Site icon Vistara News

Hit and Run Case: ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

Hit and Run Case


ಪುಣೆ: ಅತಿ ವೇಗ ಅಪಘಾತಕ್ಕೆ ಕಾರಣವೆಂದು ತಿಳಿದರೂ ಕೂಡ ಕೆಲವು ಚಾಲಕರು ಅವಸರದಲ್ಲಿ ವೇಗವಾಗಿ ವಾಹನ ಚಲಾಯಿಸಿ ಜನರ ಜೀವಕ್ಕೆ ಆಪತ್ತು ತರುತ್ತಿದ್ದಾರೆ. ಎಲ್ಲೆಂದರಲ್ಲಿ ನಿಂತ ಜನರ ಮೇಲೂ ವಾಹನವನ್ನು ಹಾರಿಸಿಕೊಂಡು ಹೋಗುತ್ತಾರೆ. ಇದೀಗ ಅಂತಹದೊಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Hit and Run Case)ಆಗಿದೆ.

ಪ್ರಿ-ಚಿಂಚ್ವಾಡ್‍ನಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಟ್ಯಾಕ್ಸಿ ಮಹಿಳೆಗೆ ಡಿಕ್ಕಿ ಹೊಡೆದು ನಂತರ ಚಾಲಕ ಅಪಘಾತದ ಸ್ಥಳದಿಂದ ಓಡಿಹೋದ ಹೊಸ ಹಿಟ್ ಅಂಡ್ ರನ್ ಪ್ರಕರಣ ವರದಿಯಾಗಿದೆ. ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪುಣೆಯಿಂದ ಸುಮಾರು 15 ಕಿಲೋಮೀಟರ್ ದೂರದಲ್ಲಿರುವ ಪಿಂಪ್ರಿ-ಚಿಂಚ್ವಾಡ್‍ನಲ್ಲಿ ಈ ಘಟನೆ ನಡೆದಿದೆ. ಈ ಹಿಟ್ ಅಂಡ್ ರನ್ ಪ್ರಕರಣ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೊದಲ್ಲಿ ಭಾನುವಾರ ಮಧ್ಯಾಹ್ನ 1:30ರ ಸುಮಾರಿಗೆ ರಸ್ತೆಯಲ್ಲಿ ಮಹಿಳೆ ನಡೆದುಕೊಂಡು ಹೋಗುತ್ತಿರುವಾಗ ಎದುರಿಗೆ ವೇಗವಾಗಿ ಬಂದ ಟ್ಯಾಕ್ಸಿ ಮಹಿಳಾ ಪಾದಚಾರಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ರಸ್ತೆಯಲ್ಲಿದ್ದ ಇತರ ಜನರು ಆಕೆಯ ಸಹಾಯಕ್ಕಾಗಿ ಓಡಿ ಬರುತ್ತಿರುವುದು ಕಂಡುಬಂದಿದೆ. ಟ್ಯಾಕ್ಸಿಗೆ ಡಿಕ್ಕಿ ಹೊಡೆದ ಮಹಿಳೆ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದು, ಈ ಬಗ್ಗೆ ಪಿಂಪ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ಈ ಪ್ರಕರಣದ ಬಗ್ಗೆ ಪಿಂಪ್ರಿ-ಚಿಂಚ್ವಾಡ್ ಡಿಸಿಪಿ ಶಿವಾಜಿ ಪವಾರ್ ಮಾತನಾಡಿ, “ಈ ಅಪಘಾತದಲ್ಲಿ ಸಂತ್ರಸ್ತೆ ರೇಖಾ ಗಾಯಗೊಂಡಿದ್ದಾರೆ. ಈಗ ಅವರ ಆರೋಗ್ಯ ಸ್ಥಿರವಾಗಿದೆ. 24 ವರ್ಷದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಕಾರಿನ ಚಾಲಕ ಕುಡಿದಿರಲಿಲ್ಲ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೇಲ್ನೋಟಕ್ಕೆ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಭವ್ಯ ರಥೋತ್ಸವ; ಪ್ಯಾರಿಸ್‌ ಬೀದಿಯಲ್ಲಿ ಸಾವಿರಾರು ತೆಂಗಿನ ಕಾಯಿ ಒಡೆದ ಹಿಂದೂಗಳು!

ಇದು ಮಹಾರಾಷ್ಟ್ರದಲ್ಲಿ ವರದಿಯಾದ ಮೊದಲ ಹಿಟ್ ಅಂಡ್ ರನ್ ಪ್ರಕರಣವಲ್ಲ. ಈಗಾಗಲೇ ಹಿಟ್ ಅಂಡ್ ರನ್ ಪ್ರಕರಣ ಮತ್ತೊಂದು ಸುದ್ದಿಯಲ್ಲಿ, ವೇಗವಾಗಿ ಬಂದ ಆಡಿ ಕಾರು ಎರಡು ಆಟೋರಿಕ್ಷಾಗಳಿಗೆ ಡಿಕ್ಕಿ ಹೊಡೆದಿದೆ. ಒಂದು ಆಟೋರಿಕ್ಷಾ ಚಾಲಕನ ಸ್ಥಿತಿ ಚಿಂತಾಜನಕವಾಗಿದ್ದು, ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮುಲುಂಡ್ ಪೊಲೀಸರು ಆಡಿ ಕಾರನ್ನು ವಶಪಡಿಸಿಕೊಂಡಿದ್ದಾರೆ, ಆದರೆ ಅಪಘಾತದ ನಂತರ ಅದರ ಚಾಲಕ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

Exit mobile version