Health Tips: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ - Vistara News

Latest

Health Tips: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ

Health Tips: ಒಂದೊಂದು ಋತುವಿನಲ್ಲೂ ಒಂದೊಂದು ರೀತಿಯ ಹವಾಮಾನವಿರುತ್ತದೆ. ಆಯಾಯ ಕಾಲಕ್ಕೆ ತಕ್ಕ ಹಾಗೇ ನಮ್ಮ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾಗುತ್ತದೆ. ಬೇಸಿಗೆಯಲ್ಲಿ ಸೇವಿಸುವ ತಂಪು ಪಾನೀಯವನ್ನು ಮಳೆಗಾಲದಲ್ಲಿ ಸೇವಿಸಿದರೆ ಕಂಬಳಿ ಹೊದ್ದು ಮಲಗಬೇಕಾಗುತ್ತದೆ, ಹಾಗಾಗಿ ಆಯಾಯ ಕಾಲಕ್ಕೆ ತಕ್ಕ ಹಾಗೇ ಇರಬೇಕಾಗುತ್ತದೆ. ಮಳೆಗಾಲ ಕಾಲಿಟ್ಟಾಗಿದೆ. ಸೊಳ್ಳೆಗಳ ಕಾಟವೂ ಶುರುವಾಗಿದೆ. ಧೋ ಎಂದು ಸುರಿಯುವ ಮಳೆಯನ್ನು ನೋಡುವುದರ ಜೊತೆಗೆ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಕೂಡ ಅಷ್ಟೇ ಮುಖ್ಯವಾಗಿರುತ್ತದೆ.

VISTARANEWS.COM


on

Health Tips
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಬೇಸಿಗೆ ಕಾಲದ ನಂತರ ಬರುವ ಮಳೆಗಾಲ ನಿಮ್ಮನ್ನು ಶಾಖದಿಂದ ಮುಕ್ತಗೊಳಿಸಿ ತಂಪನ್ನು ನೀಡುತ್ತದೆ ನಿಜ. ಆದರೆ ಈ ಸಮಯದಲ್ಲಿ ಬ್ಯಾಕ್ಟೀರಿಯಾ, ವೈರಸ್‌ಗಳ ಹಾವಳಿ ಹೆಚ್ಚಾಗಿರುತ್ತದೆ. ಹಾಗಾಗಿ ಅನೇಕ ಕಾಯಿಲೆಗಳು ಕೂಡ ಹರಡುತ್ತದೆ. ಇದರಿಂದ ನೀವು ಬಹಳ ಬೇಗನೆ ಅನಾರೋಗ್ಯಕ್ಕೊಳಗಾಗುತ್ತೀರಿ. ಹಾಗಾಗಿ ಮಳೆಗಾಲದಲ್ಲಿ ನೀವು ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕಾಗುತ್ತದೆ. ಇದರಿಂದ ನೀವು ಫಿಟ್ ಆಗಿ ಆರೋಗ್ಯ (Health Tips) ವಾಗಿರಬಹುದು.

ಶುದ್ಧ ಮತ್ತು ಕುದಿಸಿದ ನೀರನ್ನು ಕುಡಿಯಿರಿ

ಮಳೆಗಾಲದಲ್ಲಿ ನೀರು ತುಂಬಾ ಕಲುಷಿತವಾಗಿರುತ್ತದೆ. ಹಾಗಾಗಿ ಅದರಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯುತ್ತವೆ. ಈ ನೀರನ್ನು ನೀವು ಹಾಗೇ ಕುಡಿಯುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು, ಜ್ವರದಂತಹ ಸಾಮಾನ್ಯ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಹಾಗಾಗಿ ಮಳೆಗಾಲದಲ್ಲಿ ಶುದ್ಧವಾದ ನೀರನ್ನು ಬಳಸಿ ಮತ್ತು ಕುದಿಸಿ ಆರಿಸಿದ ನೀರನ್ನೇ ಕುಡಿಯಿರಿ. ಹಾಗೇ ಹೊರಗಡೆ ಹೋದಾಗ ಅಲ್ಲಲ್ಲಿ ನೀರನ್ನು ಕುಡಿಯುವ ಬದಲು ಮನೆಯ ನೀರನ್ನು ತೆಗೆದುಕೊಂಡು ಹೋಗಿ ಬಳಸಿ.

