ಅಮೆರಿಕ ಜತೆ ಮಾತುಕತೆಗೆ ಇರಾನ್‌ ಒಪ್ಪಿಗೆ; ಇಸ್ಲಾಮಾಬಾದ್‌ನತ್ತ ಜಗತ್ತಿನ ಕಣ್ಣು; ಬಗೆಹರಿಯಲಿದೆಯೇ ಬಿಕ್ಕಟ್ಟು? - Vistara News

Latest

ಅಮೆರಿಕ ಜತೆ ಮಾತುಕತೆಗೆ ಇರಾನ್‌ ಒಪ್ಪಿಗೆ; ಇಸ್ಲಾಮಾಬಾದ್‌ನತ್ತ ಜಗತ್ತಿನ ಕಣ್ಣು; ಬಗೆಹರಿಯಲಿದೆಯೇ ಬಿಕ್ಕಟ್ಟು?

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಅಮೆರಿಕ ಮತ್ತು ಇರಾನ್ ನಡುವಿನ ಎರಡನೇ ಸುತ್ತಿನ ಮಾತುಕತೆ ನಡೆಯುವ ಸಾಧ್ಯತೆಗಳಿವೆ ಎಂದು ವಿದೇಶಿ ಮಾಧ್ಯಮಗಳು ವರದಿ ಮಾಡಿವೆ. ನಾಳೆ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ ನಲ್ಲಿ ಉಭಯ ದೇಶಗಳ ಪ್ರತಿನಿಧಿಗಳ ನಡುವೆ ಮಾತುಕತೆ ನಡೆಯಲಿದೆ. ಈಗಾಗಲೇ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್‌ ಇಸ್ಲಾಮಾಬಾದ್‌ ತಲುಪಿದ್ದಾರೆ. ಇರಾನ್‌ ನಿಯೋಗ ಇಂದು ಪಾಕಿಸ್ತಾನ ತಲುಪಲಿದೆ.

ಮತ್ತೊಂದು ಕಡೆ ಒಂದು ವೇಳೆ ಅಮೆರಿಕ ಯುದ್ಧವನ್ನು ಮುಂದುವರೆಸಲು ಬಯಸಿದರೆ ತಮ್ಮ ಬಳಿ ಹೊಸ ಪ್ಲ್ಯಾನ್‌ ಸಿದ್ದವಾಗಿದೆ ಎಂದು ಇರಾನ್‌ ಸಂಸದೀಯ ಮಂಡಳಿ ಸ್ಪೀಕರ್‌ ತಿಳಿಸಿದ್ದಾರೆ. ಅಮೆರಿಕ-ಇರಾನ್‌ ನಡುವಿನ ಕದನ ವಿರಾಮ ನಾಳೆ ಬುಧವಾರ ಅಂತ್ಯಗೊಳ್ಳಲಿದೆ. ಕದನ ವಿರಾಮವನ್ನು ಮುಂದುವರೆಸುವ ಸಾಧ್ಯತೆಗಳು ಕ್ಷೀಣ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಿಳಿಸಿದ್ದಾರೆ.

ಇದೇ ವೇಳೆ ಇಸ್ಲಾಮಾಬಾದ್‌ ನಲ್ಲಿ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಭದ್ರತೆಗಾಗಿ ಅಲ್ಲಲ್ಲಿ ಚೆಕ್‌ ಪಾಯಿಂಟ್‌ ಗಳನ್ನು ನಿರ್ಮಿಸಲಾಗಿದೆ..ಹೊರ್ಮುಜ್‌ ಜಲಸಂಧಿ ‘ಅಂತರರಾಷ್ಟ್ರೀಯ ಹಡಗು ಮಾರ್ಗವಾಗಿದ್ದು, ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಚೀನಾ ಹಾಗೂ ಬ್ರಿಟನ್‌ ಆಗ್ರಹಡಿಸಿವೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್‌ ಹೊರ್ಮುಜ್‌ ಜಲಸಂಧಿಯನ್ನು ಮುಕ್ತಗೊಳಿಸಬೇಕು ಎಂದು ಪ್ರತಿಪಾದಿಸಿದ್ದಾರೆ.
ಇರಾನ್‌ನ ಸರಕು ಸಾಗಣೆ ಹಡಗನ್ನು ಅಮೆರಿಕ ಸೇನೆ ತನ್ನ ವಶಕ್ಕೆ ತೆಗೆದುಕೊಂಡಿರುವುದು ಮಾತುಕತೆಗೆ ಅಡ್ಡಿಯಾಗಿದೆ ಎಂದು ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್‌ ಮಾರ್ಷಲ್‌ ಅಸಿಮ್‌ ಮುನೀರ್‌ ತಿಳಿಸಿದ್ದಾರೆ.

