Job Interview: ಉದ್ಯೋಗ ಸಂದರ್ಶನವನ್ನು ಹೇಗೆ ಎದುರಿಸಬೇಕು? ಈ ಟಿಪ್ಸ್‌ ಫಾಲೋ ಮಾಡಿ - Vistara News

Latest

Job Interview: ಉದ್ಯೋಗ ಸಂದರ್ಶನವನ್ನು ಹೇಗೆ ಎದುರಿಸಬೇಕು? ಈ ಟಿಪ್ಸ್‌ ಫಾಲೋ ಮಾಡಿ

ಕಾಲೇಜು ಮುಗಿಸಿ ಉದ್ಯೋಗಕ್ಕಾಗಿ ಹೊರಡುವಾಗ ಸಂದರ್ಶನದ (Job Interview) ತಯಾರಿ ನಡೆಸಿಕೊಳ್ಳುವುದು ಬಹುಮುಖ್ಯವಾಗಿರುತ್ತದೆ. ಸಂದರ್ಶನಕ್ಕೆ ಹೊರಡುವಾಗ ಕೆಲವೊಂದು ವಿಷಯಗಳನ್ನು ಗಮನದಲ್ಲಿ ಇರಿಸಿಕೊಳ್ಳಬೇಕು. ಅವುಗಳಲ್ಲಿ ಮುಖ್ಯವಾಗಿ ಸಂಶೋಧನೆ, ಉಡುಗೆ, ದಾಖಲೆಗಳು, ದೇಹ ಭಾಷೆ, ಸಂವಹನ ಸೇರಿದಂತೆ ಇನ್ನೂ ಹಲವು ಪ್ರಮುಖ ವಿಷಯಗಳಿವೆ. ಅವುಗಳ ಕುರಿತು ಯುವ ಜನರಿಗೆ ಉಪಯುಕ್ತ ಮಾಹಿತಿ ಮಾಹಿತಿ ಇಲ್ಲಿದೆ.

VISTARANEWS.COM


on

Job Interview
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾವುದೇ ಉದ್ಯೋಗವೂ ಸಂದರ್ಶನವಿಲ್ಲದೆ (Job Interview) ಪೂರ್ಣವಾಗುವುದಿಲ್ಲ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಈಗ ಉದ್ಯೋಗ (job) ಪಡೆಯಲು ಕೇವಲ ಅಂಕಗಳಿದ್ದರೆ ಸಾಲದು ಕೌಶಲ, ನಡವಳಿಕೆಯೂ ಮುಖ್ಯವಾಗಿರುತ್ತದೆ. ಕಾಲೇಜು (college) ಮುಗಿಸಿ ಉದ್ಯೋಗಕ್ಕಾಗಿ ಸಂದರ್ಶನದ ತಯಾರಿ ನಡೆಸಿಕೊಳ್ಳುತ್ತಿರುವ ಫ್ರೆಶರ್‌ಗಳಿಗೆ ಸಹಾಯವಾಗಬಲ್ಲ ಸಲಹೆಗಳು ಇಲ್ಲಿವೆ.

ಸಂದರ್ಶನಕ್ಕೆ ಹೊರಡುವಾಗ ಕೆಲವೊಂದು ವಿಷಯಗಳನ್ನು ಗಮನದಲ್ಲಿ ಇರಿಸಿಕೊಳ್ಳಬೇಕು. ಅವುಗಳಲ್ಲಿ ಮುಖ್ಯವಾಗಿ ಸಂಶೋಧನೆ, ಉಡುಗೆ, ದಾಖಲೆಗಳು, ದೇಹ ಭಾಷೆ, ಸಂವಹನ ಸೇರಿದಂತೆ ಇನ್ನು ಹಲವು ಪ್ರಮುಖ ವಿಷಯಗಳಿವೆ.

ಕಂಪನಿಯ ಹಿನ್ನೆಲೆ ಸ್ಟಡಿ ಮಾಡಿ

ಸಂದರ್ಶನಕ್ಕೆ ಹೊರಡುವಾಗ ಕಂಪನಿ ಮತ್ತು ಉದ್ಯೋಗ ಪ್ರೊಫೈಲ್ ಬಗ್ಗೆ ತಿಳಿದುಕೊಳ್ಳಿ. ಇದು ಕಂಪನಿಯ ಬಗ್ಗೆ ಸಾಕಷ್ಟು ಮಾಹಿತಿಯನ್ನು ಒದಗಿಸಿ ಸಂದರ್ಶನವನ್ನು ಸುಲಭಗೊಳಿಸುತ್ತದೆ. ಸಂದರ್ಶನದ ತಯಾರಿಯ ಪ್ರಮುಖ ಆದ್ಯತೆಯಾಗಿ ಸಂಶೋಧನೆಯನ್ನು ಪಟ್ಟಿ ಮಾಡುವುದು ಬಹಳ ಮುಖ್ಯ. ಪ್ರತಿ ಕಂಪೆನಿಯು ತನ್ನ ಪ್ರೊಫೈಲ್‌ಗಳಲ್ಲಿ ವಿಮರ್ಶೆ ವಿಭಾಗವನ್ನು ಹೊಂದಿರುತ್ತದೆ. ಕಂಪನಿಯ ಮಾಜಿ, ಪ್ರಸ್ತುತ ಉದ್ಯೋಗಿಗಳ ಬಗ್ಗೆ ಕೇಳಬಹುದು. ಅವರ ಅನುಭವ, ಕೆಲಸದ ಸಂಸ್ಕೃತಿ ಬಗ್ಗೆ ಪ್ರಶ್ನೆಗಳನ್ನು ಕೇಳಬಹುದು.


ಕೌಶಲವನ್ನು ಬೆಳೆಸಿಕೊಳ್ಳಿ

ಫ್ರೆಶರ್‌ಗಳಿಗೆ ಮತ್ತೊಂದು ಪ್ರಮುಖ ಸಂದರ್ಶನ ಸಲಹೆಯೆಂದರೆ ಉದ್ಯೋಗ ವಿವರಣೆಯನ್ನು ಸಂಪೂರ್ಣವಾಗಿ ಓದುವುದು. ಯಾಕೆಂದರೆ ಇದು ನೇಮಕಾತಿದಾರರು ಹುಡುಕುತ್ತಿರುವ ಪ್ರಮುಖ ಕೌಶಲಗಳನ್ನು ಗುರುತಿಸಲು ಅದಕ್ಕೆ ತಕ್ಕುದಾಗಿ ಹೊಂದಿಕೊಳ್ಳಲು ನಿಮಗೆ ಸಹಾಯವಾಗುವುದು. ಕೌಶಲದ ಕೊರತೆ ಇದ್ದರೆ ಸಂದರ್ಶನ ಕಷ್ಟವಾಗಬಹುದು.

ಉಡುಗೆ ಬಗ್ಗೆ ಗಮನವಿರಲಿ

ಫ್ರೆಶರ್‌ಗಳಿಗೆ ಸಂದರ್ಶನದ ತಯಾರಿಗಾಗಿ ಮತ್ತೊಂದು ಪ್ರಮುಖ ಅಂಶವೆಂದರೆ ಉಡುಪು. ಉಡುಪು ನಮ್ಮ ಆಲೋಚನೆಗಳನ್ನು ತೋರಿಸುತ್ತದೆ. ಯಾವುದೇ ಕೆಲಸಕ್ಕಾಗಿ ಸಂದರ್ಶನದಲ್ಲಿ ಅನಿಸಿಕೆ ವ್ಯಕ್ತಪಡಿಸಲು ಅವಕಾಶ ನೀಡಲಾಗುತ್ತದೆ. ಇದು ಸಂದರ್ಶಕರ ಮೇಲೆ ನಮ್ಮ ಪ್ರಭಾವವನ್ನು ಬೀರಲು ಕಾರಣವಾಗುತ್ತದೆ.