Health Tips

ಬೀದಿ ಬದಿಯ ಆಹಾರ ಮತ್ತು ಜಂಕ್ ಫುಡ್ ಸೇವನೆಯನ್ನು ತಪ್ಪಿಸಿ

ಹೆಚ್ಚಿನ ಜನರು ಬೀದಿಗಳಲ್ಲಿ ಮಾರಾಟ ಮಾಡುತ್ತಿರುವ ಆಹಾರವನ್ನು ಸೇವಿಸುತ್ತಾರೆ. ಆದರೆ ಬೀದಿಗಳಲ್ಲಿ ಆಹಾರಗಳನ್ನು ತೆರೆದಿಡುತ್ತಾರೆ. ಹಾಗಾಗಿ ಅದರಲ್ಲಿ ಬ್ಯಾಕ್ಟೀರಿಯಾಗಳು ಸೇರಿಕೊಳ್ಳುತ್ತದೆ. ಅದನ್ನು ಸೇವಿಸಿದರೆ ನಿಮ್ಮ ಆರೋಗ್ಯ ಕೆಡುತ್ತದೆ. ಹಾಗಾಗಿ ಅವುಗಳನ್ನು ತಿನ್ನುವುದನ್ನು ತಪ್ಪಿಸಿ.

ಮನೆಯ ಸುತ್ತಮುತ್ತ ನೀರು ನಿಲ್ಲುವುದನ್ನು ತಪ್ಪಿಸಿ

ಮಳೆಗಾಲದಲ್ಲಿ ಮನೆಯ ಸುತ್ತಮುತ್ತಲಿರುವ ಹೊಂಡಗಳು, ಮಡಿಕೆಗಳು, ಪ್ಲಾಸ್ಟಿಕ್ ಡಬ್ಬಗಳು, ಬಾಟಲಿಗಳು ಮುಂತಾದವುಗಳಲ್ಲಿ ನೀರು ಸಂಗ್ರಹವಾಗುತ್ತದೆ. ಹಾಗಾಗಿ ಇಂತಹ ನೀರಿನಲ್ಲಿ ಸೊಳ್ಳೆಗಳು ಮೊಟ್ಟಯಿಟ್ಟು ಮರಿ ಮಾಡುತ್ತವೆ. ಈ ಸೊಳ್ಳೆಗಳ ಕಡಿತದಿಂದ ಡೆಂಗ್ಯೂ, ಮಲೇರಿಯಾದಂತಹ ಹಲವಾರು ಕಾಯಿಲೆಗಳು ಹರಡುತ್ತವೆ. ಹಾಗಾಗಿ ಈ ನೀರು ಶೇಖರಣೆಯಾಗುವುದನ್ನು ತಪ್ಪಿಸಿ.

Health Tips

ಹಣ್ಣುಗಳು-ತರಕಾರಿಗಳನ್ನು ತೊಳೆದು ಬಳಸಿ

ಮಾರುಕಟ್ಟೆಯಿಂದ ತಂದ ಹಣ್ಣುಗಳು ಮತ್ತು ತರಕಾರಿಗಳ ಮೇಲ್ಮೈ ಮೇಲೆ ಬ್ಯಾಕ್ಟೀರಿಯಾಗಳು ಇರುತ್ತವೆ. ಇದನ್ನು ಹಾಗೇ ಸೇವಿಸಿದರೆ ಹೊಟ್ಟೆ ಕೆಡುತ್ತದೆ. ಹಾಗಾಗಿ ಅವುಗಳನ್ನು ಉಪ್ಪನ್ನು ಬೆರೆಸಿದ ನೀರಿನಲ್ಲಿ ಚೆನ್ನಾಗಿ ತೊಳೆದು ಉಪಯೋಗಿಸಿ. ಮತ್ತು ತರಕಾರಿಗಳನ್ನು ಚೆನ್ನಾಗಿ ಬೇಯಿಸಿ ತಿನ್ನಿ. ಹಸಿ ತರಕಾರಿ ತಿನ್ನುವುದನ್ನು ತಪ್ಪಿಸಿ.

Health Tips

ಸುಖಕರವಾಗಿ ನಿದ್ರೆ ಮಾಡಿ

ನಿದ್ರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ದೇಹಕ್ಕೆ ವಿಶ್ರಾಂತಿಯನ್ನು ನೀಡುತ್ತದೆ. ತಡವಾಗಿ ನಿದ್ರೆ ಮಾಡುವುದು , ಕಡಿಮೆ ನಿದ್ರೆ ನಿಮ್ಮ ದೇಹದ ರೋಗ ನಿರೋಧಕ ಶಕ್ತಿಯ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದರಿಂದ ನೀವು ಜ್ವರ, ಶೀತದಂತಹ ಸಾಮಾನ್ಯ ಕಾಯಿಲೆಯಿಂದ ಬಳಲುತ್ತೀರಿ. ಹಾಗಾಗಿ ದಿನದಲ್ಲಿ 8 ಗಂಟೆಗಳ ಕಾಲ ನಿದ್ರಿಸಿ.

