Job Alert: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 6128 ಹುದ್ದೆ; ಪರೀಕ್ಷೆ ಸ್ವರೂಪ ಹೇಗಿರುತ್ತದೆ? ಅರ್ಜಿ ಸಲ್ಲಿಸುವುದು ಹೇಗೆ? - Vistara News

Latest

Job Alert: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 6128 ಹುದ್ದೆ; ಪರೀಕ್ಷೆ ಸ್ವರೂಪ ಹೇಗಿರುತ್ತದೆ? ಅರ್ಜಿ ಸಲ್ಲಿಸುವುದು ಹೇಗೆ?

ಈ ಬಾರಿ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ 6128 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ನಮ್ಮ ರಾಜ್ಯದಲ್ಲಿ 457 ಹುದ್ದೆಗಳು ಖಾಲಿ ಇವೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನವಾಗಿರುತ್ತದೆ. ಎರಡು ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯಿದ್ದು, ಪೂರ್ವಭಾವಿ ಪರೀಕ್ಷೆ, ಹಾಗೂ ಮುಖ್ಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು ಅಕ್ಟೋಬರ್‌ನಲ್ಲಿ ಮುಖ್ಯ ಪರೀಕ್ಷೆ ನಡೆಯಲಿದೆ. ನಮ್ಮ ರಾಜ್ಯದವರಿಗೆ ಕನ್ನಡ ಮತ್ತು ಕೊಂಕಣಿ ಭಾಷೆಗಳಲ್ಲೂ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ, ಅಭ್ಯರ್ಥಿಗಳ ಆಯ್ಕೆ ಹಾಗೂ ನೇಮಕಾತಿ ಸ್ವರೂಪ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Job Alert
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
  • – ಆರ್‌ ಕೆ ಬಾಲಚಂದ್ರ
  • ಲೇಖಕರು, ಬ್ಯಾಂಕಿಂಗ್‌ ಮತ್ತು ವ್ಯಕ್ತಿತ್ವ ವಿಕಸನ , ಸಾಫ್ಟ್‌ ಸ್ಕಿಲ್‌ ತರಬೇತುದಾರರು, ವೃತ್ತಿ ಮಾರ್ಗದರ್ಶಕರು
    ಬ್ಯಾಂಕ್‌ಗಳಲ್ಲಿ ಗುಮಾಸ್ತ (ಕ್ಲರ್ಕ್‌) ಹುದ್ದೆಗೆ ಸೇರಬೇಕು ಎಂಬ ಕನಸು ಹೊತ್ತವರಿಗೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್ ) ಸಿಹಿ ಸುದ್ದಿಯೊಂದನ್ನು ನೀಡಿದೆ. ದೇಶದ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಕ್ಕಾಗಿ ‘ಸಾಮಾನ್ಯ ಪ್ರವೇಶ ಪರೀಕ್ಷೆ’(CRP ಗುಮಾಸ್ತರು–XIV)ನಡೆಸುತ್ತಿದ್ದು, ಸೋಮವಾರ ಅಧಿಸೂಚನೆ ಹೊರಡಿಸಿದೆ. ಈ ಬಾರಿ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ 6128 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ನಮ್ಮ ರಾಜ್ಯದಲ್ಲಿ 457 ಹುದ್ದೆಗಳು ಖಾಲಿ ಇವೆ. ಎಂದಿನಂತೆ, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನವಾಗಿರುತ್ತದೆ. ಎರಡು ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯಿದ್ದು ಪೂರ್ವಭಾವಿ ಪರೀಕ್ಷೆ, ಹಾಗೂ ಮುಖ್ಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು ಅಕ್ಟೋಬರ್‌ನಲ್ಲಿ ಮುಖ್ಯ ಪರೀಕ್ಷೆ ನಡೆಯಲಿದೆ. ನಮ್ಮ ರಾಜ್ಯದವರಿಗೆ ಕನ್ನಡ ಮತ್ತು ಕೊಂಕಣಿ ಭಾಷೆಗಳಲ್ಲೂ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ.  ರಾಜ್ಯದ 457 ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಗೆ 75, ಪರಿಶಿಷ್ಟ ಪಂಗಡಕ್ಕೆ 39, ಹಿಂದುಳಿದ ವರ್ಗದವರಿಗೆ 108, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ 44 ಹಾಗೂ ಸಾಮಾನ್ಯ ವರ್ಗದವರಿಗೆ 191 ಹುದ್ದೆಗಳನ್ನು ಮೀಸಲಿಡಲಾಗಿದೆ.

ರಾಜ್ಯದ ಯಾವ ಬ್ಯಾಂಕ್, ಎಷ್ಟು ಹುದ್ದೆ?

ರಾಜ್ಯದ ಯಾವ ಬ್ಯಾಂಕಿನಲ್ಲಿ ಎಷ್ಟು ಹುದ್ದೆಗಳು?
ಕ್ರಮ ಸಂಖ್ಯೆಬ್ಯಾಂಕ್‌ನ ಹೆಸರುಹುದ್ದೆಗಳು
1ಬ್ಯಾಂಕ್ ಆಫ್ ಇಂಡಿಯಾ    5
2ಕೆನರಾ ಬ್ಯಾಂಕ್364
3ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ  49
4ಇಂಡಿಯನ್ ಓವರ್ಸೀಸ್ ಬ್ಯಾಂಕ್  14
5ಪಂಜಾಬ್ ನ್ಯಾಷನಲ್ ಬ್ಯಾಂಕ್  15
6ಪಂಜಾಬ್ ಆ್ಯಂಡ್ ಸಿಂಥ್ ಬ್ಯಾಂಕ್  10
 ಒಟ್ಟು457

ಜುಲೈ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಜುಲೈ 21, 2024 ಕೊನೆ ದಿನ.

ಅರ್ಜಿ ಸಲ್ಲಿಸಲು ಹಾಗೂ ನೋಂದಣಿಗೆ ಬಳಸಬೇಕಾದ ಲಿಂಕ್: www.ibps.in ಅಥವಾ https://ibpsonline.ibps.in/crpcl14jun24/

ಶೈಕ್ಷಣಿಕ ಅರ್ಹತೆ: (21.07.2024 ಕ್ಕೆ ಅನ್ವಯಿಸುವಂತೆ)

ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಹೀಗಾಗಿ ಕಂಪ್ಯೂಟರ್ ಕಲಿಕೆಯ ಬಗ್ಗೆ ದೃಢೀಕರಣ ಪತ್ರವನ್ನೂ ಹೊಂದಿರಬೇಕು (ಕಂಪ್ಯೂಟರ್ ಗೆ ಸಂಬಂಧಿಸಿದ ವಿಷಯದಲ್ಲಿ ಸರ್ಟಿಫಿಕೇಟ್/ ಡಿಪ್ಲೊಮಾ ಅಥವಾ ಡಿಗ್ರಿ ಪಡೆದಿರುವುದು ಅಥವಾ ಶಾಲೆ ಅಥವಾ ಕಾಲೇಜಿನಲ್ಲಿ ಕಂಪ್ಯೂಟರ್ ಅಥವಾ ಐಟಿ (InformationTechnology) ಯನ್ನು ಒಂದು ವಿಷಯವಾಗಿ ಓದಿರಬೇಕು. ಅಲ್ಲದೆ, ರಾಜ್ಯದ ಅಧಿಕೃತ ಭಾಷೆಯಲ್ಲಿ ಮಾತನಾಡುವ, ಬರೆಯುವ ಸಾಮರ್ಥ್ಯ ಹೊಂದಿರಬೇಕು. ಪದವಿ ಪೂರ್ಣ ಗೊಳಿಸಿದವರು ಮಾತ್ರ ಅರ್ಜಿ ಸಲ್ಲಿಸಬಹುದು. ಪದವಿಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ಅರ್ಜಿಯಲ್ಲಿ ಭರ್ತಿ ಮಾಡಬೇಕಾಗಿರುತ್ತದೆ.

ಇದನ್ನೂ ಓದಿ: Job Alert: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ; 10, 12ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

ವಯೋಮಿತಿ: ಕನಿಷ್ಠ 20 ವರ್ಷಗಳು ಗರಿಷ್ಠ 28 ವರ್ಷಗಳು. (01.07.2024 ಕ್ಕೆ ಅನ್ವಯಿಸುವಂತೆ). ಅಂದರೆ ಅಭ್ಯರ್ಥಿಗಳು 1996 ರ ಜುಲೈ 2 ಮತ್ತು 2004 ರ ಜುಲೈ 1 ರ ನಡುವೆ ಜನಿಸಿರಬೇಕು.ಸರ್ಕಾರದ ನಿಯಮದಂತೆ ಎಸ್ ಸಿ/ ಎಸ್ ಟಿ ಅಭ್ಯ ರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: GST ಒಳಗೊಂಡಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹850. ಎಸ್ ಸಿ/ಎಸ್ ಟಿ/ಅಂಗವಿಕಲ ಅಭ್ಯರ್ಥಿಗಳು/ಮಾಜಿ ಯೋಧರಿಗೆ ₹175.ಬ್ಯಾಂಕ್ ಸೇವಾ ಶುಲ್ಕ ಮತ್ತು ಇಂಟಿಮೇಷನ್ ಫೀ ಪ್ರತ್ಯೇಕವಾಗಿ ಪಾವತಿಸಬೇಕಾಗುತ್ತದೆ.