ಈ ಕ್ರಮಕ್ಕೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್‌ ಎಚ್ಚರಿಸಿದ್ದು, ಹೊರ್ಮುಜ್‌ ಜಲಸಂಧಿ ಮೇಲಿನ ತನ್ನ ಹಿಡಿತ ಬಿಗಿಗೊಳಿಸಿದ್ದು ಟೋಲ್‌ ಸಂಗ್ರಹಿಸಲು ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ. ಇರಾನ್‌ನ ಹಡಗುಗಳು ಮತ್ತು ಬಂದರುಗಳಿಗೆ ಅಮೆರಿಕ ಬೆದರಿಕೆ ಒಡ್ಡುತ್ತಿರುವುದು ಮಾತುಕತೆಗೆ ಮುನ್ನ ಆ ದೇಶದ ನಿಜ ಬಣ್ಣವನ್ನು ಬಯಲು ಮಾಡಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್‌ ಅರಾಘ್ಚಿ ಆಪಾದಿಸಿದ್ದಾರೆ.

ಹೊರ್ಮುಜ್‌: ನಿರ್ಬಂಧ ಮುಂದುವರಿಕೆ:
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರದ ಮೇಲೆ ಇರಾನ್‌ ಹೇರಿರುವ ನಿರ್ಬಂಧ ಮುಂದುವರಿದಿದೆ. ಸೋಮವಾರ ಮೂರು ಹಡಗುಗಳು ಮಾತ್ರ ಜಲಸಂಧಿಯನ್ನು ದಾಟಿವೆ ಎಂದು ತಿಳಿದು ಬಂದಿದೆ. ತನ್ನ ಬಂದರುಗಳ ಮೇಲೆ ಅಮೆರಿಕ ವಿಧಿಸಿರುವ ದಿಗ್ಬಂಧನಕ್ಕೆ ಪ್ರತಿಯಾಗಿ ಇರಾನ್‌ ಸೇನೆ ಹೊರ್ಮುಜ್‌ ಜಲಸಂಧಿಯನ್ನು ಶನಿವಾರದಿಂದ ಸಂಪೂರ್ಣ ಮುಚ್ಚಿದೆ.

ನಾಳೆಯ ಮಾತುಕತೆಯ ನಂತರ ಅಮೆರಿಕ ಇರಾನ್‌ ಯುದ್ಧ ಕೊನೆಗೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ. ಒಂದು ವೇಳೆ ಮಧ್ಯಪ್ರಾಚ್ಯ ಬಿಕ್ಕಟ್ಟು ಮುಂದುವರೆದರೆ ಜಗತ್ತಿನ ಬಹುತೇಕ ರಾಷ್ಟ್ರಗಳು ತೈಲ ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ಇಡೀ ಜಗತ್ತು ಅಮೆರಿಕ ಇರಾನ್‌ ಮಾತುಕತೆಯನ್ನು ಎದುರು ನೋಡುತ್ತಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Latest

ಇಡಿ ದಾಳಿ: ಕೇಂದ್ರ ಸರ್ಕಾರ ಕಾಂಗ್ರೆಸ್ ಅನ್ನು ಗುರಿಯಾಗಿಸಿದೆ: ಸಿಎಂ ಸಿದ್ದರಾಮಯ್ಯ ಆರೋಪ

VISTARANEWS.COM


on

ಚಾಮರಾಜನಗರ: ಕೇಂದ್ರದ ಬಿಜೆಪಿ ಸರ್ಕಾರವು ಕೇವಲ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೂರಿದ್ದಾರೆ. ಚಾಮರಾಜನಗರದ ಹೆಲಿಪ್ಯಾಡ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಹ್ಯಾರೀಸ್ ಪುತ್ರ ನಲಪಾಡ್ ಮನೆ ಮೇಲೆ ಇಡಿ (ED) ದಾಳಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿ, “ಬಿಜೆಪಿಯವರ ಮೇಲೆ ಇಂತಹ ದಾಳಿಗಳು ಏಕಾಗುತ್ತಿಲ್ಲ?” ಎಂದು ಪ್ರಶ್ನಿಸಿದರು.