Health Tips

ನಿಯಮಿತವಾದ ವ್ಯಾಯಾಮ

ಮಳೆಗಾಲದಲ್ಲಿ ಹೊರಗಡೆ ಮಳೆ ಸುರಿಯುವುದರಿಂದ ವಾಕಿಂಗ್, ಸೈಕ್ಲಿಂಗ್, ಯೋಗ ಮುಂತಾದ ವ್ಯಾಯಾಮಗಳನ್ನು ಮಾಡಲು ಅಡ್ಡಿಯಾಗುತ್ತದೆ. ಆದರೆ ನೀವು ಪ್ರತಿದಿನದ ವ್ಯಾಯಾಮವನ್ನು ತಪ್ಪಿಸಬೇಡಿ. ಮನೆಯೊಳಗೆ ನಿಮಗೆ ಸಾಧ್ಯವಾದಷ್ಟು ವ್ಯಾಯಾಮ ಮಾಡಿ. ಇದು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಹಾಗೂ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.

ನಿಮ್ಮ ಕೈಗಳನ್ನು ಚೆನ್ನಾಗಿ ತೊಳೆಯಿರಿ

ನೀವು ಹೊರಗಡೆಯಿಂದ ಬಂದಾಗ ಕೈಕಾಲುಗಳನ್ನು ಸ್ವಚ್ಛ ಗೊಳಿಸುವುದನ್ನು ಮರೆಯಬೇಡಿ. ಹಾಗೇ ಯಾವುದೇ ಆಹಾರವನ್ನು ಸೇವಿಸುವ ಮುನ್ನ ಕೈಗಳನ್ನು ಚೆನ್ನಾಗಿ ತೊಳೆಯಿರಿ. ಇದು ನಿಮ್ಮನ್ನು ಹಾನಿಕಾರಕ ಬ್ಯಾಕ್ಟೀರಿಯಾಗಳಿಂದ ಕಾಪಾಡುತ್ತದೆ.

ಆಗಾಗ ಮಳೆಯಲ್ಲಿ ನೆನೆಯುವುದನ್ನು ತಪ್ಪಿಸಿ

ಮಳೆಗಾಲದಲ್ಲಿ ಹೊರಗಡೆ ಮಳೆ ಧಾರಕಾರವಾಗಿ ಸುರಿಯುತ್ತಿರುತ್ತದೆ. ಹಾಗಾಗಿ ನೀವು ಹೊರಗಡೆ ಹೋಗುವಾಗ ಛತ್ರಿ, ರೈನ್ ಕೋಟ್ ಧರಿಸುವುದನ್ನು ಮರೆಯಬೇಡಿ. ಇಲ್ಲವಾದರೆ ನೀವು ಮಳೆಯಲ್ಲಿ ನೆನೆಯಬೇಕಾಗುತ್ತದೆ. ಇದರಿಂದ ನೀವು ಅನಾರೋಗ್ಯಕ್ಕೊಳಗಾಗಬಹುದು.

ಇದನ್ನೂ ಓದಿ: Viral News: 80ರ ಅಜ್ಜನನ್ನು ಪ್ರೀತಿಸಿ ಮದುವೆಯಾದ 23ರ ಸುಂದರಿ! ಆಕೆ ಕೊಟ್ಟ ಕಾರಣ ಮಜವಾಗಿದೆ!

ಹಾಗಾಗಿ ಮಳೆಗಾಲದಲ್ಲಿ ನೀವು ಆರೋಗ್ಯವಾಗಿರಲು ಪ್ರಯತ್ನಿಸಿ. ಅದಕ್ಕಾಗಿ ಈ ಸಲಹೆಗಳನ್ನು ತಪ್ಪದೇ ಪಾಲಿಸಿ. ಇವು ನಿಮ್ಮನ್ನು ರೋಗಗಳಿಂದ ಕಾಪಾಡಲು ಸಹಾಯ ಮಾಡುತ್ತವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಹುಯ್ಯಲೆದೆಯಂತೆ ಇವತ್ತು ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

VISTARANEWS.COM


on

ಬೆಂಗಳೂರು: ರಾಜ್ಯದೆಲ್ಲೆಡೆ ಬಿಸಿಲ ಬೆಗೆ ತಾರಕಕ್ಕೇರಿದೆ. ಮಳೆ ಸಿಂಚನಕ್ಕಾಗಿ ಕಾದು ಕುಳಿತ ಜನತೆಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಶನಿವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರೊಂದಿಗೆ 4 ಜಿಲ್ಲೆಗಳಿಗೆ ಇಲಾಖೆ ಆರೆಂಜ್ ಅಲರ್ಟ್​ ಘೋಷಿಸಿದೆ.