ಸಂದರ್ಶನಕ್ಕೆ ಹೋಗುವಾಗ ಸ್ವಚ್ಛ ಮತ್ತು ಚೆನ್ನಾಗಿ ಇಸ್ತ್ರಿ ಮಾಡಿರುವ ದಿರಿಸು ಧರಿಸಿ. ಪಾಲಿಶ್ ಮಾಡಿದ ಶೂಗಳು ಮತ್ತು ಕ್ಲೀನ್ ಸಾಕ್ಸ್, ಕೂದಲು, ಉಗುರುಗಳು ಚೆನ್ನಾಗಿದೆ ಎಂದು ಖಚಿತಪಡಿಸಿಕೊಳ್ಳಿ.ಋತುಮಾನಕ್ಕೆ ಸೂಕ್ತವಾದ ಆರಾಮದಾಯಕ ಉಡುಗೆಗಳನ್ನು ಆಯ್ಕೆ ಮಾಡಿ.

ನಿಮ್ಮನ್ನು ನೀವು ತಿಳಿದುಕೊಳ್ಳಿ

ಇನ್ನೊಬ್ಬರಿಗೆ ನಮ್ಮ ಸಾಮರ್ಥ್ಯವನ್ನು ತಿಳಿಸಬೇಕಾದರೆ ನಮ್ಮ ಬಗ್ಗೆ ನಾವು ಮೊದಲು ತಿಳಿದುಕೊಳ್ಳಬೇಕು. ಇದು ಫ್ರೆಶರ್‌ಗಳಿಗೆ ಅತೀ ಪ್ರಮುಖ ಸಲಹೆ. ಕಂಪೆನಿಯಲ್ಲಿ ನಿಮ್ಮನ್ನು ನೀವು ಹೇಗೆ ತೋರ್ಪಡಿಸುತ್ತಿರಿ ಎನ್ನುವುದು ಮುಖ್ಯವಾಗಿರುತ್ತದೆ. ಉದ್ಯೋಗ ಸಂದರ್ಶನದ ಪ್ರಮುಖ ಉದ್ದೇಶವು ನಿಮ್ಮನ್ನು ಪ್ರತಿನಿಧಿಸುವುದು ಮುಖ್ಯವಾಗುತ್ತದೆ.

ದಾಖಲೆಗಳ ಹೆಚ್ಚುವರಿ ಸೆಟ್ ಇರಲಿ

ಸಂದರ್ಶನದ ದಿನ ಸಂದರ್ಶಕರು ಮತ್ತು ಎಚ್‌ಆರ್ ಕ್ರಮವಾಗಿ ರೆಸ್ಯೂಮ್‌ನ ಹಾರ್ಡ್ ಪ್ರತಿಯನ್ನು ಕೇಳಬಹುದು. ಆದ್ದರಿಂದ ಯಾವಾಗಲೂ ರೆಸ್ಯೂಮ್‌ನ 2- 3 ಪ್ರತಿಗಳನ್ನು ಕೈಯಲ್ಲಿರಲಿ. ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವ ಸಮಯದಲ್ಲಿ ಕಳುಹಿಸಿದ ರೆಸ್ಯೂಮ್‌ನಲ್ಲಿ ಯಾವುದೇ ದೋಷ ಕಂಡುಬಂದರೆ, ಬಳಿಕ ಅಪ್‌ಡೇಟ್ ಮಾಡಿದ್ದರೆ ಅದನ್ನು ಸಂದರ್ಶಕರ ಗಮನಕ್ಕೆ ತನ್ನಿ. ಇದಕ್ಕಾಗಿ ಹೆಚ್ಚುವರಿ ದಾಖಲೆಗಳ ಸೆಟ್‌ ಜೊತೆ ಇರಲಿ. ರೆಸ್ಯೂಮ್‌ನಲ್ಲಿನ ದೋಷ, ಪರಿಷ್ಕರಣೆ ಕುರಿತು ನೇಮಕಾತಿದಾರರಿಗೆ ತಿಳಿಸುವುದು ನಿಮ್ಮ ಸಮಗ್ರತೆಯ ಬಗ್ಗೆ ಮಾತ್ರವಲ್ಲದೆ ಕೆಲಸದ ಪಾತ್ರದ ಬಗ್ಗೆ ನಿಮ್ಮ ಗಂಭೀರತೆಯ ಬಗ್ಗೆಯೂ ಅವರಿಗೆ ತಿಳಿಸಿದಂತಾಗುತ್ತದೆ.

ಇದನ್ನೂ ಓದಿ: UPSC 2024: ಯುಪಿಎಸ್ಸಿ ಸಿಎಸ್ಇ ಪ್ರಿಲಿಮ್ಸ್ ಫಲಿತಾಂಶ ಪ್ರಕಟ; ಪರಿಶೀಲಿಸುವುದು ಹೇಗೆ?


ಪ್ರಶ್ನೆ ಕೇಳಿ, ಉತ್ತರಿಸಲು ಸಿದ್ಧರಾಗಿರಿ

ಸಾಮಾನ್ಯವಾಗಿ ಅಭ್ಯರ್ಥಿಯ ದಕ್ಷತೆಯನ್ನು ಪರೀಕ್ಷಿಸಲು ಉದ್ಯೋಗಕ್ಕಾಗಿ ಮೂರು ಸುತ್ತಿನ ಸಂದರ್ಶನಗಳು, ಲಿಖಿತ, ತಾಂತ್ರಿಕ ಮತ್ತು ಮಾನವ ಸಂಪನ್ಮೂಲ ಸಂದರ್ಶನಗಳು ಇರುತ್ತವೆ. ಮೊದಲ ಎರಡು ಸುತ್ತುಗಳು ಕೆಲಸವನ್ನು ಪೂರ್ಣಗೊಳಿಸಲು ಸಹಾಯ ಮಾಡುವ ತಾಂತ್ರಿಕ ಜ್ಞಾನವನ್ನು ಪರೀಕ್ಷಿಸುತ್ತದೆ. ಕೊನೆಯ ಸುತ್ತು ಕೌಶಲಗಳನ್ನು ಪರೀಕ್ಷಿಸುತ್ತದೆ.

ಈ ಸಂದರ್ಭದಲ್ಲಿ ಅನುಮಾನಗಳಿದ್ದಾಗ ಪ್ರಶ್ನೆ ಕೇಳಲು ಹಿಂಜರಿಯಬೇಡಿ. ಇದು ಆಯ್ಕೆಗೆ ನಿಮ್ಮನ್ನು ನೀವು ಹೇಗೆ ಸಿದ್ಧಪಡಿಸಿಕೊಳ್ಳುತ್ತೀರಿ ಎಂಬುದನ್ನು ತಿಳಿಸುತ್ತದೆ. ಅದೇ ರೀತಿ ಅವರು ಕೇಳುವ ಪ್ರಶ್ನೆಗಳಿಗೆ ಸ್ಪಷ್ಟವಾಗಿ ಉತ್ತರಿಸಿ. ಇದು ನಿಮ್ಮ ಆತ್ಮವಿಶ್ವಾಸವನ್ನು ತೋರ್ಪಡಿಸುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Accident: ಟೆರೇಸ್ ಮೇಲೆ ನಿಂತು ಜಗಳ ನೋಡುತ್ತಿದ್ದ ಮಹಿಳೆಗೇ ಬಿತ್ತು ಗುಂಡೇಟು!

