ಇ-ಗಸ್ತು ಪರಿಣಾಮಕಾರಿಯಾಗಿ ಬಳಸಿ ವನ್ಯಜೀವಿ ದಾಳಿ ತಪ್ಪಿಸಿ: ಈಶ್ವರ ಖಂಡ್ರೆ ಕರೆ - Vistara News

Latest

ಇ-ಗಸ್ತು ಪರಿಣಾಮಕಾರಿಯಾಗಿ ಬಳಸಿ ವನ್ಯಜೀವಿ ದಾಳಿ ತಪ್ಪಿಸಿ: ಈಶ್ವರ ಖಂಡ್ರೆ ಕರೆ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಹೊಸತನಕ್ಕೆ ಒಗ್ಗಿಕೊಂಡಾಗ ಮಾತ್ರ ಸಮಸ್ಯೆಗಳಿಗೆ ಪರಿಹಾರ ದೊರಕಲು ಸಾಧ್ಯ. ಅರಣ್ಯ ಅಧಿಕಾರಿಗಳು ಕೂಡ ಮಾನವ-ವನ್ಯಜೀವಿ ಸಂಘರ್ಷಕ್ಕೆ ವಿನೂತನ ಮಾರ್ಗೋಪಾಯ ಸಂಶೋಧಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಅರಣ್ಯ ಭವನದಲ್ಲಿ ನಡೆದ 2 ದಿನಗಳ ಕೆಡಿಪಿ ಮತ್ತು ಎಂ.ಎಂ.ಆರ್. ಸಭೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಇ-ಗಸ್ತು ಮತ್ತು ಅತ್ಯಾಧುನಿಕ ಉಪಕರಣಗಳ ಬಳಕೆಯಿಂದ ಮಾನವ ವನ್ಯಜೀವಿ ಸಂಘರ್ಷ ತಡೆಗಟ್ಟಬಹುದಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಮತ್ತು ಅಭಿವೃದ್ಧಿಪಡಿಸಲು ಸೂಚಿಸಿದರು.
ಅರಣ್ಯ ಪ್ರದೇಶದಲ್ಲಿ ಅಕ್ರಮ ಮರ ಕಡಿತಲೆ, ವನ್ಯಜೀವಿಗಳ ಅಸಹಜ ಸಾವು, ಕಳ್ಳಬೇಟೆ, ಅರಣ್ಯ ಒತ್ತುವರಿ, ಮಾನವ-ವನ್ಯಜೀವಿ ಸಂಘರ್ಷ ಇದು ಮುಖ್ಯವಾಗಿ ನಮ್ಮ ಮುಂದಿರುವ ಸವಾಲಾಗಿದೆ. ಪ್ರತಿಯೊಂದು ಜೀವವೂ ಅಮೂಲ್ಯವಾಗಿದ್ದು, ವನ್ಯಜೀವಿಗಳಿಂದ ಯಾವುದೇ ಸಾವು ಸಂಭವಿಸದಂತೆ ಶಾಶ್ವತ ಪರಿಹಾರ ಒದಗಿಸಲು ಕಾಡಿನೊಂದಿಗೆ ಹೆಚ್ಚು ಒಡನಾಟ ಹೊಂದಿರುವ ನೀವೆಲ್ಲರೂ ಶ್ರಮಿಸಬೇಕು. ಯಾವ ಪ್ರದೇಶದಲ್ಲಿ ಹೆಚ್ಚಿನ ವನ್ಯಜೀವಿ ಸಂಘರ್ಷ ಇದೆ, ಈ ಸಂಘರ್ಷಕ್ಕೆ ಕಾರಣವೇನು, ಅದನ್ನು ಪರಿಹರಿಸಲು ಏನು ಮಾಡಬೇಕು ಎಂಬ ಬಗ್ಗೆ ಅಧಿಕಾರಿಗಳು ತಜ್ಞರೊಂದಿಗೆ ಸಮಾಲೋಚಿಸಿ ಪರಿಹಾರೋಪಾಯಗಳನ್ನು ಕಂಡುಕೊಳ್ಳಬೇಕು ಎಂದರು.
ನೆರೆ ರಾಜ್ಯಗಳಿಂದ ಮೆಚ್ಚುಗೆ:
ನಮ್ಮ ಅರಣ್ಯ ಇಲಾಖೆಯ ಸಿಬ್ಬಂದಿ ಆನೆ ಸೆರೆ ಹಿಡಿಯುವುದರಲ್ಲಿ ಪ್ರಾವೀಣ್ಯತೆ ಪಡೆದಿದ್ದು, ನೆರೆಯ ಆಂಧ್ರಪ್ರದೇಶದವರು ನಮ್ಮಿಂದ ಕುಮ್ಕಿ ಆನೆ ಕೇಳುತ್ತಾರೆ. ಗೋವಾದವರು ಆನೆ ಹಿಮ್ಮೆಟ್ಟಿಸಲು ರಾಜ್ಯದ ನೆರವು ಕೇಳುತ್ತಾರೆ. ಉತ್ತರದ ಅರುಣಾಚಲ ಪ್ರದೇಶದವರೂ ಆನೆ ಸೆರೆ ಹಿಡಿಯಲು ನಮ್ಮ ನೆರವು ಕೋರುತ್ತಾರೆ. ಈ ಬಗ್ಗೆ ಹೆಮ್ಮೆ ಎನಿಸುತ್ತದೆ. ಆದರೆ, ನಮ್ಮ ರಾಜ್ಯದಲ್ಲಿನ ಸಮಸ್ಯೆಯ ನಿವಾರಣೆಗೂ ನಾವು ಹೆಚ್ಚಿನ ಆದ್ಯತೆ ಮತ್ತು ಗಮನ ಹರಿಸಬೇಕು ಎಂದರು.