ಕ್ಷೇತ್ರ ಮರು ವಿಂಗಡಣೆಗೆ ವಿರೋಧ, ಮೀಸಲಾತಿಗಲ್ಲ:
ಮಹಿಳಾ ಮೀಸಲಾತಿ ವಿಚಾರವಾಗಿ ಮಾತನಾಡಿದ ಸಿಎಂ, “ಬಿಜೆಪಿಯೇ ಮಹಿಳಾ ಮೀಸಲಾತಿಯ ನಿಜವಾದ ವಿರೋಧಿ. ರಾಜೀವ್ ಗಾಂಧಿಯವರ ಕಾಲದಲ್ಲೇ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ತರಲಾಗಿತ್ತು, ಆಗ ಅದನ್ನು ರಾಜ್ಯಸಭೆಯಲ್ಲಿ ತಡೆದಿದ್ದೇ ಎನ್.ಡಿ.ಎ. ಈಗ ರಾಜಕೀಯ ಲಾಭಕ್ಕಾಗಿ ಕ್ಷೇತ್ರ ಮರು ವಿಂಗಡಣೆಯ ಷರತ್ತನ್ನು ಸೇರಿಸಿ ಮಸೂದೆ ತರುತ್ತಿದ್ದಾರೆ. ನಮ್ಮ ವಿರೋಧವಿರುವುದು ಕ್ಷೇತ್ರ ಮರು ವಿಂಗಡಣೆಗೆ ಹೊರತು ಮಹಿಳಾ ಮೀಸಲಾತಿಗಲ್ಲ,” ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ, ತೃತೀಯ ಭಾಷೆ ಹಿಂದಿಗೆ ಅಂಕ ನೀಡುವ ಹೈಕೋರ್ಟ್ ಆದೇಶವನ್ನು ಸರ್ಕಾರ ಪಾಲಿಸಲಿದೆ ಎಂದೂ ಅವರು ತಿಳಿಸಿದರು.

ಅಲ್ಪಸಂಖ್ಯಾತರ ಕಡೆಗಣನೆ ಇಲ್ಲ:
ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗುತ್ತಿದೆ ಎಂಬ ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುವಾಗ ಅಲ್ಪಸಂಖ್ಯಾತ ನಾಯಕರು ಉಪಸ್ಥಿತರಿದ್ದರು ಮತ್ತು ಅವರ ಸಮ್ಮುಖದಲ್ಲೇ ನಿರ್ಧಾರಗಳಾಗಿವೆ ಎಂದು ತಿಳಿಸಿದರು. ಇನ್ನು ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎಂಬ ಮೂಢನಂಬಿಕೆಯನ್ನು ತಳ್ಳಿಹಾಕಿದ ಅವರು, “ಇಲ್ಲಿಗೆ ಬರುವುದರಿಂದ ನನ್ನ ಕುರ್ಚಿ ಗಟ್ಟಿಯಾಗುತ್ತದೆ,” ಎಂದು ಮಾರ್ಮಿಕವಾಗಿ ನುಡಿದರು. ಕೊನೆಯಲ್ಲಿ, ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Continue Reading

Latest

ಸಮಾಜದ ಪರಿವರ್ತನೆಗೆ ಬಸವಣ್ಣನ ವಿಚಾರಗಳು ಅತ್ಯಗತ್ಯ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಹುಣಸೂರು: ಸಮಾಜದ ಪರಿವರ್ತನೆಗೆ ಬಸವಣ್ಣನ ವಿಚಾರಗಳು ಅತ್ಯಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ತಾಲ್ಲೂಕು ಕುರುಬರ ಅಭಿವೃದ್ಧಿ ಸಮಿತಿ ಇವರ ವತಿಯಿಂದ ಹುಣಸೂರಿನ ಕನಕ ಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ಗಣಪತಿ ದೇವಸ್ಥಾನ ಉದ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವಸ್ಥಾನವನ್ನು ಉದ್ಘಾಟನೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ನಮ್ಮ ಸರ್ಕಾರ ಜನಪರವಾದ ಕೆಲಸ ಮಾಡಿದ್ದು, 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

ನಾಡನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡಬೇಕಾದರೆ ಬಸವಣ್ಣ, ಅಂಬೇಡ್ಕರ್, ಗಾಂಧೀಜಿ ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಎಲ್ಲರಿಗೂ ಸಮಾನ ಅವಕಾಶಗಳು, ಜಾತಿ ವರ್ಗ ರಹಿತವಾದ ಸಮಾಜ ನಿರ್ಮಾಣ ಸರ್ಕಾರದ ಉದ್ದೇಶ. ಎಲ್ಲರಿಗೂ ಸಮಾನ ಅವಕಾಶಗಳು, ಜಾತಿ ವರ್ಗ ರಹಿತವಾದ ಸಮಾಜ ನಿರ್ಮಾಣವಾಗಬೇಕೆನ್ನುವುದು ನಮ್ಮ ಸರ್ಕಾರದ ಉದ್ದೇಶ. ಇತಿಹಾಸ ತಿಳಿಯದವರು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಿಲ್ಲ ಎಂದು ಅಂಬೇಡ್ಕರ್ ಹೇಳಿದ್ದರು. ಮೌಢ್ಯಗಳಿಂದ ದೂರವಿದ್ದು, ಜಾತಿ, ವರ್ಗಗಳನ್ನು ಬಿಟ್ಟಾಗ ಬಸವಣ್ಣನವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.

ಬಸವಣ್ಣನವರು ಸಮಾಜದ ಜಾತಿವ್ಯವಸ್ಥೆ ಮತ್ತು ಅಸಮಾನತೆಗಳನ್ನು ಹೋಗಲಾಡಿಸಲು ಹೋರಾಡಿದ ಸಮಾಜ ಸುಧಾರಕರು. ಮೌಢ್ಯಗಳಿಂದ ದೂರವಿರುವ , ಜಾತಿ ಮತ್ತು ವರ್ಗರಹಿತ ಸಮಾಜ ನಿರ್ಮಾಣವನ್ನು ಅವರು ಬಯಸಿದ್ದರು. ಬಸವಣ್ಣನವರು ಮೇಲ್ಜಾತಿಗೆ ಸೇರಿದವರಾದರೂ, ಸಮಾಜದ ಕಟ್ಟಕಡೆಯ ಅಸ್ಪೃಶ್ಯತೆಯ ಜಾತಿಯಲ್ಲಿ ಹುಟ್ಟಿದವನು ಎಂದು ಹೇಳಿಕೊಳ್ಳುತ್ತಿದ್ದರು. ಬಸವಾದಿ ಶರಣರು ಸಮಾಜ ಪರಿವರ್ತನೆಗೆ ಪೂರ್ಣ ಪ್ರಮಾಣದಲ್ಲಿ ಸಫಲರಾಗಲಿಲ್ಲ. ಬಸವ ವಿಚಾರಗಳು ಹಿಂದೆಯೂ, ಇಂದಿಗೂ, ಭವಿಷ್ಯದಲ್ಲಿಯೂ ಪ್ರಸ್ತುತವಾಗಿದೆ. ಮನುಷ್ಯ ಸಮಾಜ ನಿರ್ಮಾಣ ಮಾಡಲು ಬಯಸಿದ ಬಸವಣ್ಣನವರು ಒಬ್ಬ ಮಾನವತಾವಾದಿ ಎಂದರು.

ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ಸಾಮಾಜಿಕ ನ್ಯಾಯವನ್ನು ಬಸವಣ್ಣನವರು ಪ್ರತಿಪಾದಿಸುತ್ತಿದ್ದರು ಮತ್ತು ಇವುಗಳನ್ನೇ ನಮ್ಮ ಸಂವಿಧಾನವೂ ಪ್ರತಿಪಾದಿಸುತ್ತವೆ ಎಂದು ವಿವರಿಸಿದರು.

Continue Reading

Latest

ಕೃಷ್ಣಗಿರಿ ಜಿಲ್ಲೆಯಲ್ಲಿ ಕಾಂಗ್ರೆಸ್-ಡಿಎಂಕೆ ಅಭ್ಯರ್ಥಿಗಳ ಪರ ಸಚಿವ ಈಶ್ವರ ಖಂಡ್ರೆ ಪ್ರಚಾರ

VISTARANEWS.COM


on

ಕೃಷ್ಣಗಿರಿ: ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹೇಳಿ ಮಾತು ತಪ್ಪಿದ, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿ ಯುವಜನರ ಆಕಾಂಕ್ಷೆಗಳಿಗೆ ತಣ್ಣೀರೆರೆಚಿದ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರ ವಚನಭ್ರಷ್ಟವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೃಷ್ಣಗಿರಿಯಲ್ಲಿಂದು ಕಾಂಗ್ರೆಸ್ -ಡಿಎಂಕೆ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಅವರು, ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿದೇಶದಿಂದ ಕಪ್ಪುಹಣ ತರುವುದಾಗಿ, 2022ರ ಹೊತ್ತಿಗೆ ಸರ್ವರಿಗೂ ಸೂರು ಎಂದು ಘೋಷಿಸಿದ ಪ್ರಧಾನಿ ನುಡಿದಂತೆ ನಡೆಯಲೇ ಇಲ್ಲ ಎಂದು ಟೀಕಿಸಿದರು.