ಶುಲ್ಕಪಾವತಿ: ನೋಂದಣಿ ನಂತರ ಅಭ್ಯ ರ್ಥಿಗಳು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್  ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಆನ್ ಲೈನ್ ಮೂಲಕ ಮಾತ್ರ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

ನೆನಪಿಡಿ: ಒಬಿಸಿ ವರ್ಗಕ್ಕೆ ಸೇರಿದ ಆದರೆ ಕೆನೆ ಪದರದ ಅಡಿಯಲ್ಲಿ ಬರುವ ಅಭ್ಯ ರ್ಥಿಗಳು ಒಬಿಸಿ ಮೀಸಲಾತಿಗೆ ಅರ್ಹರಾಗಿರುವುದಿಲ್ಲ. ಅವರು ಆನ್ ಲೈನ್ ಅರ್ಜಿ ನಮೂನೆಯಲ್ಲಿ ತಮ್ಮ ವರ್ಗ ವನ್ನು ಸಾಮಾನ್ಯ ಎಂದು ಸೂಚಿಸಬೇಕು. ಅಭ್ಯರ್ಥಿಯು ಕಾಲಕಾಲಕ್ಕೆ ಭಾರತ ಸರ್ಕಾರದ ಮಾರ್ಗ ಸೂಚಿಗಳ ಪ್ರಕಾರ ಕೆನೆರಹಿತ ಲೇಯರ್ (Non cremy layer) ಷರತ್ತಿನೊಂದಿಗೆ ಒಬಿಸಿ ಪ್ರಮಾಣಪತ್ರ ವನ್ನು ಹೊಂದಿರಬೇಕು.

ಪರೀಕ್ಷಾ ಪ್ರಕ್ರಿಯೆ: ಇದೇ ಆಗಸ್ಟ್ ನಲ್ಲಿ ಪೂರ್ವ ಭಾವಿ ಪರೀಕ್ಷೆ, ಅಕ್ಟೋಬರ್ ನಲ್ಲಿ ಮುಖ್ಯ ಪರೀಕ್ಷೆಗಳು ನಡೆಯಲಿದ್ದು ಎರಡೂ ಪರೀಕ್ಷೆಗಳು ಆನ್ ಲೈನ್ ನಲ್ಲಿ ನಡೆಯಲಿದೆ.

ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳು ಎಲ್ಲೆಲ್ಲಿ?: ರಾಜ್ಯದ 10 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು 5 ಜಿಲ್ಲಾ ಕೇಂದ್ರಗಳಲ್ಲಿ ಮುಖ್ಯ ಪರೀಕ್ಷೆಗಳು ಆನ್ ಲೈನ್ ನಲ್ಲಿ ನಡೆಯಲಿದೆ.

ಪೂರ್ವಭಾವಿ ಪರೀಕ್ಷೆ: ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ,ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ,ಉಡುಪಿ.

ಮುಖ್ಯ ಪರೀಕ್ಷೆ: ಬೆಂಗಳೂರು,ಧಾರವಾಡ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು

ಪೂರ್ವಭಾವಿ ಪರೀಕ್ಷೆಗೆ ತರಬೇತಿ

ಐಬಿಪಿಎಸ್‌ನ ಎಲ್ಲ ನೇಮಕಾತಿ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ.ಕ್ಲರ್ಕ್‌ ಹುದ್ದೆಗಳ ನೇಮಕಾತಿಗೆ 2024 ರ ಅಗಸ್ಟ್ 12 ರಿಂದ  17 ರವರೆಗೆ ತರಬೇತಿಗೆಂದು ದಿನಾಂಕ ನಿಗದಿ ಮಾಡಲಾಗಿದೆ. ಪರಿಶಿಷ್ಟರು, ಅಂಗವಿಕಲರು, ಹಿಂದುಳಿದವರರು ಹಾಗೂ ಅಲ್ಪಸಂಖ್ಯಾತ, ಮಾಜಿ ಸೈನಿಕರಿಗೆ ಈ ಸೌಲಭ್ಯ ಒದಗಿಸಲಾಗುತ್ತದೆ. ಒಂದು ವೇಳೆ ಅಭ್ಯರ್ಥಿಗಳು ಪರೀಕ್ಷಾ ಪೂರ್ವ ತರಬೇತಿ ಬಯಸಿದಲ್ಲಿ ಅಂಥವರು ಆನ್‌ಲೈನ್ ಅರ್ಜಿ ಸಲ್ಲಿಸುವಾಗಲೇ ತರಬೇತಿ ಪಡೆಯುವ ಬಗ್ಗೆ ಅರ್ಜಿಯಲ್ಲಿ ನಮೂದಿಸಬೇಕು.

ರಾಜ್ಯದಲ್ಲಿ 4 ಪೂರ್ವಭಾವಿ ಪರೀಕ್ಷಾ ತರಬೇತಿ ಕೇಂದ್ರಗಳು:

ರಾಜ್ಯದ ಬೆಂಗಳೂರು, ಮೈಸೂರು ಹುಬ್ಬಳ್ಳಿ ಹಾಗೂ ಮಂಗಳೂರಿನಲ್ಲಿ ಈ ತರಬೇತಿಯನ್ನು ನೀಡಲಾಗುತ್ತದೆ. ತರಬೇತಿ ಸ್ಥಳದ ಖರ್ಚು ವೆಚ್ಚ ಹಾಗೂ ಪ್ರಯಾಣದ ಖರ್ಚು ವೆಚ್ಚವನ್ನು ಅಭ್ಯರ್ಥಿಗಳ ಭರಿಸಬೇಕಾಗುತ್ತದೆ.

ಕ್ರೆಡಿಟ್ ಇತಿಹಾಸ

(i) ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅವರು ಆರೋಗ್ಯಕರ ಕ್ರೆಡಿಟ್ ಇತಿಹಾಸ (Credit History) ಹೊಂದಿರಬೇಕು. ಬ್ಯಾಂಕ್‌ಗೆ ಸೇರುವ ಸಮಯದಲ್ಲಿ ಕನಿಷ್ಠ ಸಿಬಿಲ್ (CIBIL)ಸ್ಕೋರ್ ಅಥವಾ ಅದಕ್ಕಿಂತ ಹೆಚ್ಚಿರುವುದನ್ನು ಖಚಿತ ಪಡಿಸಿಕೊಳ್ಳಬೇಕು. ಕನಿಷ್ಠ ಕ್ರೆಡಿಟ್ ಸ್ಕೋರ್ ಭಾಗವಹಿಸುವ ಬ್ಯಾಂಕ್ ಗಳ ನೀತಿಯ ಪ್ರಕಾರ ಇರುತ್ತದೆ. ಕಾಲಕಾಲಕ್ಕೆ ಅವುಗಳನ್ನ ತಿದ್ದುಪಡಿ ಮಾಡಲಾಗುತ್ತದೆ.

(ii) ಹುದ್ದೆಗೆ ಸೇರ್ಪಡೆಗೊಳ್ಳುವ ದಿನಾಂಕದ ಮೊದಲು CIBIL ಸ್ಥಿತಿ ನವೀಕರಿಸಬೇಕು ಅಥವಾ CIBIL ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ ನಿರಾಪೇಕ್ಷಣಾ ಪತ್ರ (NOC)ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ /ರದ್ದುಗೊಳಿಸಲಾಗುತ್ತದೆ.

ಗಮನಿಸಿ: ಯಾವುದೇ ಬ್ಯಾಂಕ್ ಖಾತೆಯನ್ನು ಹೊಂದಿರದ ಅಭ್ಯರ್ಥಿಗಳು CIBIL ಸ್ಥಿತಿಯನ್ನು ಒದಗಿಸುವ ಅಗತ್ಯ ವಿಲ್ಲ.