ಉತ್ತರ ದೆಹಲಿಯಲ್ಲಿ 17 ಲಕ್ಷ ರೂಪಾಯಿಗಾಗಿ ಇಬ್ಬರ ನಡುವೆ ನಡೆದ ವಾದವು ಜಗಳಕ್ಕೆ ತಿರುಗಿತ್ತು. ಈ ನಡುವೆ ಒಬ್ಬ ವ್ಯಕ್ತಿ ಪಿಸ್ತೂಲ್ ಎಳೆದು ಮತ್ತೊಬ್ಬ ವ್ಯಕ್ತಿಯತ್ತ ಗುಂಡು ಹಾರಿಸಿದ್ದಾನೆ. ಆದರೆ, ಬುಲೆಟ್ ಗುರಿ ತಪ್ಪಿ (Accident) ಟೆರೇಸ್‌ನಿಂದ ಜಗಳವನ್ನು ಗಮನಿಸುತ್ತಿದ್ದ 48 ವರ್ಷದ ಮಹಿಳೆಗೆ ತಗುಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

By

Accident
Koo

ನವದೆಹಲಿ: ಟೆರೇಸ್‌ನಲ್ಲಿ ನಿಂತು ಹೊಡೆದಾಟವನ್ನು ನೋಡುತ್ತಿದ್ದ ಮಹಿಳೆಗೆ ಆಕಸ್ಮಿಕವಾಗಿ (Accident) ಗುಂಡು (shot) ತಾಗಿರುವ ಘಟನೆ ಉತ್ತರ ದೆಹಲಿಯ (north delhi) ದಯಾಲ್‌ಪುರದಲ್ಲಿ ನಡೆದಿದೆ. ಒಬ್ಬ ವ್ಯಕ್ತಿ ಮತ್ತೊಬ್ಬ ವ್ಯಕ್ತಿಗೆ ಗುಂಡು ಹಾರಿಸಿದಾಗ ಅದು ತಪ್ಪಿ ಟೆರೇಸ್ ಮೇಲೆ ನಿಂತು ಇವರ ಜಗಳ ನೋಡುತ್ತಿದ್ದ ಮಹಿಳೆಗೆ ತಗುಲಿದೆ ಎನ್ನಲಾಗಿದೆ.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಈಶಾನ್ಯ ದೆಹಲಿಯ ದಯಾಲ್‌ಪುರ್‌ನಲ್ಲಿ ಜುಲೈ 2ರಂದು ಶನಿವಾರ ಇಬ್ಬರ ನಡುವೆ ಜಗಳವಾಗಿದೆ. ಪೊಲೀಸ್ ಅಧಿಕಾರಿಗಳ ಪ್ರಕಾರ, 17 ಲಕ್ಷ ರೂಪಾಯಿಗಾಗಿ ಇವರ ನಡುವೆ ನಡೆದ ವಾದವು ಜಗಳಕ್ಕೆ ತಿರುಗಿತ್ತು. ಈ ನಡುವೆ ಒಬ್ಬ ವ್ಯಕ್ತಿ ಪಿಸ್ತೂಲ್ ಎಳೆದು ಮತ್ತೊಬ್ಬ ವ್ಯಕ್ತಿಯತ್ತ ಗುಂಡು ಹಾರಿಸಿದ್ದಾನೆ. ಆದರೆ, ಬುಲೆಟ್ ತಪ್ಪಿ ಟೆರೇಸ್‌ನಿಂದ ಜಗಳವನ್ನು ಗಮನಿಸುತ್ತಿದ್ದ 48 ವರ್ಷದ ಮಹಿಳೆಗೆ ಹೊಡೆದಿದೆ.

ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ ಗುಂಡೇಟಿನಿಂದ ಗಾಯಗೊಂಡಿದ್ದ ಮಹಿಳೆಯನ್ನು ಆಕೆಯ ಕುಟುಂಬದವರು ಜಿಟಿಬಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆರೋಪಿಗಳ ಪೈಕಿ ಬಬ್ಲು ಎಂಬಾತನಿಗೆ 17 ಲಕ್ಷ ರೂ.ಗಳನ್ನು ಸಾಲವಾಗಿ ನೀಡಿದ್ದಾಗಿ ದೂರುದಾರ ಹಾಶಿಮ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಆತ ಬಬ್ಲುವನ್ನು ವಿಚಾರಿಸಲು ಹೋದಾಗ ವಾದವು ವಿಕೋಪಕ್ಕೆ ತಿರುಗಿದೆ. ಬಬ್ಲು ತನ್ನ ಸಹಚರರಾದ ಕಮರುಲ್, ಸುಹಾಲೆ ಮತ್ತು ಸಮ್ರುನ್‌ನೊಂದಿಗೆ ಬಂದಿದ್ದು, ಹಾಶಿಮ್ ಮೇಲೆ ಹಲ್ಲೆಗೆ ಮುಂದಾಗಿದ್ದರು. ಈ ನಡುವೆ ಕಮರುಲ್ ಎಂಬಾತ ಹಾಶಿಮ್‌ ಮೇಲೆ ಗುಂಡು ಹಾರಿಸಿದ ಎನ್ನಲಾಗಿದೆ. ಆದರೆ ಇದು ಗುರಿ ತಪ್ಪಿ ಮಹಿಳೆಗೆ ಹೊಡೆದಿದೆ. ಗುಂಡಿನ ದಾಳಿಯ ಅನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ: Self Harming : ನಿದ್ದೆ ಇಲ್ಲದೇ ಒದ್ದಾಟ; ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

ಪೊಲೀಸರು ದೆಹಲಿಯ ಬ್ರಿಜ್‌ಪುರಿ ನಿವಾಸಿಗಳಾದ ಬಬ್ಲು (38) ಮತ್ತು ಕಮರುಲ್ (26) ಎಂಬವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಪಿಸ್ತೂಲ್, ಸ್ಕೂಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಉಳಿದ ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುದ್ಧಿ ಹೇಳಿದ್ದಕ್ಕೆ ಶಿಕ್ಷಕನನ್ನೇ ಕೊಂದ ವಿದ್ಯಾರ್ಥಿ