ಅರಣ್ಯ ಪ್ರದೇಶದಲ್ಲಿ ಹೆಚ್ಚಳ ಆಗುವುದಿಲ್ಲ. ಆದರೆ ಪ್ರಾಣಿಗಳ ಸಂಖ್ಯೆ ಹೆಚ್ಚಳವಾಗುತ್ತದೆ. ಮುಂದಿನ 20 ವರ್ಷಗಳಲ್ಲಿ ಅವುಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಆಗುವ ಸಾಧ್ಯತೆ ಇದೆ. ಹೀಗಾಗಿ ತಾತ್ಕಾಲಿಕವಾಗಿ ಆಯ್ದ ಪ್ರದೇಶದಲ್ಲಿ, ಆಯ್ದ ವನ್ಯಜೀವಿಗಳಿಗೆ ಸಂತಾನ ಹರಣ ಅಥವಾ ನಿಯಂತ್ರಣ ಚುಚ್ಚು ಮದ್ದು ನೀಡುವ ಸಾಧ್ಯತೆಗಳ ಕುರಿತಂತೆ ಅದರ ಸಾಧಕ ಬಾಧಕ ಕುರಿತಂತೆ ರಾಷ್ಟ್ರಮಟ್ಟದಲ್ಲಿಯೂ ಸಾರ್ವಜನಿಕವಾಗಿ ಚರ್ಚೆಗಳು ನಡೆಯಬೇಕು ಎಂದರು.
ಒತ್ತುವರಿ ತೆರವು ಕಷ್ಟಸಾಧ್ಯವಾಗಿದೆ. 2015ರ ನಂತರದ ಒತ್ತುವರಿಗಳ ತೆರವಿಗೆ ಕ್ರಮ ಆಗಬೇಕಿದೆ. ಈ ನಿಟ್ಟಿನಲ್ಲಿ ನಮ್ಮ ಇಲಾಖೆಯಲ್ಲಿರುವ ಕಾನೂನು ಕೋಶ ಬಲಪಡಿಸಬೇಕು ಜೊತೆಗೆ ಹೊಸ ಒತ್ತುವರಿ ಆಗದಂತೆ ಮತ್ತು ವನ್ಯಜೀವಿ ಕಳ್ಳಬೇಟೆ, ಅಸಹಜ ಸಾವು ತಡೆಗೆ ಜಾಗೃತ ದಳವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದರು.
ಅರಣ್ಯ ಸಿಬ್ಬಂದಿ ಕಾಡಿನಂಚಿನ ಜನರೊಂದಿಗೆ ಸೌಹಾರ್ದತೆ ಹೆಚ್ಚಿಸಿಕೊಳ್ಳಬೇಕು. ವಿವಿಧ ಪ್ರತಿಷ್ಠಾನಗಳಿಗೆ ಸಫಾರಿಯಿಂದ ಬರುವ ಹಣದಿಂದ ಕಾಡಿನಂಚಿನಲ್ಲಿ ಜನಸಂಪರ್ಕ ಸಭೆ ನಡೆಸಬೇಕು, ಸೌಕರ್ಯ ಒದಗಿಸಬೇಕು. ಸರ್ಕಾರ ಕೈಗೊಳ್ಳುವ ಕಾರ್ಯಕ್ರಮಗಳನ್ನು, ಆದೇಶಗಳನ್ನು ಅನುಷ್ಠಾನಗೊಳಿಸಬೇಕು. 2 ದಿನಗಳ ಕಾಲ ಇಲ್ಲಿ ಉಪಯುಕ್ತ ಚರ್ಚೆ ಆಗಿದೆ. ಈ ಚರ್ಚೆಯಿಂದ ಒಂದು ವೃತ್ತದ ಉತ್ತಮ ರೂಢಿಯನ್ನು ಮತ್ತೊಂದು ವಲಯದಲ್ಲಿ ಅಳವಡಿಸಲು ಅವಕಾಶ ಆಗುತ್ತದೆ. ಇಲ್ಲಿ ನಡೆದ ಚರ್ಚೆಯ ಅಂಶಗಳ ಬಗ್ಗೆ ಒಂದು ವರದಿ ಸಿದ್ಧಪಡಿಸಿ, ಪರಾಮರ್ಶೆ ನಡೆಸಿ. ಇಲಾಖೆಗೆ ಹೆಸರು ಬರುವಂತೆ ಕಾರ್ಯ ನಿರ್ವಹಿಸಿ ಎಂದರು.
ಕಾರ್ಯಕ್ರಮದಲ್ಲಿ ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಕುಮಾರ್ ಪುಷ್ಕರ್ ಸೇರಿದಂತೆ ಹಿರಿಯ ಅರಣ್ಯ ಅಧಿಕಾರಿಗಳು ಮತ್ತು ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಒಳ ಮೀಸಲಾತಿಯಿಂದ ಅನ್ಯಾಯ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹೋರಾಟ; ಬಿಜೆಪಿ ಘೋಷಣೆ