ಈ ದಿನಗಳು ನೆನಪಿರಲಿ

  • ಪೂರ್ವಭಾವಿ ಪರೀಕ್ಷೆಯ ಪ್ರವೇಶಪತ್ರ ಬಿಡುಗಡೆ : ಆಗಸ್ಟ್ 2024
  • ಪೂರ್ವಭಾವಿ ಆನ್‌ಲೈನ್ ಪರೀಕ್ಷೆ :ಆಗಸ್ಟ್ 2024
  • ಪೂರ್ವಭಾವಿ ಪರೀಕ್ಷೆಯ ಫಲಿತಾಂಶ :ಸೆಪ್ಟೆಂಬರ್, 2024
  • ಮುಖ್ಯ ಪರೀಕ್ಷೆಯ ಪ್ರವೇಶಪತ್ರ ಬಿಡುಗಡೆ: ಸೆಪ್ಟೆಂಬರ್/ಅಕ್ಟೋಬರ್, 2024
  • ಮುಖ್ಯ ಪರೀಕ್ಷೆಯ ಆಯೋಜನೆ: ಅಕ್ಟೋಬರ್, 2024
  • ಪ್ರಾತಿನಿಧಿಕ ಹುದ್ದೆ ಹಂಚಿಕೆ : ಎಪ್ರಿಲ್ 2025
  • ಅರ್ಜಿ ಸಲ್ಲಿಕೆ, ಹಾಗೂ ಶುಲ್ಕ ಪಾವತಿಗೆ ಕೊನೆಯ ದಿನಾಂಕ: 21.07.2024

ಇದನ್ನೂ ಓದಿ: Job Alert: ಇಂಡಿಯನ್‌ ಹೈವೇ ಮ್ಯಾನೇಜ್‌ಮೆಂಟ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಇಂದೇ ಅಪ್ಲೈ ಮಾಡಿ

ಅರ್ಜಿ ಸಲ್ಲಿಸುವಾಗ

ಅಭ್ಯರ್ಥಿ ಬ್ಯಾಂಕ್ ಆಯ್ಕೆ ಮಾಡಿಕೊಳ್ಳುವುದಕ್ಕೆ ಆನ್ ಲೈನ್ ಅರ್ಜಿ ನಮೂನೆಯಲ್ಲಿ ಬ್ಯಾಂಕ್ ಆದ್ಯತೆಯ ಆದೇಶವನ್ನು ಅಳವಡಿಸಲಾಗಿದೆ. ಅಭ್ಯರ್ಥಿಗಳು ಈ ಹಂತದಲ್ಲಿ ಅವರ ಬ್ಯಾಂಕ್ ಗಳ ಆದ್ಯತೆಯ ಕ್ರಮವನ್ನು ಅಗತ್ಯವಾಗಿ ಸೂಚಿಸಬೇಕು. ಯಾವ್ಯಾವ ಬ್ಯಾಂಕ್ ಗಳಲ್ಲಿ ಎಷ್ಟೆಷ್ಟು ಹುದ್ದೆಗಳಿವೆ ಹಾಗೂ ನಮ್ಮ ರಾಜ್ಯದಲ್ಲಿ/ಜಿಲ್ಲೆಗಳಲ್ಲಿ ಶಾಖೆಗಳಿವೆಯಾ ಎಂಬುದರ ಮೇಲೆ ನಿಮ್ಮ ಆದ್ಯತೆಯ ಆಯ್ಕೆ ಇರಲಿ. ಒಮ್ಮೆ ನೀವು ಆಯ್ಕೆಯಾದರೆ ನಂತರದ ದಿನಗಳಲ್ಲಿ ಬ್ಯಾಂಕ್/ಸ್ಥಳ ಬದಲಾವಣೆಗಾಗಿ ಸಲ್ಲಿಸುವ ವಿನಂತಿಯನ್ನು ಪರಿಗಣಿಸಲಾಗುವುದಿಲ್ಲ. ಆಯ್ಕೆ ಪ್ರಕ್ರಿಯೆಯ ಹಂತದಲ್ಲಿ ಅಥವಾ ಅಪಾಯಿಂಟ್ ಮೆಂಟ್ ನ ನಂತರ ನಿಮ್ಮ ಕೈಬರಹದ ಘೋಷಣೆ ಹಾಗೂ ನಿಮ್ಮ ಕೈಬರಹದಲ್ಲಿ ಭಿನ್ನವಾಗಿರುವುದು ತಜ್ಞರ ವಿಶ್ಲೇಷಣೆಯಲ್ಲಿ ಕಂಡುಬಂದರೆ, ಅಭ್ಯ ರ್ಥಿಯ ಉಮೇದುವಾರಿಕೆಯನ್ನ ರದ್ದುಗೊಳಿಸಲಾಗುವುದು. ಹೀಗಾಗಿ ಅರ್ಜಿ ಸಲ್ಲಿಸುವ ಹಂತದಲ್ಲಿಯೇ ಬಹಳ ಎಚ್ಚರಿಕೆಯಿಂದ ಅರ್ಜಿ ಸಲ್ಲಿಸುವುದು ಒಳಿತು.

ಪರೀಕ್ಷೆಗಳ ಸ್ವರೂಪ ಹೀಗಿದೆ:

ಪೂರ್ವ ಭಾವಿ ಪರೀಕ್ಷೆ:

ಕ್ರಮ ಸಂಖ್ಯೆಪರೀಕ್ಷೆಗಳ  ಹೆಸರು  ಪರೀಕ್ಷೆಯ ಮಾಧ್ಯಮ ಪ್ರಶ್ನೆಗಳುಗರಿಷ್ಠ ಅಂಕಗಳುಪ್ರತಿಪರೀಕ್ಷೆಗೆ ಪ್ರತ್ಯೇಕವಾಗಿನಿಗದಿಪಡಿಸಲಾದ ಸಮಯ
1ಆಂಗ್ಲಭಾಷೆಇಂಗ್ಲಿಷ್303020 ನಿಮಿಷಗಳು
2ಸಂಖ್ಯಾತ್ಮಕಸಾಮರ್ಥ್ಯ(Numerical Ability)  ಕನ್ನಡ, ಕೊಂಕಣಿ, ಇಂಗ್ಲಿಷ್ಮತ್ತುಹಿಂದಿಇವುಗಳಲ್ಲಿ ಯಾವುದಾದರೊಂದುಭಾಷೆಯಆಯ್ಕೆ  353520 ನಿಮಿಷಗಳು
3ತಾರ್ಕಿಕಸಾಮರ್ಥ್ಯ353520 ನಿಮಿಷಗಳು
 ಒಟ್ಟು 10010060 ನಿಮಿಷಗಳು

ಕನ್ನಡದಲ್ಲಿ ಪರೀಕ್ಷೆ

ಕರ್ನಾಟಕದ ಅಭ್ಯರ್ಥಿಗಳು ಹಿಂದಿ ಅಥವಾ ಇಂಗ್ಲಿಷ್ ಜೊತೆಗೆ ಕನ್ನಡ ಮತ್ತು ಕೊಂಕಣಿ ಭಾಷೆಯಲ್ಲೂ ಪರೀಕ್ಷೆ ಬರೆಯುವ ಅವಕಾಶವಿದೆ. ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವಾಗ ಭಾಷೆ ನಮೂದಿಸಬೇಕು.(ಪರೀಕ್ಷಾ ಸಂದರ್ಭದಲ್ಲಿ ಬದಲಾವಣೆಗೆ ಅವಕಾಶವಿಲ್ಲ ಎಂಬುದನ್ನು ಮರೆಯದಿರಿ)

ಹೇಗೆ ಭಿನ್ನವಾಗಿವೆ?

ಸಂಖ್ಯಾ ಸಾಮರ್ಥ್ಯ ಪರೀಕ್ಷೆಯು ಒಂದು ಮೂಲಭೂತ ಕೌಶಲ. ಇದರ ಮೂಲಕ ಸಂಖ್ಯೆಗಳ ವಿಷಯದಲ್ಲಿ ಅಭ್ಯರ್ಥಿಗಿರುವ ವೇಗ ಹಾಗೂ ನಿಖರತೆಯನ್ನು ಪರೀಕ್ಷಿಸಲಾಗುತ್ತದೆ. ಸಂಖ್ಯಾ ಸಾಮರ್ಥ್ಯ ಪರೀಕ್ಷೆಯಲ್ಲಿ, ಲೆಕ್ಕಾಚಾರದ ಸಾಮರ್ಥ್ಯ ಮತ್ತು ನಿಖರತೆಯನ್ನು ಸರಳ ಸಂಖ್ಯೆಯ ಪ್ರಶ್ನೆಗಳ ಮೂಲಕ ಪರೀಕ್ಷಿಸಲಾಗುತ್ತದೆ.

ಕ್ಲಿಷ್ಟತೆಯ ಮಟ್ಟ :

ಸಂಖ್ಯಾತ್ಮಕ ಸಾಮರ್ಥ್ಯ ಪರೀಕ್ಷೆಯಲ್ಲಿ ಸರಳೀಕರಣ, ಸಂಖ್ಯಾ ಸರಣಿ, ಅಂಕಗಣಿತದ ಪ್ರಶ್ನೆಗಳು, ಬೀಜಗಣಿತದ ಪ್ರಶ್ನೆಗಳಿರುತ್ತವೆ. ಈ ಪರೀಕ್ಷೆ ಮೂಲಕ ಅಭ್ಯರ್ಥಿಗೆ ಸಂಖ್ಯೆಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಆ ಪ್ರಶ್ನೆಗಳಲ್ಲಿ ತಾರ್ಕಿಕ ಅಂಶವಿರುವುದಿಲ್ಲ.

