Gold Rate : ಏರುಗತಿಯಲ್ಲಿದೆ ಬಂಗಾರದ ಬೆಲೆ; ಇನ್ನೂ ಏರುವ ಮೊದಲು ಖರೀದಿ ಸೂಕ್ತ - Vistara News

Latest

Gold Rate : ಏರುಗತಿಯಲ್ಲಿದೆ ಬಂಗಾರದ ಬೆಲೆ; ಇನ್ನೂ ಏರುವ ಮೊದಲು ಖರೀದಿ ಸೂಕ್ತ

Gold Rate: ಭಾನುವಾರ ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ಅನುಕ್ರಮವಾಗಿ ₹66,850 ಮತ್ತು ₹6,68,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,293 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,344 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72, 930 ಮತ್ತು ₹7,20,300 ವೆಚ್ಚವಾಗಲಿದೆ.

VISTARANEWS.COM


on

Gold Rate
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಬಂಗಾರದ ಬೆಲೆ (Gold Rate) ದಿನದಿಂದ ದಿನಕ್ಕೆ ಏರುತ್ತಲೇ ಸಾಗುತ್ತಿದೆ. ಭಾನುವಾರವೂ ಶನಿವಾರದ ದರವೇ ಮುಂದುವರಿದಿದೆ. ರಾಜ್ಯದಲ್ಲಿ ಶನಿವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಗ್ರಾಮ್​ಗೆ ಕ್ರ ಮವಾಗಿ ₹20 ಹಾಗೂ ₹22 ಏರಿಕೆಯಾಗಿತ್ತು. ಅದೇ ಬೆಲೆ ಭಾನುವಾರವೂ ಮುಂದುವರಿದಿದೆ.

ಭಾನುವಾರ ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ಅನುಕ್ರಮವಾಗಿ ₹66,850 ಮತ್ತು ₹6,68,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,293 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,344 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72, 930 ಮತ್ತು ₹7,20,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹83.50, ಎಂಟು ಗ್ರಾಂ ₹840 ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,400 ಮತ್ತು 1 ಕಿಲೋಗ್ರಾಂಗೆ ₹84,00 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,00073,080
ಮುಂಬಯಿ66,85072,930
ಬೆಂಗಳೂರು66,850₹72,930
ಚೆನ್ನೈ67,70072,760

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಕರ್ನಾಟಕ

ಮಹಿಳಾ ಮೀಸಲಾತಿಗೆ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಅವರು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
2023ರಲ್ಲಿಯೇ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಸಾಂವಿಧಾನಿಕ ತಿದ್ದುಪಡಿ ತಂದಿದ್ದರಿಂದ ಅದು ವಿಫಲವಾಯಿತು. ಕ್ಷೇತ್ರ ಮರುವಿಂಗಡನೆ ಮಾಡದೆಯೇ ಮಹಿಳಾ ಮೀಸಲಾತಿ ಒಂದೇ ಮಂಡನೆಯಾಗಿದ್ದರೆ ಅಂಗೀಕಾರವಾಗುತ್ತಿತು. ರಾಜಕೀಯಕ್ಕಾಗಿ ಕ್ಷೇತ್ರ ಮರುವಿಂಗಡನೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲವಾಗಿದೆ ಎಂದರು. ಕೇಂದ್ರ ಸರ್ಕಾರ ಇದರಲ್ಲಿ ರಾಜಕೀಯ ಮಾಡಿದ್ದಾರೆ ಎಂದು ದೂರಿದರು.

