷ್ಟಿ ಮತ್ತು ಸಾರ್ವಜನಿಕ ಉಪಯುಕ್ತತೆಯನ್ನು ಗಮನಿಸಬೇಕು. 21ನೇ ಶತಮಾನದ ಭಾರತದಲ್ಲಿ ಭೂಮಿಗಾಗಿ ದೊಡ್ಡ ಹೋರಾಟವೇ ನಡೆಯುತ್ತಿದೆ. ಕೇವಲ ರಾಜಕೀಯ ಲಾಭಕ್ಕಾಗಿ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಸರಿಯಲ್ಲ ಎಂದು ಪರೋಕ್ಷವಾಗಿ ಟೀಕಿಸಿದ್ದಾರೆ.
ಪುಟ್ಟಣ್ಣ ಕಣಗಾಲ್, ಸರೋಜಾದೇವಿ, ವಿಷ್ಣುವರ್ಧನ್ ಸೇರಿದಂತೆ ಅನೇಕ ಮಂದಿ ಕೊಡುಗೆ ನೀಡಿದ್ದಾರೆ. ಆದರೆ ಅವರ ಸಮಾಧಿಗಳಿಗೆ ಜಾಗ ಕೊಟ್ಟಿಲ್ಲ. ಕುವೆಂಪು ಅವರ ಸಮಾಧಿಯನ್ನೇ ಕುಪ್ಪಳ್ಳಿಯಲ್ಲಿ ಮಾಡಲಾಗಿದೆ. ರಾಜಕುಮಾರ್‌ ಅವರ ಸಮಾಧಿಯನ್ನು ಗಾಜನೂರಿನಲ್ಲಿ ಮಾಡಬಹುದಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಮಗೆ ರಾಜ್‌ಕುಮಾರ್ ಅವರ ಮೇಲೆ ಒಬ್ಬ ಶ್ರೇಷ್ಠ ಕಲಾವಿದ ಎಂಬ ಗೌರವವಿದೆ. ಆದರೆ, ಸ್ಮಾರಕ ಸಂಕೀರ್ಣಕ್ಕಾಗಿ ಬೆಂಗಳೂರಿನ ಪ್ರಮುಖ ಜಾಗದಲ್ಲಿ 2.5 ಎಕರೆ ಭೂಮಿಯನ್ನು ಮಂಜೂರು ಮಾಡಿದ್ದು ಎಷ್ಟು ಸಮಂಜಸ? ಎಂದು ಪ್ರಶ್ನಿಸಿದ್ದಾರೆ.
ಅಣ್ಣಾವ್ರು ಕನ್ನಡ ಭಾಷೆ, ಕಲೆ ಮತ್ತು ನಾಡಿಗೆ ನೀಡಿದ ಕೊಡುಗೆಯನ್ನು ಅರಿಯದೆ ಚೇತನ್ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಅಭಿಮಾನಿಗಳು ಕಿಡಿಕಾರಿದ್ದಾರೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಸಮಾಧಿ ಸ್ಥಳಗಳಿಗೆ ಎಕರೆಗಟ್ಟಲೆ ಜಾಗ ನೀಡಿದಾಗ ಚೇತನ್ ಅವರಿಗೆ ಸಾರ್ವಜನಿಕ ಉಪಯುಕ್ತತೆ ನೆನಪಾಗಲಿಲ್ಲವೇ? ಕೋಟ್ಯಂತರ ಕನ್ನಡಿಗರ ಆರಾಧ್ಯ ದೈವದ ಸ್ಮಾರಕದ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ ಎಂದು ನೆಟ್ಟಿಗರು ತಿರುಗೇಟು ನೀಡಿದ್ದಾರೆ.
ಈ ಹಿಂದೆಯೂ ಚೇತನ್‌ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಕಾನೂನು ಸಂಕಷ್ಟ ಎದುರಿಸಿದ್ದರು. ಅನೇಕ ರಾಜಕೀಯ ಪಕ್ಷಗಳ ಕೆಂಗಣ್ಣಿಗೂ ಗುರಿಯಾಗಿದ್ದರು.

Continue Reading

Latest

ಯೋಗೇಶ್‌ ಗೌಡ ಕೊಲೆ ಪ್ರಕರಣ: ಅನರ್ಹತೆ ಭೀತಿ; ಶಿಕ್ಷೆ ರದ್ದುಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಶಾಸಕ ವಿನಯ್‌ ಕುಲಕರ್ಣಿ