ಅಭ್ಯರ್ಥಿಗಳು ಐಬಿಪಿಎಸ್ ನಿರ್ಧರಿಸಿದಂತೆ ಮೂರು ಪರೀಕ್ಷೆಗಳಲ್ಲಿಯೂ ಕಟ್-ಆಫ್ ಅಂಕಗಳನ್ನು ಪಡೆಯುವದರ ಮೂಲಕ ಅರ್ಹತೆ ಪಡೆಯಬೇಕು. ಪ್ರತಿ ವರ್ಗದಲ್ಲಿ ಸಾಕಷ್ಟು ಸಂಖ್ಯೆಯ ಅಭ್ಯರ್ಥಿಗಳು ಐಬಿಪಿಎಸ್ ಪರೀಕ್ಷೆಯಲ್ಲಿ ಭಾಗವಹಿಸುವುದರಿಂದ ಕೇವಲ ಪಾಸಾದರೆ ಸಾಕಾಗುವುದಿಲ್ಲ. ಅವಶ್ಯಕತೆಗಳಿಗೆ ತಕ್ಕಂತೆ ಆನ್‌ಲೈನ್ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ ಅಭ್ಯರ್ಥಿಗಳನ್ನು ಮಾತ್ರ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.

ಮುಖ್ಯ ಪರೀಕ್ಷೆ:

ಕ್ರಮ ಸಂಖ್ಯೆಪರೀಕ್ಷೆಗಳ  ಹೆಸರು (ಅನುಕ್ರಮದಿಂದ ಅಲ್ಲ)ಪರೀಕ್ಷೆ ಮಧ್ಯಮ  ಪ್ರಶ್ನೆಗಳುಗರಿಷ್ಠ ಅಂಕಗಳುಪ್ರತಿಪರೀಕ್ಷೆಗೆ ಪ್ರತ್ಯೇಕವಾಗಿನಿಗದಿಪಡಿಸಲಾದ ಸಮಯ
1ಆಂಗ್ಲಭಾಷೆಆಂಗ್ಲ404035 ನಿಮಿಷಗಳು
2ಸಾಮಾನ್ಯ/ಹಣಕಾಸುಅರಿವು  ಕನ್ನಡ, ಕೊಂಕಣಿ, ಇಂಗ್ಲಿಷ್ಮತ್ತುಹಿಂದಿಇವುಗಳಲ್ಲಿ ಯಾವುದಾದರೊಂದುಭಾಷೆಯಆಯ್ಕೆ505035 ನಿಮಿಷಗಳು
3ತಾರ್ಕಿಕಸಾಮರ್ಥ್ಯ& ಕಂಪ್ಯೂಟರ್ಆಪ್ಟಿಟ್ಯೂಡ್506045 ನಿಮಿಷಗಳು
4ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್505045 ನಿಮಿಷಗಳು
 ಒಟ್ಟು 190200160 ನಿಮಿಷಗಳು

ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ, ಪ್ರಶ್ನೆ ಅರ್ಥಮಾಡಿಕೊಳ್ಳುವುದರ ಜೊತೆಗೆ ಅದನ್ನ ಬಿಡಿಸಲು ಜ್ಞಾನದ ಮೂಲವನ್ನು (Basic concept) ಅನ್ವಯಿಸುವುದು ಮುಖ್ಯ ಉದ್ದೇಶವಾಗಿದೆ. ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್, ಬೀಜಗಣಿತ ಮತ್ತು ಅಭಿವ್ಯಕ್ತಿಗಳನ್ನು ಒಳಗೊಂಡಿರುವ ಪ್ರಶ್ನೆಗಳನ್ನು ಹೊಂದಿದೆ. ಇದರಲ್ಲಿ ಪ್ರಶ್ನೆಗಳನ್ನು ಬಿಡಿಸಲು ಅಭ್ಯರ್ಥಿಗಳು ತರ್ಕ ಮತ್ತು ಜ್ಞಾನವನ್ನು ಅನ್ವಯಿಸುವ ಅಗತ್ಯವಿದೆ.

ಕ್ಲಿಷ್ಟತೆಯ ಮಟ್ಟ

ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ವಿಷಯದಲ್ಲಿ ತಾರ್ಕಿಕ ಅರ್ಹತೆ ಮತ್ತು ಸಂಖ್ಯೆಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಇದು ಎರಡೂ ವಿಷಯಗಳ ಸಂಯೋಜನೆ. ಇದರಲ್ಲಿ ಪ್ರಶ್ನೆಗಳು ತುಂಬಾ ಕಠಿಣವಾಗಿರುವುದಿಲ್ಲ, ಆದರೆ ಇವುಗಳನ್ನು ಬಿಡಿಸಲು ಹೆಚ್ಚು ಅಭ್ಯಾಸ ಮಾಡಿರಬೇಕು. ಆದ್ದರಿಂದ ನೀವು ಪ್ರಶ್ನೆಗಳನ್ನು ಅರ್ಥ ಮಾಡಿಕೊಳ್ಳುವುದರ ಮೂಲಕ ಸಮಯವನ್ನು ಹೇಗೆ ನಿರ್ವಹಿಸಬಹುದು ಎಂಬುದನ್ನು ಅರಿಯುವಿರಿ. ಆದರೆ ಚಕ್ರ ಬಡ್ಡಿ(compound interest) ಕುರಿತ ಪ್ರಶ್ನೆಗಳು ಬಿಡಿಸಲು ಸ್ವಲ್ಪ ಸಮಯ ತೆಗೆದುಕೊಳ್ಳುವುದರಿಂದ ಅವುಗಳನ್ನು ವಿಭಾಗದ ಕೊನೆಯಲ್ಲಿ ಬಿಡಿಸಬೇಕು.

ಋಣಾತ್ಮಕ ಮೌಲ್ಯಮಾಪನ ಇದೆ

ಪೂರ್ವ ಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ ಎರಡೂ ವಸ್ತುನಿಷ್ಠ ಮಾದರಿಯ ಪರೀಕ್ಷೆಗಳಾಗಿದ್ದು ಋಣಾತ್ಮಕ ಮೌಲ್ಯಮಾಪನ ಇದೆ. ಒಂದು ತಪ್ಪು ಉತ್ತರಕ್ಕೆ, ಅದಕ್ಕೆ ನಿಗದಿಪಡಿಸಿದ ಅಂಕಗಳಲ್ಲಿ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಪ್ರಶ್ನೆ ಖಾಲಿ ಬಿಟ್ಟರೆ, ಯಾವುದೇ ಅಂಕ ಕಳೆಯುವುದಿಲ್ಲ.

ಪ್ರತಿ ಅಭ್ಯರ್ಥಿಯು ಆನ್‌ಲೈನ್ ಮುಖ್ಯ ಪರೀಕ್ಷೆಯ ಪ್ರತಿ ಪರೀಕ್ಷೆಯಲ್ಲಿ ಕನಿಷ್ಠ ಸ್ಕೋರ್ ಪಡೆಯಬೇಕಾಗುತ್ತದೆ. ಹಾಗೂ ಒಟ್ಟಾರೆ ಕನಿಷ್ಟ ಅಂಕ  ಕೂಡ ಪಡೆಯಬೇಕಾದ ಅನಿವಾರ್ಯತೆ ಇದೆ. ಪ್ರತಿ ರಾಜ್ಯದಲ್ಲಿರುವ ಖಾಲಿ ಹುದ್ದೆಗಳನ್ನು ಆಧರಿಸಿ, ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ತಯಾರಿಸಲಾಗುತ್ತದೆ. ಅದರ ವಿವರಗಳನ್ನು ಅಧಿಕೃತ ಐಬಿಪಿಎಸ್ ವೆಬ್‌ಸೈಟ್‌ನಲ್ಲಿ ನಂತರ ಲಭ್ಯವಾಗುವಂತೆ ಮಾಡಲಾಗುತ್ತದೆ.

ಪೂರ್ವಭಾವಿ ಪರೀಕ್ಷೆ ಅರ್ಹತಾ ಸ್ವರೂಪದ್ದಾಗಿದ್ದು, ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನಷ್ಟೇ ಮೆರಿಟ್ ಪಟ್ಟಿಗೆ ಪರಿಗಣಿಸಲಾಗುತ್ತದೆ.ಮುಖ್ಯ ಪರೀಕ್ಷೆಯ 200 ಅಂಕಗಳನ್ನು ನೂರಕ್ಕೆ ಇಳಿಸಿ ಮೆರಿಟ್ ಪಟ್ಟಿ ರಚಿಸಲಾಗುತ್ತದೆ. ಈ ಕಾರಣಕ್ಕಾಗಿ ಹೆಚ್ಚಿನ ಅಂಕಗಳಿಸುವತ್ತ ಅಭ್ಯರ್ಥಿಗಳು ಗಮನ ನೀಡಬೇಕಾಗುತ್ತದೆ.ಹುದ್ದೆಗಳಿಗೆ ಆಯ್ಕೆ ಮಾಡುವಾಗ ಮುಖ್ಯ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಪಡೆದಿರಬೇಕು.

ಇದನ್ನೂ ಓದಿ: Job Alert: ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 2,700 ಅಪ್ರೆಂಟಿಸ್ ಶಿಪ್ ಹುದ್ದೆ; ಆಯ್ಕೆಯಾಗಲು ಏನು ಮಾಡಬೇಕು? ವಿಸ್ತೃತ ಮಾಹಿತಿ

ಇನ್ನೊಂದಿಷ್ಟು ಮಾಹಿತಿ…

ಲಿಖಿತ ದೃಢೀಕರಣ:

ಅರ್ಜಿ ಸಲ್ಲಿಕೆಯ ವೇಳೆ ಕೈಬರಹದ ಘೋಷಣೆಯ ಪಠ್ಯ ಈ ರೀತಿಯಲ್ಲಿ ಬರೆದು ಅಪ್‌ಲೋಡ್‌ ಮಾಡಬೇಕು:

(ಅಭ್ಯ ರ್ಥಿಯ ಹೆಸರು),. …….. ಆದ ನಾನು ಈ ಮೂಲಕ ಅರ್ಜಿಯಲ್ಲಿ ಸಲ್ಲಿಸಿದ ಎಲ್ಲಾ ಮಾಹಿತಿಯು ಸರಿಯಾಗಿದೆ ಮತ್ತು ನಿಜ ಮಾನ್ಯವಾಗಿದೆ ಎಂದು ಘೋಷಿಸುತ್ತೇನೆ. ಅಗತ್ಯವಿದ್ದಾಗ ನಾನು ಪೂರಕ ದಾಖಲೆಗಳನ್ನು ಪ್ರಸ್ತುತಪಡಿಸುತ್ತೇನೆ. ಲಿಖಿತ ಘೋಷಣೆಯು ಇಂಗ್ಲಿಷ್ ನಲ್ಲಿ ಮಾತ್ರ ಇರಬೇಕು. ಕ್ಯಾಪಿಟಲ್ ಲೆಟರ್ಸ್‌ನಲ್ಲಿ ಇರಬಾರದು. ಕ್ಯಾಪಿಟಲ್ ಲೆಟರ್ ಗಳಲ್ಲಿ ಹಾಕಿದ ಸಹಿಯನ್ನು ಸ್ವೀಕರಿಸಲಾಗುವುದಿಲ್ಲ. ಎಡ ಹೆಬ್ಬೆರಳಿನ ಗುರುತು ಸರಿಯಾಗಿ ಸ್ಕ್ಯಾನ್ ಮಾಡಬೇಕು ಮತ್ತು ಮಸುಕಾಗಿರಬಾರದು. ಆಯ್ಕೆ ಪ್ರಕ್ರಿಯೆಯ ಹಂತದಲ್ಲಿ ಅಥವಾ ಅಪಾಯಿಂಟ್ ಮೆಂಟ್ ನ ನಂತರ ನಿಮ್ಮ ಕೈಬರಹದ ಘೋಷಣೆ ಹಾಗೂ ನಿಮ್ಮ ಕೈಬರಹದಲ್ಲಿ ಭಿನ್ನವಾಗಿರುವುದು ತಜ್ಞರ ವಿಶ್ಲೇಷಣೆಯಲ್ಲಿ ಕಂಡುಬಂದರೆ, ಅಭ್ಯರ್ಥಿಯ ಉಮೇದುವಾರಿಕೆಯನ್ನು ರದ್ದುಗೊಳಿಸಲಾಗುವುದು. ಹೀಗಾಗಿ ಅರ್ಜಿ ಸಲ್ಲಿಸುವ ಹಂತದಲ್ಲಿಯೇ ಬಹಳ ಎಚ್ಚರಿಕೆಯಿಂದ ಅರ್ಜಿ ಸಲ್ಲಿಸುವುದು ಒಳಿತು.

ಸಂದರ್ಶನವಿಲ್ಲ:

ಪೂರ್ವಭಾವಿ ಪರೀಕ್ಷೆ ಯಲ್ಲಿ ಅರ್ಹತೆ ಪಡೆಯುವ ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳು ಆಧಾರದ ಮೇಲೆ ಆಯ್ಕೆಯಾದವರಿಗೆ ತಾತ್ಕಾಲಿಕವಾಗಿ ನೇಮಕಾತಿ ಪತ್ರ ವಿತರಿಸಲಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಇನ್ನು ಮುಂದೆ ಒಳಮೀಸಲಾತಿ ಅನ್ವಯ ಹುದ್ದೆಗಳ ಭರ್ತಿ: ಸಿಎಂ ಸಿದ್ದರಾಮಯ್ಯ ಘೋಷಣೆ