ಇದರ ಬೆನ್ನಲ್ಲೇ ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಬಿಸಿ ಅಲೆ (ಹೀಟ್​ವೇವ್) ಅಲರ್ಟ್​ ಘೋಷಿಸಿದೆ. ಅದರ ಜೊತೆಗೆ ಗುಡುಗು ಸಹಿತ ಗಾಳಿ-ಮಳೆಯಾಗುವ ಸಂಭವವೂ ಇದೆ ಎಂದು ಇಲಾಖೆ ತಿಳಿಸಿದೆ.


ಮುಂದಿನ 5 ದಿನದವರೆಗೂ ಕರಾವಳಿಯಲ್ಲಿ ಇದೇ ರೀತಿಯ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಮುಂಬರುವ ದಿನಗಳಲ್ಲಿ ರಾಜ್ಯದ ಹಲವೆಡೆ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ ಮುಟ್ಟುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಬಿಸಿಲಲ್ಲಿ ಓಡಾಡಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.


ಉಷ್ಣಾಘಾತದಿಂದ ರಕ್ಷಣೆ ಹೇಗೆ?


ಮುಂಬರುವ ದಿನಗಳಲ್ಲಿ ರಾಜ್ಯದೆಲ್ಲೆಡೆ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಅವಶ್ಯಕತೆ ಇಲ್ಲದೆ ಮನೆಯಿಂದ ಹೊರಬರುವುದನ್ನು ತಪ್ಪಿಸುಂತೆ ಹಾಗೂ ಬೇಸಿಗೆ ರಜೆಯಲ್ಲಿ ಮಕ್ಕಳು ಬಿಸಿಲಲ್ಲಿ ಆಟವಾಡುವುದನ್ನು ಆದಷ್ಟು ಕಡಿಮೆ ಮಾಡುವಂತೆ ಸೂಚಿಸಿದೆ.


ಈ ನಡುವೆ, ಉಷ್ಣ ಅಲೆ ಹಾಗೂ ಉಷ್ಣಾಘಾತದಿಂದ (ಹೀಟ್ ಸ್ಟ್ರೋಕ್) ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ.

ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡಿ, ಇವು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಎಂದು ಸಲಹೆ ನೀಡಿದೆ.

Continue Reading

Latest

ಎಸ್‌.ಟಿ. ಸಮುದಾಯಕ್ಕೆ ಶೇ.17 ಮೀಸಲಾತಿ ಉಳಿಸಿಕೊಳ್ಳಲು ಹೋರಾಟ ನಡೆಸಿ; ಕಾಂಗ್ರೆಸ್‌ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ

VISTARANEWS.COM


on

ಬೆಂಗಳೂರು: ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಶೇ.17 ಮೀಸಲಾತಿ ಪ್ರಮಾಣವನ್ನು ಉಳಿಸಿಕೊಳ್ಳಲು ರಾಜ್ಯ ಸರಕಾರ ಸೂಕ್ತ ಕಾನೂನು ಹೋರಾಟ ನಡೆಸಬೇಕು. ಇಲ್ಲವಾದರೆ ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಒಳ ಮೀಸಲಾತಿಯನ್ನು ಪ್ರಕಟಿಸಿದ ನಂತರ ಅವರು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಜ್ಯ ಕಾಂಗ್ರೆಸ್‌ ಕಾಂಗ್ರೆಸ್ ಸರಕಾರ ಐತಿಹಾಸಿಕ ಮೋಸ ಮತ್ತು ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದೆ. ಸುಪ್ರಿಂಕೋರ್ಟ್ ಆದೇಶದ ಅನುಸಾರ ಪರಿಶಿಷ್ಟ ಜಾತಿಗಳಿಗೆ ಮೀಸಲಾತಿ ಹಂಚಿಕೆ ಮಾಡಲು ಸರಿಸುಮಾರು ಎರಡೂವರೆ ವರ್ಷಗಳವರೆಗೆ ಕಾಲಹರಣ ಮಾಡಿ ಅಂತಿಮವಾಗಿ ಸಚಿವ ಸಂಪುಟ ಸಭೆಯಲ್ಲಿ ಎ, ಬಿ, ಮತ್ತು ಸಿ ವರ್ಗಗಳಾಗಿ ವಿಂಗಡಿಸಿದೆ.
ಹಿಂದಿನ ಬಿಜೆಪಿ ಸರ್ಕಾರವು ಪರಿಶಿಷ್ಟ ಜಾತಿಗಳಿಗೆ ಶೇ.15 ರಿಂದ ಶೇ.17ಕ್ಕೆ ಮೀಸಲಾತಿಯನ್ನು ಹೆಚ್ಚಿಸಿತ್ತು. ಆದರೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ‘ಎ’ ವರ್ಗಕ್ಕೆ ಬಿಜೆಪಿ ಸರ್ಕಾರವು ನೀಡಿದ್ದ ಶೇ. 6ರ ಪ್ರಮಾಣವನ್ನುತಗ್ಗಿಸಿ ಶೇ. 5.25ಕ್ಕೆ ಹಾಗೂ ‘ಬಿ’ ವರ್ಗಕ್ಕೆ ನೀಡಲಾಗಿದ್ದ ಶೇ. 5.5 ಪ್ರಮಾಣವನ್ನು ತಗ್ಗಿಸಿ ಶೇ. 5.25ಕ್ಕೆ ಇಳಿಸುವ ಮೂಲಕ ಎಡ ಮತ್ತು ಬಲ ಸಮುದಾಯಗಳಿಗೆ ಘೋರ ಅನ್ಯಾಯವನ್ನು ಎಸಗಿದೆ. ಅದೇ ರೀತಿ ಬಂಜಾರ, ಭೋವಿ, ಕೊರಚ ಹಾಗೂ ಕೊರಮ ಸಮುದಾಯಗಳಿಗೆ ನೀಡಲಾಗಿದ್ದ ಶೇ. 4.5ರ ಪ್ರಮಾಣವನ್ನು ಹಾಗೂ ಪ್ರತ್ಯೇಕವಾಗಿ ಅಲೆಮಾರಿ ಸಮುದಾಯಗಳಿಗೆ ನೀಡಲಾಗಿದ್ದ ಶೇ. 1 ಪ್ರಮಾಣವನ್ನು ರದ್ದುಗೊಳಿಸಿ ಇವೆರಡೂ ಸಮುದಾಯವನ್ನು ಒಟ್ಟುಗೂಡಿಸಿ ‘ಸಿ’ ವರ್ಗವನ್ನಾಗಿಸಿ ನ್ಯಾಯಯುತವಾಗಿ ಬರಬೇಕಾಗಿದ್ದ ಶೇ. 5.5ರ ಪ್ರಮಾಣವನ್ನು ತಗ್ಗಿಸಿ ಶೇ. 4.5ಕ್ಕೆ ಇಳಿಸಿದೆ. ಆ ಮೂಲಕ ಈ ಸಮುದಾಯಗಳ ಬೆನ್ನಿಗೂ ಚೂರಿಯನ್ನು ಹಾಕಿದೆ ಎಂದು ಹೇಳಿದ್ದಾರೆ.
ನ್ಯಾಯಾಲಯದಲ್ಲಿ ತಡೆಯಾಜ್ಞೆ ಇಲ್ಲದಿದ್ದರೂ ರಾಜ್ಯ ಸರ್ಕಾರವೇ ಅಫಿಡವಿಟ್ ಸಲ್ಲಿಸಿ ಶೇ. 17ರ ಮೀಸಲಾತಿಯನ್ನು ಶೇ. 15ಕ್ಕೆ ಇಳಿಸುವುದಾಗಿ ಒಪ್ಪಿಕೊಂಡಿದ್ದರ ಫಲ ಪ.ಜಾ.ಮೀಸಲಾತಿ ಪ್ರಮಾಣವು 17 ರಿಂದ 15ಕ್ಕೆ ಇಳಿಯಲು ಕಾರಣವಾಗಿದೆ. ಒಂದೆಡೆ ಲಕ್ಷಾಂತರ ಸರಕಾರಿ ಹುದ್ದೆಗಳು ಖಾಲಿ ಇದ್ದರೂ ಯಾವುದನ್ನೂ ಭರ್ತಿ ಮಾಡದೇ ಒಳಮೀಸಲಾತಿ ಹೆಸರಲ್ಲಿ ಎರಡೂವರೆ ವರ್ಷಗಳ ಅಮೂಲ್ಯ ಸಮಯವನ್ನು ಹಾಳು ಮಾಡಿದ ಕಾಂಗ್ರೆಸ್ ಸರಕಾರ, ಇನ್ನೇನು ತನ್ನ ಅಧಿಕಾರವಧಿ ಕೇವಲ 2 ವರ್ಷ ಉಳಿದಿರುವಾಗ ಪರಿಶಿಷ್ಟ ಸಮುದಾಯಗಳೂ ಸೇರಿದಂತೆ ಇಡೀ ರಾಜ್ಯದ ಜನರ ಕಣ್ಣಿಗೆ ಮಣ್ಣೆರಚುವ ರೀತಿಯಲ್ಲಿ ನೇಮಕಾತಿಗೆ ಚಾಲನೆ ಕೊಡುವುದಾಗಿ ಸಮಜಾಯಿಷಿ ನೀಡಿದೆ ಎಂದು ಆಪಾದಿಸಿದ್ದಾರೆ.
ಕರ್ನಾಟಕದ ಪರಿಶಿಷ್ಟ ಸಮುದಾಯಗಳಿಗೆ ಮಾಡಿರುವ ಅನ್ಯಾಯಕ್ಕೆ ಭವಿಷ್ಯದಲ್ಲಿ ಬೆಲೆ ತೆತ್ತಲೇ ಬೇಕಾಗುತ್ತದೆ ಎಂಬುದನ್ನು ಮರೆಯಬಾರದು. ಈಗಲೂ ಪಕ್ಷಕ್ಕೆ ಪರಿಶಿಷ್ಟರ ಬಗ್ಗೆ ಬದ್ಧತೆ ಇದ್ದರೆ ಈ ಹಿಂದೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಜಾರಿಗೊಳಿಸಿದ್ದ ಶೇ.17ರ ಮೀಸಲಾತಿ ಪ್ರಮಾಣವನ್ನು ಉಳಿಸಿಕೊಳ್ಳಲು ರಾಜ್ಯ ಸರಕಾರ ಸೂಕ್ತ ಕಾನೂನು ಹೋರಾಟ ನಡೆಸಬೇಕು ಎಂದು ಆಗ್ರಹಪಡಿಸಿದ್ದಾರೆ.