ಕೇಂದ್ರ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರ, ಸಾಂವಿಧಾನಿಕ ಸ್ವಾಯತ್ತ ಸಂಸ್ಥೆಗಳಾದ ಇ.ಡಿ, ಸಿಬಿಐ, ಐ.ಟಿ. ಮೊದಲಾದ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ದಕ್ಷಿಣ ರಾಜ್ಯಗಳ ಬಗ್ಗೆ ಮಲತಾಯಿ ಧೋರಣೆ ತಳೆದಿದೆ. ದಕ್ಷಿಣ ರಾಜ್ಯಗಳಿಗೆ ಅದರಲ್ಲೂ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಕ್ಕೆ ತೆರಿಗೆಯ ಪಾಲು, ಅನುದಾನ, ಜಿಎಸ್ಟಿ ಪರಿಹಾರ, ಬರ, ಪ್ರವಾಹ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡುತ್ತಿದೆ ಎಂದೂ ದೂಷಿಸಿದರು.
ಪ್ರಧಾನಿ ಮೋದಿ ಸರ್ಕಾರ ಕ್ಷೇತ್ರ ಪುನರ್ವಿಂಗಡಣೆಯಲ್ಲಿ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಕಡಿತ ಮಾಡುವ ಮೂಲಕ ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಮಾಡಲು ಸಂಚು ನಡೆಸಿತ್ತು. ಈಗ ದಕ್ಷಿಣ ರಾಜ್ಯಗಳ ಮೇಲೆ ಹಿಂದಿ ಭಾಷೆ ಹೇರುವ ಕೆಲಸ ಮಾಡುತ್ತಿದೆ. ಆ ಮೂಲಕ ಸಾಮಾಜಿಕ ಸಂರಚನೆಯನ್ನೇ ಹಾಳು ಮಾಡುವ ಪ್ರಯತ್ನ ಮಾಡುತ್ತಿದೆ, ಸಮಾಜವನ್ನು ಭಾಷೆ, ಧರ್ಮದ ಹೆಸರಲ್ಲಿ ಒಡೆಯಲು ಪ್ರಯತ್ನಿಸುತ್ತಿದೆ. ಇದು ಸಂವಿಧಾನಕ್ಕೆ ಅಪಾಯಕಾರಿ ಎಂದರು.

ರಾಜಕೀಯ ಲಾಭಕ್ಕಾಗಿ ನಾಟಕ ಮಾಡುವ, ಸುಳ್ಳು ಹೇಳುವ ಭಾರತೀಯ ಜನತಾ ಪಕ್ಷ ಹಾಗೂ ಮಿತ್ರಪಕ್ಷಗಳ ನಿಜಬಣ್ಣ ಈಗ ಬಯಲಾಗಿದೆ. ಜನರು ಜಾಗೃತರಾಗಿದ್ದಾರೆ. ಹೀಗಾಗಿ ತಮಿಳುನಾಡು ಜನತೆ ಸಾಮಾಜಿಕ ನ್ಯಾಯಕ್ಕಾಗಿ, ತಮ್ಮ ನಾಡಿನ ಹಿರಿಮೆ, ಸಂಸ್ಕೃತಿ, ಸಂಪ್ರದಾಯ ಮತ್ತು ಭಾಷೆಯ ರಕ್ಷಣೆಗಾಗಿ ಕಾಂಗ್ರೆಸ್ ಮತ್ತು ಡಿಎಂಕೆ ಮೈತ್ರಿಕೂಟಕ್ಕೆ ಮತನೀಡುತ್ತಾರೆ ಎಂದು ಈಶ್ವರ ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ 2023ರಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿಗಳನ್ನು ಘೋಷಿಸಿತ್ತು. ನಮ್ಮ ಸರ್ಕಾರ ಎಲ್ಲ 5 ಗ್ಯಾರಂಟಿಗಳನ್ನೂ ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿದ್ದು ನುಡಿದಂತೆ ನಡೆದಿದ್ದೇವೆ. ಪ್ರತಿ ವರ್ಷ 53 ಸಾವಿರ ಕೋಟಿ ರೂ.ಗಳನ್ನು ವೆಚ್ಚ ಮಾಡುತ್ತಿದೆ. ಈ ಗ್ಯಾರಂಟಿಗಳಿಂದ 1 ಕೋಟಿ ಕುಟುಂಬಗಳು ಬಡತನ ರೇಖೆಯಿಂದ ಮೇಲೆ ಬಂದಿವೆ. ಮಹಿಳೆಯರ ಆರ್ಥಿಕ ಸಬಲೀಕರಣವಾಗಿದೆ. ಕರ್ನಾಟಕದ ತಲಾದಾಯ ದೇಶದಲ್ಲೇ ಅತ್ಯುತ್ತಮವಾಗಿರುವುದಕ್ಕೆ ಈ ಗ್ಯಾರಂಟಿಗಳು ಕಾರಣ ಎಂದರು.