VISTARANEWS.COM


on

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ವಿವಿಧ ಗುಂಪುಗಳಿಗೆ ಒಳ ಮೀಸಲಾತಿ ಜಾರಿ ಮಾಡುವ ಮಹತ್ವದ ನಿರ್ಧಾರವನ್ನು ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಶೇ.15 ರಷ್ಟು ಮೀಸಲಾತಿಯಲ್ಲಿ ದಲಿತ ಎಡಗೈ ಸಮುದಾಯಕ್ಕೆ ಶೇ. 5.25, ದಲಿತ ಬಲಗೈ ಸಮುದಾಯಕ್ಕೆ ಶೇ. 5.25, ಇತರೆ ಸಮುದಾಯಗಳಿಗೆ (ಅಲೆಮಾರಿ, ಅರೆ ಅಲೆಮಾರಿ, ಸ್ಪೃಶ್ಯ ಜಾತಿಗಳು) ಶೇ.4.5 ಮೀಸಲಾತಿ ಹಂಚಿಕೆ ಮಾಡಲಾಗಿದೆ. ಇಂದು ನಡೆದ ಸಚಿವ ಸಂಪುಟದಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ.
ಸಂಪುಟ ಸಭೆಯ ನಂತರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸುದ್ದಿಗೋಷ್ಠಿಯಲ್ಲಿ ಸಚಿವ ಸಂಪುಟದ ನಿರ್ಣಯವನ್ನು ವಿವರಿಸಿದರು. ಅಂತಿಮವಾಗಿ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಪ್ರವರ್ಗ ಎ-5.25, ಬಿ-5.25, ಸಿ-4.5 ಎಂದು ನಿರ್ಧಾರ ಮಾಡಿದ್ದೇವೆ. ವಿಶೇಷ ಸಂಪುಟ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಕೊಳ್ಳಲಾಗಿದೆ. ಯಾವುದೇ ಅಪಸ್ವರ ಇಲ್ಲದೆಯೇ ಸಂಪುಟದಲ್ಲಿ ಒಪ್ಪಿಕೊಳ್ಳಲಾಗಿದೆ. ನ್ಯಾಯಾಲಯದ ಮುಂದಿನ ಆದೇಶದವರೆಗೆ ಇದೇ ಅನುಪಾತ ಅನ್ವಯ ಎಂದು ಸ್ಪಷ್ಟಪಡಿಸಿದರು.
ನೇಮಕಾತಿ ವೇಳೆ ಪ್ರವರ್ಗ ಎ-5.25, ಬಿ-5.25, ಸಿ-4.5 ಮೀಸಲಾತಿ ಪಾಲಿಸಲಾಗುತ್ತದೆ. ನೇಮಕಾತಿಗಾಗಿ ಮತ್ತೊಮ್ಮೆ ಅಧಿಸೂಚನೆ ಪ್ರಕಟ ಮಾಡುತ್ತೇವೆ. ಬಜೆಟ್ ನಲ್ಲಿ 56,432 ಹುದ್ದೆಗಳ ಭರ್ತಿ ಮಾಡುವುದಾಗಿ ಘೋಷಿಸಿದ್ದೇವೆ. ಹುದ್ದೆಗಳ ಭರ್ತಿ ವೇಳೆ ಇದೇ ಮೀಸಲಾತಿ ಅನುಪಾತ ಅನ್ವಯ. ಮಾಡುತ್ತೇವೆ ಎಂದರು.
ಒಳಮೀಸಲಾತಿ ವಿಚಾರವಾಗಿ ಸುದೀರ್ಘವಾಗಿ ಹೋರಾಟ ನಡೆದಿದೆ. ನಂತರ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಚಿತ್ರದುರ್ಗದಲ್ಲಿ ಸಮಾವೇಶ ನಡೆಸಲಾಗಿತ್ತು. ಎಐಸಿಸಿ ಅಧ್ಯಕ್ಷ ಖರ್ಗೆಯವರು ಸಮಾವೇಶದಲ್ಲಿ ಭಾಗಿಯಾಗಿದ್ದರು. ಸಮಾವೇಶದಲ್ಲಿ ಪರಿಶಿಷ್ಟ ಜಾತಿಯಲ್ಲಿ ಬರುವ ಎಲ್ಲ ಸಮುದಾಯಗಳು ಭಾಗಿಯಾಗಿದ್ದವು. ಒಳ ಮೀಸಲಾತಿ ಜಾರಿಗೆ ಸಮಾವೇಶದಲ್ಲಿ ಎಲ್ಲರೂ ಒಪ್ಪಿಕೊಂಡಿದ್ದೆವು ಎಂದು ಹೇಳಿದರು.
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಣಿಕೆಯಲ್ಲೂ ಭರವಸೆ ನೀಡಲಾಗಿತ್ತು. ಒಳ ಮೀಸಲಾತಿ ನೀಡಬಹುದು ಎಂದು ಸುಪ್ರೀಂಕೋರ್ಟ್ ನ 7 ನ್ಯಾಯಮೂರ್ತಿಗಳ ಪೀಠ ಆದೇಶ ನೀಡಿತ್ತು. ಆ ತೀರ್ಪು ಬಂದ ನಂತರ ಸರ್ಕಾರ ನಿವೃತ್ತ ನ್ಯಾ. ನಾಗಮೋಹನ ದಾಸ್ ನೇತೃತ್ವದ ಸಮಿತಿ ರಚಿಸಿತ್ತು. ಈ ವರದಿಯನ್ನು ಸಂಪುಟದಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು. ಎ, ಬಿ, ಸಿ, ಡಿ ಎಂದು ವರ್ಗೀಕರಿಸಿ ಒಳಮೀಸಲಾತಿ ನಿಗದಿ ಮಾಡಿದ್ದೆವು. ಒಳಮೀಸಲಾತಿ ಪ್ರಮಾಣ 6,6,5 ಎಂದು ವರ್ಗೀಕರಣ ಮಾಡಿದ್ದೆವು. ನಂತರ ರೋಸ್ಟರ್ ಬಿಂದುವಿನಲ್ಲಿ ಗೊಂದಲ ಉಂಟಾಯಿತು ಎಂದು ವಿವರಿಸಿದರು.
ಇಂದಿರಾ ಸಹಾನಿ ಕೇಸ್ ನಲ್ಲಿ ಮೀಸಲಾತಿ ಪ್ರಮಾಣ 50% ಆದೇಶವಿತ್ತು. ಎಸ್‌ ಸಿ ಮೀಸಲಾತಿ ಪ್ರಮಾಣ 17% ಅನ್ವಯ ಪ್ರವರ್ಗ ಎ-6, ಬಿ-6, ಸಿ-5 ಎಂದು ವರ್ಗೀಕರಣ ಮಾಡಿದ್ದೆವು. ಆದರೆ ಕೋರ್ಟ್ ಮೀಸಲಾತಿ ಪ್ರಮಾಣ 50% ಮೀರುವಂತಿಲ್ಲ ಎಂದು ಹೇಳಿತ್ತು ಎಂದು ವಿವರಿಸಿದರು.
ಕಾನೂನು ಸಚಿವ ಎಚ್ ಕೆ ಪಾಟೀಲ್ ಮಾತನಾಡಿ, ಒಳಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹಲವಾರು ವಾರಗಳಿಂದ ಚರ್ಚೆ ನಡೆದಿತ್ತು. ರಾಷ್ಟ್ರಕ್ಕೆ ಮಾದರಿ ಆಗಬಲ್ಲ ಮಹತ್ವವಾದ ಜನರ ಬದುಕಿಗೆ ವಿಶೇಷ ತಿರುವನ್ನು ನೀಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ ರೋಸ್ಟರ್ ವಿಚಾರದಲ್ಲಿ ಗೊಂದಲ ಸೃಷ್ಡಿ ಆಗಿತ್ತು. ಸೂಕ್ತವಾದ ಪರಿಪೂರ್ಣ ಪರಿಹಾರ ಕಂಡು ಮಾರ್ಗದರ್ಶನ ಮಾಡಿ ಪರಿಹಾರ ಕಂಡುಕೊಳ್ಳಲು ಮುಖ್ಯಮಂತ್ರಿಗಳು ಯಶಸ್ವಿಯಾಗಿದ್ದಾರೆ ಎಂದರು.
ಪರಿಶಿಷ್ಟ ಜಾತಿಯಲ್ಲಿ 101 ಜಾತಿಗಳಿವೆ. ಎಡ ಸಮುದಾಯದಲ್ಲಿ 18 ಪ್ರಮುಖ ಜಾತಿಗಳಿವೆ. ಬಲಗೈ ಸಮುದಾಯದಲ್ಲಿ 20 ಜಾತಿಗಳಿವೆ. ಸ್ಪೃಶ್ಯ ಸಮುದಾಯದಲ್ಲಿ 63 ಜಾತಿಗಳಿವೆ. ಶೇ.17ರ ಬದಲಿಗೆ ಶೇ.15 ರಷ್ಟು ಮೀಸಲಾತಿ ಹಂಚಿಕೆ ಮಾಡಲಾಗಿದೆ. ಸುಪ್ರೀಂಕೋರ್ಟ್‌ ತೀರ್ಪಿನ ಅನ್ವಯ ಮೀಸಲಾತಿ ಶೇ.50 ಮೀರುವಂತಿಲ್ಲ. ಹಾಗಾಗಿ ಸರ್ಕಾರ ಈ ಮಿತಿಯೊಳಗೆ ಮೀಸಲಾತಿ ಹಂಚಿಕೆ ಮಾಡಿದೆ.

Continue Reading

Latest

29 ವರ್ಷಗಳ ‘ನೋ ಕಿಸ್ ಪಾಲಿಸಿ’ ಮುರಿದ ಕಾಜೋಲ್: ಆ ಒಂದು ದೃಶ್ಯಕ್ಕಾಗಿ ಕಟ್ಟುನಿಟ್ಟಿನ ನಿಯಮ ಬದಿಗಿಟ್ಟಿದ್ದೇಕೆ?

VISTARANEWS.COM


on

ಬಾಲಿವುಡ್‌ನ ಹಿರಿಯ ನಟಿ ಕಾಜೋಲ್ ತಮ್ಮ ಮೂರು ದಶಕಗಳ ಸುದೀರ್ಘ ವೃತ್ತಿಜೀವನದಲ್ಲಿ ಎಂದೂ ಮಾಡದ ಕೆಲಸವೊಂದನ್ನು ‘ದಿ ಟ್ರಯಲ್’ ವೆಬ್ ಸರಣಿಯಲ್ಲಿ ಮಾಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದರು. ಸುಮಾರು 29 ವರ್ಷಗಳಿಂದ ತೆರೆಮೇಲೆ ಕಿಸ್ಸಿಂಗ್ ದೃಶ್ಯಗಳಲ್ಲಿ ನಟಿಸುವುದಿಲ್ಲ ಎಂಬ ಕಟ್ಟುನಿಟ್ಟಿನ ನಿಯಮವನ್ನು ಹೊಂದಿದ್ದ ಕಾಜೋಲ್, ಮೊದಲ ಬಾರಿಗೆ ಈ ಪಾಲಿಸಿಯನ್ನು ಮುರಿದಿದ್ದರು. ಸಹನಟರಾದ ಜಿಶು ಸೇನ್‌ಗುಪ್ತಾ ಮತ್ತು ಅಲಿ ಖಾನ್ ಜೊತೆಗಿನ ಅವರ ಲಿಪ್‌ಲಾಕ್ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದವು. ಈಗ ಮೊದಲ ಬಾರಿಗೆ ಕಾಜೋಲ್ ಈ ಬೋಲ್ಡ್ ನಿರ್ಧಾರದ ಹಿಂದಿನ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ.

ಖ್ಯಾತ ಯೂಟ್ಯೂಬರ್ ಲಿಲ್ಲಿ ಸಿಂಗ್ ಅವರ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಕಾಜೋಲ್, ಈ ದೃಶ್ಯವು ಕೇವಲ ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ಮಾಡಿದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಆ ದೃಶ್ಯವು ಕಥೆಯ ಅವಿಭಾಜ್ಯ ಭಾಗವಾಗಿತ್ತು. ನಾನು ನಿರ್ವಹಿಸುತ್ತಿದ್ದ ಪಾತ್ರದ ಆಂತರಿಕ ಗೊಂದಲಗಳು, ಆಕೆಯ ಮನೋಸ್ಥಿತಿ ಮತ್ತು ಜೀವನದ ಸಂಘರ್ಷಗಳನ್ನು ತೋರಿಸಲು ಆ ದೃಶ್ಯ ಅನಿವಾರ್ಯವಾಗಿತ್ತು. ಒಂದು ವೇಳೆ ಅದನ್ನು ತೆಗೆದುಹಾಕಿದ್ದರೆ ಪಾತ್ರದ ಆಳವೇ ಇಲ್ಲವಾಗುತ್ತಿತ್ತು. ಕಥೆಯ ಬೇಡಿಕೆಗೆ ಬದ್ಧಳಾಗಿ ನಾನು ನನ್ನ ನಿಯಮವನ್ನು ಬದಿಗಿರಿಸಬೇಕಾಯಿತು” ಎಂದು ಅವರು ವಿವರಿಸಿದ್ದಾರೆ.