Continue Reading

Latest

ಇದು ಕದನ ವಿರಾಮವೇ?; ಹೊರ್ಮುಜ್‌ನಲ್ಲಿ ಇರಾನ್‌ನ ಮತ್ತೊಂದು ಹಡಗಿಗೆ ತಡೆಯೊಡ್ಡಿದ ಅಮೆರಿಕ

VISTARANEWS.COM


on

ಫ್ಲಾರಿಡಾ: ಕದನ ವಿರಾಮ ಘೋಷಿಸಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪದೇ ಪದೇ ಪ್ರತಿಪಾದಿಸುತ್ತಿದ್ದರೂ ಇರಾನ್‌ ಅನ್ನು ಕೆಣಕುವದನ್ನು ಮಾತ್ರ ಬಿಡುತ್ತಿಲ್ಲ. ಪ್ರತಿದಿನ ಒಂದಿಲ್ಲೊಂದು ರೀತಿಯಲ್ಲಿ ಇರಾನ್‌ ಗೆ ತೊಂದರೆ ನೀಡುತ್ತಲೇ ಇದ್ದಾರೆ. ಇಂದೂ ಸಹ ಹೊರ್ಮುಜ್‌ ಜಲಸಂಧಿಯಲ್ಲಿ ಇರಾನ್ ಧ್ವಜ ಹೊಂದಿದ್ದ ಹಡಗನ್ನು ಕ್ಷಿಪಣಿ ವಿಧ್ವಂಸಕ ನೌಕೆ ‘ಯುಎಸ್ಎಸ್ ರಾಫೆಲ್ ಪೆರಾಲ್ಟಾ’ ಯಶಸ್ವಿಯಾಗಿ ತಡೆದಿದೆ ಎಂದು ತಿಳಿದು ಬಂದಿದೆ.
ಏಪ್ರಿಲ್ 24ರಂದು ಈ ಹಡಗು ಇರಾನ್‌ನ ಬಂದರಿನತ್ತ ಸಾಗುತ್ತಿದ್ದಾಗ ಅಮೆರಿಕದ ನೌಕಾಪಡೆ ಅಧಿಕಾರಿಗಳು ತಡೆಒಡ್ಡಿದ್ದಾರೆ. ಹಡಗು ಇರಾನ್ ಬಂದರಿನತ್ತ ಸಾಗುತ್ತಿದ್ದ ಕಾರಣಕ್ಕಾಗಿಯೇ ತಡೆಯಲಾಗಿದ್ದು, ನೌಕಾ ಸಿಬ್ಬಂದಿ ಹಡಗನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್‌)ಅಧಿಕಾರಿಗಳು ತಿಳಿಸಿದ್ದಾರೆ.
ಇದು ಅಮೆರಿಕ ಕಾರ್ಯತಂತ್ರದ ಭಾಗವಾಗಿದೆ. ಇರಾನ್ ವಿರುದ್ಧ ಕಟ್ಟುನಿಟ್ಟಾದ ಸಮುದ್ರ ದಿಗ್ಬಂಧನವನ್ನು ಅಮೆರಿಕ ಮುಂದುವರಿಸಲಿದೆ ಎಂದು ರಕ್ಷಣಾ ಇಲಾಖೆ ಅಧಿಕಾರಿ ಜನರಲ್ ಡಾನ್ ಕೈನ್ ತಿಳಿಸಿದ್ದಾರೆ. ಅಧ್ಯಕ್ಷರ ಆದೇಶದ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಸೇನಾ ಕಾರ್ಯಾಚರಣೆಯನ್ನು ಪುನಾರಂಭಿಸಲು ನಾವು ಸನ್ನದ್ಧರಾಗಿದ್ದೇವೆ. ಇರಾನ್ ಬಂದರುಗಳಿಗೆ ಹೋಗುವ ಮತ್ತು ಬರುವ ಎಲ್ಲಾ ವಾಣಿಜ್ಯ ಹಡಗುಗಳ ಮೇಲೆ ದಿಗ್ಬಂಧನ ಹೇರುತ್ತೇವೆ ಎಂದು ಕೈನ್ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರದವರೆಗೆ ಒಟ್ಟು 34 ಹಡಗುಗಳು ಅಮೆರಿಕದಿಂದ ದಿಗ್ಬಂಧನ ಎದುರಿಸಿವೆ ಎಂದೂ ಅವರು ಹೇಳಿದ್ದಾರೆ.