VISTARANEWS.COM


on

ಬೆಂಗಳೂರು: ನೀವೇ ನೇಮಿಸಿದ ನ್ಯಾ.ನಾಗಮೋಹನ್‍ದಾಸ್ ಅವರು ಸಲ್ಲಿಸಿದ್ದ ವರದಿ ಅವೈಜ್ಞಾನಿಕ ಎಂಬ ಕಾರಣಕ್ಕೆ ತಿರಸ್ಕರಿಸಿದ್ದೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ಮುಖಂಡ ಸಂಸದ ಗೋವಿಂದ ಕಾರಜೋಳ ಪ್ರಶ್ನಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ನೀವೇ ರಚಿಸಿದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವರದಿ ವೈಜ್ಞಾನಿಕವೇ? ನ್ಯಾ.ನಾಗಮೋಹನ್‍ದಾಸ್ ಅವರು ಸಲ್ಲಿಸಿದ್ದ ವರದಿ ಅವೈಜ್ಞಾನಿಕವೇ ಎಂದು ಸ್ಪಷ್ಟಪಡಿಸಲು ಒತ್ತಾಯಿಸಿದರು.
ಬೆಟ್ಟ ಅಗೆದು ಇಲಿ ಹುಡುಕಿದಂತೆ ಸಿದ್ದರಾಮಯ್ಯನವರು ಒಳ ಮೀಸಲಾತಿ ಜಾರಿ ನಿರ್ಧಾರ ಪ್ರಕಟಿಸಿ ತಮ್ಮ ಬೆನ್ನನ್ನು ತಾವೇ ಚಪ್ಪರಿಸಿಕೊಂಡಿದ್ದಾರೆ. ಸಾಮಾಜಿಕ ನ್ಯಾಯ, ಸರ್ವರಿಗೂ ಸಮಪಾಲು, ಸಮಬಾಳು ಎಂದು ನಿರಂತರ ಭಾಷಣ ಮಾಡುತ್ತೀರಿ, ನಿಮಗೆ ಒಳ ಮೀಸಲಾತಿ ಕೇವಲ ಭಾಷಣದ ಸರಕೇ ಎಂದು ತರಾಟೆಗೆ ತೆಗೆದುಕೊಂಡರು. ನೂರಾರು ಕೋಟಿ ಖರ್ಚು ಮಾಡಿ ನೀಡಿದ ವರದಿಗಳು ಏನಾದವು? ಜಯಪ್ರಕಾಶ್ ಹೆಗ್ಡೆ ಅವರ ವರದಿ ಮೂಲೆಗುಂಪಾಗಿದೆ. ಮಧುಸೂದನ ನಾಯಕ್ ವರದಿ ಹೊರಗೆ ಬರಲೇ ಇಲ್ಲ ಎಂದು ಆಕ್ಷೇಪಿಸಿದರು.
ಜನರಿಗೆ ಮೋಸ ಮಾಡಿ, ಬಡವರನ್ನು ದಾರಿ ತಪ್ಪಿಸಿ ಬಡವರಿಗೆ ಅಹಿಂದ ನಾಯಕ ಎಂದು ಹೇಳಿ ಅಧಿಕಾರಕ್ಕೆ ಬರುವುದೊಂದೇ ನಿಮ್ಮ ಗುರಿ. ಕುರ್ಚಿ ಉಳಿಸಿಕೊಳ್ಳಲು ನೀವು ಮಾಡುವುದನ್ನು ನೋಡಿದರೆ ಇದಕ್ಕಿಂತ ಹೆಚ್ಚಿನ ಮೋಸವನ್ನು ಪ್ರಪಂಚದಲ್ಲಿ ಬೇರೆ ಯಾರೂ ಮಾಡಲು ಸಾಧ್ಯ ಇಲ್ಲ ಅವರು ಟೀಕಿಸಿದರು.
ಸಿದ್ದರಾಮಯ್ಯನವರು ಇತ್ತೀಚೆಗೆ ಕೇವಲ ಹೊಂದಾಣಿಕೆಯ ರಾಜಕಾರಣಿ ಆಗಿದ್ದಾರೆಂದು ಅವರ ಸಂಪುಟದ ಸಚಿವ ಸತೀಶ್ ಜಾರಕಿಹೊಳಿ ಅವರೇ ಹೇಳಿದ್ದಾರೆ. ಅದು ಸತ್ಯ ಎನ್ನುವುದು ಸಾಬೀತಾಗಿದೆ. ನ್ಯಾ. ಸದಾಶಿವ ವರದಿ, ನಾಗಮೋಹನ್‍ದಾಸ್ ವರದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಂಪುಟ ಉಪ ಸಮಿತಿ ವರದಿ ಇತ್ತು. ಸುಪ್ರೀಂ ಕೋರ್ಟ್ ಆದೇಶ ಇತ್ತು. ಯಾವುದನ್ನೂ ಪರಿಗಣಿಸದೇ ಸಿದ್ದರಾಮಯ್ಯನವರು ಖಾಜಿ ನ್ಯಾಯ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ ಸರ್ಕಾರ ಮೀಸಲಾತಿಯನ್ನು ವೈಜ್ಞಾನಿಕವಾಗಿ ಶೇ.17ಕ್ಕೆ ಹೆಚ್ಚಿಸಿತ್ತು. ಅಂದಿನ ಕಾನೂನು ಸಚಿವ ಮಾಧುಸ್ವಾಮಿ ಅವರ ವರದಿ ಪಡೆದು ವೈಜ್ಞಾನಿಕವಾಗಿ ಹಂಚಿದ್ದೆವು. ಎ- ಶೇ 6, ಬಿ- ಶೇ 5.5, 4.5, ಶೇ 1 ಅಲೆಮಾರಿಗಳಿಗೆ ಕೊಟ್ಟಿದ್ದೆವು. 2013ರ ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರ ಸಿಕ್ಕಿದರೆ ಒಳ ಮೀಸಲಾತಿ ಜಾರಿ ಮಾಡುವುದಾಗಿ ಸಿದ್ದರಾಮಯ್ಯನವರು ಹೇಳಿದ್ದರು. ಬಳಿಕ ಸಿದ್ದರಾಮಯ್ಯನವರು ಬೀದಿಯಲ್ಲಿ ಜನರನ್ನು ಬಡಿದಾಡಲು ಬಿಟ್ಟು ಆನಂದವಾಗಿ ವಿಧಾನಸೌಧದಲ್ಲಿ ಕಾಲ ಕಳೆದಿದ್ದರು ಎಂದು ಟೀಕಿಸಿದರು.
ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಈ ತೀರ್ಮಾನ ಮಾಡುವಾಗ ಉಪ ಮುಖ್ಯಮಂತ್ರಿ ಶಿವಕಮಾರ್‌ ಅವರು ಭಾಗವಹಿಸಿರಲಿಲ್ಲ. ಬಹುಶಃ ಅವರಿಗೂ ಇದು ತೃಪ್ತಿಕರ ಅಲ್ಲ ಎಂಬುದು ಗೊತ್ತಿತ್ತು. ಸಚಿವರು ಜನಾಂಗದ ಪರವಾಗಿ ನಿಲ್ಲಬೇಕಿತ್ತು. ಕಾಂಗ್ರೆಸ್ಸಿನ ಪರವಾಗಿ ಅಲ್ಲ; ಒಳಮೀಸಲಾತಿ ಕೇಳುವಲ್ಲಿ ಸಚಿವರು ಸಂಪೂರ್ಣವಾಗಿ ಎಡವಿದ್ದು, ತಮ್ಮದೇ ಸಮಾಜಗಳಿಗೆ ಅನ್ಯಾಯ, ಮಾಡಿದ್ದಾರೆ. ಈ ತೀರ್ಮಾನವನ್ನು ಬಿಜೆಪಿ ವಿರೋಧಿಸಲಿದೆ ಎಂದರು.
ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ ಅವರು ಮಾತನಾಡಿ, ಒಳ ಮೀಸಲಾತಿ ವಿಚಾರಕ್ಕೆ ಕೊನೆ ಮೊಳೆಯನ್ನು 3 ವರ್ಷಗಳ ಬಳಿಕ ಹೊಡೆದಿದ್ದಾರೆ. ಇದನ್ನು ವಿರೋಧಿಸಿ ಬಿಜೆಪಿ ಹೋರಾಟ ಮಾಡಲಿದೆ ಎಂದರು.