ಆದರೆ, ಈ ದೃಶ್ಯದಲ್ಲಿ ನಟಿಸುವುದು ತಮಗೆ ಅಂದುಕೊಂಡಷ್ಟು ಸುಲಭವಾಗಿರಲಿಲ್ಲ ಎಂದು ಕಾಜೋಲ್ ಒಪ್ಪಿಕೊಂಡಿದ್ದಾರೆ. “ಆ ಸಮಯದಲ್ಲಿ ನನಗೆ ತುಂಬಾ ಅನಾನುಕೂಲ (Uncomfortable) ಅನಿಸುತ್ತಿತ್ತು. ಸೆಟ್‌ನಲ್ಲಿ ನಿಲ್ಲುವವರೆಗೂ ನನಗೆ ಆ ಕಲ್ಪನೆಯೇ ಸರಿ ಅನ್ನಿಸಿರಲಿಲ್ಲ. ಆದರೆ ಒಬ್ಬ ವೃತ್ತಿಪರ ನಟಿಯಾಗಿ ಪಾತ್ರಕ್ಕೆ ನ್ಯಾಯ ಒದಗಿಸುವುದು ನನ್ನ ಜವಾಬ್ದಾರಿಯಾಗಿತ್ತು” ಎಂದು ಅವರು ಹೇಳಿದ್ದಾರೆ. 29 ವರ್ಷಗಳ ಸಂಪ್ರದಾಯವನ್ನು ಮುರಿದು ಕಾಜೋಲ್ ತೋರಿದ ಈ ವೃತ್ತಿಪರತೆ ಈಗ ಸಿನಿಮಾ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Continue Reading

Latest

ಒಳ ಮೀಸಲಾತಿ ಹಂಚಿಕೆ: ಎಡಗೈ, ಬಲಗೈ ಜಾತಿಗಳಿಗೆ ತಲಾ ಶೇ. 5.25 ಸ್ಪೃಶ್ಯ ಜಾತಿಗೆ ಶೇ.4.5 ಹಂಚಿಕೆ; ಸಚಿವ ಸಂಪುಟ ಮಹತ್ವದ ನಿರ್ಧಾರ

VISTARANEWS.COM


on

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ವಿವಿಧ ಗುಂಪುಗಳಿಗೆ ಒಳ ಮೀಸಲಾತಿ ಜಾರಿ ಮಾಡುವ ಮಹತ್ವದ ನಿರ್ಧಾರವನ್ನು ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಶೇ.15 ರಷ್ಟು ಮೀಸಲಾತಿಯಲ್ಲಿ ದಲಿತ ಎಡಗೈ ಸಮುದಾಯಕ್ಕೆ ಶೇ. 5.25, ದಲಿತ ಬಲಗೈ ಸಮುದಾಯಕ್ಕೆ ಶೇ. 5.25, ಇತರೆ ಸಮುದಾಯಗಳಿಗೆ (ಅಲೆಮಾರಿ, ಅರೆ ಅಲೆಮಾರಿ, ಸ್ಪೃಶ್ಯ ಜಾತಿಗಳು) ಶೇ.4.5 ಮೀಸಲಾತಿ ಹಂಚಿಕೆ ಮಾಡಲಾಗಿದೆ. ಇಂದು ನಡೆದ ಸಚಿವ ಸಂಪುಟದಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ.
ಸಂಪುಟ ಸಭೆಯ ನಂತರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸುದ್ದಿಗೋಷ್ಠಿಯಲ್ಲಿ ಸಚಿವ ಸಂಪುಟದ ನಿರ್ಣಯವನ್ನು ವಿವರಿಸಿದರು.
ಪರಿಶಿಷ್ಟ ಜಾತಿಯಲ್ಲಿ 101 ಜಾತಿಗಳಿವೆ. ಎಡ ಸಮುದಾಯದಲ್ಲಿ 18 ಪ್ರಮುಖ ಜಾತಿಗಳಿವೆ. ಬಲಗೈ ಸಮುದಾಯದಲ್ಲಿ 20 ಜಾತಿಗಳಿವೆ. ಸ್ಪೃಶ್ಯ ಸಮುದಾಯದಲ್ಲಿ 63 ಜಾತಿಗಳಿವೆ. ಶೇ.17ರ ಬದಲಿಗೆ ಶೇ.15 ರಷ್ಟು ಮೀಸಲಾತಿ ಹಂಚಿಕೆ ಮಾಡಲಾಗಿದೆ. ಸುಪ್ರೀಂಕೋರ್ಟ್‌ ತೀರ್ಪಿನ ಅನ್ವಯ ಮೀಸಲಾತಿ ಶೇ.50 ಮೀರುವಂತಿಲ್ಲ. ಹಾಗಾಗಿ ಸರ್ಕಾರ ಈ ಮಿತಿಯೊಳಗೆ ಮೀಸಲಾತಿ ಹಂಚಿಕೆ ಮಾಡಿದೆ.
ಸರ್ಕಾರದ ನಿರ್ಧಾರ ಪ್ರಕಟವಾಗುತಿದ್ದಂತೆ ಮಾಜಿ ಸಚಿವ ಎಚ್.‌ ಆಂಜನೇಯ ಸಿಹಿ ಹಂಚಿ ಸಂಭ್ರಮಿಸಿದರು. ಈ ಮೂಲಕ ಒಳ ಮೀಸಲಾತಿಗಾಗಿ ನಡೆದ ಮೂರು ದಶಕಗಳ ಹೋರಾಟಕ್ಕೆ ಜಯ ಲಭಿಸಿದೆ.
ಸಿದ್ದರಾಮಯ್ಯ ಮಾತನಾಡಿ ಒಳಮೀಸಲಾತಿ ವಿಚಾರವಾಗಿ ಸುದೀರ್ಘವಾಗಿ ಹೋರಾಟ ನಡೆದಿದೆ. ನಂತರ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಚಿತ್ರದುರ್ಗದಲ್ಲಿ ಸಮಾವೇಶ ನಡೆಸಲಾಗಿತ್ತು. ಎಐಸಿಸಿ ಅಧ್ಯಕ್ಷ ಖರ್ಗೆಯವರು ಸಮಾವೇಶದಲ್ಲಿ ಭಾಗಿಯಾಗಿದ್ದರು. ಸಮಾವೇಶದಲ್ಲಿ ಪರಿಶಿಷ್ಟ ಜಾತಿಯಲ್ಲಿ ಬರುವ ಎಲ್ಲ ಸಮುದಾಯಗಳು ಭಾಗಿಯಾಗಿದ್ದವು. ಒಳ ಮೀಸಲಾತಿ ಜಾರಿಗೆ ಸಮಾವೇಶದಲ್ಲಿ ಎಲ್ಲರೂ ಒಪ್ಪಿಕೊಂಡಿದ್ದೆವು ಎಂದು ಹೇಳಿದರು.

Continue Reading

Latest

ಬ್ಯಾಟಿಂಗ್‌ನಲ್ಲಿ ಮಾತ್ರವಲ್ಲ, ಬಿಸಿನೆಸ್‌ನಲ್ಲೂ ಸಚಿನ್ ಅವರದ್ದೇ ಸಿಕ್ಸರ್! ತೆಂಡೂಲ್ಕರ್‌ ಒಟ್ಟು ಆಸ್ತಿ ಎಷ್ಟು ಗೊತ್ತಾ?

VISTARANEWS.COM


on

ಕೆಟ್ ಮೈದಾನದಲ್ಲಿ ಶತಕಗಳ ಸರದಾರನಾಗಿ ಮೆರೆದ ‘ಮಾಸ್ಟರ್ ಬ್ಲಾಸ್ಟರ್’ ಸಚಿನ್ ತೆಂಡೂಲ್ಕರ್, ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ದಶಕದ ನಂತರವೂ ವ್ಯವಹಾರ ಲೋಕದ ಅಧಿಪತಿಯಾಗಿ ಮುಂದುವರಿದಿದ್ದಾರೆ. ಅಭಿಮಾನಿಗಳಿಂದ ‘ಕ್ರಿಕೆಟ್ ದೇವರು’ ಎಂದು ಆರಾಧಿಸಲ್ಪಡುವ ಸಚಿನ್, ಈಗ ಕೇವಲ ಕ್ರೀಡಾಪಟುವಾಗಿ ಉಳಿಯದೆ ಒಬ್ಬ ಚಾಣಾಕ್ಷ ಉದ್ಯಮಿ ಮತ್ತು ಹೂಡಿಕೆದಾರನಾಗಿ ಹೊರಹೊಮ್ಮಿದ್ದಾರೆ. ಏಪ್ರಿಲ್ 2026ರ ಇತ್ತೀಚಿನ ವರದಿಗಳ ಪ್ರಕಾರ, ಸಚಿನ್ ಅವರ ಒಟ್ಟು ಆಸ್ತಿ ಮೌಲ್ಯವು ಸುಮಾರು 170 ಮಿಲಿಯನ್ ಡಾಲರ್ (₹1,400 ಕೋಟಿಗೂ ಅಧಿಕ) ಎಂದು ಅಂದಾಜಿಸಲಾಗಿದೆ. 2025ರ ಸಾಲೊಂದರಲ್ಲೇ ಅವರು ಬ್ರ್ಯಾಂಡ್ ಒಪ್ಪಂದಗಳು ಮತ್ತು ಹೂಡಿಕೆಗಳ ಮೂಲಕ ಸರಿಸುಮಾರು ₹50 ಕೋಟಿ ಸಂಪಾದಿಸುವ ಮೂಲಕ ತಮ್ಮ ಆರ್ಥಿಕ ಸಾಮ್ರಾಜ್ಯವನ್ನು ಮತ್ತಷ್ಟು ವಿಸ್ತರಿಸಿದ್ದಾರೆ.