ವಿದ್ಯೆ ಕಲಿಸಿದ ಗುರುವನ್ನೇ ವಿದ್ಯಾರ್ಥಿಯೊಬ್ಬ ಇರಿದು ಕೊಂದಿ ಘಟನೆ ಅಸ್ಸಾಂನ ಶಿವಸಾಗರ್ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದಿದೆ. 11 ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನನ್ನು ತರಗತಿಯಲ್ಲಿ ಇರಿದು ಕೊಂದಿದ್ದಾನೆ. ಕಳಪೆ ಸಾಧನೆಗಾಗಿ ಬೈದಿದ್ದಕ್ಕಾಗಿ ರಸಾಯನಶಾಸ್ತ್ರ ಶಿಕ್ಷಕ ರಾಜೇಶ್ ಬರುವಾ ಬೆಜವಾಡ (55) ಮೇಲೆ ಹಲ್ಲೆ ನಡೆಸಿ ಕೊಂದ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಜವಾಡ ಅವರು ರಸಾಯನಶಾಸ್ತ್ರವನ್ನು ಕಲಿಸುತ್ತಿದ್ದರು. ಜೊತೆಗೆ ಖಾಸಗಿ ಒಡೆತನದ ಶಾಲೆಯಲ್ಲಿ ನಿರ್ವಹಣಾ ಜವಾಬ್ದಾರಿಗಳನ್ನು ಸಹ ಹೊಂದಿದ್ದರು. ರಸಾಯನಶಾಸ್ತ್ರದಲ್ಲಿನ ಕಲಿಕೆಯ ಬಗ್ಗೆ ಶಿಕ್ಷಕರು ವಿದ್ಯಾರ್ಥಿಯನ್ನು ಗದರಿಸಿದ್ದರು. ಅಲ್ಲದೇ ಪೋಷಕರ ಸಭೆಗಾಗಿ ಪೋಷಕರನ್ನು ಶಾಲೆಗೆ ಕರೆದುಕೊಂಡು ಬಾ ಎಂದು ಹೇಳಿದ್ದರು ಎನ್ನಲಾಗಿದೆ.

ದಿನದ ನಂತರ ವಿದ್ಯಾರ್ಥಿ ಕ್ಯಾಶುಯಲ್ ಬಟ್ಟೆಗಳಲ್ಲಿ ತರಗತಿಗೆ ಬಂದಿದ್ದ. ಶಿಕ್ಷಕರು ಅವನನ್ನು ಹೊರಹೋಗುವಂತೆ ಕೇಳಿದರು. ಇದ್ದಕ್ಕಿದ್ದಂತೆ ವಿದ್ಯಾರ್ಥಿ ಬೆಜವಾಡ ಅವರ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಪದೇ ಪದೇ ಇರಿದಿದ್ದಾನೆ.
ಇನ್ನು ಘಟನೆ ಬಗ್ಗೆ ಪೊಲೀಸರು ಪ್ರತಿಕ್ರಿಯಿಸಿದ್ದು, ಕೋಚಿಂಗ್‌ ಸೆಂಟರ್‌ನಲ್ಲಿ ಕೊಲೆಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಸ್ಥಳಕ್ಕೆ ಬಂದು ನೋಡಿದಾಗ ತರಗತಿಯಲ್ಲಿ ರಕ್ತದ ಮಡುವಿನಲ್ಲಿ ಶಿಕ್ಷಕ ಬಿದ್ದಿದ್ದರು. ಅಲ್ಲೇ ಚಾಕು ಕೂಡ ಇತ್ತು.

ಶಿಕ್ಷಕನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಿಲಾಯಿತಾದರೂ ಆತ ಸಾವನ್ನಪ್ಪಿರುವುದನ್ನು ವೈದ್ಯರು ಖಚಿತಪಡಿಸಿದರು. ಇನ್ನು ವಿದ್ಯಾರ್ಥಿಯನ್ನು ಈಗಾಗಲೇ ವಶಕ್ಕೆ ಪಡೆದಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳನ್ನು ನಾವು ಪರಿಶೀಲನೆ ನಡೆಸುತ್ತಿದ್ದೇವೆ. ಇತರ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದಾಗ ಶಿಕ್ಷಕ ವಿದ್ಯಾರ್ಥಿಗೆ ಈ ಹಿಂದೆ ಬೈದಿದ್ದರು ಎಂಬುದು ಬಯಲಾಗಿದೆ ಎಂದು ಹೇಳಿದ್ದಾರೆ.

Continue Reading

ಸಿನಿಮಾ

Sonakshi Sinha: ಮದುವೆ ಆದವರು ಗರ್ಭಿಣಿಯಾದರೆ ಮಾತ್ರ ಆಸ್ಪತ್ರೆಗೆ ಹೋಗಬೇಕಾ? ವದಂತಿಕೋರರಿಗೆ ನಟಿ ಸೋನಾಕ್ಷಿ ಪ್ರಶ್ನೆ!

ಮದುವೆಯಾದ ಬಳಿಕ ನಾವು ಆಸ್ಪತ್ರೆಗೆ ಹೋಗಲು ಸಾಧ್ಯವಿಲ್ಲ. ಯಾಕೆಂದರೆ ಜನರು ನಾನು ಗರ್ಭಿಣಿ ಎಂದು ಭಾವಿಸುತ್ತಾರೆ ಎಂದು ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಇನ್‌ಸ್ಟಾಗ್ರಾಮ್‌ನಲ್ಲಿ ಹೇಳಿಕೊಂಡಿದ್ದಾರೆ. ಇತ್ತೀಚೆಗೆ ಅಷ್ಟೇ ಜಹೀರ್ ಇಕ್ಬಾಲ್ ಅವರನ್ನು ವಿವಾಹವಾದ ಬಳಿಕ ನಟಿ ಸೋನಾಕ್ಷಿ ಆಸ್ಪತ್ರೆಗೆ ತೆರಳಿದ್ದು, ಬಳಿಕ ಅವರು ಗರ್ಭಿಣಿಯಾಗಿರಬಹುದು ಎನ್ನುವ ವದಂತಿಗಳು ಹುಟ್ಟಿದ್ದವು.

VISTARANEWS.COM


on

By

Sonakshi Sinha
Koo

ಮದುವೆಯ (wedding) ಫೋಟೋಗಳನ್ನು ಇನ್‌ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿರುವ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಏಳು ವರ್ಷಗಳ ಇದೇ ದಿನ ನಮ್ಮ ಪ್ರೀತಿ ಹುಟ್ಟಿದ್ದು ಎಂಬುದಾಗಿ ತಮ್ಮ ಪ್ರೇಮ ಕಥೆಯನ್ನು ಹೇಳಿಕೊಂಡಿದ್ದಾರೆ. ತಮ್ಮ ದೀರ್ಘಕಾಲದ ಗೆಳೆಯ ಜಹೀರ್ ಇಕ್ಬಾಲ್ (Zaheer Iqbal) ಅವರನ್ನು ಜೂನ್ 23ರಂದು ವಿವಾಹವಾಗಿದ್ದ ಅವರು ಇದೀಗ ಸಾಮಾಜಿಕ ಜಾಲತಾಣದಲ್ಲಿ (social media) ಮದುವೆಯ ದಿನದಿಂದ ಜಹೀರ್ ಇಕ್ಬಾಲ್ ಅವರೊಂದಿಗೆ ತೆಗೆದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಮದುವೆಯಾದ ಬಳಿಕ ನಾವು ಆಸ್ಪತ್ರೆಗೆ ಹೋಗಲು ಸಾಧ್ಯವಿಲ್ಲ. ಯಾಕೆಂದರೆ ಜನರು ನಾನು ಗರ್ಭಿಣಿ ಎಂದು ಭಾವಿಸುತ್ತಾರೆ ಎಂದು ನಟಿ ಸೋನಾಕ್ಷಿ ಸಿನ್ಹಾ ಇನ್ ಸ್ಟಾಗ್ರಾಮ್ ನಲ್ಲಿ ಹೇಳಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಜಹೀರ್ ಇಕ್ಬಾಲ್ ಅವರನ್ನು ವಿವಾಹವಾದ ಬಳಿಕ ನಟಿ ಸೋನಾಕ್ಷಿ ಆಸ್ಪತ್ರೆಗೆ ತೆರಳಿದ್ದು, ಬಳಿಕ ಅವರು ಗರ್ಭಿಣಿಯಾಗಿರಬಹುದು ಎನ್ನುವ ವದಂತಿಗಳು ಹುಟ್ಟಿದ್ದವು. ಇದು ಸಾಮಾಜಿಕ ಜಾಲತಾಣದಲ್ಲೂ ಭಾರಿ ವೈರಲ್ ಆಗಿತ್ತು. ಇದಕ್ಕೆ ಈಗ ನಟಿ ಸ್ಪಷ್ಟನೆಯನ್ನು ಕೊಟ್ಟಿದ್ದಾರೆ.