Continue Reading

Latest

ದೆಹಲಿಯಲ್ಲಿ ಬೀಡುಬಿಟ್ಟ ಡಿಕೆ ಶಿವಕುಮಾರ್;‌ ಪ್ರತಿತಂತ್ರ ಹೆಣೆಯುತ್ತಿರುವ ಸಿದ್ದರಾಮಯ್ಯ ಟೀಂ; ಮುಂದುವರೆದ ಹಾವು ಏಣಿಯಾಟ

VISTARANEWS.COM


on

ಬೆಂಗಳೂರು: ಮೇ ತಿಂಗಳಿಗೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳಾಗುತ್ತವೆ. ಅಧಿಕಾರ ಹಂಚಿಕೆಯ ಸೂತ್ರದ ಪ್ರಕಾರ ಕಳೆದ ನವಂಬರ್‌ ಡಿಸೆಂಬರ್‌ ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕಿತ್ತು. ಆದರೆ ವಿವಿಧ ಕಾರಣಗಳನ್ನು ಮುಂದೊಡ್ಡಿ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರೆದಿದ್ದಾರೆ.
ಇದರಿಂದ ಬೇಸತ್ತ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್‌ ಅವರು, ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿದ್ದು ಅಂತಿಮ ಹೋರಾಟ ನಡೆಸುತ್ತಿದ್ದಾರೆ. ಬಜೆಟ್‌ ಆಯ್ತು, ಉಪ ಚುನಾವಣೆ ಆಯಿತು, ಐದು ರಾಜ್ಯಗಳ ಚುನಾವಣೆ ಆಯ್ತು… ಈಗಲಾದರೂ ಮುಖ್ಯಮಂತ್ರಿ ಆಗಲು ಅವಕಾಶ ನೀಡಿ ಎಂದು ವರಿಷ್ಠರ ಮೇಲೆ ಒತ್ತಡ ಹೇರುತ್ತಿದ್ದಾರೆ.
ಮತ್ತೊಂದು ಕಡೆ ಸಿದ್ದರಾಮಯ್ಯಯ ಅವರ ತಂಡವೂ ಚುರುಕಾಗಿದೆ. ಆಧಿಕಾರ ಉಳಿಸಿಕೊಳ್ಳಲು ಎಲ್ಲ ಕಾರ್ಯತಂತ್ರಗಳನ್ನು ರೂಪಿಸುತ್ತಿದೆ. ಎರಡೂ ಕಡೆಯ ಶಾಸಕರಿಗೆ ಏನಾಗುತ್ತಿದೆ ಎಂಬ ಮಾಹಿತಿಯೇ ಇಲ್ಲದೆ ಗೊಂದಲಕ್ಕೀಡಾಗಿದ್ದಾರೆ.
ಮೇ 4 ರಂದು ಫಲಿತಾಂಶ ಪ್ರಕಟವಾದ ನಂತರ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಗಳೆರಡಕ್ಕೂ ಹೊಸಬರ ನೇಮಕ ಆಗಲಿದೆ ಎಂಬ ಊಹಾಪೋಹಗಳೂ ಕೇಳಿಬರುತ್ತಿವೆ. ಇದೇ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಆಪ್ತರೊಂದಿಗೆ ಸಭೆ ನಡೆಸಿದ್ದು, ತಮ್ಮನ್ನೇ ಮುಂದುವರೆಸುವಂತೆ ಹೈಕಮಾಂಡ್‌ ಮೇಲೆ ಒತ್ತಡ ಹೇರುವಂತೆ ಆಪ್ತ ಸಚಿವರಿಗೆ ಸೂಚನೆ ನೀಡಿದ್ದಾರೆ. ಜತೆಗೆ ಸಚಿವ ಸಂಪುಟ ಪುನಾರಚನೆ ಆಗುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ. ಹಾಗಾಗಿ ನಿಮ್ಮ ಸ್ಥಾನಗಳನ್ನು ಭದ್ರಪಡಿಸಿಕೊಳ್ಳುವಂತೆಯೂ ಹೇಳಿದ್ದಾರೆ. ಅದಕ್ಕಾಗಿ ಎಲ್ಲರೂ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡುವಂತೆಯೂ ಸೂಚಿಸಿದ್ದಾರೆ ಎಂದು ಖಚಿತ ಮಾಹಿತಿ ಹೊರಬಿದ್ದಿದೆ.