ರಾಜಕೀಯ ಸ್ವಾರ್ಥಕ್ಕಾಗಿ ಸಮಾಜದ ಸ್ವಾಸ್ಥ್ಯ ಕದಡುವ ಶಕ್ತಿಗಳನ್ನು ತಮಿಳುನಾಡು ಜನತೆ ದೂರ ಇಡುತ್ತಾರೆ. ದೆಹಲಿಯಿಂದ ಪರೋಕ್ಷವಾಗಿ ಆಡಳಿತ ನಡೆಸುವ ವ್ಯವಸ್ಥೆ ಅವರಿಗೆ ಬೇಕಿಲ್ಲ. ಈ ಬಾರಿ ಮತ್ತೆ ಡಿಎಂ.ಕೆ, ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೃಷ್ಣಗಿರಿ ಕಾಂಗ್ರೆಸ್ ಅಭ್ಯರ್ಥಿ ಚಲ್ಲಕುಮಾರ್, ಹಿರಿಯ ನಾಯಕರಾಗಿದ್ದು, ಸಂಸತ್ ಸದಸ್ಯರಾಗಿ ಅದ್ಭುತ ಕಾರ್ಯ ಮಾಡಿದ್ದಾರೆ. ರೈಲ್ವೆ, ಹೆದ್ದಾರಿ, ಸೇತುವೆ ಮೊದಲಾದ ಮೂಲಸೌಕರ್ಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಪ್ರಾಮಾಣಿಕತೆ, ದಕ್ಷತೆಗೆ ಹೆಸರಾದ ಚಲ್ಲಕುಮಾರ್ ಗೆಲ್ಲಿಸಿ ಎಂದರು.
ಸುದ್ದಿಗೋಷ್ಠಿಯಲ್ಲಿ ಅಭ್ಯರ್ಥಿ ಚಲ್ಲಕುಮಾರ್, ರೇಣುಕಾಪ್ರಸನ್ನ ಮತ್ತಿತರರು ಭಾಗಿಯಾಗಿದ್ದರು.

Continue Reading

Latest

ಸಿಇಟಿ ಪರೀಕ್ಷೆ: ವಸ್ತ್ರ ಸಂಹಿತೆ ಕಡ್ಡಾಯ; ಅಭ್ಯರ್ಥಿಗಳೂ ಈ ಸೂಚನೆಗಳನ್ನು ಪಾಲಿಸಿದರೆ ಕ್ಷೇಮ

VISTARANEWS.COM


on

ಬೆಂಗಳೂರು: ಕಳೆದ ವರ್ಷ ಸಿಇಟಿ ಪರೀಕ್ಷೆ (CET) ನಡೆದಾಗ ಜನಿವಾರದ ಘಟನೆ ಕೋಲಾಹಲವನ್ನೇ ಸೃಷ್ಟಿಸಿತ್ತು. ಹೀಗಾಗಿ ಈ ಬಾರಿ ಮುನ್ನೆಚ್ಚರಿಕೆ ವಹಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿದೆ.