ಮದುವೆಯ ಫೋಟೋಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿರುವ ನಟಿ, ಏಳು ವರ್ಷಗಳ ಹಿಂದೆ 2017ರ ಜೂನ್ 23ರಂದು ಇದೇ ದಿನ ನಾವು ಪರಸ್ಪರರ ಕಣ್ಣುಗಳಲ್ಲಿ ಪ್ರೀತಿಯನ್ನು ಅದರ ಶುದ್ಧ ರೂಪದಲ್ಲಿ ನೋಡಿದ್ದೇವೆ ಮತ್ತು ಅದನ್ನು ಹಿಡಿದಿಟ್ಟುಕೊಳ್ಳಲು ನಿರ್ಧರಿಸಿದ್ದೇವೆ. ಇಂದು ಆ ಪ್ರೀತಿ ನಮಗೆ ಮಾರ್ಗದರ್ಶನ ನೀಡಿದೆ. ಎಲ್ಲಾ ಸವಾಲುಗಳು ಮತ್ತು ವಿಜಯಗಳ ಮೂಲಕ… ಈ ಕ್ಷಣದವರೆಗೆ ಮುನ್ನಡೆಸುತ್ತದೆ… ಅಲ್ಲಿ ನಮ್ಮ ಕುಟುಂಬಗಳು ಮತ್ತು ನಮ್ಮ ಎರಡೂ ದೇವರುಗಳ ಆಶೀರ್ವಾದದೊಂದಿಗೆ… ನಾವು ಪತಿ ಪತ್ನಿಯಾಗಿದ್ದೇವೆ. ಇಲ್ಲಿಯವರೆಗೆ ಪರಸ್ಪರ ಪ್ರೀತಿ, ಭರವಸೆ ಮತ್ತು ಎಲ್ಲವೂ ಸುಂದರವಾಗಿತ್ತು ಎಂದು ನಟಿ ಸೋನಾಕ್ಷಿ ಹೇಳಿಕೊಂಡಿದ್ದಾರೆ.


ಗರ್ಭಿಣಿಯಾಗಿದ್ದಾರೆ ಎನ್ನುವ ವದಂತಿ

ಇನ್ಸ್‌ಟಾಗ್ರಾಮ್ ನಲ್ಲಿ ಸೋನಾಕ್ಷಿ ಮತ್ತು ಜಹೀರ್ ತಮ್ಮ ಮದುವೆಯ ಉಡುಪನ್ನು ಧರಿಸಿ ಪೋಸ್ ನೀಡುತ್ತಿರುವ ಫೋಟೋವನ್ನು ಹಂಚಿಕೊಂಡ ನಟಿ, ದೇವತೆಗಳು ನಮ್ಮನ್ನು ನೋಡುತ್ತಿದ್ದಾರೆ ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ,
ತಾವು ಗರ್ಭಿಣಿ ಎನ್ನುವ ಕುರಿತು ವದಂತಿಗಳ ಬಗ್ಗೆ ಇತ್ತೀಚಿನ ಸಂದರ್ಶನವೊಂದರಲ್ಲಿ ಸೂಕ್ಷ್ಮವಾಗಿ ಗೇಲಿ ಮಾಡಿದ ಅವರು, ಜನರು ತಾನು ಗರ್ಭಿಣಿ ಎಂದು ಭಾವಿಸುವ ಕಾರಣ ಈಗ ಆಸ್ಪತ್ರೆಗೆ ಹೋಗಲು ಸಹ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಮದುವೆಯಾದ ಬಳಿಕ ಆದ ಒಂದೇ ಬದಲಾವಣೆಯೆಂದರೆ ಈಗ ನಾವು ಆಸ್ಪತ್ರೆಗೆ ಹೋಗಲು ಸಾಧ್ಯವಿಲ್ಲ. ಯಾಕೆಂದರೆ ಮನೆಯಿಂದ ಹೊರಬಂದ ತಕ್ಷಣ ಜನರು ಯೋಚಿಸುತ್ತಾರೆ. ನಾನು ಗರ್ಭಿಣಿಯಾಗಿದ್ದೇನೆ ಎಂದುಕೊಳ್ಳುತ್ತಾರೆ ಎಂದು ಸೋನಾಕ್ಷಿ ತಿಳಿಸಿದ್ದಾರೆ.

ಇದನ್ನೂ ಓದಿ: Sonakshi Sinha: ಮದುವೆಯಾದ ಕೆಲವೇ ದಿನಗಳಲ್ಲಿ ಸೋನಾಕ್ಷಿ ಸಿನ್ಹಾ ಗರ್ಭಿಣಿ? ಆಸ್ಪತ್ರೆಯಲ್ಲಿ ನಟಿ ಹೇಳಿದ್ದೇನು?

ಸೋನಾಕ್ಷಿ ಅವರ ಸಹೋದರ ಕುಶ್ ಸಿನ್ಹಾ ಮದುವೆ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಅವರು ಮದುವೆಗೆ ಹಾಜರಾಗಲಿಲ್ಲ ಎಂಬ ವದಂತಿಗಳಿವೆ. ಆದರೂ ಶೋಶಾ ಜೊತೆಗಿನ ವಿಶೇಷ ಸಂದರ್ಶನದಲ್ಲಿ ಕುಶ್ ಅವರು ಗಾಲಾ ರಾತ್ರಿಯಲ್ಲಿ ಪಾಲ್ಗೊಂಡಿದ್ದರಿಂದ ಸೋನಾಕ್ಷಿ ಮತ್ತು ಜಹೀರ್ ಮದುವೆಗೆ ಬರಲಾಗಲಿಲ್ಲ ಎಂದು ಹೇಳಿದ್ದಾರೆ.