ಆಗಲೇ ಹೇಳಿದಂತೆ ಶಿವಕುಮಾರ್‌ ಒಂದು ನಿರ್ಧಾರ ತೆಗೆದುಕೊಂಡೇ ಬೆಂಗಳೂರಿಗೆ ಆಗಮಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಭರವಸೆ ನೀಡಿದ್ದಂತೆ ಮಗೆ ಅಧಿಕಾರ ವಹಿಸಿಕೊಡಲು ಸಮಸ್ಯೆ ಏನು? ಪಕ್ಷವನ್ನು ಅಧಿಕಾರಕ್ಕೆ ತರಲು ನನ್ನ ಶ್ರಮ ನಿಮಗೆ ಅರಿವಿಲ್ಲವೇ ಎಂದು ವರಿಷ್ಠರನ್ನು ಪ್ರಶ್ನಿಸುತ್ತಿದ್ದಾರೆ. ಆದರೆ ವರಿಷ್ಠರ ಬಳಿ ಈ ಪ್ರಶನೆಗೆ ಉತ್ತರ ಇಲ್ಲ. ಕೆ.ಸಿ. ವೇಣುಗೋಪಾಲ್‌, ಮಲ್ಲಿಕಾರ್ಜುನ ಖರ್ಗೆ, ರಣ್‌ ದೀಪ್‌ ಸುರ್ಜೇವಾಲಾ ಆದಿಯಾಗಿ ಎಲ್ಲರೂ ರಾಹುಲ್‌ ಗಾಂಧಿ ಅವರತ್ತ ಬೊಟ್ಟು ಮಾಡಿ ತೋರಿಸುತ್ತಿದ್ದಾರೆ.
ದೆಹಲಿಯಲ್ಲಿ ಶಿವಕುಮಾರ್ ಅವರಿಗೆ ಅವರ ಸಹೋದರ ಡಿಕೆ ಸುರೇಶ್ ಸಾಥ್‌ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಒಂದೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಪುನಾರಚನೆಗಿಂತ ಮೊದಲು ಅಧಿಕಾರ ಹಂಚಿಕೆ ಆಗಬೇಕು ಎನ್ನುವುದು ಶಿವಕುಮಾರ್‌ ಅವರ ವಾದ.
ಸಂಪುಟ ಪುನಾರಚನೆಗೆ ಒತ್ತಡ:
ಅಧಿಕಾರ ಹಸ್ತಾಂತರ ಏನಾದರೂ ಆಗಲಿ, ಯಾರಾದರೂ ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳಲಿ, ಪಕ್ಷ ಅಧಿಕಾರಕ್ಕೆ ಬಂದು ಮೂರು ವರ್ಷವಾಗುತ್ತಿದ್ದು, ಸಂಪುಟ ಪನರ್‌ ರಚಿಸಿ ತಮಗೆ ಅವಕಾಶ ನೀಡುವಂತೆ 20ಕ್ಕೂ ಹೆಚ್ಚು ಹಿರಿಯ ಶಾಸಕರು ಹೈಕಮಾಂಡ್‌ ಮೇಲೆ ಒತ್ತಡ ಹೇರುತ್ತಿದ್ದಾರೆ. ಇವರಲ್ಲಿ ನಾಲ್ಕೈದು ಬಾರಿ ಗೆದ್ದವರೂ ಇದ್ದಾರೆ. ತಮಗೂ ಅವಕಾಶ ನೀಡಿ ಎಂದು ಹೊಸ ಶಾಸಕರೂ ದುಂಬಾಲು ಬಿದ್ದಿದ್ದಾರೆ.
ಫಲಿತಾಂಶ ಪ್ರಕಟವಾದ ನಂತರ ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆದರೂ ಅಚ್ಚರಿ ಇಲ್ಲ. ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ ರಾಜ್ಯಗಳ ಫಲಿತಾಂಶ ಹೈಕಮಾಂಡ್‌ ತೀರ್ಮಾನವನ್ನು ಅವಲಂಬಿಸಿರುತ್ತದೆ. ಅಧಿಕಾರನ್ನು ಕಿತ್ತುಕೊಳ್ಳುವುದು ಕೊಟ್ಟಷ್ಟು ಸುಲಭ ಅಲ್ಲ ಎನ್ನುವುದು ಹೈಕಮಾಂಡ್‌ ಗೆ ಮತ್ತೊಮ್ಮೆ ಮನವರಿಕೆ ಆಗಿದೆ.