ರಾಜ್ಯದಲ್ಲಿ ಏಪ್ರಿಲ್​ 23 ಹಾಗೂ 24 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಈ ಬಾರಿ ಸುಮಾರು 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ವಸ್ತ್ರ ಸಂಹಿತೆ ಅಧಿಕಾರಿ ನೇಮಕ: ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಪ್ರಾಧಿಕಾರ ಎಲ್ಲ 750 ಪರೀಕ್ಷೆ ಕೇಂದ್ರಗಳಲ್ಲಿಯೂ ವಸ್ತ್ರ ಸಂಹಿತೆ ಅಧಿಕಾರಿಗಳನ್ನ ನೇಮಕ ಮಾಡಲು ನಿರ್ಧರಿಸಿದೆ. ಡ್ರೆಸ್ ಕೋಡ್ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಆಯಾ ಕಾಲೇಜಿನ ಹಿರಿಯ ಪ್ರಾಧ್ಯಾಪಕರಿಗೆ ಡ್ರೆಸ್ ಕೂಡ ವಿಚಾರವಾಗಿ ಈಗಾಗಲೇ ವಿಶೇಷ ತರಬೇತಿ ನೀಡಲಾಗಿದೆ ಎಂದು ಕೆಇಎ ತಿಳಿಸಿದೆ.

ವಸ್ತ್ರ ಸಂಹಿತೆ ಹೀಗಿರಲಿದೆ:
ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್, ಸರಳವಾದ ಪ್ಯಾಂಟ್ ಧರಿಸಬಹುದು. ಆದರೆ ಡಿಸೈನ್‌ ಬಟನ್, ಜಿಪ್ ಪಾಕೆಟ್ ಅಥವಾ ಹೆಚ್ಚಿನ ಕಸೂತಿ​ ಇರುವ ಬಟ್ಟೆಗಳನ್ನು ಧರಿಸುವಂತಿಲ್ಲ. ಶೂಗಳಿಗೆ ಬದಲಾಗಿ ಚಪ್ಪಲಿ ಧರಿಸಬೇಕು. ಯಾವುದೇ ಸರ, ಕಿವಿಯೋಲೆ, ಉಂಗುರ ಅಥವಾ ಕಡಗಗಳಂತಹ ಯಾವುದೇ ಲೋಹದ ಆಭರಣಗಳನ್ನು ಧರಿಸುವಂತಿಲ್ಲ.

ಮಹಿಳಾ ಅಭ್ಯರ್ಥಿಗಳು ಹೆಚ್ಚಿನ ಡಿಸೈನ್​, ಹೂ, ಬ್ರೂಚ್‌ ಗಳು ಅಥವಾ ಬಟನ್‌ ಗಳನ್ನು ಹೊಂದಿರುವ ಡ್ರೆಸ್‌ ಅನ್ನು ನಿಷೇಧಿಸಲಾಗಿದೆ. ಪೂರ್ಣ ತೋಳಿನ ಟಾಪ್‌, ಜೀನ್ಸ್ ಪ್ಯಾಂಟ್ ಧರಿಸುವಂತಿಲ್ಲ. ಹೀಲ್ಡ್​ ಶೂ, ಹೀಲ್ಡ್​ ಚಪ್ಪಲಿಗೂ ಅವಕಾಶ ಇಲ್ಲ. ಪ್ರತಿ ಕೇಂದ್ರದಲ್ಲೂ ಸಿಸಿ ಕ್ಯಾಮೆರಾ ಮತ್ತು ಸ್ಕ್ಯಾನಿಂಗ್ ವ್ಯವಸ್ಥೆ ಮಾಡಲಾಗಿದೆ.

ನಿಷೇಧಿತ ವಸ್ತುಗಳು:
ಮೊಬೈಲ್, ಪೆನ್ ಡ್ರೈವ್, ಬ್ಲೂಟೂತ್, ಇಯರ್ ಫೋನ್ ಹಾಗೂ ಯಾವುದೇ ರೀತಿಯ ವಾಚ್; ಪೆನ್ಸಿಲ್, ಎರೇಸರ್, ಜಿಯೋಮೆಟ್ರಿ ಬಾಕ್ಸ್, ಪೇಪರ್ ಅಥವಾ ಲಾಗ್ ಟೇಬಲ್; ಟೋಪಿ, ಮಾಸ್ಕ್, ಬಣ್ಣದ ಅಥವಾ ಲೋಹದ ನೀರಿನ ಬಾಟಲಿ ಹಾಗೂ ತಿಂಡಿ ತಿನಿಸುಗಳನ್ನು ತರುವಂತಿಲ್ಲ.
ಅಭ್ಯರ್ಥಿಗಳು ಈ ಸೂಚನೆಗಳನ್ನು ಪಾಲಿಸಿದರೆ ಸರಾಗವಾಗಿ ಯಾವುದೇ ಗೊಂದಲಕ್ಕೆ ಆಸ್ಪದ ಇಲ್ಲದೆ ಪರೀಕ್ಷೆ ಬರೆಯಬಹುದು. ಇಲ್ಲವಾದಲ್ಲಿ ಗೊಂದಲಕ್ಕೆ ಈಡಾಗಿ ವಿನಾಕಾರಣ ಪರೀಕ್ಷೆಯಿಂದ ತಪ್ಪಿಸಿಕೊಳ್ಳಬೇಕಾದೀತು.