ಸಚಿನ್ ಅವರ ಈ ಬೃಹತ್ ಆದಾಯದ ಹಿಂದೆ ಅವರ ದೂರದೃಷ್ಟಿಯ ಹೂಡಿಕೆಗಳಿವೆ. ಬಳಸಿದ ಕಾರುಗಳ ವೇದಿಕೆ ‘Spinny’, ಗೇಮಿಂಗ್ ಸ್ಟಾರ್ಟ್-ಅಪ್ ‘JetSynthesys’ ಮತ್ತು ಸೋಲಾರ್ ಕ್ಷೇತ್ರದ ‘Truzon Solar’ ಸೇರಿದಂತೆ ‘Zepto’ ಮತ್ತು ‘Vahdam Teas’ ನಂತಹ ಪ್ರಮುಖ ಸಂಸ್ಥೆಗಳಲ್ಲಿ ಅವರು ಬಂಡವಾಳ ಹೂಡಿದ್ದಾರೆ. ಇಷ್ಟೇ ಅಲ್ಲದೆ, ತಮ್ಮದೇ ಆದ ‘Ten XU’ ಸ್ಪೋರ್ಟ್ಸ್‌ವೇರ್ ಬ್ರ್ಯಾಂಡ್ ಮತ್ತು ‘True Blue’ ಫ್ಯಾಷನ್ ಲೇಬಲ್ ಮೂಲಕ ಉದ್ಯಮ ರಂಗದಲ್ಲಿ ಸಕ್ರಿಯರಾಗಿದ್ದಾರೆ. ಸಚಿನ್ ಎಂಬ ಹೆಸರೇ ಒಂದು ಶಕ್ತಿಯುತ ಬ್ರ್ಯಾಂಡ್ ಆಗಿರುವುದರಿಂದ, ಅಪೋಲೋ ಟೈರ್ಸ್‌ನಿಂದ ಹಿಡಿದು ಪ್ರಮುಖ ಬ್ಯಾಂಕ್‌ಗಳವರೆಗೆ ಹಲವು ಕಂಪನಿಗಳು ಇಂದಿಗೂ ಅವರ ವಿಶ್ವಾಸಾರ್ಹ ಇಮೇಜ್ ಅನ್ನು ಬಳಸಿಕೊಳ್ಳಲು ಕೋಟಿ ಕೋಟಿ ಸಂಭಾವನೆ ನೀಡುತ್ತಿವೆ.

ಇನ್ನು ರಿಯಲ್ ಎಸ್ಟೇಟ್ ವಿಷಯಕ್ಕೆ ಬಂದರೆ, ಸಚಿನ್ ಅವರ ಆಸ್ತಿಗಳು ಯಾರಿಗೂ ಕಡಿಮೆ ಇಲ್ಲದಂತಿವೆ. ಮುಂಬೈನ ಬಾಂದ್ರಾದಲ್ಲಿರುವ ಐಷಾರಾಮಿ ಬಂಗಲೆ, ದಕ್ಷಿಣ ಮುಂಬೈನ ಫ್ಲಾಟ್ ಮತ್ತು ಅಲಿಬಾಗ್‌ನಲ್ಲಿರುವ ಆಸ್ತಿಗಳ ಒಟ್ಟು ಮೌಲ್ಯವೇ ಸುಮಾರು ₹300 ಕೋಟಿ ಮೀರಿದೆ ಎಂದು ಅಂದಾಜಿಸಲಾಗಿದೆ. ಮೈದಾನದಲ್ಲಿ ರನ್ ಮಳೆ ಸುರಿಸಿದ ಮಾದರಿಯಲ್ಲೇ, ವ್ಯವಹಾರ ಲೋಕದಲ್ಲಿ ಸರಿಯಾದ ಕಾರ್ಯತಂತ್ರ ಮತ್ತು ಹೂಡಿಕೆಯ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಸಚಿನ್ ಸಾವಿರಾರು ಕೋಟಿಗಳ ಸಾಮ್ರಾಜ್ಯವನ್ನು ಕಟ್ಟಿದ್ದಾರೆ. ಒಟ್ಟಾರೆಯಾಗಿ, ನಿವೃತ್ತಿಯ ನಂತರವೂ ಸಚಿನ್ ಅವರ ಈ ‘ಸೆಕೆಂಡ್ ಇನ್ನಿಂಗ್ಸ್’ ಯುವ ಉದ್ಯಮಿಗಳಿಗೆ ದೊಡ್ಡ ಸ್ಫೂರ್ತಿಯಾಗಿದೆ.

Continue Reading
Advertisement
Latest3 hours ago

ಇನ್ನು ಮುಂದೆ ಒಳಮೀಸಲಾತಿ ಅನ್ವಯ ಹುದ್ದೆಗಳ ಭರ್ತಿ: ಸಿಎಂ ಸಿದ್ದರಾಮಯ್ಯ ಘೋಷಣೆ

Latest4 hours ago

29 ವರ್ಷಗಳ ‘ನೋ ಕಿಸ್ ಪಾಲಿಸಿ’ ಮುರಿದ ಕಾಜೋಲ್: ಆ ಒಂದು ದೃಶ್ಯಕ್ಕಾಗಿ ಕಟ್ಟುನಿಟ್ಟಿನ ನಿಯಮ ಬದಿಗಿಟ್ಟಿದ್ದೇಕೆ?

Latest4 hours ago

ಒಳ ಮೀಸಲಾತಿ ಹಂಚಿಕೆ: ಎಡಗೈ, ಬಲಗೈ ಜಾತಿಗಳಿಗೆ ತಲಾ ಶೇ. 5.25 ಸ್ಪೃಶ್ಯ ಜಾತಿಗೆ ಶೇ.4.5 ಹಂಚಿಕೆ; ಸಚಿವ ಸಂಪುಟ ಮಹತ್ವದ ನಿರ್ಧಾರ

Latest4 hours ago

ಬ್ಯಾಟಿಂಗ್‌ನಲ್ಲಿ ಮಾತ್ರವಲ್ಲ, ಬಿಸಿನೆಸ್‌ನಲ್ಲೂ ಸಚಿನ್ ಅವರದ್ದೇ ಸಿಕ್ಸರ್! ತೆಂಡೂಲ್ಕರ್‌ ಒಟ್ಟು ಆಸ್ತಿ ಎಷ್ಟು ಗೊತ್ತಾ?

Latest4 hours ago

ಇಂಜಿನಿಯರಿಂಗ್‌ ಶುಲ್ಕ: ಅಂತಿಮ ನಿರ್ಧಾರ ಮಾಡಿಲ್ಲ: ಸಚಿವ ಡಾ. ಎಂ.ಸಿ. ಸುಧಾಕರ್‌

Latest5 hours ago

ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್: ಒಪ್ಪಂದಕ್ಕೆ ಸಹಿ

Latest5 hours ago

ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಆರೋಗ್ಯ ಸ್ಥಿತಿ ಗಂಭೀರ?; ಕೃತಕ ಕಾಲು,ಸೀಳು ತುಟಿ, ಒಡೆದ ಮುಖ…

bigbreaking5 hours ago

ಬಿಜೆಪಿಗೆ ಸೇರಿದ ಎಎಪಿ ದಿಗ್ಗಜ ರಾಘವ್ ಚಡ್ಡಾ: ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್! ಪಕ್ಷಾಂತರಕ್ಕೆ ಕೊಟ್ಟ ಕಾರಣವೇನು?

Latest6 hours ago

ಒಳಮೀಸಲಾತಿ ನೀಡುವ ಬದಲು ಗೊಂದಲ ಸೃಷ್ಟಿಸುತ್ತಿದ್ದೀರಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಗೋವಿಂದ ಕಾರಜೋಳ ವಾಗ್ದಾಳಿ

Latest6 hours ago

ಬಿಜೆಪಿ ನಾಯಕನ ಮಗನಿಗೆ ಹೈಕೋರ್ಟ್ ಬಿಸಿ: ಮದುವೆಯಾಗದೆ ಮಗು ನೀಡಿದ ಲವರ್‌ಗೆ ಮಾಸಿಕ 75 ಸಾವಿರ ರೂ. ಜೀವನಾಂಶ ದಂಡ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