ಜನರು ತಪ್ಪಾದ ಮಾಹಿತಿಯನ್ನು ಪ್ರಕಟಿಸುತ್ತಿದ್ದಾರೆ. ಇದು ಹೆಸರಿಸದ ಮೂಲವನ್ನು ಹೊಂದಿದೆ. ಇದನ್ನೆಲ್ಲ ಯಾರು ಮಾಡುತ್ತಿದ್ದಾರೆ ಮತ್ತು ಎಲ್ಲಿಂದ ಬರುತ್ತಿದ್ದಾರೆ ಎಂದು ನನಗೆ ಖಚಿತವಿಲ್ಲ ಎಂದಿದ್ದಾರೆ. ಸೋನಾಕ್ಷಿ ಸಿನ್ಹಾ ಪ್ರಸ್ತುತ ʼಕಾಕುಡಾʼ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ರಿತೇಶ್ ದೇಶ್‌ಮುಖ್ ಅವರೊಂದಿಗೆ ಅಭಿನಯಿಸುತ್ತಿರುವ ಈ ಚಿತ್ರದ ಟ್ರೇಲರ್ ಶಾಪಗ್ರಸ್ತವಾಗಿರುವ ರಾಟೋಡಿ ಗ್ರಾಮವನ್ನು ಪರಿಚಯಿಸುವ ಮೂಲಕ ಪ್ರಾರಂಭವಾಗುತ್ತದೆ.

ಹಳ್ಳಿಯ ಪ್ರತಿಯೊಂದು ಮನೆಗೆ ಎರಡು ಬಾಗಿಲುಗಳಿವೆ. ಒಂದು ದೊಡ್ಡ ಮತ್ತು ಒಂದು ಸಣ್ಣ. ಚಿಕ್ಕ ಬಾಗಿಲು ಕಾಕುಡ ಎಂಬ ಭೂತದ್ದು. ಚಿತ್ರದಲ್ಲಿ ನಾಯಕ, ನಾಯಕಿ ಪರಸ್ಪರ ಪ್ರೀತಿಸಿ ಮದುವೆಯಾಗುತ್ತಾರೆ. ಇದರಿಂದ ಅವರು ಕಾಕುಡನಿಂದ ತೊಂದರೆಯನ್ನು ಎದುರಿಸುವುದು ಚಿತ್ರದ ಕಥೆಯ ಸಾರವಾಗಿದೆ.

Continue Reading

ಬೆಂಗಳೂರು

Dengue Scare: ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಡೆಂಗ್ಯೂ; ನೂರಾರು ಮಂದಿ ಆಸ್ಪತ್ರೆಗೆ ದಾಖಲು

ಬೆಂಗಳೂರಿನಲ್ಲಿ ಇಲ್ಲಿಯವರೆಗೆ 2,000ಕ್ಕೂ ಹೆಚ್ಚು ಡೆಂಗ್ಯೂ (Dengue Scare) ಪ್ರಕರಣಗಳು ದಾಖಲಾಗಿವೆ. ರಾಜ್ಯಾದ್ಯಂತ ಡೆಂಗ್ಯೂ ಪೀಡಿತರ ಸಂಖ್ಯೆ 7,000 ದಾಟಿದೆ. ಹೆಚ್ಚಿನ ಸಂಖ್ಯೆಯ ಮಕ್ಕಳು, ವೃದ್ಧರಲ್ಲಿ ಡೆಂಗ್ಯೂ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಈಗಾಗಲೇ ಬೆಂಗಳೂರಿನಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಡಲು ವಿಫಲರಾದ ಆಸ್ತಿ ಮಾಲೀಕರ ವಿರುದ್ಧ 500 ರೂಪಾಯಿ ದಂಡ ವಿಧಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

VISTARANEWS.COM


on

By

Dengue Scare
Koo

ಬೆಂಗಳೂರು: ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು (Dengue Scare) ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ (silicon city) ಬೆಂಗಳೂರಿನಲ್ಲಿ (bengaluru) ಸಾಕಷ್ಟು ಮುನ್ನೆಚ್ಚರಿಕೆಗಳನ್ನು ವಹಿಸಲಾಗುತ್ತಿದೆ. ಅನೇಕರು ಸೊಳ್ಳೆ ಬ್ಯಾಟ್‌ಗಳನ್ನು (Mosquito Bats) ಖರೀದಿಸುತ್ತಿದ್ದು, ಮನೆ ಸುತ್ತಮುತ್ತ ಸೊಳ್ಳೆಗಳು ಬರದಂತೆ ಮುನ್ನೆಚ್ಚರಿಕೆ ವಹಿಸುತ್ತಿರುವುದು ಕಂಡು ಬರುತ್ತಿದೆ. ಈ ನಡುವೆ, ಡೆಂಗ್ಯೂ ಪೀಡಿತರಾಗಿ ನೂರಾರು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಡೆಂಗ್ಯೂವಿನಿಂದಾಗಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಸಿಲಿಕಾನ್ ಸಿಟಿಯು ಇಲ್ಲಿಯವರೆಗೆ 2,000ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳನ್ನು ದಾಖಲಿಸಿದೆ. ರಾಜ್ಯಾದ್ಯಂತ ಒಟ್ಟು ಸಂಖ್ಯೆ 7,000 ದಾಟಿದೆ. ಹೆಚ್ಚಿನ ಸಂಖ್ಯೆಯ ಮಕ್ಕಳು, ವೃದ್ಧರಲ್ಲಿ ಡೆಂಗ್ಯೂ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಮನೆಯಲ್ಲಿ ಹೆಚ್ಚುವರಿ ಸೊಳ್ಳೆ ಬ್ಯಾಟ್‌ಗಳನ್ನು ಖರೀದಿಸುವ ಅವಶ್ಯಕತೆ ಹೆಚ್ಚಾಗಿದೆ ಎನ್ನುತ್ತಾರೆ ಸ್ಥಳೀಯರು.

ಗಿಡಗಳಿಂದ ಆವೃತವಾಗಿರುವ ಪ್ರದೇಶಗಳಲ್ಲಿ ಬಾವಲಿಗಳು ಹೆಚ್ಚುತ್ತಿದೆ. ಜೂನ್‌ನಲ್ಲಿ ಭಾರೀ ಮಳೆಯು ಸೊಳ್ಳೆಗಳಿಗೆ ಸೂಕ್ತವಾದ ಸಂತಾನೋತ್ಪತ್ತಿಯ ಸ್ಥಳವನ್ನು ಸೃಷ್ಟಿಸಿದ ಅನಂತರ ಬಾವಲಿಗಳೂ ಹೆಚ್ಚಾಗಿವೆ.


ಬೆಂಗಳೂರಿನಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮಗಳು

ಈಗಾಗಲೇ ಬೆಂಗಳೂರಿನಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಡಲು ವಿಫಲರಾದ ಆಸ್ತಿ ಮಾಲೀಕರ ವಿರುದ್ಧ 500 ರೂಪಾಯಿ ದಂಡ ವಿಧಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದ ಸಭೆಯಲ್ಲಿ ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಹರಡುವ ಡೆಂಗ್ಯೂ ನಿಯಂತ್ರಣದ ಬಗ್ಗೆ ಗಮನಹರಿಸಿ ನಿರ್ಧಾರ ಕೈಗೊಳ್ಳಲು ಸೂಚಿಸಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೇರಿದಂತೆ ಮುನ್ಸಿಪಲ್ ಕಾರ್ಪೊರೇಷನ್‌ಗಳಿಗೆ ತಮ್ಮ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳದ ಆಸ್ತಿ ಮಾಲೀಕರಿಗೆ ಗರಿಷ್ಠ 50೦ ರೂಪಾಯಿ ದಂಡ ವಿಧಿಸುವಂತೆ ಆರೋಗ್ಯ ಸಚಿವರು ಸೂಚಿಸಿದ್ದಾರೆ.