Continue Reading
Advertisement
Latest34 ನಿಮಿಷಗಳು ago

ಇಡಿ ದಾಳಿ: ಕೇಂದ್ರ ಸರ್ಕಾರ ಕಾಂಗ್ರೆಸ್ ಅನ್ನು ಗುರಿಯಾಗಿಸಿದೆ: ಸಿಎಂ ಸಿದ್ದರಾಮಯ್ಯ ಆರೋಪ

Latest47 ನಿಮಿಷಗಳು ago

ಅಮೆರಿಕ ಜತೆ ಮಾತುಕತೆಗೆ ಇರಾನ್‌ ಒಪ್ಪಿಗೆ; ಇಸ್ಲಾಮಾಬಾದ್‌ನತ್ತ ಜಗತ್ತಿನ ಕಣ್ಣು; ಬಗೆಹರಿಯಲಿದೆಯೇ ಬಿಕ್ಕಟ್ಟು?

Latest1 ಗಂಟೆ ago

ಸಮಾಜದ ಪರಿವರ್ತನೆಗೆ ಬಸವಣ್ಣನ ವಿಚಾರಗಳು ಅತ್ಯಗತ್ಯ: ಸಿಎಂ ಸಿದ್ದರಾಮಯ್ಯ

Latest1 ಗಂಟೆ ago

ಕೃಷ್ಣಗಿರಿ ಜಿಲ್ಲೆಯಲ್ಲಿ ಕಾಂಗ್ರೆಸ್-ಡಿಎಂಕೆ ಅಭ್ಯರ್ಥಿಗಳ ಪರ ಸಚಿವ ಈಶ್ವರ ಖಂಡ್ರೆ ಪ್ರಚಾರ

Latest1 ಗಂಟೆ ago

ಸಿಇಟಿ ಪರೀಕ್ಷೆ: ವಸ್ತ್ರ ಸಂಹಿತೆ ಕಡ್ಡಾಯ; ಅಭ್ಯರ್ಥಿಗಳೂ ಈ ಸೂಚನೆಗಳನ್ನು ಪಾಲಿಸಿದರೆ ಕ್ಷೇಮ

Latest2 ಗಂಟೆಗಳು ago

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಬದಲು ಅಂಕ ನೀಡಲು ಹೈಕೋರ್ಟ್ ಆದೇಶ

Latest3 ಗಂಟೆಗಳು ago

ಬೆಂಗಳೂರಿಗರಿಗೆ ಬಿಗ್ ಅಲರ್ಟ್: ನಗರದಲ್ಲಿ ‘ಹೀಟ್ ವೇವ್’ ಭೀತಿ, ಮಧ್ಯಾಹ್ನ ಹೊರಬರುವ ಮುನ್ನ ಎಚ್ಚರ!

Latest4 ಗಂಟೆಗಳು ago

ಅಕ್ಷಯ ತೃತೀಯದಂದು ದಾಖಲೆ ಮಟ್ಟಕ್ಕೆ ಚಿನ್ನ ಖರೀದಿ! ಸೇಲ್‌ ಆದ ಬಂಗಾರ ಎಷ್ಟು ಕೆಜಿ ಗೊತ್ತಾ?

Latest22 ಗಂಟೆಗಳು ago

ಹೆಣ್ಣು ಮಗುವಿನ ತಂದೆಯಾದ ಖ್ಯಾತ ನಿರ್ದೇಶಕ ಅಟ್ಲಿ; ಅಭಿನಂದನೆಗಳ ಮಹಾಪೂರ

Latest23 ಗಂಟೆಗಳು ago

ಮಹಿಳಾ ಮೀಸಲು ಮಸೂದೆ ಕಾಂಗ್ರೆಸ್‌ ಪಕ್ಷದ ಕನಸು ಮತ್ತು ಕೂಸು: ಡಿ.ಕೆ.ಶಿವಕುಮಾರ್

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