Continue Reading

Latest

ಹುಯ್ಯಲೆದೆಯಂತೆ ಇವತ್ತು ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

VISTARANEWS.COM


on

ಬೆಂಗಳೂರು: ರಾಜ್ಯದೆಲ್ಲೆಡೆ ಬಿಸಿಲ ಬೆಗೆ ತಾರಕಕ್ಕೇರಿದೆ. ಮಳೆ ಸಿಂಚನಕ್ಕಾಗಿ ಕಾದು ಕುಳಿತ ಜನತೆಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಶನಿವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರೊಂದಿಗೆ 4 ಜಿಲ್ಲೆಗಳಿಗೆ ಇಲಾಖೆ ಆರೆಂಜ್ ಅಲರ್ಟ್​ ಘೋಷಿಸಿದೆ.


ಇದರ ಬೆನ್ನಲ್ಲೇ ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಬಿಸಿ ಅಲೆ (ಹೀಟ್​ವೇವ್) ಅಲರ್ಟ್​ ಘೋಷಿಸಿದೆ. ಅದರ ಜೊತೆಗೆ ಗುಡುಗು ಸಹಿತ ಗಾಳಿ-ಮಳೆಯಾಗುವ ಸಂಭವವೂ ಇದೆ ಎಂದು ಇಲಾಖೆ ತಿಳಿಸಿದೆ.


ಮುಂದಿನ 5 ದಿನದವರೆಗೂ ಕರಾವಳಿಯಲ್ಲಿ ಇದೇ ರೀತಿಯ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಮುಂಬರುವ ದಿನಗಳಲ್ಲಿ ರಾಜ್ಯದ ಹಲವೆಡೆ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ ಮುಟ್ಟುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಬಿಸಿಲಲ್ಲಿ ಓಡಾಡಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.


ಉಷ್ಣಾಘಾತದಿಂದ ರಕ್ಷಣೆ ಹೇಗೆ?


ಮುಂಬರುವ ದಿನಗಳಲ್ಲಿ ರಾಜ್ಯದೆಲ್ಲೆಡೆ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಅವಶ್ಯಕತೆ ಇಲ್ಲದೆ ಮನೆಯಿಂದ ಹೊರಬರುವುದನ್ನು ತಪ್ಪಿಸುಂತೆ ಹಾಗೂ ಬೇಸಿಗೆ ರಜೆಯಲ್ಲಿ ಮಕ್ಕಳು ಬಿಸಿಲಲ್ಲಿ ಆಟವಾಡುವುದನ್ನು ಆದಷ್ಟು ಕಡಿಮೆ ಮಾಡುವಂತೆ ಸೂಚಿಸಿದೆ.


ಈ ನಡುವೆ, ಉಷ್ಣ ಅಲೆ ಹಾಗೂ ಉಷ್ಣಾಘಾತದಿಂದ (ಹೀಟ್ ಸ್ಟ್ರೋಕ್) ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ.

ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡಿ, ಇವು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಎಂದು ಸಲಹೆ ನೀಡಿದೆ.

Continue Reading

Latest

ಎಸ್‌.ಟಿ. ಸಮುದಾಯಕ್ಕೆ ಶೇ.17 ಮೀಸಲಾತಿ ಉಳಿಸಿಕೊಳ್ಳಲು ಹೋರಾಟ ನಡೆಸಿ; ಕಾಂಗ್ರೆಸ್‌ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ

VISTARANEWS.COM


on

ಬೆಂಗಳೂರು: ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಶೇ.17 ಮೀಸಲಾತಿ ಪ್ರಮಾಣವನ್ನು ಉಳಿಸಿಕೊಳ್ಳಲು ರಾಜ್ಯ ಸರಕಾರ ಸೂಕ್ತ ಕಾನೂನು ಹೋರಾಟ ನಡೆಸಬೇಕು. ಇಲ್ಲವಾದರೆ ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಒಳ ಮೀಸಲಾತಿಯನ್ನು ಪ್ರಕಟಿಸಿದ ನಂತರ ಅವರು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಜ್ಯ ಕಾಂಗ್ರೆಸ್‌ ಕಾಂಗ್ರೆಸ್ ಸರಕಾರ ಐತಿಹಾಸಿಕ ಮೋಸ ಮತ್ತು ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದೆ. ಸುಪ್ರಿಂಕೋರ್ಟ್ ಆದೇಶದ ಅನುಸಾರ ಪರಿಶಿಷ್ಟ ಜಾತಿಗಳಿಗೆ ಮೀಸಲಾತಿ ಹಂಚಿಕೆ ಮಾಡಲು ಸರಿಸುಮಾರು ಎರಡೂವರೆ ವರ್ಷಗಳವರೆಗೆ ಕಾಲಹರಣ ಮಾಡಿ ಅಂತಿಮವಾಗಿ ಸಚಿವ ಸಂಪುಟ ಸಭೆಯಲ್ಲಿ ಎ, ಬಿ, ಮತ್ತು ಸಿ ವರ್ಗಗಳಾಗಿ ವಿಂಗಡಿಸಿದೆ.
ಹಿಂದಿನ ಬಿಜೆಪಿ ಸರ್ಕಾರವು ಪರಿಶಿಷ್ಟ ಜಾತಿಗಳಿಗೆ ಶೇ.15 ರಿಂದ ಶೇ.17ಕ್ಕೆ ಮೀಸಲಾತಿಯನ್ನು ಹೆಚ್ಚಿಸಿತ್ತು. ಆದರೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ‘ಎ’ ವರ್ಗಕ್ಕೆ ಬಿಜೆಪಿ ಸರ್ಕಾರವು ನೀಡಿದ್ದ ಶೇ. 6ರ ಪ್ರಮಾಣವನ್ನುತಗ್ಗಿಸಿ ಶೇ. 5.25ಕ್ಕೆ ಹಾಗೂ ‘ಬಿ’ ವರ್ಗಕ್ಕೆ ನೀಡಲಾಗಿದ್ದ ಶೇ. 5.5 ಪ್ರಮಾಣವನ್ನು ತಗ್ಗಿಸಿ ಶೇ. 5.25ಕ್ಕೆ ಇಳಿಸುವ ಮೂಲಕ ಎಡ ಮತ್ತು ಬಲ ಸಮುದಾಯಗಳಿಗೆ ಘೋರ ಅನ್ಯಾಯವನ್ನು ಎಸಗಿದೆ. ಅದೇ ರೀತಿ ಬಂಜಾರ, ಭೋವಿ, ಕೊರಚ ಹಾಗೂ ಕೊರಮ ಸಮುದಾಯಗಳಿಗೆ ನೀಡಲಾಗಿದ್ದ ಶೇ. 4.5ರ ಪ್ರಮಾಣವನ್ನು ಹಾಗೂ ಪ್ರತ್ಯೇಕವಾಗಿ ಅಲೆಮಾರಿ ಸಮುದಾಯಗಳಿಗೆ ನೀಡಲಾಗಿದ್ದ ಶೇ. 1 ಪ್ರಮಾಣವನ್ನು ರದ್ದುಗೊಳಿಸಿ ಇವೆರಡೂ ಸಮುದಾಯವನ್ನು ಒಟ್ಟುಗೂಡಿಸಿ ‘ಸಿ’ ವರ್ಗವನ್ನಾಗಿಸಿ ನ್ಯಾಯಯುತವಾಗಿ ಬರಬೇಕಾಗಿದ್ದ ಶೇ. 5.5ರ ಪ್ರಮಾಣವನ್ನು ತಗ್ಗಿಸಿ ಶೇ. 4.5ಕ್ಕೆ ಇಳಿಸಿದೆ. ಆ ಮೂಲಕ ಈ ಸಮುದಾಯಗಳ ಬೆನ್ನಿಗೂ ಚೂರಿಯನ್ನು ಹಾಕಿದೆ ಎಂದು ಹೇಳಿದ್ದಾರೆ.
ನ್ಯಾಯಾಲಯದಲ್ಲಿ ತಡೆಯಾಜ್ಞೆ ಇಲ್ಲದಿದ್ದರೂ ರಾಜ್ಯ ಸರ್ಕಾರವೇ ಅಫಿಡವಿಟ್ ಸಲ್ಲಿಸಿ ಶೇ. 17ರ ಮೀಸಲಾತಿಯನ್ನು ಶೇ. 15ಕ್ಕೆ ಇಳಿಸುವುದಾಗಿ ಒಪ್ಪಿಕೊಂಡಿದ್ದರ ಫಲ ಪ.ಜಾ.ಮೀಸಲಾತಿ ಪ್ರಮಾಣವು 17 ರಿಂದ 15ಕ್ಕೆ ಇಳಿಯಲು ಕಾರಣವಾಗಿದೆ. ಒಂದೆಡೆ ಲಕ್ಷಾಂತರ ಸರಕಾರಿ ಹುದ್ದೆಗಳು ಖಾಲಿ ಇದ್ದರೂ ಯಾವುದನ್ನೂ ಭರ್ತಿ ಮಾಡದೇ ಒಳಮೀಸಲಾತಿ ಹೆಸರಲ್ಲಿ ಎರಡೂವರೆ ವರ್ಷಗಳ ಅಮೂಲ್ಯ ಸಮಯವನ್ನು ಹಾಳು ಮಾಡಿದ ಕಾಂಗ್ರೆಸ್ ಸರಕಾರ, ಇನ್ನೇನು ತನ್ನ ಅಧಿಕಾರವಧಿ ಕೇವಲ 2 ವರ್ಷ ಉಳಿದಿರುವಾಗ ಪರಿಶಿಷ್ಟ ಸಮುದಾಯಗಳೂ ಸೇರಿದಂತೆ ಇಡೀ ರಾಜ್ಯದ ಜನರ ಕಣ್ಣಿಗೆ ಮಣ್ಣೆರಚುವ ರೀತಿಯಲ್ಲಿ ನೇಮಕಾತಿಗೆ ಚಾಲನೆ ಕೊಡುವುದಾಗಿ ಸಮಜಾಯಿಷಿ ನೀಡಿದೆ ಎಂದು ಆಪಾದಿಸಿದ್ದಾರೆ.
ಕರ್ನಾಟಕದ ಪರಿಶಿಷ್ಟ ಸಮುದಾಯಗಳಿಗೆ ಮಾಡಿರುವ ಅನ್ಯಾಯಕ್ಕೆ ಭವಿಷ್ಯದಲ್ಲಿ ಬೆಲೆ ತೆತ್ತಲೇ ಬೇಕಾಗುತ್ತದೆ ಎಂಬುದನ್ನು ಮರೆಯಬಾರದು. ಈಗಲೂ ಪಕ್ಷಕ್ಕೆ ಪರಿಶಿಷ್ಟರ ಬಗ್ಗೆ ಬದ್ಧತೆ ಇದ್ದರೆ ಈ ಹಿಂದೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಜಾರಿಗೊಳಿಸಿದ್ದ ಶೇ.17ರ ಮೀಸಲಾತಿ ಪ್ರಮಾಣವನ್ನು ಉಳಿಸಿಕೊಳ್ಳಲು ರಾಜ್ಯ ಸರಕಾರ ಸೂಕ್ತ ಕಾನೂನು ಹೋರಾಟ ನಡೆಸಬೇಕು ಎಂದು ಆಗ್ರಹಪಡಿಸಿದ್ದಾರೆ.