Continue Reading

Latest

ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಅವರಿಂದ PNS ವಿಸ್ತಾರ ನ್ಯೂಸ್ ಕಚೇರಿ ಉದ್ಘಾಟನೆ

VISTARANEWS.COM


on

ಬೆಂಗಳೂರು: ಕನ್ನಡ ಭಾಷೆಗೆ ಶುದ್ಧ ಸುದ್ದಿವಾಹಿನಿ ʻಪಿಎನ್‌ಎಸ್‌ ವಿಸ್ತಾರʼ ಚಾನೆಲ್‌ ಶುಭಾರಂಭಗೊಂಡಿದೆ. ಬಿಜಿಎಸ್‌ ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಶ್ರೀ ಡಾ.ಪ್ರಕಾಶನಾಥ ಸ್ವಾಮೀಜಿ ಅವರು ಇಂದು ʻಪಿಎನ್‌ಎಸ್‌ ವಿಸ್ತಾರʼ ಚಾನೆಲ್‌ ಕಚೇರಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ʻಪಿಎನ್‌ಎಸ್‌ ವಿಸ್ತಾರʼ ಚಾನೆಲ್‌ ಜನರ ಕಷ್ಟಕಾರ್ಪಣ್ಯಗಳಿಗೆ ಧ್ವನಿಯಾಗಲಿ ಮತ್ತು ನ್ಯಾಯಪರವಾಗಲಿ ಎಂದು ಹೇಳಿದರು.

ಯಾವುದೇ ಸಂಸ್ಥೆಯನ್ನು ಕಟ್ಟಿಬೆಳೆಸುವುದು ಸುಲಭವಲ್ಲ. ಶ್ರೀ ಧರ್ಮೇಶ್‌ ಅವರು ಪಿಎನ್‌ ಎಸ್‌ ವಿಸ್ತಾರ ಚಾನೆಲ್‌ ಗೆ ಬಂಡವಾಳ ಹೂಡಿದ್ದಾರೆ. ಅವರ ಸಾಹಸವನ್ನು ಮೆಚ್ಚಲೇಬೇಕು. ಹೊಸ ಚಾನೆಲ್‌ ನಲ್ಲಿ ಕೆಲಸ ನಿರ್ವಹಿಸುವ ಎಲ್ಲ ಸಿಬ್ಬಂದಿ ಸಂಸ್ಥೆಯ ಗೌರವಕ್ಕೆ ಚ್ಯುತಿ ಬಾರದಂತೆ ಧರ್ಮೇಶ್‌ ಅವರ ಆಶಯಗಳಿಗೆ ತಕ್ಕಂತೆ ಕೆಲಸ ಮಾಡುವುಂತೆ ಕರೆ ನೀಡಿದರು.


ಪಿಎನ್‌ಎಸ್‌ ವಿಸ್ತಾರ ಚಾನೆಲ್‌ ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಓ) ಎಚ್.ಜಿ. ಪವಿತ್ರಾಗೌಡ ಅವರು ಜವಬ್ದಾರಿ ವಹಿಸಿಕೊಂಡಿದ್ದಾರೆ. ವೃತ್ತಿಯಿಂದ ಉದ್ಯಮಿ ಮತ್ತು ಪ್ರವೃತ್ತಿಯಲ್ಲಿ ಸಾಮಾಜಿಕ ಕಾರ್ಯಕರ್ತೆಯಾಗಿರುವ ಅವರು ಸಂಸ್ಥೆಯನ್ನು ಕಟ್ಟಿ ಬೆಳೆಸಿ ಶ್ರೀಸಾಮಾನ್ಯನ ಧ್ವನಿಯಾಗಲು ಪಣ ತೊಟ್ಟಿದ್ದಾರೆ. ಅವರ ನಿರೀಕ್ಷೆಗಳಿಗೆ ತಕ್ಕಂತೆ ಸಿಬ್ಬಂದಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಪಿಎನ್‌ಎಸ್‌ ವಿಸ್ತಾರ ಚಾನೆಲ್‌ ನಲ್ಲಿ ಅನುಭವಿ ಪತ್ರಕರ್ತರ ತಂಡ ಇರುವುದು ಕಂಡು ಬರುತ್ತಿದೆ. ಸಂಸ್ಥೆಗೆ ಕೆಟ್ಟ ಹೆಸರು ಬಾರದಂತೆ ಮನಸ್ಸು ಮೆಚ್ಚುವಂತಹ ಕೆಲಸ ಮಾಡುತ್ತೀರಿ ಎಂದು ಭಾವಿಸುವುದಾಗಿಯೂ ಪರಮ ಪೂಜ್ಯ ಶ್ರೀ ಶ್ರೀ ಡಾ.ಪ್ರಕಾಶನಾಥ ಸ್ವಾಮೀಜಿ ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಚುಟುಕಾಗಿ ತಮ್ಮ ಅನಿಸಿಗಳನ್ನು ಹಂಚಿಕೊಂಡ ಸಿಇಓ ಪವಿತ್ರಾ ಗೌಡ ಅವರು, ಎಲ್ಲರೂ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ಹಿಸುತ್ತಾ ಬೆಂಬಲ ನೀಡುವಂತೆ ಕೋರಿದರು.
ಪಿಎನ್‌ಎಸ್‌ ವಿಸ್ತಾರ ಚಾನೆಲ್‌ ವ್ಯವಸ್ಥಾಪಕ ನಿರ್ದಶಕರಾದ ಧರ್ಮೇಶ್‌ ಸೇರಿದಂತೆ ಬಿಜೆಪಿ ಹಿರಿಯ ನಾಯಕ ಎನ್‌.ಆರ್‌.ರಮೇಶ್‌, ಇಂಡಿಯನ್‌ ಎಕ್ಸ್‌ಪ್ರೆಕ್ಸ್‌ನ ಜನರಲ್‌ ಮ್ಯಾನೇಜರ್‌ ಸುರೇಶ್‌ ಅವರು ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Continue Reading