VISTARANEWS.COM


on

ಬೆಂಗಳೂರು: ಬಿಜೆಪಿ ಮುಖಂಡ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ಕೋರ್ಟ್ ವಿಧಿಸಿರುವ ಶಿಕ್ಷೆಗೆ ತಡೆಯಾಜ್ಞೆ ಮತ್ತು ಜಾಮೀನು ನೀಡುವಂತೆ ಅವರು ಹೈಕೋರ್ಟ್ ಗೆ ಇಂದು ಮನವಿ ಸಲ್ಲಿಸಿದ್ದಾರೆ.
ತಮಗೆ ಜೀವಾವಧಿ ಶಿಕ್ಷೆ ವಿಧಿಸಿರುವುದರಿಂದ ಶಾಸಕ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಗಳಿವೆ. ಆದ್ದರಿಂದ ಶಿಕ್ಷೆಗೆ ಕೂಡಲೇ ತಡೆಯಾಜ್ಞೆ ನೀಡುವಂತೆ ಅರ್ಜಿಯಲ್ಲಿ ಕೋರಿದ್ದಾರೆ. ಈ ಅರ್ಜಿಯ ವಿಚಾರಣೆ ಮುಂದಿನ ವಾರ ವಿಚಾರಣೆಗೆ ಬರುವ ಸಾಧ್ಯತೆಗಳಿದ್ದು, ವಿಚಾರಣೆಯ ವೇಳೆ ಸಿಬಿಐ ವಾದವನ್ನೂ ಹೈಕೋರ್ಟ್ ಆಲಿಸುವ ಸಾಧ್ಯತೆಗಳಿವೆ.
ಎರಡು ವರ್ಷಕ್ಕಿಂತ ಹೆಚ್ಚಿನ ಶಿಕ್ಷೆಯಾದಲ್ಲಿ ಜನಪ್ರತಿನಿಧಿಗಳು ತಮ್ಮ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ತಮ್ಮ ಶಾಸಕ ಸ್ಥಾನಕ್ಕೆ ಎದುರಾಗಿರುವ ಅನರ್ಹತೆಯ ಭೀತಿಯಿಂದ ತಪ್ಪಿಸಿಕೊಳ್ಳಲು ಶಿಕ್ಷೆಗೆ ತಕ್ಷಣವೇ ತಡೆ ನೀಡುವಂತೆ ಕೋರಿದ್ದಾರೆ ಎಂದು ತಿಳಿದು ಬಂದಿದೆ.
ಏನಿದು ಪ್ರಕರಣ?
2016ರಲ್ಲಿ ಯೋಗೇಶ್ ಗೌಡ ಅವರ ಹತ್ಯೆ ನಡೆದಿತ್ತು. ಈ ಪ್ರಕರಣ ಕಳೆದ ಒಂದು ದಶಕದಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿತ್ತು. ಈ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 21 ಮಂದಿಯ ಮೇಲೆ ಗಂಭೀರ ಆರೋಪಗಳು ಕೇಳಿಬಂದಿದ್ದವು. ಅಂದಿನ ಬಿಜೆಪಿ ಸರ್ಕಾರವು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಸಿಬಿಐ ಅಂತಿಮವಾಗಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಸುದೀರ್ಘ ವಿಚಾರಣೆಯ ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.

Continue Reading
Advertisement
Latest22 minutes ago

ಟೆಹರಾನ್‌ನಲ್ಲಿ ವಿಮಾನ ಹಾರಾಟ ಪುನರಾರಂಭ: ಪಾಕ್‌ಗೆ ಆಗಮಿಸಿದ ಇರಾನ್‌ ನಿಯೋಗ: ಯುದ್ಧದ ಅಂತ್ಯದ ಮುನ್ಸೂಚನೆಯೇ ?

Latest1 hour ago

ಪರಮಾಣು ಶಸ್ತ್ರಾಸ್ತ್ರಗಳು ಶಾಂತಿಯ ಉದ್ದೇಶಕ್ಕೆ ಬಳಕೆಯಾಗಲಿ: ವಿಶ್ವಸಂಸ್ಥೆ ಕಳಕಳಿ

Latest2 hours ago

ರಾಜಕುಮಾರ್‌ ಸಮಾಧಿಗೆ ಭೂಮಿ: ವಿವಾದ ಹುಟ್ಟು ಹಾಕಿದ ನಟ ಚೇತನ್‌ ವಿರುದ್ಧ ಅಭಿಮಾನಿಗಳ ಆಕ್ರೋಶ; ದೂರು ದಾಖಲು

Latest2 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಅನರ್ಹತೆ ಭೀತಿ; ಶಿಕ್ಷೆ ರದ್ದುಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಶಾಸಕ ವಿನಯ್‌ ಕುಲಕರ್ಣಿ

Latest3 hours ago

ಕಲಬುರಗಿ ಜಿಲ್ಲೆಯ ಮಕ್ಕಳನ್ನು ಅವಮಾನಿಸಬೇಡಿ, ಅವರೂ ಬುದ್ದಿವಂತರು; ಬಿಜೆಪಿ ಮುಖಂಡರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು

Latest3 hours ago

ಕಾಂತಾರ ಚಾಪ್ಟರ್‌-1 ಮಿಮಿಕ್ರಿ: ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೇಲಿನ ಪ್ರಕರಣ ಇತ್ಯರ್ಥ; ಕೋರ್ಟ್‌ ಆದೇಶವೇನು?

Latest3 hours ago

ಒಳಮೀಸಲಾತಿ ಜಾರಿ: ಕೊಟ್ಟ ಮಾತು ಈಡೇರಿಸಿದ ದಲಿತರಾಮಯ್ಯ; ಸಚಿವ ಆರ್.ಬಿ. ತಿಮ್ಮಾಪುರ

Latest4 hours ago

ಒಳ ಮೀಸಲಾತಿಯಿಂದ ಅನ್ಯಾಯ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹೋರಾಟ; ಬಿಜೆಪಿ ಘೋಷಣೆ

Latest5 hours ago

ದೆಹಲಿಯಲ್ಲಿ ಬೀಡುಬಿಟ್ಟ ಡಿಕೆ ಶಿವಕುಮಾರ್;‌ ಪ್ರತಿತಂತ್ರ ಹೆಣೆಯುತ್ತಿರುವ ಸಿದ್ದರಾಮಯ್ಯ ಟೀಂ; ಮುಂದುವರೆದ ಹಾವು ಏಣಿಯಾಟ

Latest5 hours ago

ಕೇಜ್ರಿವಾಲ್‌ ನೀಲಿಕಣ್ಣಿನ ಹುಡಗನಿಗೆ ಕೇಂದ್ರ ಮಂತ್ರಿ ಸ್ಥಾನ ಸುಲಭ ಸಾಧ್ಯವೇ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