Continue Reading

Latest

ಹೊಸ ರಾಜಕೀಯ ಪಕ್ಷ ಘೋಷಿಸಿದ ಕೆಸಿಆರ್ ಪುತ್ರಿ ಕೆ.ಕವಿತಾ; ಪಕ್ಷದ ಹೆಸರು TRS

VISTARANEWS.COM


on

ಹೈದರಾಬಾದ್: ತೆಲಂಗಾಣ ಮಾಜಿ ಮುಖ್ಯಮಂತ್ರಿ, ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ, ತೆಲಂಗಾಣ ಜಾಗೃತಿ ಸಂಘಟನೆ ಅಧ್ಯಕ್ಷೆ ಕೆ. ಕವಿತಾ ಅವರು ಇಂದು ಹೊಸ ರಾಜಕೀಯ ಪಕ್ಷವನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಹೈದರಾಬಾದ್‌ನ ಮುನೀರ್‌ಬಾದ್‌ನಲ್ಲಿ ನಡೆದ ಸಮಾರಂಭದಲ್ಲಿ ಕವಿತಾ ಅವರು ಹೊಸ ಪಕ್ಷಕ್ಕೆ ‘ತೆಲಂಗಾಣ ರಾಷ್ಟ್ರ ಸೇನಾ’ (ಟಿಆರ್‌ಎಸ್‌) ಎಂದು ನಾಮಕರಣ ಮಾಡಿದ್ದಾರೆ.
ಕಾಳೇಶ್ವರಂ ಎತ್ತಿನಹೊಳೆ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ತಮ್ಮ ತಂದೆ ಚಂದ್ರಶೇಖರ್ ರಾವ್ ಅವರ ವರ್ಚಸ್ಸಿಗೆ ಮಸಿ ಬಳಿಯುತ್ತಿದ್ದಾರೆ ಎಂದು ತಮ್ಮ ಸೋದರಸಂಬಂಧಿ ಟಿ. ಹರೀಶ್ ರಾವ್ ಮತ್ತು ಜೆ. ಸಂತೋಷ್ ಕುಮಾರ್ ವಿರುದ್ಧ ಕವಿತಾ ಅವರು ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಸೆಪ್ಟೆಂಬರ್ 2025ರಲ್ಲಿ ಬಿಆರ್‌ಎಸ್ ಪಕ್ಷದಿಂದ ಅಮಾನತುಗೊಳಿಸಲಾಗಿತ್ತು. ನಂತರ ಅವರು ಎಂಎಲ್‌ಸಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.
ನಂತರ ಕವಿತಾ ಅವರು ತೆಲಂಗಾಣ ಜಾಗೃತಿ ಸಂಘಟನೆ ಸ್ಥಾಪಿಸಿ ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಿದ್ದರು. ಇದೀಗ ಹೊಸ ಪಕ್ಷ ಸ್ಥಾಪಿಸಿದ್ದಾರೆ.
ಕೆ. ಚಂದ್ರಶೇಖರ್ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ ಪಕ್ಷದ (BRS) ಮೂಲ ಹೆಸರು ‘ತೆಲಂಗಾಣ ರಾಷ್ಟ್ರ ಸಮಿತಿ’ (TRS) ಎಂದಿತ್ತು. ಆದರೆ, 2022ರಲ್ಲಿ ಇದನ್ನು ಬಿಆರ್‌ಎಸ್ ಎಂದು ಮರುನಾಮಕರಣ ಮಾಡಿದ್ದರು. ಈಗ ಕವಿತಾ ಅವರು ಹಳೆಯ ಹೆಸರಿನಲ್ಲಿ (ಟಿಆರ್‌ಎಸ್) ಹೊಸ ಪಕ್ಷವನ್ನು ಸ್ಥಾಪಿಸಿದ್ದಾರೆ.
ಇಂದು ನಡೆದ ಸಮಾವೇಶದಲ್ಲಿ ಪಕ್ಷದ ಧ್ವಜ ಮತ್ತು ಸಿದ್ಧಾಂತಗಳನ್ನು ಅನಾವರಣಗೊಳಿಸಲಾಗಿದೆ. ಈ ಹೊಸ ಪಕ್ಷವು ನೇರವಾಗಿ ಬಿಆರ್‌ಎಸ್ ಮತ್ತು ಪ್ರಸ್ತುತ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷಗಳಿಗೆ ಸವಾಲು ಒಡ್ಡಲಿದೆ ಎಂದು ಹೇಳಲಾಗುತ್ತಿದೆ.