ಪ್ರಮುಖ ಸುದ್ದಿ

ವಿಭಿನ್ನ ಕಾರ್ಯಯೋಜನೆಯೊಂದಿಗೆ ಸಮಾಜದ ಪ್ರತಿನಿಧಿ ರೂಪದಲ್ಲಿ ಸಿದ್ಧಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್-ಹೆಚ್.ಜಿ ಪವಿತ್ರ ಗೌಡ

VISTARANEWS.COM


on


ಜೈ ಶ್ರೀ ಗುರುದೇವ್‌,
ನಾಡಿನ ಎಲ್ಲಾ ಕನ್ನಡದ ಸೃಜನಶೀಲ ಮನಸುಗಳಿಗೆ ನಮಸ್ಕಾರ.
ಭಾಷೆ ನಮ್ಮ ಬದುಕು, ಭಾಷೆಯೊಂದಿಗೆ ಅನುಸಂಧಾನ ಮಾಡಿಕೊಂಡು ಕೆಲಸ ಮಾಡುವ ಮಾಧ್ಯಮವೇ ಪತ್ರಿಕೋದ್ಯಮ. ಪತ್ರಿಕಾ ಮಾಧ್ಯಮದಲ್ಲಿ ಸೇವೆ ಸಲ್ಲಿಸಬೇಕು ಎನ್ನುವುದು ನನ್ನ ಹಲವು ಕಾಲದ ಅಭಿಲಾಷೆಯಾಗಿತ್ತು. ಪರಮಾತ್ಮನ ದಯೆಯಿಂದ ಹಾಗೂ ಗುರುಗಳ ಕೃಪೆಯಿಂದ ಆ ಸದವಕಾಶ ಈಗ ಒದಗಿ ಬಂದಿದೆ. ಕನ್ನಡಿಗರ ಧ್ವನಿಯಾಗಿ ಮುಖ್ಯವಾಹಿನಿ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಲು ನಾವು ʻಪಿಎನ್‌ಎಸ್‌ ವಿಸ್ತಾರʼ ಸುದ್ದಿವಾಹಿನಿಯನ್ನು ಪುನರಾರಂಭಿಸುತ್ತಿದ್ದೇವೆ. ʻಪಿಎನ್‌ಎಸ್‌ ವಿಸ್ತಾರʼ ನ್ಯೂಸ್‌ ಕನ್ನಡ ಟಿವಿ ಮಾಧ್ಯಮ ಕ್ಷೇತ್ರದಲ್ಲಿ ಈಗಾಗಲೆ ತನ್ನದೇ ಆದ ಒಂದು ಬ್ರಾಂಡ್‌ ಸೃಷ್ಟಿಸಿಕೊಂಡಿದ್ದ ಸುದ್ದಿ ವಾಹಿನಿ, ಕಾರಣಾಂತರಗಳಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿತ್ತು. ಒಂದು ವಿಶೇಷ ಹಾಗೂ ವಿಭಿನ್ನ ಕಾರ್ಯಯೋಜನೆಯೊಂದಿಗೆ ನಾವು ಮರಳಿ ಬರುತ್ತಿದ್ದೇವೆ. ಕನ್ನಡ ನಾಡಿನ ಬಂಧುಗಳ ಕಷ್ಟ-ನಷ್ಟಗಳ ಕುರಿತು ವಸ್ತುನಿಷ್ಟ ವರದಿ ಮಾಡಲು, ಕನ್ನಡ ನಾಡಿನ ಸಂಸ್ಕೃತಿ ಸಾರಗಳನ್ನು ಜಗತ್ತಿನಾದ್ಯಂತ ಪಸರಿಸಲು, ಕನ್ನಡದ ನುಡಿಸಿರಿಯ ವೈವಿಧ್ಯತೆಯನ್ನು ವರ್ಣಿಸಲು ಸರ್ವಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಸುದ್ದಿ ಜಗತ್ತಿನ ನಿಖರ ವರ್ತಮಾನಗಳನ್ನು ನಿರ್ಭೀತಿಯಿಂದ ನಿಮ್ಮ ಮುಂದಿಡಲು ನಾವು ಸಿದ್ಧರಾಗಿದ್ದೇವೆ. ಜನಸಾಮಾನ್ಯರ ಪ್ರತಿನಿಧಿಯಾಗಿ ಆಳುವ ಪ್ರಭುತ್ವವನ್ನು ಧೈರ್ಯದಿಂದ ಪ್ರಶ್ನಿಸಲು