Continue Reading
Advertisement
Latest5 minutes ago

ಒಳ ಮೀಸಲಾತಿಯಿಂದ ಅನ್ಯಾಯ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹೋರಾಟ; ಬಿಜೆಪಿ ಘೋಷಣೆ

Latest54 minutes ago

ದೆಹಲಿಯಲ್ಲಿ ಬೀಡುಬಿಟ್ಟ ಡಿಕೆ ಶಿವಕುಮಾರ್;‌ ಪ್ರತಿತಂತ್ರ ಹೆಣೆಯುತ್ತಿರುವ ಸಿದ್ದರಾಮಯ್ಯ ಟೀಂ; ಮುಂದುವರೆದ ಹಾವು ಏಣಿಯಾಟ

Latest2 hours ago

ಹುಯ್ಯಲೆದೆಯಂತೆ ಇವತ್ತು ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Latest2 hours ago

ಎಸ್‌.ಟಿ. ಸಮುದಾಯಕ್ಕೆ ಶೇ.17 ಮೀಸಲಾತಿ ಉಳಿಸಿಕೊಳ್ಳಲು ಹೋರಾಟ ನಡೆಸಿ; ಕಾಂಗ್ರೆಸ್‌ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ

Latest2 hours ago

ಇದು ಕದನ ವಿರಾಮವೇ?; ಹೊರ್ಮುಜ್‌ನಲ್ಲಿ ಇರಾನ್‌ನ ಮತ್ತೊಂದು ಹಡಗಿಗೆ ತಡೆಯೊಡ್ಡಿದ ಅಮೆರಿಕ

Latest2 hours ago

ಹೊಸ ರಾಜಕೀಯ ಪಕ್ಷ ಘೋಷಿಸಿದ ಕೆಸಿಆರ್ ಪುತ್ರಿ ಕೆ.ಕವಿತಾ; ಪಕ್ಷದ ಹೆಸರು TRS

Latest2 hours ago

ಇ-ಗಸ್ತು ಪರಿಣಾಮಕಾರಿಯಾಗಿ ಬಳಸಿ ವನ್ಯಜೀವಿ ದಾಳಿ ತಪ್ಪಿಸಿ: ಈಶ್ವರ ಖಂಡ್ರೆ ಕರೆ

Latest20 hours ago

ಇನ್ನು ಮುಂದೆ ಒಳಮೀಸಲಾತಿ ಅನ್ವಯ ಹುದ್ದೆಗಳ ಭರ್ತಿ: ಸಿಎಂ ಸಿದ್ದರಾಮಯ್ಯ ಘೋಷಣೆ

Latest20 hours ago

29 ವರ್ಷಗಳ ‘ನೋ ಕಿಸ್ ಪಾಲಿಸಿ’ ಮುರಿದ ಕಾಜೋಲ್: ಆ ಒಂದು ದೃಶ್ಯಕ್ಕಾಗಿ ಕಟ್ಟುನಿಟ್ಟಿನ ನಿಯಮ ಬದಿಗಿಟ್ಟಿದ್ದೇಕೆ?

Latest21 hours ago

ಒಳ ಮೀಸಲಾತಿ ಹಂಚಿಕೆ: ಎಡಗೈ, ಬಲಗೈ ಜಾತಿಗಳಿಗೆ ತಲಾ ಶೇ. 5.25 ಸ್ಪೃಶ್ಯ ಜಾತಿಗೆ ಶೇ.4.5 ಹಂಚಿಕೆ; ಸಚಿವ ಸಂಪುಟ ಮಹತ್ವದ ನಿರ್ಧಾರ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