Continue Reading
Advertisement
Latest21 minutes ago

ಹುಯ್ಯಲೆದೆಯಂತೆ ಇವತ್ತು ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Latest21 minutes ago

ಎಸ್‌.ಟಿ. ಸಮುದಾಯಕ್ಕೆ ಶೇ.17 ಮೀಸಲಾತಿ ಉಳಿಸಿಕೊಳ್ಳಲು ಹೋರಾಟ ನಡೆಸಿ; ಕಾಂಗ್ರೆಸ್‌ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ

Latest41 minutes ago

ಇದು ಕದನ ವಿರಾಮವೇ?; ಹೊರ್ಮುಜ್‌ನಲ್ಲಿ ಇರಾನ್‌ನ ಮತ್ತೊಂದು ಹಡಗಿಗೆ ತಡೆಯೊಡ್ಡಿದ ಅಮೆರಿಕ

Latest53 minutes ago

ಹೊಸ ರಾಜಕೀಯ ಪಕ್ಷ ಘೋಷಿಸಿದ ಕೆಸಿಆರ್ ಪುತ್ರಿ ಕೆ.ಕವಿತಾ; ಪಕ್ಷದ ಹೆಸರು TRS

Latest1 hour ago

ಇ-ಗಸ್ತು ಪರಿಣಾಮಕಾರಿಯಾಗಿ ಬಳಸಿ ವನ್ಯಜೀವಿ ದಾಳಿ ತಪ್ಪಿಸಿ: ಈಶ್ವರ ಖಂಡ್ರೆ ಕರೆ

Latest19 hours ago

ಇನ್ನು ಮುಂದೆ ಒಳಮೀಸಲಾತಿ ಅನ್ವಯ ಹುದ್ದೆಗಳ ಭರ್ತಿ: ಸಿಎಂ ಸಿದ್ದರಾಮಯ್ಯ ಘೋಷಣೆ

Latest19 hours ago

29 ವರ್ಷಗಳ ‘ನೋ ಕಿಸ್ ಪಾಲಿಸಿ’ ಮುರಿದ ಕಾಜೋಲ್: ಆ ಒಂದು ದೃಶ್ಯಕ್ಕಾಗಿ ಕಟ್ಟುನಿಟ್ಟಿನ ನಿಯಮ ಬದಿಗಿಟ್ಟಿದ್ದೇಕೆ?

Latest19 hours ago

ಒಳ ಮೀಸಲಾತಿ ಹಂಚಿಕೆ: ಎಡಗೈ, ಬಲಗೈ ಜಾತಿಗಳಿಗೆ ತಲಾ ಶೇ. 5.25 ಸ್ಪೃಶ್ಯ ಜಾತಿಗೆ ಶೇ.4.5 ಹಂಚಿಕೆ; ಸಚಿವ ಸಂಪುಟ ಮಹತ್ವದ ನಿರ್ಧಾರ

Latest20 hours ago

ಬ್ಯಾಟಿಂಗ್‌ನಲ್ಲಿ ಮಾತ್ರವಲ್ಲ, ಬಿಸಿನೆಸ್‌ನಲ್ಲೂ ಸಚಿನ್ ಅವರದ್ದೇ ಸಿಕ್ಸರ್! ತೆಂಡೂಲ್ಕರ್‌ ಒಟ್ಟು ಆಸ್ತಿ ಎಷ್ಟು ಗೊತ್ತಾ?

Latest20 hours ago

ಇಂಜಿನಿಯರಿಂಗ್‌ ಶುಲ್ಕ: ಅಂತಿಮ ನಿರ್ಧಾರ ಮಾಡಿಲ್ಲ: ಸಚಿವ ಡಾ. ಎಂ.ಸಿ. ಸುಧಾಕರ್‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