ನಾವು ಸಿದ್ಧರಾಗಿದ್ದೇವೆ. ಕರ್ನಾಟಕದ ನಾಡು-ನುಡಿ, ನೆಲ, ಜಲ, ಸಂಸ್ಕೃತಿಗಳ ಹಿತರಕ್ಷಣೆಗಾಗಿ ಸಂಕಲ್ಪಿಸಿಕೊಂಡಿದ್ದೇವೆ. ನಾವು ಕೇವಲ ಸುದ್ದಿಗಳನ್ನು ಪ್ರಾಮಾಣಿಕವಾಗಿ ವರದಿ ಮಾಡುತ್ತೇವೆ. ಮಾಹಿತಿಯೊಂದಿಗೆ ಮನೋರಂಜನೆ ಎಂಬ ವಿಶೇಷ ಆಯಾಮವನ್ನು ನಮ್ಮ ಮಾಧ್ಯಮದಲ್ಲಿ ಪ್ರಸ್ತುತ ಪಡಿಸಲಿದ್ದೇವೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ವರ್ಷಗಳ ಅನುಭವ ಹೊಂದಿರುವ ಹಿರಿಯ, ಅನುಭವಿ, ಪ್ರಾವೀಣ್ಯತೆ ಹೊಂದಿರುವ ತಂಡ ನಮ್ಮೊಂದಿಗೆ ಕೆಲಸ ಮಾಡುತ್ತಿದೆ. ಪ್ರಸ್ತುತ ವಿದ್ಯಮಾನ, ರಾಜಕೀಯ, ಸಿನಿಮಾ-ಕಲೆ, ಕ್ರೀಡೆ, ಸಂಸ್ಕೃತಿ-ಸಂಪ್ರದಾಯ, ಆಚಾರ-ವಿಚಾರ, ಜೀವನಶೈಲಿ, ಇತಿಹಾಸ-ಪುರಾಣ, ಪದ್ಧತಿ-ಪರಂಪರೆ, ಭಾಷೆಯ ಸೊಗಡು ಮತ್ತು ಆಹಾರ ಕ್ರಮಗಳು, ನದಿ- ಪರಿಸರ ಅರಣ್ಯ- ಜೀವವೈವಿಧ್ಯ ಸೇರಿದಂತೆ ಹತ್ತಾರು ವಿಷಯಗಳ ಬಗ್ಗೆ ನಾವು ನಮ್ಮ ವಾಹಿನಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ನಿಮ್ಮ ಮುಂದೆ ತರಲಿದ್ದೇವೆ. ನಮ್ಮ ನಾಡಿನ ಕ್ರಿಯಾಶೀಲ, ಸೃಜನಶೀಲ ಮನಸುಗಳಿಗೆ ಅತ್ಯಂತ ಆಹ್ಲಾದಕಾರಿ ಸುದ್ದಿ ಸಂಗತಿಗಳನ್ನು ಉಣಬಡಿಸಬೇಕು ಅನ್ನುವುದಷ್ಟೆ ನಮ್ಮ ಕಳಕಳಿ. ಈ ನಿಟ್ಟಿನಲ್ಲಿ ನಮ್ಮ ʻಪಿಎನ್‌ಎಸ್‌ ವಿಸ್ತಾರʼ ನ್ಯೂಸ್‌ ತಂಡ ಕಳೆದ ಕೆಲವು ತಿಂಗಳಿನಿಂದ ಕಠಿಣ ಪರಿಶ್ರಮ ನಡೆಸುತ್ತಿದೆ. ಎಲ್ಲಾ ವಯೋಮಾನದವರ, ಎಲ್ಲಾ ವರ್ಗದವರ ಮತ್ತು ಎಲ್ಲಾ ರೀತಿಯ ಮನಸ್ಥಿತಿಯ ಜನಸಮುದಾಯವನ್ನು ತಲುಪಬೇಕು ಅನ್ನುವುದು ನಮ್ಮ ಹಿರಿಯಾಸೆ. ಕನ್ನಡಿಗರ ಆದ್ಯತೆಯ ವಿಷಯಗಳನ್ನು ಆಯ್ದು ನಮ್ಮ ಮಾಧ್ಯಮದಲ್ಲಿ ಪ್ರಸಾರ ಮಾಡಲು ಕಾರ್ಯಯೋಜನೆ ರೂಪಿಸಿಕೊಂಡಿದ್ದೇವೆ. ಈಗ ಬೇಕಿರುವುದು ನಿಮ್ಮ ಶುಭ ಹಾರೈಕೆ ಮಾತ್ರ. ನೀವು ನಮ್ಮೊಂದಿಗಿರಿ ಸಾಕು, ನಾವು ನಿಮಗಾಗಿ ದಿನದ ೨೪ ಗಂಟೆ, ವಾರದ ೭ ದಿನ, ವರ್ಷದ ೩೬೫ ದಿನಗಳು ಸೇವೆ ಸಲ್ಲಿಸಲು ಶತಸಿದ್ಧ.