ಇದನ್ನೂ ಓದಿ: Bomb Threat: ಬಾಯ್‌ ಫ್ರೆಂಡ್‌ ಬಿಟ್ಟು ಹೋಗ್ತಾನೆ ಎಂದು ಬೆಂಗಳೂರು ಏರ್‌ಪೋರ್ಟ್‌ಗೆ ಹುಸಿ ಬಾಂಬ್‌ ಕರೆ ಮಾಡಿದ ಯುವತಿ!

ಇದಲ್ಲದೆ, ಬೆಂಗಳೂರಿನಲ್ಲಿ ಡೆಂಗ್ಯೂ ಹರಡುವುದನ್ನು ತಡೆಯಲು ಲಾರ್ವಾ ಪರೀಕ್ಷೆ ಮತ್ತು ನಾಗರಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬಿಬಿಎಂಪಿಯಿಂದ ಮನೆ-ಮನೆ ಸಮೀಕ್ಷೆ ನಡೆಸಲಾಗುತ್ತಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ದಟ್ಟ ಜನಸಂಖ್ಯೆ ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುವ ಸುಮಾರು 25 ಲಕ್ಷ ನಗರ ಬಡವರನ್ನು ಸಮೀಕ್ಷೆಗಾಗಿ ಎಲ್ಲಾ ಬಿಬಿಎಂಪಿ ವಲಯಗಳಲ್ಲಿ ಗುರುತಿಸಲಾಗಿದೆ. ಅಲ್ಲಿ ಆರೋಗ್ಯ ನಿರೀಕ್ಷಕರು, ಆಶಾ ಕಾರ್ಯಕರ್ತರು, ಎಎನ್‌ಎಂಗಳು, ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು, ಎನ್‌ಎಸ್‌ಎಸ್ ಸ್ವಯಂಸೇವಕರು ಇರಲಿದ್ದಾರೆ. ತಲಾ 1,000 ಮನೆಗಳನ್ನು ಒಳಗೊಂಡ ಬ್ಲಾಕ್ ರಚಿಸಲು ನಿರ್ದೇಶನ ನೀಡಲಾಗಿದೆ. ಪ್ರತಿ 15 ದಿನಗಳಿಗೊಮ್ಮೆ ಕನಿಷ್ಠ 12-14 ಲಕ್ಷ ಮನೆಗಳನ್ನು ಆವರಿಸುವ ಗುರಿ ಹೊಂದಲಾಗಿದೆ.

Continue Reading

ವೈರಲ್ ನ್ಯೂಸ್

Viral Video: ಮನೆಗೆ ನುಗ್ಗಿ ಯುವಕನಿಂದ ಬಾಲಕಿ ಮೇಲೆ ಅಮಾನುಷ ಹಲ್ಲೆ; ವಿಡಿಯೊ ನೋಡಿ ಜನಾಕ್ರೋಶ

ಆಸ್ತಿಯನ್ನು ವಶಪಡಿಕೊಳ್ಳಲು ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಪ್ರಬಲ್ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ ಅಪ್ರಾಪ್ತ ವಯಸ್ಸಿನ ಬ್ರಾಹ್ಮಣ ಹುಡುಗಿಯ ಮನೆಗೆ ಬಲವಂತವಾಗಿ ಪ್ರವೇಶಿಸಿ, ಅಶ್ಲೀಲವಾಗಿ ನಿಂದಿಸಿರುವ ಘಟನೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿ ಜನಾಕ್ರೋಶಕ್ಕೆ ಕಾರಣವಾಗಿದೆ.

VISTARANEWS.COM


on

By

Viral Video
Koo

ನವದೆಹಲಿ: ಅಪ್ರಾಪ್ತ ವಯಸ್ಸಿನ ಬಾಲಕಿಗೆ (minor girl) ದುಷ್ಕರ್ಮಿಯೊಬ್ಬ ಅಮಾನುಷವಾಗಿ ಥಳಿಸಿರುವ ಘಟನೆ ನಡೆದಿದ್ದು, ಇದರ ವಿಡಿಯೋ (Viral Video) ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ ಆಗಿ ವ್ಯಾಪಕ ಜನಾಕ್ರೋಶಕ್ಕೆ ಕಾರಣವಾಗಿದೆ. ತಮ್ಮ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸುವ ವ್ಯಕ್ತಿಯೊಬ್ಬ ಹುಡುಗಿ ಮೇಲೆ ಹಲ್ಲೆ ಮಾಡಿರುವುದನ್ನು ಈ ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ.

ಲಕ್ನೋದ ಬಿ-376 ವಿಶಾಲ್ ಖಂಡ್‌ನ ಗೋಮತಿ ನಗರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಈ ವಿಡಿಯೋವನ್ನು ಆದಿತ್ಯ ಕಮಲ್ ಪಾಂಡೆ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಪ್ರಬಲ್ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ ಅಪ್ರಾಪ್ತ ಬ್ರಾಹ್ಮಣ ಹುಡುಗಿಯ ಮನೆಗೆ ಬಲವಂತವಾಗಿ ಪ್ರವೇಶಿಸಿ, ಅಶ್ಲೀಲವಾಗಿ ನಿಂದಿಸುತ್ತಾನೆ. ಫೋನ್‌ನಲ್ಲಿ ಯಾರೊಂದಿಗಾದರೂ ಮಾತನಾಡುವಂತೆ ಮಾಡುತ್ತಾನೆ. ಈ ಅಪ್ರಾಪ್ತ ಬಾಲಕಿ ಯಾಕೆ ಹಾಗೆ ಹೇಳುತ್ತೀರಿ ಎಂದು ಪ್ರಶ್ನಿಸಿದಾಗ ಆತ ಬಾಲಕಿಗೆ ಕಪಾಳಮೋಕ್ಷ ಮಾಡಿದ್ದಾನೆ. ಬಾಲಕಿಯ ಫೋನ್‌ಗಳನ್ನು ಒಡೆಯಲಾಗಿದೆ, ಬಟ್ಟೆ ಹರಿದು ಹಾಕಲಾಗಿದೆ. ಆಕೆಗೆ ಸಾಕಷ್ಟು ಹಿಂಸೆ ನೀಡಲಾಗಿದೆ. ವ್ಯಕ್ತಿಯು ರಿವಾಲ್ವರ್ ಕೂಡ ಹೊಂದಿದ್ದ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಲಾಗಿದೆ.

ಇದನ್ನೂ ಓದಿ: MS Dhoni Birthday: ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಪತ್ನಿ; ವಿಡಿಯೊ ವೈರಲ್​

ಆರೋಪಿಯನ್ನು ಬಂಧಿಸಿರುವ ಕುರಿತು ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ವಿಡಿಯೋದಲ್ಲಿರುವ ಬಾಲಕಿಯನ್ನು ದೀಪಶಿಖಾ ತಿವಾರಿ ಎಂದು ಗುರುತಿಸಲಾಗಿದ್ದು, ಆ ವ್ಯಕ್ತಿ ಅವರ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸಿದ್ದಾರೆ ಎನ್ನಲಾಗಿದೆ.

ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ

ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಎಂದು ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳ ಶಾಲೆಗಳಲ್ಲಿ ಜಾರಿಗೆ ತಂದಿರುವ ಮಧ್ಯಾಹ್ನ ಬಿಸಿಯೂಟದ ಯೋಜನೆಗಳಲ್ಲೂ ಅಧಿಕಾರಿಗಳು ಕಳ್ಳಾಟ ಆಡುತ್ತಿದ್ದಾರೆ. ಕೆಲವೆಡೆ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಬಿಸಿಯೂಟ ನೀಡುವುದಿಲ್ಲ ಎಂಬ ಆರೋಪಗಳು ಕೇಳಿಬರುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ ಛತ್ತೀಸ್‌ಗಢದ ಶಾಲೆಯೊಂದರಲ್ಲಿ ಮಕ್ಕಳಿಗೆ ಬಿಸಿಯೂಟ ಯೋಜನೆ ಅನ್ವಯ ಬರೀ ಅನ್ನ ಹಾಗೂ ಅರಿಶಿಣ ಮಿಶ್ರಣ ಮಾಡಿ ಅದನ್ನೇ ನೀಡಲಾಗಿದೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಛತ್ತೀಸ್‌ಗಢದ ಬಲರಾಮ್‌ಪುರ ಜಿಲ್ಲೆಯ ಬಿಜಾಕುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಇಷ್ಟೊಂದು ಕಳಪೆ ಆಹಾರವನ್ನು ನೀಡಲಾಗುತ್ತಿದೆ. ಮಕ್ಕಳು ಅರಿಶಿಣ ಮಿಕ್ಸ್‌ ಆಗಿರುವ ಅನ್ನವನ್ನು ಸೇವಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 43 ವಿದ್ಯಾರ್ಥಿಗಳು ಓದುತ್ತಿದ್ದು, ಬಹುತೇಕರು ಬಡವರ ಮಕ್ಕಳಾಗಿದ್ದಾರೆ. ಆದರೆ, ಇವರಿಗೆ ಕಳೆದ ಒಂದು ವಾರದಿಂದ ಬಿಸಿಯೂಟದಲ್ಲಿ ತರಕಾರಿ ನೀಡದೆ, ಬರೀ ಅರಿಶಿಣ ಮಿಶ್ರಣ ಆಗಿರುವ ಅನ್ನ ನೀಡಲಾಗುತ್ತಿದೆ. ಇದನ್ನು ಶಾಲೆಯ ಅಧಿಕಾರಿಗಳೇ ದೃಢಪಡಿಸಿದ್ದಾರೆ.

ಒಂದು ವಾರದಿಂದ ತರಕಾರಿ ಪೂರೈಸುವವರು ಶಾಲೆಗೆ ತರಕಾರಿ ಪೂರೈಸುತ್ತಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ತರಕಾರಿ ವ್ಯವಸ್ಥೆ ಆಗಿಲ್ಲ. ಹಾಗಾಗಿ, ಮಕ್ಕಳಿಗೆ ಅನ್ನ-ಸಾರು ಇಲ್ಲವೇ ಅರಿಶಿಣ ಮಿಶ್ರಿತ ಅನ್ನ ನೀಡುತ್ತಿದ್ದೇವೆ ಎಂದು ಶಾಲೆಯ ಮುಖ್ಯೋಪಾಧ್ಯಾಯ ತಿಳಿಸಿದ್ದಾರೆ.

ಇವರ ಆರೋಪಗಳಿಗೆ ತರಕಾರಿ ಪೂರೈಸುವವರು ಪ್ರತಿಕ್ರಿಯಿಸಿದ್ದು, ಶಾಲೆಗೆ ತರಕಾರಿ ಪೂರೈಸಿದ್ದಕ್ಕೆ ಹಲವು ತಿಂಗಳಿಂದ ಹಣ ನೀಡಿಲ್ಲ. ಇದರಿಂದಾಗಿ ನಾವು ತರಕಾರಿ ಪೂರೈಸುತ್ತಿಲ್ಲ ಎಂದು ಹೇಳಿದ್ದಾರೆ.

Continue Reading
Advertisement
School Principal
ದೇಶ2 hours ago

School Principal: ಶಾಲೆಯಲ್ಲೇ ಮಹಿಳಾ ಟೀಚರ್‌ ಜತೆ ಪ್ರಿನ್ಸಿಪಾಲ್‌ ರೊಮ್ಯಾನ್ಸ್;‌ ವೈರಲ್‌ ಫೋಟೊ ಇಲ್ಲಿದೆ

WCPL 2024
ಪ್ರಮುಖ ಸುದ್ದಿ3 hours ago

WCPL 2024 : ಸಿಪಿಎಲ್​​ನ ಟ್ರಿನ್​ಬ್ಯಾಗೊ ರೈಡರ್ಸ್​ ತಂಡಕ್ಕೆ ಜೆಮಿಮಾ, ಶಿಖಾ ಸೇರ್ಪಡೆ

KRS Inflow
ದೇಶ3 hours ago

KRS Inflow: ಕೆಆರ್‌ಎಸ್‌ಗೆ ದಾಖಲೆಯ 11 ಸಾವಿರ ಕ್ಯುಸೆಕ್‌ ನೀರು ಒಳಹರಿವು; ಸೋಮವಾರದಿಂದ ನಾಲೆಗಳಿಗೆ ನೀರು

Abhishek Sharma
ಕ್ರೀಡೆ3 hours ago

Abhishek Sharma : 47 ಎಸೆತಕ್ಕೆ ಶತಕ ಬಾರಿಸಿ ಹಲವಾರು ದಾಖಲೆ ಮುರಿದಿ ಅಭಿಷೇಕ್​ ಶರ್ಮಾ

Dengue Scare
ಕರ್ನಾಟಕ3 hours ago

Dengue Scare: ಸರ್ಕಾರದಿಂದಲೇ ಉಚಿತವಾಗಿ ಡೆಂಗ್ಯೂ ಪರೀಕ್ಷೆ ಮಾಡಿಸಲಿ; ಆರ್.‌ ಅಶೋಕ್‌ ಆಗ್ರಹ

World Biryani Day:
ಪ್ರಮುಖ ಸುದ್ದಿ4 hours ago

World Biryani Day : ಕೋಲ್ಕತಾ, ಹೈದರಾಬಾದ್ ಬಿರಿಯಾನಿ ತಿಂದಿರಬಹುದು; ಇವುಗಳ ಹಿನ್ನೆಲೆ ಗೊತ್ತಾ?

Accident
Latest4 hours ago

Accident: ಟೆರೇಸ್ ಮೇಲೆ ನಿಂತು ಜಗಳ ನೋಡುತ್ತಿದ್ದ ಮಹಿಳೆಗೇ ಬಿತ್ತು ಗುಂಡೇಟು!

Puri Jagannath Rath Yatra
ಪ್ರಮುಖ ಸುದ್ದಿ5 hours ago

Puri Jagannath Rath Yatra: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಒಬ್ಬನ ಸಾವು, 400 ಭಕ್ತರಿಗೆ ಗಾಯ!

NIA Arrest
ದೇಶ5 hours ago

NIA Arrest: ಹಿಜ್ಬುಲ್‌, LeT ಉಗ್ರ ಸಂಘಟನೆಗಳ ಜೊತೆ ನಂಟು; ಪ್ರಮುಖ ಆರೋಪಿ ಅರೆಸ್ಟ್‌

Elephant attack car in Kodagu‌ four people escape
ಕೊಡಗು5 hours ago

Elephant attack :ಕಾರಿನ ಮೇಲೆ ಕಾಡಾನೆ ದಾಳಿ; ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ6 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ9 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ10 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ20 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