ಕರುನಾಡಿನ ಸಮಸ್ತ ಕನ್ನಡಿಗರಿಗೆ ನನ್ನ ಧನ್ಯವಾದಗಳು

ಸದಾ ನಿಮ್ಮ ಸೇವೆಯಲ್ಲಿ.
-ಹೆಚ್.ಜಿ ಪವಿತ್ರ ಗೌಡ, ‌ಸಿಇಒ, ಪಿಎನ್‌ಎಸ್‌ ವಿಸ್ತಾರ ನ್ಯೂಸ್

Continue Reading

ಸುವಚನ

ಕರುನಾಡಿನ ಜನಧ್ವನಿಯಾಗಿ ಶುಭಾರಂಭಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್‌ -ಶ್ರೀ ಶ್ರೀ ಡಾ. ಪ್ರಕಾಶನಾಥ ಗುರೂಜಿ

VISTARANEWS.COM


on

ಜೈ ಶ್ರೀ ಗುರುದೇವ್
ಜಗತ್ತಿನಲ್ಲಿ ತಂತ್ರಜ್ಞಾನದ ನೆರೆವಿನಿಂದ ಎಲ್ಲವೂ ಕೈಗೆಟಕುತ್ತಿದೆ. ಇದೇ ತಂತ್ರಜ್ಞಾನವನ್ನು ಬಳಸಿ ಆರೋಗ್ಯಕರ ಸಮಾಜದ ಸ್ಥಾಪನೆಗೆ ಪಿಎನ್‌ಎಸ್‌ ವಿಸ್ತಾರ ಚಾನಲ್‌ ಮುಂದಾಗಿರುವುದು ಶ್ಲಾಘನೀಯ. ಸಮಾಜದ ಈ ಸುಧಾರಣೆಯ ದಾರಿಯಲ್ಲಿ ಮಾಧ್ಯಮಗಳ ಪಾತ್ರ ಹೆಚ್ಚಿದೆ. ಅನ್ಯಾಯಗಳನ್ನು ವಿರೋಧಿಸಿ ನ್ಯಾಯ ಒದಗಿಸುವುದು ಸಾಮಾಜಿಕ ನ್ಯಾಯ ದೊರಕಿಸುವುದು ಹಾಗೂ ಬಡವರು, ದೀನ-ದಲಿತರು, ರೈತರು ಹಾಗೂ ಶೋಷಿತರ ದನಿಯಾಗಬೇಕಿದೆ. ಪಿಎನ್‌ಎಸ್‌ ವಿಸ್ತಾರ ಚಾನೆಲ್‌ ಇದೇ ಧ್ಯೇಯದೊಂದಿಗೆ ನಿಮ್ಮ ಮುಂದೆ ಬರುತ್ತಿದೆ.
ವಿದ್ಯುನ್ಮಾನ ಕ್ಷೇತ್ರದಲ್ಲಿ ಈವರೆಗೆ ನಡೆದುಕೊಂಡು ಬಂದ ಸಂಪ್ರದಾಯ ಕೊಡವಿ ಧನಾತ್ಮಕ ಪ್ರಯೋಗಗಳ ಮೂಲಕ ಸಮಾಜವನ್ನು ಸರಿಪಡಿಸುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ಪಿಎನ್‌ಎಸ್‌ ವಿಸ್ತಾರ ನ್ಯೂಸ್‌ ಹೆಜ್ಜೆ ಇಟ್ಟಿರುವುದು ಅಭಿನಂದನೀಯ. ರಾಜ್ಯದ ಮೂಲೆ ಮೂಲೆಗಳ ಸಮಸ್ಯೆ, ಕುಂದುಕೊರತೆಗಳನ್ನು ಪ್ರಸಾರ ಮಾಡಿ ಪರಿಹಾರ ಒದಗಿಸುವ ಜವಾಬ್ದಾರಿ ನಮ್ಮ ಪಿಎನ್‌ಎಸ್‌ ವಿಸ್ತಾರ ಚಾನೆಲ್‌ನ ಆದ್ಯತೆಯಾಗಿದೆ. ಪಕ್ಷ, ಪಂಥ, ಪಂಗಡಗಳಿಂದ ಪ್ರತ್ಯೇಕವಾಗಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣ ಹಾಗೂ ಸಾಮಾಜಿಕ ನ್ಯಾಯ ಒದಗಿಸಲು ನಮ್ಮ ನುರಿತ ತಂಡ ಸೈನಿಕರಂತೆ ಕಾರ್ಯನಿರ್ವಹಿಸಲಿದ್ದಾರೆ.
ನಮ್ಮ ಚಾನೆಲ್‌ ವಿಶ್ಲೇಷಣೆ, ಮನರಂಜನೆ ಹಾಗೂ ಮಾಹಿತಿ ನೀಡುವ ಮುಖೇನ ನಾಡಿನ ಮೂಲೆ ಮೂಲೆ ತಲುಪಲು ಕಾರ್ಯೋನ್ಮುಖವಾಗಲಿದೆ. ಯಾವುದೇ ವಿಚಾರದಲ್ಲಿ ರಾಜಿಯಾಗದೇ ಜನಪರವಾಗಿ ಕೆಲಸ ಮಾಡಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶ್ರಮಿಸುವುದು ನಮ್ಮ ಧ್ಯೇಯವಾಗಿದೆ. ಪಿಎನ್‌ಎಸ್‌ ವಿಸ್ತಾರ ಚಾನೆಲ್‌ನ  ಈ ಧ್ಯೇಯವನ್ನು ಸಮಸ್ತ ಕನ್ನಡನಾಡಿನ ನಾಗರಿಕರು ಪ್ರೋತ್ಸಾಹಿಸುತ್ತಾರೆ ಎಂದು ಭಾವಿಸುತ್ತೇವೆ. ನಾಡಿನ ಸಮಸ್ತ ಜನರಿಗೆ ಪಿಎನ್‌ಎಸ್‌ ವಿಸ್ತಾರ ಬಳಗದಿಂದ ಅನಂತಾನಂತ ಧನ್ಯವಾದಗಳು.
ಶುಭ ಆಶೀರ್ವಾದಗಳೊಂದಿಗೆ
ಶ್ರೀ ಶ್ರೀ ಡಾ. ಪ್ರಕಾಶನಾಥ ಗುರೂಜಿ
ವ್ಯವಸ್ಥಾಪಕ ನಿರ್ದೇಶಕರು, ಬಿಜಿಎಸ್‌ & ಎಸ್‌ಜೆಬಿ ಗ್ರೂಪ್‌ ಆಫ್‌ ಇನ್ಸ್‌ಟಿಟ್ಯೂಷನ್‌ ಮತ್ತು ಆಸ್ಪತ್ರೆಗಳು

Continue Reading
Advertisement
ಕರ್ನಾಟಕ4 ಗಂಟೆಗಳು ago

ಮಹಿಳಾ ಮೀಸಲಾತಿಗೆ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ

Latest7 ಗಂಟೆಗಳು ago

ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಅವರಿಂದ PNS ವಿಸ್ತಾರ ನ್ಯೂಸ್ ಕಚೇರಿ ಉದ್ಘಾಟನೆ

ಪ್ರಮುಖ ಸುದ್ದಿ8 ಗಂಟೆಗಳು ago

ವಿಭಿನ್ನ ಕಾರ್ಯಯೋಜನೆಯೊಂದಿಗೆ ಸಮಾಜದ ಪ್ರತಿನಿಧಿ ರೂಪದಲ್ಲಿ ಸಿದ್ಧಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್-ಹೆಚ್.ಜಿ ಪವಿತ್ರ ಗೌಡ

ಸುವಚನ8 ಗಂಟೆಗಳು ago

ಕರುನಾಡಿನ ಜನಧ್ವನಿಯಾಗಿ ಶುಭಾರಂಭಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್‌ -ಶ್ರೀ ಶ್ರೀ ಡಾ. ಪ್ರಕಾಶನಾಥ ಗುರೂಜಿ

Kodava Family Hockey Tournament Website Launched
ಕೊಡಗು1 ವರ್ಷ ago

Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ

Bengaluru News
ಬೆಂಗಳೂರು1 ವರ್ಷ ago

Bengaluru News : ಮಾಡಲಿಂಗ್‌ನಲ್ಲಿ ಗಿನ್ನಿಸ್‌ ರೆಕಾರ್ಡ್‌ ಮಾಡಲು ಹೊರಟ ಹಳ್ಳಿಹೈದ

Dina Bhavishya
ಭವಿಷ್ಯ1 ವರ್ಷ ago

Dina Bhavishya : ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ

Gadag News Father commits suicide by throwing three children into river
ಗದಗ1 ವರ್ಷ ago

Gadag News : ಮೂವರು ಮಕ್ಕಳನ್ನು ನದಿಗೆ ಎಸೆದು, ಆತ್ಮಹತ್ಯೆ ಮಾಡಿಕೊಂಡ ತಂದೆ!

Dina Bhavishya
ಭವಿಷ್ಯ1 ವರ್ಷ ago

Dina Bhavishya: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ, ಯಶಸ್ಸು ಖಂಡಿತ

Dina Bhavishya
ಭವಿಷ್ಯ1 ವರ್ಷ ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